Homeಮುಖಪುಟಛತ್ತೀಸ್‌ಗಢ | ₹32 ಲಕ್ಷ ಬಹುಮಾನ ಘೋಷಣೆಯಾಗಿದ್ದ 7 ಮಂದಿ ನಕ್ಸಲರು ಶರಣು

ಛತ್ತೀಸ್‌ಗಢ | ₹32 ಲಕ್ಷ ಬಹುಮಾನ ಘೋಷಣೆಯಾಗಿದ್ದ 7 ಮಂದಿ ನಕ್ಸಲರು ಶರಣು

- Advertisement -
- Advertisement -

ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಮೇಲಿನ ಹಲವಾರು ದಾಳಿಗಳಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಮತ್ತು 32 ಲಕ್ಷ ರೂಪಾಯಿಗಳ ಸಾಮೂಹಿಕ ನಗದು ಬಹುಮಾನ ಘೋಷಣೆಯಾಗಿದ್ದ ಮೂವರು ಮಹಿಳೆಯರು ಸೇರಿದಂತೆ ಏಳು ಮಂದಿ ನಕ್ಸಲರು ಶುಕ್ರವಾರ (ಜ.31) ಶರಣಾಗಿದ್ದಾರೆ ಎಂದು ವರದಿಯಾಗಿದೆ.

ಹಿರಿಯ ನಕ್ಸಲರ “ಟೊಳ್ಳು” ಮತ್ತು “ಅಮಾನವೀಯ” ಮಾವೋವಾದಿ ಸಿದ್ಧಾಂತ ಮತ್ತು ಬುಡಕಟ್ಟು ಜನಾಂಗದವರ ಶೋಷಣೆಯಿಂದ ನಿರಾಶೆಗೊಂಡ ಕಾರಣ, 7 ಮಂದಿ ನಕ್ಸಲರು ಹಿರಿಯ ಪೊಲೀಸ್ ಮತ್ತು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ ಎಂದು ಕಂಕೇರ್‌ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಇಂದಿರಾ ಕಲ್ಯಾಣ್ ಎಲೆಸೆಲಾ ಹೇಳಿದ್ದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಶರಣಾದವರಲ್ಲಿ ಮಮತಾ ಅಲಿಯಾಸ್ ಶಾಂತಾ ಅಲಿಯಾಸ್ ವಾಸಣ್ಣ ಬತ್ತುಳಾಯಿ (60), ದಿನೇಶ್ ಮತ್ತಾಮಿ (20) ಮತ್ತು ಆಯ್ತು ರಾಮ್ ಪೋತಾಯಿ (27) ಸೇರಿದ್ದಾರೆ. ಇವರ ಸೆರೆಗೆ ತಲಾ 8 ಲಕ್ಷ ರೂಪಾಯಿ ಬಹುಮಾನವನ್ನು ಸರ್ಕಾರ ಘೋಷಿಸಿತ್ತು ಎಂದು ವರದಿ ತಿಳಿಸಿದೆ.

ನೆರೆಯ ತೆಲಂಗಾಣದ ಕರೀಂನಗರ ಜಿಲ್ಲೆಯ ನಿವಾಸಿ ಮಮತಾ ಅವರು ವಿಭಾಗೀಯ ಸಮಿತಿ ಸದಸ್ಯರಾಗಿ ಸಕ್ರಿಯರಾಗಿದ್ದರು ಮತ್ತು ಸಂಘಟನೆಯ ವಿಭಾಗವಾದ ‘ಕ್ರಾಂತಿಕಾರಿ ಆದಿವಾಸಿ ಮಹಿಳಾ ಸಂಘನ್’ (ಕೆಎಎಂಎಸ್‌) ನ ಉತ್ತರ ಬಸ್ತಾರ್ ವಿಭಾಗದ ಮುಖ್ಯಸ್ಥರಾಗಿದ್ದರು ಎಂದು ವರದಿ ವಿವರಿಸಿದೆ.

1996 ಮತ್ತು 2024ರ ನಡುವೆ, ಮಮತಾ ಅವರು 26 ನಕ್ಸಲ್ ಘಟನೆಗಳಲ್ಲಿ ಭಾಗಿಯಾಗಿದ್ದರು. ಇದರಲ್ಲಿ 2015ರಲ್ಲಿ ಕಂಕೇರ್ ಜಿಲ್ಲೆಯ ಕೊಯಾಲಿಬೇಡಾ ಪ್ರದೇಶದಲ್ಲಿ ಪಂಚಾಯತ್ ಚುನಾವಣೆಯ ಸಂದರ್ಭ ಇಬ್ಬರು ಸೇನಾ ಸಿಬ್ಬಂದಿಯ ಸಾವಿಗೆ ಕಾರಣವಾದ ಐಇಡಿ (ಸುಧಾರಿತ ಸ್ಫೋಟಕ ಸಾಧನ) ಸ್ಫೋಟ ಮತ್ತು 2018ರಲ್ಲಿ ಇಬ್ಬರು ಬಿಎಸ್ಎಫ್ ಸಿಬ್ಬಂದಿಯ ಸಾವಿಗೆ ಕಾರಣವಾದ ಮಹ್ಲಾ ಹೊಂಚುದಾಳಿ ಸೇರಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಇಂದಿರಾ ಕಲ್ಯಾಣ್ ಎಲೆಸೆಲಾ ಮಾಹಿತಿ ನೀಡಿದ್ದಾಗಿ ವರದಿ ಹೇಳಿದೆ.

