Homeಮುಖಪುಟದನ ಕಳ್ಳ ಸಾಗಣೆ ಶಂಕೆಯಲ್ಲಿ ಸ್ವಘೋಷಿತ 'ಗೋ ರಕ್ಷಕ'ರಿಂದ ಥಳಿತ : ವ್ಯಕ್ತಿ ಸಾವು

ದನ ಕಳ್ಳ ಸಾಗಣೆ ಶಂಕೆಯಲ್ಲಿ ಸ್ವಘೋಷಿತ ‘ಗೋ ರಕ್ಷಕ’ರಿಂದ ಥಳಿತ : ವ್ಯಕ್ತಿ ಸಾವು

- Advertisement -
- Advertisement -

ದನ ಕಳ್ಳಸಾಗಣೆದಾರನೆಂದು ಶಂಕಿಸಿ 45 ವರ್ಷದ ವ್ಯಕ್ತಿಯೊಬ್ಬರಿಗೆ ‘ಸ್ವಘೋಷಿತ ಗೋರಕ್ಷಕ’ರ ಗುಂಪು ಥಳಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆ ವ್ಯಕ್ತಿ ದೆಹಲಿಯ ಸಫ್ದರ್ ಗಂಜ್ ಆಸ್ಪತ್ರೆಯಲ್ಲಿ ಭಾನುವಾರ (ಜ.26) ಮುಂಜಾನೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಮೃತ ವ್ಯಕ್ತಿಯನ್ನು ಹರಿಯಾಣದ ಪಲ್ವಾಲ್ ಜಿಲ್ಲೆಯ ಮುಂಡ್ಕಟಿ ಪೊಲೀಸ್ ಠಾಣೆ ವ್ಯಾಪ್ತಿಯ ಘುದ್ಪುರ ಗ್ರಾಮದ ನಿವಾಸಿ ಯೂಸುಫ್ ಎಂದು ಗುರುತಿಸಲಾಗಿದೆ.

ಯೂಸುಫ್ ಅವರ ಸಾವಿಗೆ ಕಾರಣವಾದ ಮಾರಣಾಂತಿಕ ದಾಳಿಯ ಹಿಂದೆ ಸ್ವಘೋಷಿತ ‘ಗೋರಕ್ಷಕ’ರ ಕೈವಾಡವಿದೆ ಎಂದು ಆರೋಪಿಸಿ ಯೂಸುಫ್ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ಮುಂಡ್ಕಟಿ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಯೂಸುಫ್ ದನ ಸಾಕುವವರಾಗಿದ್ದರು. ಅವರು ಹಾಲಿನ ವ್ಯಾಪಾರ ನಡೆಸುತ್ತಿದ್ದರು ಮತ್ತು ಅವರ ಮನೆಯಲ್ಲಿ ಸುಮಾರು 30 ಜಾನುವಾರುಗಳಿವೆ.

ಶುಕ್ರವಾರ (ಜ.24) ಸಂಜೆ, ಯೂಸುಫ್ ಅವರು ಪಲ್ವಾಲ್ ಜಿಲ್ಲೆಯ ನಾಗ್ಲಾ ಗ್ರಾಮದಿಂದ ಒಂದು ಹಾಲು ಕೊಡುವ ಹಸುವನ್ನು ಅದರ ಕರುವಿನ ಜೊತೆಗೆ ಖರೀದಿಸಿ ಟೆಂಪೋದಲ್ಲಿ ಮನೆಗೆ ಕೊಂಡೊಯ್ಯುತ್ತಿದ್ದರು.

ಹಸು ಮತ್ತು ಅದರ ಕರುವನ್ನು ಟೆಂಪೋದಲ್ಲಿ ಕಳಿಸಿದ ಯೂಸುಫ್, ಬೈಕ್‌ನಲ್ಲಿ ಆ ಟೆಂಪೋವನ್ನು ಹಿಂಬಾಲಿಸುತ್ತಿದ್ದರು. ಟೆಂಪೋ ಮಿತ್ರೋಲ್ ಗ್ರಾಮಕ್ಕೆ ತಲುಪಿದಾಗ, ಕೆಲ ವ್ಯಕ್ತಿಗಳು ತಡೆದು ನಿಲ್ಲಿಸಿದ್ದು, ಹಸು ಕಳ್ಳಸಾಗಣೆ ಮಾಡುತ್ತಿದ್ದಾರೆಂದು ಆರೋಪಿಸಿದ್ದಾರೆ.

ಟೆಂಪೋ ಚಾಲಕ ಕಳ್ಳಸಾಗಣೆ ಆರೋಪವನ್ನು ನಿರಾಕರಿಸಿದಾಗ, ದುಷ್ಕರ್ಮಿಗಳ ಗುಂಪು ಚಾಲಕನ ಮೂಲಕ ಯೂಸುಫ್‌ ಅವರಿಗೆ ಕರೆ ಮಾಡಿಸಿ ಸ್ಥಳಕ್ಕೆ ಕರೆಸಿಕೊಂಡಿದ್ದಾರೆ. ನಂತರ ಸ್ಥಳದಲ್ಲೇ ತೀವ್ರವಾಗಿ ಥಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಯೂಸುಫ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾಗಿ ವರದಿಗಳು ಹೇಳಿವೆ.

ಯೂಸುಫ್‌ಗೆ ಯಾರೊಂದಿಗೂ ಯಾವುದೇ ವಿವಾದವಿರಲಿಲ್ಲ. ಅವರು ಯಾವಾಗಲೂ ತನ್ನ ಕೆಲಸದಲ್ಲಿ ನಿರತನಾಗಿರುತ್ತಿದ್ದರು ಎಂದು ಘುದ್ಪುರ ಗ್ರಾಮದ ಗ್ರಾಮದ ಸರಪಂಚ್ ಹೇಳಿದ್ದಾರೆ.

ಘಟನೆ ಸಂಬಂಧ ಎಫ್‌ಐಆರ್ ದಾಖಲಾದ ನಂತರ ಕುಟುಂಬಸ್ಥರು ಭಾನುವಾರ ತಡರಾತ್ರಿ ಯೂಸುಫ್ ಅವರ ಅಂತ್ಯಕ್ರಿಯೆ ನಡೆಸಿದ್ದಾರೆ. ಯೂಸುಫ್ ಅವರು ನಾಲ್ವರು ಮಕ್ಕಳನ್ನು ಅಗಲಿದ್ದಾರೆ. ಸರ್ಕಾರ ಸೂಕ್ತ ಆರ್ಥಿಕ ಪರಿಹಾರ ನೀಡಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹಿಮಾಚಲ ಪ್ರದೇಶದ ಕಸ್ಟಡಿಯಲ್ಲಿ ಸಾವು: ಮಾಜಿ ಐಜಿ ಜಹೂರ್, 7 ಪೊಲೀಸ್ ಅಧಿಕಾರಿಗಳಿಗೆ ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...