Homeಚಳವಳಿಕಾರ್ಮಿಕರ ಹೋರಾಟಕ್ಕೆ ಬಹುದೊಡ್ಡ ಜಯ : 'ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್' ನೋಂದಾಯಿಸಿದ ಸರ್ಕಾರ

ಕಾರ್ಮಿಕರ ಹೋರಾಟಕ್ಕೆ ಬಹುದೊಡ್ಡ ಜಯ : ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್’ ನೋಂದಾಯಿಸಿದ ಸರ್ಕಾರ

- Advertisement -
- Advertisement -

ಸ್ಯಾಮ್‌ಸಂಗ್ ಇಂಡಿಯಾದ ಶ್ರೀಪೆರಂಬದೂರ್ ಘಟಕದ ಕಾರ್ಮಿಕರ ಸುದೀರ್ಘ ಹೋರಾಟಕ್ಕೆ ಮಣಿದ ತಮಿಳುನಾಡು ಕಾರ್ಮಿಕ ಇಲಾಖೆಯು ಜನವರಿ 27, ಸೋಮವಾರದಂದು ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್’ (ಎಸ್‌ಐಡಬ್ಲ್ಯೂಯು) ಅನ್ನು ಅಧಿಕೃತವಾಗಿ ನೋಂದಾಯಿಸಿದೆ. ಈ ಮೂಲಕ ಕಾರ್ಮಿಕರ ಹೋರಾಟಕ್ಕೆ ಬಹುದೊಡ್ಡ ಜಯ ಸಿಕ್ಕಂತಾಗಿದೆ.

ಕೆಲಸದ ಸ್ಥಳದ ವಾತಾವರಣ ಸುಧಾರಿಸಬೇಕು, ವೇತನ ಪರಿಷ್ಕರಣೆ ಮತ್ತು ಕಾರ್ಮಿಕ ಒಕ್ಕೂಟದ ನೋಂದಣಿಗೆ ಆಗ್ರಹಿಸಿ ಸೆಪ್ಟೆಂಬರ್ 9, 2024ರಿಂದ ಅಕ್ಟೋಬರ್ 15, 2024ರವರೆಗೆ ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್'(ಎಸ್‌ಐಡಬ್ಲ್ಯೂಯು) ಬ್ಯಾನರ್ ಅಡಿಯಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದ್ದರು. ಸೆಂಟರ್ ಆಫ್‌ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಇವರಿಗೆ ಸಾಥ್ ನೀಡಿತ್ತು.

ಸೆಪ್ಟೆಂಬರ್ 9ರಿಂದ ಕೆಲಸ ಸ್ಥಗಿತಗೊಳಿಸಿದ್ದ ಕಾರ್ಮಿಕರು, ತಮ್ಮ ಒಕ್ಕೂಟ ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ (ಎಸ್‌ಐಡಬ್ಲ್ಯೂಯು) ಅನ್ನು ರಾಜ್ಯ ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿಸಬೇಕು ಎಂಬ ಪ್ರಮುಖ ಬೇಡಿಕೆಯಿಟ್ಟಿದ್ದರು. ಸರ್ಕಾರ ಕಾನೂನಿನ ಪ್ರಕಾರ 45 ದಿನಗಳ ನಂತರವೂ ಒಕ್ಕೂಟವನ್ನು ನೋಂದಣಿ ಮಾಡದ ಕಾರಣ ಸಿಐಟಿಯು ಮದ್ರಾಸ್ ಹೈಕೋರ್ಟ್‌ ಮೊರೆ ಹೋಗಿತ್ತು.

ಒಕ್ಕೂಟದ ನೋಂದಣಿಯು ಮುಷ್ಕರ ನಿರತ ಕಾರ್ಮಿಕರ ಪ್ರಮುಖ ಬೇಡಿಕೆಯಾಗಿತ್ತು. ಅವರು ಕಂಪನಿಯೊಂದಿಗೆ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಬೇಕಾದರೆ ಅಥವಾ ಅನ್ಯಾಯವನ್ನು ಪ್ರಶ್ನಿಸಬೇಕಾದರೆ ಸಾಮೂಹಿಕ ಧ್ವನಿಯ ಅಗತ್ಯವಿತ್ತು.

ಪ್ರತಿಭಟನೆ ಪ್ರಾರಂಭಗೊಂಡ ಒಂದು ತಿಂಗಳ ನಂತರ, ಸ್ಯಾಮ್‌ಸಂಗ್ ಕಂಪನಿಯು ಕೆಲವು ಉದ್ಯೋಗಿಗಳೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಿತ್ತು. ಆದರೆ, ಅದನ್ನು ಸಿಐಟಿಯು ತಿರಸ್ಕರಿಸಿತ್ತು. “ಮುಷ್ಕರಕ್ಕೆ ಹಾಜರಾಗದ ಸುಮಾರು 200 ಮಂದಿಯನ್ನು ಆಯ್ಕೆ ಮಾಡಿ ಸೆಕ್ರೆಟರಿಯೇಟ್‌ಗೆ ಕರೆದೊಯ್ದು ಮೂವರು ಮಂತ್ರಿಗಳ ಮುಂದೆ ಕುಳಿತುಕೊಳ್ಳಲು ಹೇಳಿದ್ದಾರೆ. ಕಂಪನಿಯು ಕೆಲವು ನಿಯಮಗಳನ್ನು ನಿರ್ದೇಶಿಸಿದೆ. ಅದನ್ನೇ ಎಂಒಯು ಎಂದು ಕರೆಯುತ್ತಿದ್ದಾರೆ. ಆದ್ದರಿಂದ ಮುಷ್ಕರ ನಿರತ ಕಾರ್ಮಿಕರಿಗೂ ಆ ಎಂಒಯುಗೂ ಯಾವುದೇ ಸಂಬಂಧವಿಲ್ಲ. ಪ್ರತಿಭಟನೆ ಮುಂದುವರಿಯಲಿದೆ” ಎಂದು ಸಿಐಟಿಯು ತಿಳಿಸಿತ್ತು.

