Homeಕರ್ನಾಟಕಕುಂಭ ಮೇಳದಲ್ಲಿ ತೀರ್ಥ ಸ್ನಾನದ ನಕಲಿ ಫೋಟೋ ವೈರಲ್ :‌ ದೂರು ದಾಖಲಿಸಿದ ನಟ ಪ್ರಕಾಶ್...

ಕುಂಭ ಮೇಳದಲ್ಲಿ ತೀರ್ಥ ಸ್ನಾನದ ನಕಲಿ ಫೋಟೋ ವೈರಲ್ :‌ ದೂರು ದಾಖಲಿಸಿದ ನಟ ಪ್ರಕಾಶ್ ರಾಜ್

- Advertisement -
- Advertisement -

“ಸುಳ್ಳ ರಾಜ”ನ ಹೇಡಿಗಳ ಸೈನ್ಯಕ್ಕೆ..ಅವರ ಪವಿತ್ರ ಪೂಜೆಯಲ್ಲೂ ಸುಳ್ಳು ಸುದ್ದಿ ಹಬ್ಬಿಸಿ ಹೊಲಸು ಮಾಡುವುದೇ ಕೆಲಸ” ಎಂದು ಬಲಪಂಥೀಯ ವಿಚಾರಗಳನ್ನು ಪ್ರತಿಪಾದಿಸುವ ಪ್ರಶಾಂತ್ ಸಂಬರ್ಗಿಗೆ ನಟ ಪ್ರಕಾಶ್ ರಾಜ್ ತಿರುಗೇಟು ನೀಡಿದ್ದಾರೆ.

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಬಹುಭಾಷಾ ನಟ ಪ್ರಕಾಶ್‌ ರಾಜ್ ಭಾಗವಹಿಸಿ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು ಎಂದು ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಈ ಚಿತ್ರವನ್ನು ಪ್ರಶಾಂತ್‌ ಸಂಬರ್ಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ, “ಕುಂಭಮೇಳದಲ್ಲಿ ನಟ ಪ್ರಕಾಶ್‌ ರಾಜ್.‌ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು. ಅವರ ಎಲ್ಲ ಪಾಪಗಳನ್ನು ಕ್ಷಮಿಸಿ, ತೆಗೆದುಹಾಕಲಾಗುವುದು ಎಂದು ಭಾವಿಸುತ್ತೇನೆ” ಎಂದು ಬರೆದುಕೊಂಡಿದ್ದರು.

ಸಂಬರ್ಗಿ ಪೋಸ್ಟ್‌ಗೆ ಖಾರವಾಗಿ ಪ್ರತಿಕ್ರಿಯಿಸಿರುವ ಪ್ರಕಾಶ್‌ ರಾಜ್, “ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ. ಕೋರ್ಟಿನ ಕಟಕಟೆಯಲ್ಲಿ ಏನು ಮಾಡುತ್ತಾರೋ ನೋಡೋಣ” ಎಂದು ಹೇಳಿದ್ದಾರೆ.

ಪ್ರಕಾಶ್‌ ರಾಜ್ ಚಿತ್ರ ಎಐನಿಂದ ರಚಿಸಿದ್ದಾಗಿದೆ. ಎಐ ಚಿತ್ರಗಳನ್ನು ಕಂಡು ಹಿಡಿಯುವ ‘ಸೈಟ್‌ ಎಂಜಿನ್‌’ ನಲ್ಲಿ ಮೊದಲಿಗೆ ಈ ಚಿತ್ರವನ್ನು ಪರಿಶೀಲನೆಗೆ ಒಳಪಡಿಸಿದಾಗ. ಇದು ಶೇ. 92ರಷ್ಟು ಜರನೇಟಿವ್‌ ಎಐ ಬಳಸಿ ರಚಿಸಿದ ಚಿತ್ರ ಎಂದು ‘ಸೈಟ್‌ ಇಂಜಿನ್‌’ ಫಲಿತಾಂಶ ತೋರಿಸಿದೆ.

ಈ ಕುರಿತು ಫ್ಯಾಕ್ಟ್‌ ಸುದ್ದಿ ಇಲ್ಲಿದೆ : FACT CHECK | ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ್ರಾ ನಟ ಪ್ರಕಾಶ್ ರಾಜ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...