Homeಮುಖಪುಟಮಹಾರಾಷ್ಟ್ರ| ಅಪರೂಪದ ವೈದ್ಯಕೀಯ ವಿದ್ಯಮಾನ; ಜನಿಸಲಿರುವ ಮಗುವಿನೊಳಗೆ ಭ್ರೂಣ ಪತ್ತೆ!

ಮಹಾರಾಷ್ಟ್ರ| ಅಪರೂಪದ ವೈದ್ಯಕೀಯ ವಿದ್ಯಮಾನ; ಜನಿಸಲಿರುವ ಮಗುವಿನೊಳಗೆ ಭ್ರೂಣ ಪತ್ತೆ!

- Advertisement -
- Advertisement -

ಅತ್ಯಂತ ಅಪರೂಪದ ವೈದ್ಯಕೀಯ ವಿದ್ಯಮಾನದಲ್ಲಿ, ಮಹಾರಾಷ್ಟ್ರದ ಬುಲ್ಧಾನಾದಲ್ಲಿ ಹುಟ್ಟಲಿರುವ ಮಗುವಿನ ಹೊಟ್ಟೆಯೊಳಗೊಂದು ಬ್ರೂಣ ಪತ್ತೆಯಾಗಿದೆ.

ಎರಡು ದಿನಗಳ ಹಿಂದೆ 32 ವರ್ಷದ ಮಹಿಳೆಯೊಬ್ಬರು ‘ಸೋನೋಗ್ರಫಿ’ಗೆ ಒಳಗಾದಾಗ ಸರ್ಕಾರಿ ಆಸ್ಪತ್ರೆಯಲ್ಲಿ ‘ಭ್ರೂಣದಲ್ಲಿ ಭ್ರೂಣ’ ಪ್ರಕರಣ ಪತ್ತೆಯಾಗಿದೆ. ಈ ಅಪರೂಪದ ಜನ್ಮಜಾತ ಅಸಂಗತತೆಯನ್ನು ವಿಶ್ವಾದ್ಯಂತ ಸುಮಾರು 200 ಪ್ರಕರಣಗಳಲ್ಲಿ ಮಾತ್ರ ದಾಖಲಿಸಲಾಗಿದೆ, ಭಾರತದಲ್ಲಿ ಕೇವಲ 15-20 ಪ್ರಕರಣಗಳು ವರದಿಯಾಗಿವೆ.

“ಆರಂಭದಲ್ಲಿ ನನಗೆ ಆಶ್ಚರ್ಯವಾಯಿತು, ನಂತರ ಚಿತ್ರಗಳನ್ನು ಎಚ್ಚರಿಕೆಯಿಂದ ಮರುಪರಿಶೀಲಿಸಿದೆ” ಎಂದು ಭ್ರೂಣವನ್ನು ಕಂಡುಹಿಡಿದ ಸ್ತ್ರೀರೋಗ ತಜ್ಞ ಡಾ. ಪ್ರಸಾದ್ ಅಗರ್ವಾಲ್ ಹೇಳಿದರು.

“ಅದು ಬೆಳವಣಿಗೆಯಾಗುತ್ತಿರಲಿಲ್ಲ, ಇದು ನಿಜಕ್ಕೂ ಭ್ರೂಣದದೊಳಗೊಂದು ಭ್ರೂಣದ ಪ್ರಕರಣವಾಗಿತ್ತು” ಎಂದು ಅವರು ಹೇಳಿದರು.

ಮಹಿಳೆ ತನ್ನ ಒಂಬತ್ತನೇ ತಿಂಗಳ ಗರ್ಭಧಾರಣೆಯಲ್ಲಿದ್ದಳು, ಈ ಅಸಂಗತತೆಯು ಅತ್ಯಂತ ಅಪರೂಪ ಮತ್ತು ಅನಿರೀಕ್ಷಿತತೆಯಿಂದಾಗಿ ಹಿಂದಿನ ಸ್ಕ್ಯಾನ್‌ಗಳಲ್ಲಿ ಪತ್ತೆಯಾಗಲಿಲ್ಲ. “ಹಿಂದಿನ ಸೋನೋಗ್ರಫಿಯಲ್ಲಿ ಇದನ್ನು ಪತ್ತೆಯಾಗಿರಲಿಲ್ಲ. ಏಕೆಂದರೆ, ಇದು ಬಹಳ ಅಪರೂಪದ ಸ್ಥಿತಿಯಾಗಿದ್ದು, ಅಂತಹ ಸ್ಥಿತಿ ಅಸ್ತಿತ್ವದಲ್ಲಿರಬಹುದು ಎಂದು ಯಾರೂ ಊಹಿಸಲೂ ಸಾಧ್ಯವಿಲ್ಲ. ಆದ್ದರಿಂದ, ನಾನು ಒಂದೆರಡು ವೈದ್ಯರಿಂದ ವಿವರವಾದ ಅಧ್ಯಯನವನ್ನು ಮಾಡಿ ಅದನ್ನು ದೃಢಪಡಿಸಿದೆ” ಎಂದು ಡಾ. ಅಗರ್ವಾಲ್ ಹೇಳಿದರು.

“ತಾಯಿಗೆ ಸಾಮಾನ್ಯ ಹೆರಿಗೆಯಾಗುವ ಸಾಧ್ಯತೆಯಿದೆ” ಎಂದು ಬುಲ್ಧಾನಾ ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ. ಭಗವತ್ ಭೂಸಾರಿ ವಿವರಿಸಿದರು. “ಆದರೂ, ಜನನದ ನಂತರ ಮಗುವಿಗೆ ತಕ್ಷಣದ ವೈದ್ಯಕೀಯ ಆರೈಕೆಯ ಅಗತ್ಯವಿರಬಹುದು” ಎಂದು ಅವರು ಹೇಳಿದರು.

ಈ ಸ್ಥಿತಿಯ ನಿಖರವಾದ ಕಾರಣವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲಾಗಿಲ್ಲ. ಆದರೆ, ಇದು ಒಂದೇ ರೀತಿಯ ಅವಳಿಗಳ ಬೆಳವಣಿಗೆಯ ಸಮಯದಲ್ಲಿ ಅಸಹಜತೆಯಿಂದ ಉಂಟಾಗುತ್ತದೆ ಎಂದು ನಂಬಲಾಗಿದೆ. ಪರಾವಲಂಬಿ ಅವಳಿ ಸ್ವತಂತ್ರವಾಗಿ ಬದುಕಲು ಸಾಧ್ಯವಿಲ್ಲವಾದ್ದರಿಂದ ಇದನ್ನು ನಿಜವಾದ ಅವಳಿ ಗರ್ಭಧಾರಣೆಯ ಬದಲು ಬೆಳವಣಿಗೆಯ ಅಸಂಗತತೆ ಎಂದು ಪರಿಗಣಿಸಲಾಗುತ್ತದೆ.

ಇದನ್ನೂ ಓದಿ; ಆಂಧ್ರ ಪ್ರದೇಶ| ₹1 ಕೋಟಿ ವಿಮೆ ಪಡೆಯಲು ತಂಗಿಯನ್ನೇ ಕೊಂದ ವ್ಯಕ್ತಿ; ಆರೋಪಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....