Homeಕರ್ನಾಟಕಬೆಂಗಳೂರು ವಿವಿ ವಿದ್ಯಾರ್ಥಿನಿ ಅಸಹಜ ಸಾವು : ಹಾಸ್ಟೆಲ್ ಕೋಣೆಯಲ್ಲಿ ಶವ ಪತ್ತೆ

ಬೆಂಗಳೂರು ವಿವಿ ವಿದ್ಯಾರ್ಥಿನಿ ಅಸಹಜ ಸಾವು : ಹಾಸ್ಟೆಲ್ ಕೋಣೆಯಲ್ಲಿ ಶವ ಪತ್ತೆ

- Advertisement -
- Advertisement -

ಬೆಂಗಳೂರು ವಿಶ್ವ ವಿದ್ಯಾನಿಲಯದ ಎಂ.ಎ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಯೊಬ್ಬರು ಸೋಮವಾರ (ಫೆ 3) ಬೆಳಿಗ್ಗೆ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿರುವ ತನ್ನ ಹಾಸ್ಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಹೆಚ್‌.ಎನ್‌ ಪಾವನ ಸಾವಿಗೀಡಾದ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಮೈಸೂರು ಜಿಲ್ಲೆ ಹೆಚ್‌ಡಿ ಕೋಟೆ ತಾಲೂಕಿನ ಹೆಬ್ಬಲಗುಪ್ಪೆಯ ಪಾವನ ಅವರು ಎಂ.ಎ ಮೂರನೇ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಪಾವನ ತನ್ನ ಕೊಠಡಿಯ ಬಾಗಿಲು ತೆರೆಯದ ಹಿನ್ನೆಲೆ ಆತಂಕಗೊಂಡ ಸ್ನೇಹಿತರು, ಬಾಗಿಲಿನ ಲಾಕ್ ಒಡೆದು ಒಳ ಹೋಗಿ ನೋಡಿದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿಗಳು ಹೇಳಿವೆ.

ಪಾವನಾ ಬರೆದಿರಬಹುದು ಎಂದು ನಂಬಲಾದ ಒಂದು ಪತ್ರವನ್ನು ಆಕೆಯ ಕೋಣೆಯಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಘಟನೆಯ ಹಿಂದಿನ ನಿಖರವಾದ ಕಾರಣಗಳು ಸ್ಪಷ್ಟವಾಗಿಲ್ಲ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಜಯಕರ್ ಶೆಟ್ಟಿ ಹೇಳಿದ್ದಾರೆ.

ಘಟನೆ ಸಂಬಂಧ ಜ್ಞಾನಭಾರತಿ ಠಾಣೆ ಪೊಲೀಸರು ಅಸಹಜ ಸಾವು ವರದಿ (ಯುಡಿಆರ್) ದಾಖಲಿಸಿಕೊಂಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪಾವನ ಅವರ ಶವಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.

ಪಾವನ ಸಾವು ಆತ್ಮಹತ್ಯೆಯಿಂದ ಆಗಿದೆ ಎಂದು ವರದಿಗಳು ಹೇಳಿವೆ. ಅದು ಆತ್ಮಹತ್ಯೆಯೂ.. ಕೊಲೆಯೂ? ಅಥವಾ ಇನ್ಯಾವುದೇ ಕಾರಣಕ್ಕೆ ಸಾವಾಗಿದೆಯೂ ಇನ್ನೂ ಖಚಿತವಾಗಿಲ್ಲ. ಪ್ರಕರಣದ ತನಿಖೆ ಪ್ರಗತಿಯಲ್ಲಿರುವುದರಿಂದ ನಾವು ಇತ್ಯರ್ಥಕ್ಕೆ ಬರಲು ಸಾಧ್ಯವಿಲ್ಲ. ಹಾಗಾಗಿ, ‘ಆತ್ಮಹತ್ಯೆ’ ಬದಲಾಗಿ ಸುದ್ದಿಯಲ್ಲಿ ‘ಅಸಹಜ ಸಾವು’ ಎಂದಷ್ಟೇ ಉಲ್ಲೇಖಿಸಲಾಗಿದೆ. 

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...