Homeಕರ್ನಾಟಕನಬಾರ್ಡ್ ನೀತಿ, ಮೈಕ್ರೋ ಫೈನಾನ್ಸ್ ಕಿರುಕುಳದ ವಿರುದ್ಧ ಜ.29ರಂದು ರೈತರಿಂದ ಬೃಹತ್ ಪ್ರತಿಭಟನೆ

ನಬಾರ್ಡ್ ನೀತಿ, ಮೈಕ್ರೋ ಫೈನಾನ್ಸ್ ಕಿರುಕುಳದ ವಿರುದ್ಧ ಜ.29ರಂದು ರೈತರಿಂದ ಬೃಹತ್ ಪ್ರತಿಭಟನೆ

- Advertisement -
- Advertisement -

ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿ ವಿರೋಧಿಸಿ, ಮೈಕ್ರೋ ಫೈನಾನ್ಸ್ ಹಾವಳಿ, ಕಿರುಕುಳ ತಡೆಗಟ್ಟಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಜನವರಿ 29ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ರಿಸರ್ವ್‌ ಬ್ಯಾಂಕ್ ಎದುರು ಬೃಹತ್ ಪ್ರತಿಭಟನೆ ನಡೆಸಲಿದೆ.

ಸೋಮವಾರ (ಜ.27) ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರು “ಕೃಷಿ ಕ್ಷೇತ್ರವನ್ನು ಸದೃಡಗೊಳಿಸುವ ದೃಷ್ಠಿಯಿಂದ ಆರ್ಥಿಕ ನೆರವು ನೀಡಲು ಸ್ಥಾಪನೆಯಾಗಿರುವ ನಬಾರ್ಡ್ ಮೂಲಕ ಕೃಷಿಗೆ ನೀಡುತ್ತಿದ್ದ ಅಲ್ಪಾವಧಿ ಸಾಲದ ಮೊತ್ತವನ್ನು ಕಡಿತಗೊಳಿಸಲಾಗಿದೆ. ದೂರದೃಷ್ಠಿಯಿಂದ ಸಹಕಾರ ಚಳವಳಿ ಕಟ್ಟಿದ ಸಹಕಾರಿ ಸಂಸ್ಥೆಗಳು ದೇಶದ ಬೆನ್ನೆಲುಬಾಗಿ ದುಡಿಯುತ್ತಿದ್ದು, ಗ್ರಾಮೀಣ ಪ್ರದೇಶದ ಆರ್ಥಿಕತೆ ಕಟ್ಟಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿವೆ. ಹಾಲಿನ ಡೈರಿಗಳು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು, ಡಿಸಿಸಿ ಬ್ಯಾಂಕ್‌ಗಳು ಇದಕ್ಕೆ ಪೂರಕವಾಗಿ ಕೆಲಸ ಮಾಡುತ್ತಿವೆ. ಆದರೆ, ಕೇಂದ್ರ ಸರ್ಕಾರ ಮೂರು ವರ್ಷಗಳಿಂದ ಪ್ರತಿವರ್ಷ ಕೃಷಿ ಕ್ಷೇತ್ರಕ್ಕೆ ನೀಡುವ ಸಾಲದ ಮೊತ್ತವನ್ನು ಕಡಿಮೆ ಮಾಡುತ್ತಲೇ ಬರುತ್ತಿದೆ. ಕೇಂದ್ರದ ಈ ನೀತಿಯಿಂದಾಗಿ ನಬಾರ್ಡ್ ರೈತರಿಗೆ ನೀಡುತ್ತಿದ್ದ ಸಾಲದ ಮೊತ್ತವನ್ನು ಕಡಿಮೆ ಮಾಡಿದೆ. ಈ ಸಾಲಿನಲ್ಲಿ ನಮ್ಮ ರಾಜ್ಯಕ್ಕೆ ನೀಡುತ್ತಿದ್ದ ಸಾಲವನ್ನು ಶೇ.58 ತಗ್ಗಿಸಿದೆ. ಈ ಮೂಲಕ ಕೇಂದ್ರ ಸರ್ಕಾರ ಇಡೀ ಕೃಷಿ ವ್ಯವಸ್ಥೆಯನ್ನೇ ನಾಶ ಮಾಡಿ ಕೃಷಿ ಕ್ಷೇತ್ರವನ್ನು ಸಂಪೂರ್ಣ ಕಾರ್ಪೋರೇಟ್ ಕಂಪನಿಗಳ ವಶಕ್ಕೆ ನೀಡಲು ಹುನ್ನಾರ ನಡೆಸಿದೆ” ಎಂದು ಆರೋಪಿಸಿದರು.

“ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಮತ್ತು ಕಿರುಕುಳದಿಂದ ನಮ್ಮ ಗ್ರಾಮೀಣ ಪ್ರದೇಶದ ಮಹಿಳೆಯರು ಸಂಕಷ್ಟಕ್ಕೀಡಾಗಿದ್ದಾರೆ. ಮೈಕ್ರೋ ಫೈನಾನ್ಸ್ ಮೇಲೆ ಯಾರಿಗೂ ಹಿಡಿತ ಇಲ್ಲ. ಮರ್ಯಾದೆಗೆ ಅಂಜಿ ಬಡ ಜನರು ಆತ್ಮಹತ್ಯೆ ಹಾದಿ ಹಿಡಿಯುತ್ತಿದ್ದಾರೆ. ಕೆಲವರು ಊರನ್ನೇ ತೊರೆಯುತ್ತಿದ್ದಾರೆ. ಸರ್ಕಾರ ಕೂಡಲೇ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ಜರುಗಿಸಬೇಕು” ಎಂದು ಅವರು ಒತ್ತಾಯಿಸಿದರು.

ಜ.29 (ಬುಧವಾರ) ಬೆಳಿಗ್ಗೆ 11 ಗಂಟೆಗೆ ನಡೆಯುವ ಬೃಹತ್ ಪ್ರತಿಭಟನೆಯಲ್ಲಿ ಎಲ್ಲಾ ಜಿಲ್ಲೆಗಳ ಸಾವಿರಾರು ಸಂಖ್ಯೆಯಲ್ಲಿ ರೈತರು ಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿಯವರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಆಡಳಿತ ಮಂಡಳಿ ಸದಸ್ಯರು ಮತ್ತು ಷೇರುದಾರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ರೈತ ಸಂಘದ ಪದಾಧಿಕಾರಿಗಳಾದ ಜೆಎಂ ವೀರಸಂಗಯ್ಯ, ಎನ್‌ಡಿ ವಸಂತಕುಮಾರ್, ಗೋಪಾಲ ಪಾಪೇಗೌಡ, ಅರುಣಕುಮಾರ್ ಕುರುಡಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಇನ್ಫೋಸಿಸ್ ಸಹ-ಸಂಸ್ಥಾಪಕ ಸೇರಿದಂತೆ 18 ಜನರ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...