Homeಮುಖಪುಟಅತ್ಯಾಚಾರ, ಕೊಲೆ ಪ್ರಕರಣ | ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿದ ಸುಪ್ರೀಂ ಕೋರ್ಟ್

ಅತ್ಯಾಚಾರ, ಕೊಲೆ ಪ್ರಕರಣ | ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಮುಂಬೈನಲ್ಲಿ 2014ರಲ್ಲಿ ನಡೆದಿದ್ದ 23 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮರಣದಂಡನೆ ಗುರಿಯಾಗಿದ್ದ ಚಂದ್ರಭಾನ್ ಸನಪ್ ಎಂಬ ವ್ಯಕ್ತಿಯನ್ನು ಸುಪ್ರೀಂ ಕೋರ್ಟ್ ಖುಲಾಸೆಗೊಳಿಸಿದೆ.

ಸಾಕ್ಷ್ಯಾಧಾರಗಳಲ್ಲಿನ ಪ್ರಮುಖ ಲೋಪಗಳು ಮತ್ತು ಕಾರ್ಯವಿಧಾನದ ನ್ಯೂನತೆಗಳು ಶಿಕ್ಷೆ ರದ್ದುಗೊಳಿಸಲು ಪ್ರಮುಖ ಕಾರಣಗಳಾಗಿವೆ ಎಂದು ತೀರ್ಪು ಪ್ರಕಟಿಸುವ ವೇಳೆ ನ್ಯಾಯಾಲಯ ಹೇಳಿದೆ.

ವಿಜಯವಾಡದಿಂದ ಮುಂಬೈಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಮೇಲೆ ನಡೆದ ಕ್ರೂರ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇದಾಗಿದೆ. ಯುವತಿಯ ಭಾಗಶಃ ಸುಟ್ಟುಹೋದ ಮತ್ತು ಕೊಳೆತ ದೇಹವು ಜನವರಿ 16, 2014ರಂದು ಮುಂಬೈನ ಈಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯ ಬಳಿ ಪತ್ತೆಯಾಗಿತ್ತು. ತನಿಖಾಧಿಕಾರಿಗಳು ಬೆರಳಿನಲ್ಲಿದ್ದ ಉಂಗುರದ ಮೂಲಕ ಆಕೆಯನ್ನು ಗುರುತಿಸಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ ಯುವತಿಯು ಉಸಿರುಗಟ್ಟಿದ್ದರಿಂದ ಮತ್ತು ತಲೆ, ಜನನಾಂಗದ ಮೇಲಾದ ತೀವ್ರ ತರದ ಗಾಯಗಳಿಂದ ಸಾವನ್ನಪ್ಪಿದ್ದಾರೆ ಎಂದು ಬಯಲಾಗಿತ್ತು.

ಘಟನಾ ಸ್ಥಳದಲ್ಲಿದ್ದ ಸಂತ್ರಸ್ತೆಗೆ ಸೇರಿದ್ದೆಂದು ಹೇಳಲಾದ ಟ್ರಾಲಿ ಬ್ಯಾಗ್ ಮತ್ತು ಆಕೆಯ ಗುರುತಿನ ಚೀಟಿ ಸೇರಿದಂತೆ ಹಲವಾರು ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡ ನಂತರ, ಆರೋಪಿ ಚಂದ್ರಭಾನ್ ಸನಪ್ ಅವರನ್ನು ಬಂಧಿಸಲಾಗಿತ್ತು. ಸಾಂದರ್ಭಿಕ ಸಾಕ್ಷ್ಯಗಳು, ಕುರ್ಲಾದ ಲೋಕಮಾನ್ಯ ತಿಲಕ್ ಟರ್ಮಿನಸ್‌ನ ಸಿಸಿಟಿವಿ ದೃಶ್ಯಾವಳಿಗಳು ಮತ್ತು ನ್ಯಾಯಾಂಗೇತರ ತಪ್ಪೊಪ್ಪಿಗೆಗಳ ಆಧಾರದ ಮೇಲೆ ಪ್ರಾಸಿಕ್ಯೂಷನ್ ಆರೋಪವನ್ನು ರೂಪಿಸಿತ್ತು.

ಆದಾಗ್ಯೂ, ಸುಪ್ರೀಂ ಕೋರ್ಟ್ ಪ್ರಕರಣದಲ್ಲಿನ ಗಂಭೀರ ದೋಷಗಳನ್ನು ಎತ್ತಿ ತೋರಿಸಿದೆ. ಸಿಸಿಟಿವಿ ದೃಶ್ಯಾವಳಿಗಳು ಭಾರತೀಯ ಸಾಕ್ಷ್ಯ ಕಾಯ್ದೆಯ ಸೆಕ್ಷನ್ 65-ಬಿ ಅಡಿಯಲ್ಲಿ ಮಾನ್ಯ ಪ್ರಮಾಣಪತ್ರವನ್ನು ಹೊಂದಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಇದು ಕಾನೂನುಬದ್ಧವಾಗಿ ಸ್ವೀಕಾರಾರ್ಹವಲ್ಲ. ಮರಣದಂಡನೆ ಪ್ರಕರಣಗಳಲ್ಲಿ ಸಾಕ್ಷ್ಯಗಳು ಕಟ್ಟುನಿಟ್ಟಾದ ಕಾನೂನು ಮಾನದಂಡಗಳನ್ನು ಪೂರೈಸಬೇಕು ಎಂದು ನ್ಯಾಯಾಲಯ ಒತ್ತಿ ಹೇಳಿದೆ.

