ಫೈಜಾಬಾದ್: ಅಯೋಧ್ಯೆಯಲ್ಲಿ 22 ವರ್ಷದ ಯುವತಿಯನ್ನು ಅತ್ಯಾಚಾರಗೈದು ಕಣ್ಣುಗುಡ್ಡೆ ಕಿತ್ತು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಧಾರ್ಮಿಕ ಕಾರ್ಯಕ್ರಮಕ್ಕೆ ಹೋಗಿದ್ದ ಯುವತಿಯೊಬ್ಬಳನ್ನು ಅತ್ಯಾಚಾರವೆಸಗಿ ಹತ್ಯೆ ಮಾಡಲಾಗಿರುವ ಘಟನೆ ಅಯೋಧ್ಯೆಯ ಬಳಿ ವರದಿಯಾಗಿದೆ.
22 ವರ್ಷದ ಯುವತಿ ಗುರುವಾರ ರಾತ್ರಿಯಿಂದಲೇ ನಿಗೂಢವಾಗಿ ನಾಪತ್ತೆಯಾಗಿದ್ದರು. ಈ ಕುರಿತು ಪೋಷಕರು ದೂರು ನೀಡಿದ್ದರು. ವಿ ದೂರು ಸ್ವೀಕರಿಸಿದ ಪೊಲೀಸರು ನಿಮ್ಮ ಮಗಳನ್ನು ನೀವೇ ಹುಡುಕಿಕೊಳ್ಳಿ ಎಂದು ಹೇಳಿದ್ದಾರೆಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.
ಅಯೋಧ್ಯೆಯ ಕಾಲುವೆಯೊಂದರಲ್ಲಿ ಯುವತಿಯ ಮೃತದೇಹದ ಮೇಲೆ ಬಟ್ಟೆ ಇಲ್ಲದೆ ಪತ್ತೆಯಾಗಿತ್ತು. ಕಣ್ಣುಗುಡ್ಡೆ ಕಿತ್ತುಹಾಕಲಾಗಿದೆ. ಕೈಕಾಲುಗಳನ್ನು ಹಗ್ಗಗಳಿಂದ ಕಟ್ಟಲಾಗಿತ್ತು.
यह जघन्य अपराध बेहद दुःखद हैं।
अयोध्या के ग्रामसभा सहनवां, सरदार पटेल वार्ड में 3 दिन से गायब दलित परिवार की बेटी का शव निर्वस्त्र अवस्था में मिला है, उसकी दोनों आँखें फोड़ दी गई हैं उसके साथ अमानवीय व्यवहार हुआ है।
यह सरकार इंसाफ नही कर सकती। pic.twitter.com/aSvI3N74Kl
— Awadhesh Prasad (@Awadheshprasad_) February 2, 2025
ಪತ್ರಿಕಾಗೋಷ್ಠಿಯಲ್ಲಿ ಫೈಜಾಬಾದ್ ಸಂಸದ ಅವಧೇಶ್ ಪ್ರಸಾದ್ ಘಟನೆ ಬಗ್ಗೆ ತಮ್ಮ ದುಃಖವನ್ನು ಹೊರಹಾಕುತ್ತಾ ಕಣ್ಣೀರು ಹಾಕಿದ್ದಾರೆ. ಅಯೋಧ್ಯೆಯ ಬಳಿ ಹತ್ಯೆಯಾಗಿ ಪತ್ತೆಯಾದ 22 ವರ್ಷದ ದಲಿತ ಮಹಿಳೆಯ ಕುಟುಂಬಕ್ಕೆ ನ್ಯಾಯ ಸಿಗದಿದ್ದರೆ ತಾವು ಲೋಕಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.
ನಮಗೆ ನ್ಯಾಯ ಸಿಗದಿದ್ದರೆ ನಾನು ಲೋಕಸಭೆಗೆ ರಾಜೀನಾಮೆ ನೀಡುತ್ತೇನೆ. ನಾವು ಹೆಣ್ಣುಮಕ್ಕಳನ್ನು ಉಳಿಸುವಲ್ಲಿ ವಿಫಲರಾಗಿದ್ದೇವೆ. “ಮರ್ಯಾದಾ ಪುರುಷೋತ್ತಮ ಶ್ರೀರಾಮ, ತಾಯಿ ಸೀತಾ, ನೀವು ಎಲ್ಲಿದ್ದೀರಿ?” ಎಂದು ಅಳುತ್ತಾ ಸಂಸದರು ಪ್ರಶ್ನಿಸಿದ್ದಾರೆ.
ಅಯೋಧ್ಯೆ | ದಲಿತ ಯುವತಿಯ ನಗ್ನ ಶವ ಪತ್ತೆ; ಸಾಮೂಹಿಕ ಅತ್ಯಾಚಾರ, ಕೊಲೆ ಶಂಕೆ


