Homeಕರ್ನಾಟಕಬಿಜೆಪಿ ಬಸವಣ್ಣನಿಗೂ ಹಿಂದೂ ವಿರೋಧಿ ಪಟ್ಟ ಕಟ್ಟಿಬಿಡುತ್ತಿತ್ತು - ಪ್ರಿಯಾಂಕ್ ಖರ್ಗೆ

ಬಿಜೆಪಿ ಬಸವಣ್ಣನಿಗೂ ಹಿಂದೂ ವಿರೋಧಿ ಪಟ್ಟ ಕಟ್ಟಿಬಿಡುತ್ತಿತ್ತು – ಪ್ರಿಯಾಂಕ್ ಖರ್ಗೆ

- Advertisement -
- Advertisement -

ಬಿಜೆಪಿ ಏನಾದರೂ 12ನೇ ಶತಮಾನದಲ್ಲಿ ಇದ್ದಿದ್ದರೆ ಮೌಢ್ಯದ ವಿರುದ್ಧ ವಚನ ಚಳವಳಿ ಕಟ್ಟಿದ್ದ ಶರಣರಿಗೂ ಹಿಂದೂ ವಿರೋಧಿ ಪಟ್ಟ ಕಟ್ಟಿಬಿಡುತ್ತಿದ್ದರೊ ಏನೋ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಹೇಳಿದ್ದಾರೆ. “ಪ್ರಶ್ನೆಗಳನ್ನು ಎತ್ತಿದರೆ, ವಸ್ತು ಸ್ಥಿತಿಯನ್ನು ಹೇಳಿದರೆ ಹಿಂದೂ ವಿರೋಧಿ ಎಂದು ಹೇಳಿ ಉತ್ತರದಾಯಿತ್ವದಿಂದ ಜಾರಿಕೊಳ್ಳುವುದು ಬಿಜೆಪಿಯ ಹಳೆ ಚಾಳಿ” ಎಂದು ಅವರು ಹೇಳಿದ್ದಾರೆ. ಬಿಜೆಪಿ ಬಸವಣ್ಣನಿಗೂ

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬಿಜೆಪಿ ಏನಾದರೂ 12ನೇ ಶತಮಾನದಲ್ಲಿ ಇದ್ದಿದ್ದರೆ ಮೌಢ್ಯದ ವಿರುದ್ಧ ವಚನ ಚಳವಳಿ ಕಟ್ಟಿದ್ದ ಶರಣರಿಗೂ ಹಿಂದೂ ವಿರೋಧಿ ಪಟ್ಟ ಕಟ್ಟಿಬಿಡುತ್ತಿದ್ದರೊ ಏನೋ. ಆದರೆ ಆಗಿನ ಮನುವಾದಿಗಳು ಶರಣರಿಗೆ ಪೀಡಿಸಿದ್ದರು ಎನ್ನುವುದು ಇತಿಹಾಸ.” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಉತ್ತರದ ಕಾಶಿಯಲಿ ಕತ್ತೆ ಮಿಂದೈ ತರಲು, ದಕ್ಷಿಣದ ದೇಶಕದು ಕುದುರೆಯಹುದೆ?“ ಎಂಬ ಕುವೆಂಪು ಅವರ ಹೇಳಿಕೆಯನ್ನು ಉಲ್ಲೇಖಿಸಿರುವ ಪ್ರಿಯಾಂಕ್ ಖರ್ಗೆ ಅವರು, ಕುವೆಂಪು ಅವರನ್ನು ಹಿಂದೂ ವಿರೋಧಿ ಎನ್ನುವ ದಮ್ಮು ತಾಕತ್ತು ಇದೆಯೇ? ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಬಸವಣ್ಣನಿಗೂ

“ನೀರ ಕಂಡಲ್ಲಿ ಮುಳುಗುವರಯ್ಯ / ಮರ ಕಂಡಲ್ಲಿ ಸುತ್ತುವರಯ್ಯ / ಬತ್ತುವ ಜಲವ ಒಣಗುವ ಮರವ ಮೆಚ್ಚಿದವರು / ನಿನ್ನನೆತ್ತಬಲ್ಲರು ಕೂಡಲ ಸಂಗಮದೇವ. – ವೇದಕ್ಕೆ ಬರೆಯ ಕಟ್ಟುವೆ, ಶಾಸ್ತ್ರಕ್ಕೆ ನಿಗಳವನಿಕ್ಕುವೆ, ತರ್ಕದ ಬೆನ್ನ ಬಾರನೆತ್ತುವ ಆಗಮದ ಮೂಗ ಕೊಯ್ಯುವೆ ನೋಡಯ್ಯ ಎಂದ ಬಸವಣ್ಣರನ್ನು ಹಿಂದೂ ವಿರೋಧಿ ಎನ್ನುವಿರಾ?” ಎಂದು ಅವರು ಪ್ರಶ್ನಿಸಿದ್ದಾರೆ.