ಈ ಬೆಳವಣಿಗೆಯ ನಂತರ, ಕಾರ್ಮಿಕರು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದರು. ಇದರಿಂದಾಗಿ ಪ್ರತಿಭಟನಾ ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು. ಮಧ್ಯರಾತ್ರಿಯ ಸಮಯದಲ್ಲಿ ಹಲವಾರು ಯೂನಿಯನ್ ಮುಖಂಡರನ್ನು ಬಂಧಿಸಲಾಗಿತ್ತು ಮತ್ತು ಪ್ರತಿಭಟನಾ ಸ್ಥಳದಲ್ಲಿದ್ದ ಪೆಂಡಾಲ್‌ ಅನ್ನು ತೆಗೆದು ಹಾಕಲಾಗಿತ್ತು. ಕಾರ್ಮಿಕರಿಗೆ ಶಾಂತಿಯುತ ಪ್ರತಿಭಟನೆಗೆ ಹಕ್ಕಿದೆ ಎಂದು ಮದ್ರಾಸ್ ಹೈಕೋರ್ಟ್ ಆದೇಶ ನೀಡಿದ ನಂತರವೂ ಪೊಲೀಸ್ ಸಿಬ್ಬಂದಿ ಕಾರ್ಮಿಕರನ್ನು ಬಂಧಿಸಿದ್ದರು. ಇದರ ವಿರುದ್ದ ಸಿಐಟಿಯು ನ್ಯಾಯಾಲಯಕ್ಕೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು.

ಕಂಪನಿಯ ಹೆಸರನ್ನು ಬಳಸುವುದರಿಂದ ಕಂಪನಿಯ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಸ್ಯಾಮ್‌ಸಂಗ್ ಇಂಡಿಯಾ ವಾದಿಸಿತ್ತು. “ಸ್ಯಾಮ್‌ಸಂಗ್ ಒಂದು ಅಂತಾರಾಷ್ಟ್ರೀಯ ಕಂಪನಿ. ಕಾರ್ಮಿಕರು ಒಕ್ಕೂಟ ರಚಿಸುವ ಹಕ್ಕನ್ನು ಹೊಂದಿದ್ದರೂ, ಸ್ಯಾಮ್‌ಸಂಗ್ ಹೆಸರನ್ನು ಬಳಸುವ ಮೂಲಭೂತ ಹಕ್ಕನ್ನು ಅವರು ಹೊಂದಿಲ್ಲ. ಮುಷ್ಕರದಿಂದಾಗಿ ನಮಗೆ 100 ಮಿಲಿಯನ್ ಡಾಲರ್ ನಷ್ಟವಾಗಿದೆ” ಎಂದು ಕಂಪನಿಯ ವಕೀಲರು ನ್ಯಾಯಾಲಯದ ವಿಚಾರಣೆಯ ಸಂದರ್ಭದಲ್ಲಿ ಹೇಳಿದ್ದರು.

ಡಿಸೆಂಬರ್ 5, 2024ರಂದು, ಮದ್ರಾಸ್ ಹೈಕೋರ್ಟ್ ತಮಿಳುನಾಡು ಸರ್ಕಾರಕ್ಕೆ ಆರು ವಾರಗಳಲ್ಲಿ ಒಕ್ಕೂಟದ ನೋಂದಣಿ ಬಗ್ಗೆ ನಿರ್ಧರಿಸುವಂತೆ ನಿರ್ದೇಶನ ನೀಡಿತ್ತು. ಜನವರಿ 27, 2025ರಂದು ಕಾರ್ಮಿಕ ಇಲಾಖೆಯು ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್’ (ಎಸ್‌ಐಡಬ್ಲ್ಯೂಯು) ಅನ್ನು ಅಧಿಕೃತವಾಗಿ ನೋಂದಾಯಿಸಿದೆ. ಈ ಮೂಲಕ ಕಾರ್ಮಿಕರ ಹೋರಾಟಕ್ಕೆ ಜಯ ದೊರೆತಿದೆ.

ವಕ್ಫ್‌ ತಿದ್ದುಪಡಿ ಪರಿಶೀಲನೆ – ವಿಪಕ್ಷಗಳ ಎಲ್ಲಾ ಪ್ರಸ್ತಾಪ ತಿರಸ್ಕೃತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...