Homeಮುಖಪುಟಗಾಝಾ ಕದನ ವಿರಾಮ | ನಾಲ್ವರು ಮಹಿಳಾ ಸೈನಿಕರಿಗೆ ಬದಲಾಗಿ 200 ಪ್ಯಾಲೆಸ್ತೀನಿಯರನ್ನು ಬಿಡುಗಡೆಗೊಳಿಸಲಿರುವ ಇಸ್ರೇಲ್!

ಗಾಝಾ ಕದನ ವಿರಾಮ | ನಾಲ್ವರು ಮಹಿಳಾ ಸೈನಿಕರಿಗೆ ಬದಲಾಗಿ 200 ಪ್ಯಾಲೆಸ್ತೀನಿಯರನ್ನು ಬಿಡುಗಡೆಗೊಳಿಸಲಿರುವ ಇಸ್ರೇಲ್!

- Advertisement -
- Advertisement -

ಗಾಝಾ ಕದನ ವಿರಾಮ ಒಪ್ಪಂದಂತೆ ಹಮಾಸ್ ಗುಂಪು ನಾಲ್ವರು ಇಸ್ರೇಲಿ ಮಹಿಳಾ ಸೈನಿಕರನ್ನು ಶನಿವಾರ (ಜ.25) ರೆಡ್‌ಕ್ರಾಸ್‌ ಸಂಸ್ಥೆಯ ಮೂಲಕ ಬಿಡುಗಡೆ ಮಾಡಿದೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್ 200 ಜನರು ಬಂಧಿತ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಲಿದೆ ಎಂದು ವರದಿಯಾಗಿದೆ.

ಕರೀನಾ ಅರಿಯೆವ್, ಡೇನಿಯೆಲ್ಲಾ ಗಿಲ್ಬೋವಾ, ನಾಮಾ ಲೆವಿ ಮತ್ತು ಲಿರಿ ಅಲ್ಬಾಗ್ ಎಂಬ ನಾಲ್ವರು ಇಸ್ರೇಲಿ ಮಹಿಳಾ ಸೈನಿಕರು ಬಿಡುಗಡೆಯಾಗಿದ್ದಾರೆ. ಇವರು ತಮ್ಮ ಬ್ಯಾಗ್‌ಗಳನ್ನು ಎತ್ತಿಕೊಂಡು ಗಾಝಾ ನಗರದ ಪ್ಯಾಲೆಸ್ತೀನ್‌ ಚೌಕದಲ್ಲಿ ಜನಸಮೂಹದ ಕಡೆಗೆ ಕೈ ಬೀಸುತ್ತಾ, ನಗುತ್ತಾ ತಮ್ಮ ದೇಶಕ್ಕೆ ಮರಳಿದರು ಎಂದು ಅಲ್‌-ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಜನವರಿ 19ರಂದು ಗಾಝಾ ಕದನ ವಿರಾಮ ಜಾರಿಯಾದ ಬಳಿಕ ಹಮಾಸ್ ಎರಡನೇ ಬಾರಿಗೆ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದೆ. ಮೊದಲ ಹಂತದಲ್ಲಿ ಮೂವರು ಮಹಿಳಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿತ್ತು. ಅದಕ್ಕೆ ಪ್ರತಿಯಾಗಿ ಇಸ್ರೇಲ್ 90 ಜನ ಬಂಧಿತ ಪ್ಯಾಲೆಸ್ತೀನಿಯರನ್ನು ಬಿಡುಗಡೆಗೊಳಿಸಿದೆ.

ನಾಲ್ವರು ಸೈನಿಕರ ಬಿಡುಗಡೆಗೆ ಪ್ರತಿಯಾಗಿ ಇಸ್ರೇಲ್ 200 ಜನ ಬಂಧಿತ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಬೇಕಿದೆ. ಈ ಪೈಕಿ ಇಸ್ರೇಲ್‌ನಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾದವರೂ ಇದ್ದಾರೆ ಎಂದು ವರದಿಗಳು ಹೇಳಿವೆ.

ಕದನ ವಿರಾಮ ಒಪ್ಪಂದದ ಪ್ರಕಾರ, 42 ದಿನಗಳ ಮೊದಲ ಹಂತದಲ್ಲಿ, 33 ಇಸ್ರೇಲಿ ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಬೇಕು. ಇದಕ್ಕೆ ಬದಲಾಗಿ 1,900 ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಬಿಡುಗಡೆಗೊಳಿಸಬೇಕು.

ಆದರೆ, ಇಸ್ರೇಲ್ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದೆ. ಒಪ್ಪಂದ ಜಾರಿಗೆ ಬಂದ ಎರಡನೇ ದಿನವೇ ಒಂದು ಪ್ಯಾಲೆಸ್ತೀನಿಯನ್ ಮಗುವನ್ನು ಕೊಂದಿದೆ. ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಮಾರಕ ದಾಳಿಗಳನ್ನು ನಡೆಸಿದೆ ಮತ್ತು ಹಲವಾರು ಪ್ಯಾಲೆಸ್ತೀನಿಯರನ್ನು ಹತ್ಯೆ ಮಾಡಿದೆ, ಬಂಧಿಸಿದೆ.

ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನನ್ನು ಉಲ್ಲಂಘಿಸಿ ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ಯುದ್ಧೋಚಿತ ಕಾರ್ಯವಿಧಾನಗಳನ್ನು ಬಳಸುತ್ತಿರುವ ಬಗ್ಗೆ ವಿಶ್ವಸಂಸ್ಥೆ ಶುಕ್ರವಾರ (ಜ.24) ಕಳವಳ ವ್ಯಕ್ತಪಡಿಸಿದೆ.

ಹಮಾಸ್ ಜೊತೆಗಿನ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿದ ನಂತರ, ಆಕ್ರಮಿತ ಪ್ರದೇಶದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 12 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

ವಿಶ್ವಸಂಸ್ಥೆಯ ತಜ್ಞರು ಮತ್ತು ಮಾನವ ಹಕ್ಕುಗಳ ಸಂಸ್ಥೆಗಳು ‘ಜನಾಂಗೀಯ ಹತ್ಯೆ’ ಎಂದು ಗುರುತಿಸಿರುವ ಗಾಝಾ ಮೇಲಿನ ಇಸ್ರೇಲ್‌ ಆಕ್ರಮಣದಲ್ಲಿ 18,000 ಕ್ಕೂ ಹೆಚ್ಚು ಮಕ್ಕಳು, 200ಕ್ಕೂ ಹೆಚ್ಚು ಪತ್ರಕರ್ತರು ಮತ್ತು ಸಾವಿರಕ್ಕೂ ಹೆಚ್ಚು ಆರೋಗ್ಯ ಕಾರ್ಯಕರ್ತರು ಸೇರಿದಂತೆ 47,000 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ.

ಅಮೆರಿಕದಿಂದ ಅಕ್ರಮ ವಲಸಿಗ ಭಾರತೀಯರನ್ನು ಹಿಂಪಡೆಯಲು ಸಿದ್ದ: ಕೇಂದ್ರ ಪುನರುಚ್ಛಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...