Homeಕರ್ನಾಟಕಸಾಲ ಪಡೆದವರ ರಕ್ಷಣೆಗಾಗಿ ಸುಗ್ರೀವಾಜ್ಞೆ ಮೂಲಕ ಶೀಘ್ರದಲ್ಲಿ ಹೊಸ ಕಾನೂನು ಜಾರಿ : ಸಿಎಂ ಸಿದ್ದರಾಮಯ್ಯ

ಸಾಲ ಪಡೆದವರ ರಕ್ಷಣೆಗಾಗಿ ಸುಗ್ರೀವಾಜ್ಞೆ ಮೂಲಕ ಶೀಘ್ರದಲ್ಲಿ ಹೊಸ ಕಾನೂನು ಜಾರಿ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮೈಕ್ರೋ ಫೈನಾನ್ಸ್ ಕಂಪನಿಗಳು ಮತ್ತು ಖಾಸಗಿ ಲೇವಾದೇವಿ ಸಂಸ್ಥೆಗಳಿಂದ ಸಾಲ ಪಡೆದವರ ರಕ್ಷಣೆಗಾಗಿ ಸುಗ್ರೀವಾಜ್ಞೆ ಮೂಲಕ ಶೀಘ್ರದಲ್ಲೇ ಹೊಸ ಕಾನೂನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಉನ್ನತ ಮಟ್ಟದ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್‌ಗಳಿಂದ ಸಾಲ ಪಡೆಯುವವರ ಹಿತವನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ. ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ‌ ಕೈಗೊಳ್ಳಲಾಗುವುದು ಎಂದರು.

ಬಲವಂತದ ಸಾಲ ವಸೂಲಾತಿ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು. ಈ ಕುರಿತು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಸಾಧ್ಯವಾಗುವಂತೆ ಮತ್ತು ನೋಂದಣಿಯಾಗದ ಲೇವಾದೇವಿಗಾರರ ಮೇಲೆ ನಿಯಂತ್ರಣಕ್ಕೆ ಹೊಸ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗುವುದು. ಈಗಿರುವ ಕಾನೂನು ಇನ್ನಷ್ಟು ಬಲಪಡಿಸಲು ಕ್ರಮ ಕೈಗೊಳ್ಳುತ್ತೇವೆ. ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡುತ್ತೇವೆ. ಬೆದರಿಸಿ ಬಲವಂತದ ಸಾಲ ವಸೂಲಾತಿ ಒಪ್ಪಲು ಸಾಧ್ಯವಿಲ್ಲ.‌ ಬಡ ಸಾಲಗಾರರ ಹಿತವನ್ನು ಕಾಪಾಡಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಿಎಂ ಹೇಳಿದರು.

ಯಾರಾದರೂ ಮೈಕ್ರೋ ಫೈನಾನ್ಸ್ ವ್ಯಕ್ತಿಗಳಿಂದ ಕಿರುಕುಳ ಎದುರಿಸುತ್ತಿದ್ದರೆ ಸ್ಥಳೀಯವಾಗಿ ಪೊಲೀಸರಿಗೆ ದೂರು ನೀಡಬೇಕು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಸಭೆ ನಡೆಸಿ ಈ ಕುರಿತ ಜನರಿಗೆ ಸೂಕ್ತ ತಿಳುವಳಿಕೆ ಹಾಗೂ ಮೈಕ್ರೋ ಫೈನಾನ್ಸ್‌ ವ್ಯಕ್ತಿಗಳಿಗೆ ಎಚ್ಚರಿಕೆ ನೀಡಬೇಕು ಎಂದು ಸಿಎಂ ಸೂಚಿಸಿದರು.

ಈ ಕುರಿತು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲು ಸೂಚಿಸಲಾಗಿದೆ. ಇಲ್ಲಿ ದೂರು ನೀಡಬಹುದು; ಪೊಲೀಸರು ಸ್ವಯಂಪ್ರೇರಿತರಾಗಿ ದೂರು ದಾಖಲಿಸಲು ಸೂಚಿಸಿದ್ದೇವೆ ಎಂದು ತಿಳಿಸಿದರು.

‘Banning of Unregulated lending Activities’ಕುರಿತು ಕೇಂದ್ರ ಸರ್ಕಾರ ಕರಡು ಸಿದ್ಧಪಡಿಸಿದೆ. ಈ ಕುರಿತು ಸಮಗ್ರ ಸಮಾಲೋಚನೆ ನಡೆಸಿ, ಸಾಲದ ಸುಳಿಯಲ್ಲಿ ಸಿಲುಕಿರುವವರ ಹಿತ ಕಾಪಾಡಲು ಕ್ರಮ ಕೈಗೊಳ್ಳುತ್ತೇವೆ. ಕಿರುಕುಳ ತಪ್ಪಿಸಲು ಸೂಕ್ತ ಕಾನೂನು ರಚಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದರು.

ಸಾಲ ವಸೂಲಾತಿ ಕುರಿತಾಗಿ ಆರ್‌ಬಿಐ ಹಲವು ಮಾರ್ಗಸೂಚಿ ಹೊರಡಿಸಿವೆ. ಸಂಜೆ 5ಗಂಟೆ ಬಳಿಕ ಮನೆಗೆ ಸಾಲ ವಸೂಲಾತಿಗೆ ಹೋಗಬಾರದು; ಬೆದರಿಕೆ ಹಾಕಬಾರದು. ವಸೂಲಾತಿಗೆ ಮೂರನೇ ವ್ಯಕ್ತಿಗಳನ್ನು ಬಳಸಿಕೊಳ್ಳಬಾರದು ಇತ್ಯಾದಿ. ಇದನ್ನು ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು. ಒಂದು ಕುಟುಂಬಕ್ಕೆ ಎಷ್ಟು ಸಾಲ ನೀಡಬಹುದು ಎಂಬ ಬಗ್ಗೆ ಆರ್‌ಬಿಐ ಮಿತಿಯಿದೆ. ಇದನ್ನು ಪಾಲಿಸಲಾಗುತ್ತಿದೆಯೇ? ಇದನ್ನು ಅನುಷ್ಠಾನಗೊಳಿಸುವ ಕಾರ್ಯ ಮಾಡಲಾಗುವುದು ಎಂದು ಸಿಎಂ ಹೇಳಿದರು.

ದಬ್ಬಾಳಿಕೆ ಸಹಿಸುವುದಿಲ್ಲ, ಕಠಿಣ ಕ್ರಮ ಕೈಗೊಳ್ಳುತ್ತೇನೆ : ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಸಿಎಂ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...