Homeಮುಖಪುಟಚಂಡೀಗಢ ಮೇಯರ್ ಚುನಾವಣೆ | ಸ್ವತಂತ್ರ ವೀಕ್ಷಕರನ್ನು ನೇಮಿಸಿದ ಸುಪ್ರೀಂಕೋರ್ಟ್

ಚಂಡೀಗಢ ಮೇಯರ್ ಚುನಾವಣೆ | ಸ್ವತಂತ್ರ ವೀಕ್ಷಕರನ್ನು ನೇಮಿಸಿದ ಸುಪ್ರೀಂಕೋರ್ಟ್

ಕಳೆದ ವರ್ಷದ ಚುನಾವಣೆಯ ವೇಳೆ ಚುನಾವಣಾ ಅಧಿಕಾರಿ ವಂಚನೆ ನಡೆಸಿದ್ದ ಹಿನ್ನಲೆ

- Advertisement -
- Advertisement -

ಚಂಡೀಗಢದಲ್ಲಿ ಮುಂಬರುವ ಮೇಯರ್ ಚುನಾವಣೆಯ ಮತದಾನವನ್ನು ಮೇಲ್ವಿಚಾರಣೆ ಮಾಡಲು ಸುಪ್ರೀಂ ಕೋರ್ಟ್ ಸೋಮವಾರ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯನ್ನು ಸ್ವತಂತ್ರ ವೀಕ್ಷಕರನ್ನಾಗಿ ನೇಮಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ಚಂಡೀಗಢ ಮೇಯರ್ ಚುನಾವಣೆ

ಜನವರಿ 30 ರಂದು ನಡೆಯಲಿರುವ ಚುನಾವಣೆಯನ್ನು ರಹಸ್ಯ ಮತದಾನದ ಬದಲು “ಕೈ ಎತ್ತುವ” ಮೂಲಕ ನಡೆಸಬೇಕೆಂದು ಚಂಡೀಗಢ ಮೇಯರ್ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಕುಲದೀಪ್ ಕುಮಾರ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಇದರ ನಂತರ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್ ಕೋಟೀಶ್ವರ್ ಸಿಂಗ್ ಅವರ ಪೀಠವು ನ್ಯಾಯಮೂರ್ತಿ ಜೈಶ್ರೀ ಠಾಕೂರ್ ಅವರನ್ನು ಈ ಹುದ್ದೆಗೆ ನೇಮಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕುಲದೀಪ್‌ ಕುಮಾರ್ ಆರಂಭದಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಈ ವಿಷಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಆ ವೇಳೆಗೆ ಅವರು ಮೇಯರ್ ಆಗಿ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸುತ್ತಾರೆ ಎಂಬ ಕಾರಣಕ್ಕೆ ಚುನಾವಣೆಯನ್ನು ಫೆಬ್ರವರಿ 20 ಕ್ಕೆ ಮುಂದೂಡಲು ಸಹ ಅವರು ಕೋರಿದ್ದರು. ಆದಾಗ್ಯೂ, ಹೈಕೋರ್ಟ್ ಅವರ ಅರ್ಜಿಯನ್ನು ತಿರಸ್ಕರಿಸಿದೆ. ಇದರ ನಂತರ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಚುನಾವಣೆಗಳು ನ್ಯಾಯಯುತವಾಗಿ ನಡೆಯುವಂತೆ ಸ್ವತಂತ್ರ ವೀಕ್ಷಕರನ್ನು ನೇಮಿಸುವ ಸೀಮಿತ ಉದ್ದೇಶಕ್ಕಾಗಿ ಕುಲದೀಪ್‌ ಕುಮಾರ್ ಅವರ ಅರ್ಜಿಯ ಮೇಲೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ಚಂಡೀಗಢ ಮೇಯರ್ ಚುನಾವಣೆ

