‘ರೋಹಿತ್ ವೇಮುಲಾ ಕಾಯ್ದೆ’ಯನ್ನು ಜಾರಿಗೆ ತರುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಶುಕ್ರವಾರ ಒತ್ತಾಯಿಸಿದ್ದಾರೆ. ಸಾಂಸ್ಥಿಕ ಹತ್ಯೆಗೆ ಒಳಗಾದ ವಿದ್ಯಾರ್ಥಿ ಹೋರಾಟಗಾರ ರೋಹಿತ್ ವೇಮುಲಾ ಅವರ ಜನ್ಮದಿನದಂದೆ ಸಚಿವ ಖರ್ಗೆ ಈ ಒತ್ತಾಯ ಮಾಡಿದ್ದಾರೆ. ರೋಹಿತ್ ವೇಮುಲಾ ಕಾಯ್ದೆಗೆ
ಈ ಬಗ್ಗೆ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಖರ್ಗೆ, ಯಾವುದೇ ವಿದ್ಯಾರ್ಥಿಯು ತನ್ನ ಸಾಮಾಜಿಕ, ಆರ್ಥಿಕ ಅಥವಾ ಧಾರ್ಮಿಕ ಹಿನ್ನೆಲೆಯಿಂದಾಗಿ ಹೊರಗಿಡುವಿಕೆ ಅಥವಾ ಅನ್ಯಾಯವನ್ನು ಎದುರಿಸಬಾರದು ಎಂದು ಹೇಳಿದ್ದಾರೆ. ರೋಹಿತ್ ವೇಮುಲಾ ಕಾಯ್ದೆಗೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ನಮ್ಮ ಸರ್ಕಾರ ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ಬದ್ಧವಾಗಿದೆ ಮತ್ತು ನಮ್ಮ ಶಿಕ್ಷಣ ಸಂಸ್ಥೆಗಳನ್ನು ಸುರಕ್ಷಿತ ಸ್ಥಳಗಳನ್ನಾಗಿ ಮಾಡಲು ನಾವು ಶ್ರಮಿಸುತ್ತೇವೆ. ಅಲ್ಲಿ ಪ್ರತಿ ಯುವ ಮನಸ್ಸು ಅವರ ಸಾಮಾಜಿಕ-ಆರ್ಥಿಕ ಹಿನ್ನೆಲೆಯನ್ನು ಲೆಕ್ಕಿಸದೆ ಭಯವಿಲ್ಲದೆ ಕಲಿಯಬಹುದು, ಅಭಿವೃದ್ಧಿ ಹೊಂದಬಹುದು ಮತ್ತು ಕನಸು ಕಾಣಬಹುದು.” ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
“ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತಾರತಮ್ಯವನ್ನು ತಡೆಗಟ್ಟುವುದು, ದೌರ್ಜನ್ಯಗಳನ್ನು ಪರಿಹರಿಸುವುದು. ಹಾಗೂ ಹಿಂದುಳಿದ ವರ್ಗಗಳು ಮತ್ತು ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಸಮಾನತೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ‘ರೋಹಿತ್ ವೇಮುಲಾ ಕಾಯ್ದೆ’ಯನ್ನು ಜಾರಿಗೆ ತರುವುದನ್ನು ಪರಿಗಣಿಸಲು ನಾನು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದ್ದೇನೆ” ಎಂದು ಅವರು ಹೇಳಿದ್ದಾರೆ.
No student should face exclusion or injustice because of their social, economic or religious background.
Our government is committed to social justice and equity and we strive to make our educational institutions safe spaces where every young mind can learn, thrive and dream…
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) January 30, 2025
ರೋಹಿತ್ ವೇಮುಲಾ ಅವರ ಜನ್ಮ ವಾರ್ಷಿಕೋತ್ಸವದಂದು, ಅವರ ಸ್ಮರಣೆ ಮತ್ತು ಅವರು ಪ್ರೇರೇಪಿಸಿದ ಬದಲಾವಣೆಗೆ ನಾನು ನನ್ನ ಹೃತ್ಪೂರ್ವಕ ಗೌರವ ಸಲ್ಲಿಸುತ್ತೇನೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಇದನ್ನೂಓದಿ: ವೈದ್ಯೆಯ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ : ನಾಲ್ವರು ಅಪರಾಧಿಗಳಿಗೆ 20 ವರ್ಷ ಜೈಲು
ವೈದ್ಯೆಯ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ : ನಾಲ್ವರು ಅಪರಾಧಿಗಳಿಗೆ 20 ವರ್ಷ ಜೈಲು