ಸಾಕ್ಷಿಗಳ ಹೇಳಿಕೆಗಳಲ್ಲಿನ ಅಸಂಗತತೆ, ಸಾಕ್ಷ್ಯಗಳನ್ನು ಪಡೆಯುವಲ್ಲಿನ ವಿಳಂಬ ಮತ್ತು ಪ್ರಮುಖ ವಸ್ತುಗಳನ್ನು ವಶಕ್ಕೆ ಪಡೆದ ಬಗ್ಗೆ ಅನುಮಾನಗಳನ್ನು ನ್ಯಾಯಾಲಯವು ಎತ್ತಿ ತೋರಿಸಿದೆ. ಹೆಚ್ಚುವರಿಯಾಗಿ, ಅತ್ಯಾಚಾರ ಆರೋಪಗಳನ್ನು ಬೆಂಬಲಿಸಲು ವಿಧಿವಿಜ್ಞಾನ ದೃಢೀಕರಣದ ಕೊರತೆಯನ್ನು ನ್ಯಾಯಾಲಯ ಟೀಕಿಸಿದೆ.

ಖುಲಾಸೆ ತೀರ್ಪು ನೀಡುತ್ತಾ, ನ್ಯಾಯಮೂರ್ತಿ ಕೆ.ವಿ. ವಿಶ್ವನಾಥನ್ ಅವರು, ಅಪರಾಧವನ್ನು ಅನುಮಾನಾತೀತವಾಗಿ ಸಾಬೀತುಪಡಿಸಬೇಕು ಎಂದು ಒತ್ತಿ ಹೇಳಿದ್ದಾರೆ. ಸಾಂದರ್ಭಿಕ ಸಾಕ್ಷ್ಯಗಳು ಸನಪ್ ಮತ್ತು ಅಪರಾಧ ನಡುವಿನ ಸಂಬಂಧವನ್ನು ಸರಿಯಾಗಿ ರುಜುವಾತು ಮಾಡುತ್ತಿಲ್ಲ. ಇದು ಅನುಮಾನಕ್ಕೆ ಅವಕಾಶ ನೀಡುತ್ತದೆ ಎಂದಿದ್ದಾರೆ.

ಈ ತೀರ್ಪಿನೊಂದಿಗೆ, ಸನಪ್ ಅವರ ಮರಣದಂಡನೆಯನ್ನು ರದ್ದುಗೊಳಿಸಲಾಗಿದೆ, ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ನಿರ್ವಹಿಸುವಲ್ಲಿ ತನಿಖಾ ವೈಫಲ್ಯಗಳ ಬಗ್ಗೆ ಕಳವಳ ವ್ಯಕ್ತವಾಗಿದೆ.

ಈ ಪ್ರಕರಣದಲ್ಲಿ, ಎರಡು ವಾರಗಳ ಕ್ರಿಸ್‌ಮಸ್ ಮತ್ತು ಹೊಸ ವರ್ಷದ ರಜೆಯ ನಂತರ ಆಂಧ್ರ ಪ್ರದೇಶದ ಮಚ್ಲಿಪಟ್ಟಣದಿಂದ ಮುಂಬೈಗೆ ಮರಳಿದ್ದ ಎಸ್ತರ್ ಅನುಹ್ಯ (23) ಎಂಬ ಯುವತಿ ಜನವರಿ 16, 2014 ರಂದು ಮುಂಬೈನ ಕಂಜುರ್ ಮಾರ್ಗ್ ಬಳಿ ಶವವಾಗಿ ಪತ್ತೆಯಾಗಿದ್ದರು.

ಎಸ್ತರ್ ಅನುಹ್ಯ ಅವರು ಮುಂಬೈನಲ್ಲಿ ಟಿಸಿಎಸ್‌ನಲ್ಲಿ ಉದ್ಯೋಗಿಯಾಗಿದ್ದರು ಮತ್ತು ಕೊನೆಯದಾಗಿ ಲೋಕಮಾನ್ಯ ತಿಲಕ್ ಟರ್ಮಿನಸ್ ರೈಲ್ವೆ ನಿಲ್ದಾಣದಿಂದ ಹೊರಬರುವಾಗ ಸಿಸಿಟಿವಿಯಲ್ಲಿ ಕಾಣಿಸಿಕೊಂಡಿದ್ದರು.

ದೆಹಲಿ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ : ಅಧಿಕಾರಕ್ಕೆ ಬಂದರೆ ಜಾತಿ ಜನಗಣತಿ ನಡೆಸುವ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...