“ವೇದ ಶಾಸ್ತ್ರ ಪುರಾಣಗಳೆಂಬ ಕೊಟ್ಟಣ ಕುಟ್ಟುತ್ತಾ ನುಚ್ಚು ತೌಡು ಕಾಣಿರೋ ಎಂದ ಅಕ್ಕಮಹಾದೇವಿಯನ್ನು ಹಿಂದೂ ವಿರೋಧಿ ಎನ್ನುವಿರಾ? ಕಟ್ಟಿದ ಲಿಂಗವ ಬಿಟ್ಟು ಬೆಟ್ಟದ ಲಿಂಗಕ್ಕೆ ಹೋಗಿ ಹೊಟ್ಟೆಯಡಿಯಾಗಿ ಬೀಳುವ ಲೊಟ್ಟೆ ಮೂಗನ ಕಂಡರೆ ಮೆಟ್ಟಿದ ಎಡಪಾದರಕ್ಷೆಯ ತಕ್ಕೊಂಡು ಲಟಲಟನೆ ಹೊಡೆ’ ಎಂದ ಅಂಬಿಗರ ಚೌಡಯ್ಯರನ್ನು ಹಿಂದೂ ವಿರೋಧಿ ಎನ್ನುವಿರಾ?” ಎಂದು ಖರ್ಗೆ ಕೇಳಿದ್ದಾರೆ.

ಕಲ್ಲಮನೆಯಡಿ ಕಲ್ಲದೇವರ ಮಾಡಿ, ಆ ಕಲ್ಲು ಕಲ್ಲ ಮೇಲೆ ಕೆಡೆದರೆ ದೇವರೆತ್ತ ಹೋದರೋ? ಎಂದಿದ್ದ ಅಲ್ಲಮರನ್ನು ಹಿಂದೂ ವಿರೋಧಿ ಎನ್ನುವಿರಾ? ಎಂದು ಅವರು ಪ್ರಶ್ನಿಸಿದ್ದಾರೆ.

”ಸೌ ಚುಹೇ ಖಾಕೆ ಬಿಲ್ಲಿ ಹಜ್ ಕೊ ಚಲೀ” ಎಂಬ ನುಡಿಗಟ್ಟು ಉರ್ದುವಿನಲ್ಲೂ ಇದೆ. ಯಾವ ಧರ್ಮವೂ ಕೂಡ ಕೆಟ್ಟ ಕೆಲಸ ಮಾಡಿ ಪುಣ್ಯ ಕ್ಷೇತ್ರಕ್ಕೆ ಬಂದರೆ ಪಾಪ ಪರಿಹಾರವಾಗುತ್ತದೆ ಎಂದಿಲ್ಲ. ನಿಮ್ಮ ಒಳ್ಳೆಯ ಕೆಲಸಗಳೇ ನಿಮ್ಮ ಪುಣ್ಯಕ್ಕೆ ದಾರಿ ಎನ್ನುತ್ತವೆ ಎಂದು ಅವರು ಹೇಳಿದ್ದಾರೆ.

“ಬಿಜೆಪಿಯವರು ಮೊದಲು ಹಿಂದೂ ಧರ್ಮದ ಅಧ್ಯಯನ ಮಾಡಲಿ. ಪಾಪ, ಪುಣ್ಯಗಳು ನದಿಗಳಲ್ಲಿ ಮುಳುಗೇಳುವುದರಿಂದ ನಿರ್ಧಾರವಾಗುವುದಿಲ್ಲ. ನಾವು ಮಾಡಿದ ಕೆಟ್ಟ ಕೆಲಸಗಳಿಗೆ ಕುಂಭ ಸ್ನಾನದಿಂದ ಮಾಫಿಯೂ ದೊರಕುವುದಿಲ್ಲ. ಗಂಗಾ ಸ್ನಾನ ಮಾಡಿದರೆ ಕೆಟ್ಟವನು ಒಳ್ಳೆಯವನಾಗುವುದಿಲ್ಲ.
ಕರ್ಮ, ಕಾಯಕಗಳು ಮಾತ್ರ ನಮ್ಮನ್ನು ಉದ್ದರಿಸಬಲ್ಲವು ಎನ್ನುವುದನ್ನು ಹಲವು ಮಹನೀಯರು ಹೇಳಿದ್ದಾರೆ” ಎಂದು ಹೇಳಿರುವ ಅವರು, ಬಿಜೆಪಿಯವರು ಧರ್ಮದ ಹೆಸರು ಹೇಳಿಕೊಂಡು ರಾಜಕಾರಣ ಮಾಡುವುದನ್ನು ಬಿಟ್ಟು, ಸಾಧನೆ ಹೇಳಿಕೊಂಡು ರಾಜಕಾರಣ ಮಾಡಿ ತೋರಿಸಲಿ ಎಂದು ತಿಳಿಸಿದ್ದಾರೆ.

ಇದನ್ನೂಓದಿ:  ಮಾನನಷ್ಟ ಮೊಕದ್ದಮೆ | ಸಿಎಂ ಅತಿಶಿಗೆ ಜಾರಿಯಾಗಿದ್ದ ಸಮನ್ಸ್ ರದ್ದು

ಮಾನನಷ್ಟ ಮೊಕದ್ದಮೆ | ಸಿಎಂ ಅತಿಶಿಗೆ ಜಾರಿಯಾಗಿದ್ದ ಸಮನ್ಸ್ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...