ಮತ್ತಾಮಿ ಅವರು ಮಾವೋವಾದಿಗಳ ಮಿಲಿಟರಿ ಕಂಪನಿ ಸಂಖ್ಯೆ 10ರ ಸದಸ್ಯರಾಗಿ ಸಕ್ರಿಯರಾಗಿದ್ದರು. ಪೊಟೈ ಮಿಲಿಟರಿ ಕಂಪನಿ ಸಂಖ್ಯೆ 5ರ ಸದಸ್ಯರಾಗಿದ್ದರು.

ಶರಣಾದ ಮತ್ತೊಬ್ಬರು ನಕ್ಸಲ್ ಸದಸ್ಯೆ ಜಮುನಾ ಅಲಿಯಾಸ್ ನೀರಾ ನೇತಮ್ (50) ಪಾರ್ತಾಪುರ ಪ್ರದೇಶ ಸಮಿತಿಯ ಸದಸ್ಯೆಯಾಗಿ ಸಕ್ರಿಯರಾಗಿದ್ದರು.

2007ರಲ್ಲಿ ಭುಸ್ಕಿ-ಮಿಚ್‌ಗಾಂವ್ ಗ್ರಾಮದಲ್ಲಿ ಐವರು ಪೊಲೀಸರು ಸಾವನ್ನಪ್ಪಿ, 18 ಜನರು ಗಾಯಗೊಂಡಿದ್ದ ಹೊಂಚುದಾಳಿ ಸೇರಿದಂತೆ ಹಲವು ನಕ್ಸಲ್ ದಾಳಿಗಳಲ್ಲಿ ಜಮುನಾ ಭಾಗಿಯಾಗಿದ್ದರು ಎಂದು ಎಲೆಸೆಲಾ ಹೇಳಿದ್ದಾರೆ. ಇವರ ತಲೆಗೆ 5 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಇತರ ಮೂವರು, ಪಾರ್ತಾಪುರ್ ಎಲ್‌ಜಿಎಸ್ (ಸ್ಥಳೀಯ ಗೆರಿಲ್ಲಾ ದಳ) ಸದಸ್ಯ ಇಟ್ವಾರಿನ್ ಪಡ್ಡಾ (25), ಪಾನಿಡೋಬಿರ್/ರೌಘಾಟ್ ಎಲ್‌ಒಎಸ್ (ಸ್ಥಳೀಯ ಸಮಿತಿ ದಳ) ಸಂಜಯ್ ನರೆಟಿ (23) ಮತ್ತು ಪಾನಿಡೋಬಿರ್ ಎಲ್‌ಒಎಸ್ ಸದಸ್ಯ ಸಗ್ನು ರಾಮ್ ಅಂಚಲಾ (24) ಸೇರಿದ್ದಾರೆ. ಇವರ ತಲೆಗೆ ತಲಾ 1 ಲಕ್ಷ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ಎಸ್‌ಎಸ್‌ಪಿ ಮಾಹಿತಿ ನೀಡಿದ್ದಾರೆ.

ಶರಣಾದ ಎಲ್ಲಾ ನಕ್ಸಲರಿಗೆ ತಲಾ 25,000 ರೂ.ಗಳ ಆರ್ಥಿಕ ಸಹಾಯವನ್ನು ನೀಡಲಾಗಿದೆ. ಸರ್ಕಾರದ ನೀತಿಯ ಪ್ರಕಾರ ಅವರಿಗೆ ಪುನರ್ವಸತಿ ಕಲ್ಪಿಸಲಾಗುವುದು ಎಂದು ಎಎಸ್‌ಪಿ ಹೇಳಿದ್ದಾರೆ. ಕಳೆದ ವರ್ಷ, ಕಂಕೇರ್ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾರ್ ಪ್ರದೇಶದಲ್ಲಿ 792 ನಕ್ಸಲರು ಶರಣಾಗಿದ್ದರು.

ಕೃಪೆ : ಡೆಕ್ಕನ್ ಹೆರಾಲ್ಡ್

ಬಜೆಟ್ ಅಧಿವೇಶನ | ಜಿಡಿಪಿ ಬೆಳವಣಿಗೆ ದರ ಶೇ 6.3ರಿಂದ 6.8 : ಆರ್ಥಿಕ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...