Homeಮುಖಪುಟಆರ್ ಜಿ ಕರ್ ಪ್ರಕರಣ | ಬಂಗಾಳ ಸರ್ಕಾರ, ಸಿಬಿಐ ಸಲ್ಲಿಸಿದ್ದ ಅವಳಿ ಅರ್ಜಿಗಳ ವಿಚಾರಣೆ...

ಆರ್ ಜಿ ಕರ್ ಪ್ರಕರಣ | ಬಂಗಾಳ ಸರ್ಕಾರ, ಸಿಬಿಐ ಸಲ್ಲಿಸಿದ್ದ ಅವಳಿ ಅರ್ಜಿಗಳ ವಿಚಾರಣೆ ಪ್ರಾರಂಭಿಸಿದ ಕಲ್ಕತ್ತಾ ಹೈಕೋರ್ಟ್

- Advertisement -
- Advertisement -

ಆರ್‌ಜಿ ಕರ್ ಆಸ್ಪತ್ರೆಯ ಅತ್ಯಾಚಾರ-ಕೊಲೆ ಅಪರಾಧಿ ಸಂಜಯ್ ರಾಯ್‌ಗೆ ಮರಣದಂಡನೆ ಶಿಕ್ಷೆ ವಿಧಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಸಿಬಿಐ ಸಲ್ಲಿಸಿದ್ದ ಎರಡು ಪ್ರತ್ಯೇಕ ಮೇಲ್ಮನವಿಗಳ ವಿಚಾರಣೆಯನ್ನು ಕಲ್ಕತ್ತಾ ಹೈಕೋರ್ಟ್ ಸೋಮವಾರ ಆರಂಭಿಸಿದೆ. ಆರ್ ಜಿ ಕರ್ ಪ್ರಕರಣ

ರಾಜ್ಯ ಸರ್ಕಾರಕ್ಕಿಂತ ಭಿನ್ನವಾಗಿ, ಪ್ರಕರಣದಲ್ಲಿ ತನಿಖೆ ಮತ್ತು ಪ್ರಾಸಿಕ್ಯೂಷನ್ ಸಂಸ್ಥೆಯಾಗಿದ್ದ ಕಾರಣ, ಶಿಕ್ಷೆಯ ಅಸಮರ್ಪಕತೆಯ ಆಧಾರದ ಮೇಲೆ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸುವ ಹಕ್ಕನ್ನು ಸಿಬಿಐ ಹೊಂದಿದೆ ಎಂದು ಹೇಳಿಕೊಂಡಿದೆ.

ಅಪರಾಧಿ ಮರಣದಂಡನೆ ವಿಧಿಸಿದ ಸೀಲ್ಡಾ ಸೆಷನ್ಸ್ ನ್ಯಾಯಾಲಯದ ಆದೇಶವು ಅಸಮರ್ಪಕವಾಗಿದೆ ಎಂದು ಸಿಬಿಐ ಹೇಳಿಕೊಂಡಿದ್ದು, ಸಿಬಿಐ ಮತ್ತು ರಾಜ್ಯ ಸರ್ಕಾರ ಎರಡೂ ಪ್ರತ್ಯೇಕವಾಗಿ ಅಪರಾಧಿಗೆ ಮರಣದಂಡನೆ ವಿಧಿಸಬೇಕೆಂದು ಕೋರಿವೆ. ಆರ್ ಜಿ ಕರ್ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪಶ್ಚಿಮ ಬಂಗಾಳ ಸರ್ಕಾರವನ್ನು ಪ್ರತಿನಿಧಿಸುವ ಅಡ್ವೊಕೇಟ್ ಜನರಲ್ ಕಿಶೋರ್ ದತ್ತಾ, ನ್ಯಾಯಮೂರ್ತಿ ದೇಬಾಂಗ್ಸು ಬಸಕ್ ಅಧ್ಯಕ್ಷತೆಯ ವಿಭಾಗೀಯ ಪೀಠದ ಮುಂದೆ ದಿನದ ವಾದಗಳನ್ನು ಆರಂಭಿಸಿದ್ದಾರೆ. ವಿಚಾರಣಾ ನ್ಯಾಯಾಲಯದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ ಹಕ್ಕು ತನಗೆ ಇದೆ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿತ್ತು.

ಕೋಲ್ಕತ್ತಾದ ಪ್ರತಿಷ್ಠಿತ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಪ್ರಕರಣದಲ್ಲಿ ಬಂಧಿತ ಸಂಜಯ್ ರಾಯ್‌ ಅಪರಾಧಿ ಎಂದು ನ್ಯಾಯಾಲಯ ಹೇಳಿದ್ದು, ಸೋಮವಾರ (ಜ.20) ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 103(1)ರ ಅಡಿಯಲ್ಲಿ ಸಂಜಯ್‌ ರಾಯ್‌ಗೆ ಜೀವಾವಧಿ ಶಿಕ್ಷೆ ಹಾಗೂ 50,000 ರೂಪಾಯಿ ದಂಡ ವಿಧಿಸಲಾಗಿದೆ ಎಂದು ಕೋಲ್ಕತ್ತಾದ ಸಿಯಾಲದಹ ನ್ಯಾಯಾಲಯದ ನ್ಯಾಯಾಧೀಶ ಅನಿರ್ಬನ್ ದಾಸ್ ತಿಳಿಸಿದ್ದರು.

