ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಒಂದೇ ಒಂದು ಗುಡಿಸಲುಗಳನ್ನು ಕೆಡವುದಿಲ್ಲ, ಆದರೆ ಎಎಪಿ ಪಕ್ಷವೂ ವದಂತಿಗಳನ್ನು ಹರಡುತ್ತಿದೆ ಎಂದು ಪ್ರಧಾನಿ ಮೋದಿ ಭಾನುವಾರ ಹೇಳಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಉಳಿದ್ದು, ಈ ಬಗ್ಗೆ ಪ್ರಧಾನಿ ಮೋದಿ ತನ್ನ ಪ್ರಚಾರ ಭಾಷಣದಲ್ಲಿ ಜನರಿಗೆ ಭರವಸೆ ನೀಡಿದ್ದಾರೆ.
ದೆಹಲಿಯಲ್ಲಿ ಅಧಿಕಾರಕ್ಕೆ ಬಂದರೆ ಈ ವರ್ಷ ಮಾರ್ಚ್ 8 ರಿಂದ ರಾಷ್ಟ್ರ ರಾಜಧಾನಿಯ ಮಹಿಳೆಯರಿಗೆ 2,500 ರೂ.ಗಳನ್ನು ನೀಡುವುದಾಗಿಯೂ ಅವರು ಭರವಸೆ ನೀಡಿದ್ದಾರೆ. “ನಮ್ಮ ಸಹೋದರಿಯರಿಗೆ 2,500 ರೂ.ಗಳನ್ನು ನೀಡುವುದಾಗಿ ನಾವು ಪ್ರತಿಜ್ಞೆ ಮಾಡಿದ್ದೇವೆ, ಈ ಗ್ಯಾರಂಟಿ ಪೂರ್ಣಗೊಳ್ಳುತ್ತದೆ ಏಕೆಂದರೆ ಅದು ಮೋದಿಯವರ ಗ್ಯಾರಂಟಿ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಮಾರ್ಚ್ 8 ರಂದು ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆಯಾಗುವುದನ್ನು ನೀವೆಲ್ಲರೂ ನೋಡುತ್ತೀರಿ. ಆಗ, ಅಂತರರಾಷ್ಟ್ರೀಯ ಮಹಿಳಾ ದಿನವಾದ ಮಾರ್ಚ್ 8 ರಂದು ಅವರ ಖಾತೆಗಳಿಗೆ ಹಣ ಬರಲು ಪ್ರಾರಂಭಿಸುತ್ತದೆ ಎಂದು ಅವರು ಹೇಳಿದ್ದಾರೆ.
ಈ ಮಧ್ಯೆ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಅವರಿಗೆ ಪತ್ರ ಬರೆದಿದ್ದು, ಎಎಪಿ ಸ್ವಯಂಸೇವಕರ ಮೇಲಿನ ದಾಳಿಗಳನ್ನು ಉಲ್ಲೇಖಿಸಿದ್ದಾರೆ. ನವದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ದೆಹಲಿ ಪೊಲೀಸರಿಂದ ಬೆದರಿಕೆಯ ಬಗ್ಗೆ ಅವರು ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.
ಕೇಜ್ರಿವಾಲ್ ತಮ್ಮ ಪತ್ರದಲ್ಲಿ, ಪಕ್ಷದ ಸ್ವಯಂಸೇವಕರ ಸುರಕ್ಷತೆಯ ಜೊತೆಗೆ ಕ್ಷೇತ್ರದಲ್ಲಿ ಸ್ವತಂತ್ರ ವೀಕ್ಷಕರನ್ನು ನೇಮಿಸುವಂತೆ ಒತ್ತಾಯಿಸಿದ್ದಾರೆ. ಘಟನೆಗಳಲ್ಲಿ ಭಾಗಿಯಾಗಿರುವ ಪೊಲೀಸ್ ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸುವಂತೆ ಹಾಗೂ ದಾಳಿಗೆ ಕಾರಣರಾದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸುವಂತೆಯೂ ಅವರು ಕೋರಿದ್ದಾರೆ.
ಈ ನಡುವೆ, ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಭಾನುವಾರ ರಾಷ್ಟ್ರ ರಾಜಧಾನಿಗೆ ತೆರಳಲಿದ್ದಾರೆ ಎಂದು ಅಧಿಕೃತ ಮೂಲಗಳು ಪಿಟಿಐಗೆ ತಿಳಿಸಿವೆ ಎಂದು ವರದಿಯಾಗಿದೆ.
ನಾಯ್ಡು ಭಾನುವಾರ ಮಧ್ಯಾಹ್ನ ಹೈದರಾಬಾದ್‌ನ ಬೇಗಂಪೇಟ್ ವಿಮಾನ ನಿಲ್ದಾಣದಿಂದ ಹೊರಟು ಸಂಜೆ 5 ಗಂಟೆಗೆ ದೆಹಲಿ ತಲುಪುವ ನಿರೀಕ್ಷೆಯಿದೆ ಎಂದು ಅವರು ತಿಳಿಸಿದ್ದಾರೆ. ಬಿಜೆಪಿ ನಂತರ ಟಿಡಿಪಿ ಎನ್‌ಡಿಎಯಲ್ಲಿ ಎರಡನೇ ಅತಿದೊಡ್ಡ ಪಕ್ಷವಾಗಿದ್ದು, 16 ಲೋಕಸಭಾ ಸ್ಥಾನಗಳನ್ನು ಹೊಂದಿದೆ.
ಇದನ್ನೂಓದಿ: ಮೈಕ್ರೋ ಫೈನಾನ್ಸ್‌ಗಳ ಆಟಾಟೋಪಗಳಿಗೆ ಕಡಿವಾಣಕ್ಕೆ ಮಹತ್ವದ ಸಭೆ ನಡೆಸಿದ ಸಚಿವ ಕೃಷ್ಣೇಬೈರೆ ಗೌಡ


