Homeಕರ್ನಾಟಕಮೈಕ್ರೋ ಫೈನಾನ್ಸ್‌ಗಳ ಆಟಾಟೋಪಗಳಿಗೆ ಕಡಿವಾಣಕ್ಕೆ ಮಹತ್ವದ ಸಭೆ ನಡೆಸಿದ ಸಚಿವ ಕೃಷ್ಣೇಬೈರೆ ಗೌಡ

ಮೈಕ್ರೋ ಫೈನಾನ್ಸ್‌ಗಳ ಆಟಾಟೋಪಗಳಿಗೆ ಕಡಿವಾಣಕ್ಕೆ ಮಹತ್ವದ ಸಭೆ ನಡೆಸಿದ ಸಚಿವ ಕೃಷ್ಣೇಬೈರೆ ಗೌಡ

- Advertisement -
- Advertisement -

ರಾಜ್ಯದಲ್ಲಿ ಮಿತಿಮೀರಿದ ಮೈಕ್ರೋ ಫೈನಾನ್ಸ್‌ಗಳ ಆಟಾಟೋಪಗಳಿಗೆ ಕಡಿವಾಣ ಹಾಕಲು ಹೊಸ ಕಾನೂನು ರೂಪಿಸುವ ನಿಟ್ಟಿನಲ್ಲಿ ಶನಿವಾರ ರಾಜ್ಯ ಕಂದಾಯ ಸಚಿವ ಕೃಷ್ಣೇಬೈರೆಗೌಡ ಅವರು ಮಹತ್ವದ ಸಭೆ ನಡೆಸಿದ್ದಾರೆ.

ಈ ಸಭೆಯಲ್ಲಿ ಸಾಮರ್ಥ್ಯಕ್ಕಿಂತ ಅಧಿಕ ಸಾಲ ನೀಡುವ ಮೂಲಕ ಬಡವರನ್ನ ಸಾಲದ ಸುಳಿಗೆ ಸಿಲುಕಿಸುತ್ತಿರುವ ಹುನ್ನಾರವನ್ನು ತಡೆಯಲು ಆನ್ಲೈನ್ ಪೋರ್ಟಲ್ ಮಾಡಿ ಯಾರಿಗೆ ಎಷ್ಟು ಸಾಲ ನೀಡಲಾಗಿದೆ ಎಂದು ಅಪ್ಡೇಟ್ ಮಾಡಬೇಕು ಎಂದು ತೀರ್ಮಾನಿಸಿದ್ದಾರೆ. ಮೈಕ್ರೋ ಫೈನಾನ್ಸ್‌ಗಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಾಲಕ್ಕಾಗಿ ಅರ್ಜಿ ಸಲ್ಲಿಕೆ ಹಾಗೂ ಸಾಲ ನೀಡುವ ಸಂಪೂರ್ಣ ಪ್ರಕ್ರಿಯೆಯನ್ನು ಆನ್ಲೈನ್ ಮೂಲಕವೇ ನಿಭಾಯಿಸಬೇಕು ಎಂದು ತೀರ್ಮಾನಿಸಲಾಗಿದ್ದು, ಸಾಲಕ್ಕೆ ವಿಧಿಸುವ ಬಡ್ಡಿ ದರದ ಪ್ರಮಾಣ ಪಾರದರ್ಶಕ ಹಾಗೂ RBI ನೀತಿಗೆ ಅನುಗುಣವಾಗಿರಬೇಕು ಎಂದು ಹೇಳಿದ್ದಾರೆ.

“ಮೈಕ್ರೋ ಫೈನಾನ್ಸ್ ಕಂಪೆನಿಗಳು ಕಡ್ಡಾಯವಾಗಿ ರಾಜ್ಯದಲ್ಲಿ ನೋಂದಣಿಯಾಗಿರಬೇಕು. ಯಾವುದೇ ಸಂದರ್ಭದಲ್ಲಿ ಈ ನೋಂದಣಿಯನ್ನ ಸರ್ಕಾರ ತಿರಸ್ಕರಿಸಲಿದ್ದು, ಮೈಕ್ರೋ ಫೈನಾನ್ಸ್ ಕಂಪೆನಿಗಳ ವ್ಯವಹಾರವನ್ನ ವಿಚಾರಣೆಗೆ ಪ್ರತಿ ಜಿಲ್ಲೆಯಲ್ಲಿ ADC-AC ಒಳಗೊಂಡ ಒಂಬುಡ್ಸ್ಮನ್ ನೇಮಕ ಮಾಡಬೇಕು” ಎಂಬ ನಿಯಮಗಳನ್ನು ತರುವ ಬಗ್ಗೆ ಚರ್ಚಿಸಲಾಗಿದೆ.

ಮೈಕ್ರೋ ಫೈನಾನ್ಸ್‌ ಕಂಪೆನಿಗಳು ಸಾಲದ ಹೆಸರಲ್ಲಿ ಬಡ ಜನರಿಂದ ಯಾವ ವಸ್ತುಗಳು-ಆಸ್ತಿಗಳನ್ನ ಅಡಮಾನ ಇಡಿಸಿಕೊಳ್ಳುವಂತಿಲ್ಲ ಎಂದು ಸಚಿವರು ಹೇಳಿದ್ದು, ಸಾಲ ಮರುಪಾವತಿ ಮಾಡದವರ ವಿರುದ್ಧ ಮಧ್ಯವರ್ತಿಗಳ ಮೂಲಕ ದಬ್ಬಾಳಿಕೆ ಮಾಡುವಂತಿಲ್ಲ ಎಂಬುದೂ ಸೇರಿದಂತೆ ಹಲವು ಪ್ರಮುಖ ವಿಚಾರಗಳನ್ನು ಕಾನೂನಿನ ಚೌಕಟ್ಟಿನೊಳಗೆ ತರುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂಓದಿ:  ಹೆಚ್‌ಡಿ ಕುಮಾರಸ್ವಾಮಿ ವಿರುದ್ಧದ ಭೂ ಕಬಳಿಕೆ ಆರೋಪ : ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವ ಎಚ್ಚರಿಕೆ ನೀಡಿದ ಹೈಕೋರ್ಟ್‌

ಹೆಚ್‌ಡಿ ಕುಮಾರಸ್ವಾಮಿ ವಿರುದ್ಧದ ಭೂ ಕಬಳಿಕೆ ಆರೋಪ : ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವ ಎಚ್ಚರಿಕೆ ನೀಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...