ಸ್ವತಂತ್ರ ವೀಕ್ಷಕರ ಸಮ್ಮುಖದಲ್ಲಿ ಚುನಾವಣೆ ನಡೆಸಬೇಕು ಎಂದು ಪೀಠ ಹೇಳಿದ್ದು, ಇಡೀ ಪ್ರಕ್ರಿಯೆಯನ್ನು ಕ್ಯಾಮೆರಾದಲ್ಲಿ ದಾಖಲಿಸಬೇಕು ಎಂದು ತಿಳಿಸಿದೆ. 2024 ರ ವೇಳೆ ಚಂಡೀಗಢದಲ್ಲಿ ನಡೆದ ಮೇಯರ್ ಚುನಾವಣೆಯ ಸಮಯದಲ್ಲಿ ನಡೆದ ಅಕ್ರಮಗಳನ್ನು ಸಹ ಇದು ಗಣನೆಗೆ ತೆಗೆದುಕೊಂಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕಳೆದ ವರ್ಷ, ಚುನಾವಣೆಯ ಸಮಯದಲ್ಲಿ ಚುನಾವಣಾ ಅಧಿಕಾರಿ ಅನಿಲ್ ಮಸಿಹ್ ಅವರು ಮತಪತ್ರಗಳನ್ನು ವಿರೂಪ ಮಾಡಿ ಅವುಗಳನ್ನು ಅಮಾನ್ಯಗೊಳಿಸಿದ್ದರು. ನಂತರ ಅವರು ಬಿಜೆಪಿಯ ಅಭ್ಯರ್ಥಿಯನ್ನು ವಿಜೇತ ಎಂದು ಘೋಷಿಸಿದ್ದರು. ಇದರ ನಂತರ, ಕುಲದೀಪ್ ಕುಮಾರ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್‌ ಫಲಿತಾಂಶಗಳನ್ನು ರದ್ದುಗೊಳಿಸಿ ಆಮ್ ಆದ್ಮಿ ಪಕ್ಷದ ನಾಯಕನನ್ನು ಮೇಯರ್ ಹುದ್ದೆಗೆ ಮಾನ್ಯವಾಗಿ ಆಯ್ಕೆಯಾದ ಅಭ್ಯರ್ಥಿ ಎಂದು ಘೋಷಿಸಿತ್ತು.

ಸೋಮವಾರ ನಡೆದ ವಿಚಾರಣೆಯಲ್ಲಿ, ಕುಲದೀಪ್‌ ಕುಮಾರ್ ಅವರನ್ನು ಪ್ರತಿನಿಧಿಸುವ ಹಿರಿಯ ವಕೀಲ ಗುರ್ಮಿಂದರ್ ಸಿಂಗ್, ಚುನಾವಣೆಯ ಮೇಲ್ವಿಚಾರಣೆಗೆ ನಿವೃತ್ತ ನ್ಯಾಯಮೂರ್ತಿಗಳನ್ನು ನೇಮಿಸಬೇಕು ಎಂದು ಪೀಠಕ್ಕೆ ತಿಳಿಸಿದ್ದಾರೆ. ಹಿಂದಿನ ವರ್ಷ ನಡೆದ ವಿವಾದವನ್ನು ತಪ್ಪಿಸಲು ಈ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ಅನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ನೇಮಕಾತಿಗೆ ತಮ್ಮ ಆಕ್ಷೇಪಣೆ ಇಲ್ಲ ಎಂದು ಹೇಳಿದ್ದಾರೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ಆದಾಗ್ಯೂ, “ಪ್ರತಿ ಬಾರಿ ಇತಿಹಾಸ ಪುನರಾವರ್ತನೆಯಾಗದಿರಬಹುದು” ಎಂದು ಮೆಹ್ತಾ ಹೇಳಿದ್ದು, ಇತರ ಪುರಸಭೆಗಳ ಚುನಾವಣೆಗಳಿಗೆ ವೀಕ್ಷಕರ ನೇಮಕವು ಇದು ಪೂರ್ವನಿದರ್ಶನವಾಗಬಾರದು ಎಂದು ಅವರು ಪೀಠಕ್ಕೆ ತಿಳಿಸಿದ್ದಾರೆ.

ಇದನ್ನೂಓದಿ:  ಚಂಡೀಗಢ ಮೇಯರ್ ಚುನಾವಣೆ: ಬಿಜೆಪಿಗೆ ಮುಖಭಂಗ, ವಿರೂಪಗೊಂಡ 8 ಮತಗಳು ಮಾನ್ಯ ಎಂದ ಸುಪ್ರೀಂ

ಚಂಡೀಗಢ ಮೇಯರ್ ಚುನಾವಣೆ: ಬಿಜೆಪಿಗೆ ಮುಖಭಂಗ, ವಿರೂಪಗೊಂಡ 8 ಮತಗಳು ಮಾನ್ಯ ಎಂದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...