ಸಂತ್ರಸ್ತೆಯ ಕುಟುಂಬಕ್ಕೆ 17 ಲಕ್ಷ ಪರಿಹಾರ ರೂಪಾಯಿ ಪರಿಹಾರ ನೀಡುವಂತೆಯೂ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಪ್ರಕರಣದ ವಿಚಾರಣೆ ವೇಳೆ ಕೇಂದ್ರ ತನಿಖಾ ದಳವು (ಸಿಬಿಐ) ಆರೋಪಿ ಸಂಜಯ್ ರಾಯ್‌ಗೆ ‘ಮರಣದಂಡನೆ’ ವಿಧಿಸುವಂತೆ ಕೋರಿತ್ತು. ಅಪರಾಧಿಗೆ ಮರಣದಂಡನೆ ವಿಧಿಸಲು ಈ ಪ್ರಕರಣ “ಅಪರೂಪದಲ್ಲಿ ಅಪರೂಪ” ವರ್ಗಕ್ಕೆ ಸೇರುವುದಿಲ್ಲ ಎಂದು ನ್ಯಾಯಾಧೀಶ ದಾಸ್ ಹೇಳಿರುವುದಾಗಿ ವರದಿಗಳು ತಿಳಿಸಿವೆ.

ಅಪರಾಧಿ ಸಂಜಯ್ ರಾಯ್ “ತಾನು ಏನೂ ತಪ್ಪು ಮಾಡಿಲ್ಲ. ತನಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ನನ್ನನ್ನು ಸುಮ್ಮನೆ ಸಿಲುಕಿಸಲಾಗಿದೆ. ನನಗೆ ಚಿತ್ರಹಿಂಸೆ ಕೊಟ್ಟಿದ್ದಾರೆ. ಅವರಿಗೆ ಬೇಕಾದುದ್ದಕ್ಕೆ ಸಹಿ ಹಾಕುವಂತೆ ಒತ್ತಾಯಿಸಿದ್ದಾರೆ ಎಂದು ಪುನರುಚ್ಚರಿಸಿದ್ದಾರೆ.

ಅಪರಾಧಿ ಪರ ವಕೀಲರು ವಾದ ಮಂಡಿಸಿ, “ಇದು ಅಪರೂಪದ ಪ್ರಕರಣವಾಗಿದ್ದರೂ ಸಹ, ಸುಧಾರಣೆಗೆ ಅವಕಾಶವಿರಬೇಕು. ಅಪರಾಧಿ ಸುಧಾರಣೆ ಅಥವಾ ಪುನರ್ವಸತಿಗೆ ಏಕೆ ಅರ್ಹನಲ್ಲ ಎಂದು ನ್ಯಾಯಾಲಯ ತೋರಿಸಬೇಕು. ಸರ್ಕಾರಿ ಅಭಿಯೋಜಕರು ಈ ಸಂಬಂಧ ಸಾಕ್ಷ್ಯಗಳನ್ನು ಪ್ರಸ್ತುತಪಡಿಸಬೇಕು ಮತ್ತು ವ್ಯಕ್ತಿಯು ಸುಧಾರಣೆಗೆ ಅರ್ಹನಲ್ಲ ಎಂಬುದಕ್ಕೆ ಕಾರಣಗಳನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಆದರೆ, ಸಂತ್ರಸ್ತೆಯ ಕುಟುಂಬದ ಪರ ವಕೀಲರು, ಅಪರಾಧಿಗೆ ಗರಿಷ್ಠ ಶಿಕ್ಷೆಯಾಗಿ ಮರಣದಂಡನೆ ವಿಧಿಸುವಂತೆ ಕೋರಿದ್ದಾರೆ. ಸಂತ್ರಸ್ತೆಯ ತಂದೆ ಕೂಡ ಅಪರಾಧಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದು, ಬೀದಿಗಳಲ್ಲಿ ಮತ್ತು ನ್ಯಾಯಾಲಯಗಳಲ್ಲಿ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 64 (ಅತ್ಯಾಚಾರ), ಸೆಕ್ಷನ್‌ 66 (ಮಹಿಳೆಯ ಸಾವಿಗೆ ಕಾರಣವಾಗುವುದು) ಹಾಗೂ ಸೆಕ್ಷನ್ 103(1) (ಹತ್ಯೆ) ಅಡಿಯಲ್ಲಿ ರಾಯ್ ದೋಷಿ ಎಂದು ನ್ಯಾಯಾಧೀಶರು ಶನಿವಾರ ಆದೇಶ ಪ್ರಕಟಿಸಿದ್ದರು.

ಇದನ್ನೂಓದಿ:  ಆರ್‌ಜಿ ಕರ್ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ | ಅಪರಾಧಿಗೆ ಜೀವಾವಧಿ ಶಿಕ್ಷೆ

ಆರ್‌ಜಿ ಕರ್ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ | ಅಪರಾಧಿಗೆ ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...