Homeಕರ್ನಾಟಕಮಾಹಿತಿ ಆಯುಕ್ತರು ಪ್ರಮಾಣ ವಚನ ಸ್ವೀಕರಿಸಿದ ಮಾತ್ರಕ್ಕೆ ಮಧ್ಯಂತರ ಪರಿಹಾರ ಪರಿಗಣಿಸಬಾರದು ಎಂದೇನಿಲ್ಲ : ಹೈಕೋರ್ಟ್‌

ಮಾಹಿತಿ ಆಯುಕ್ತರು ಪ್ರಮಾಣ ವಚನ ಸ್ವೀಕರಿಸಿದ ಮಾತ್ರಕ್ಕೆ ಮಧ್ಯಂತರ ಪರಿಹಾರ ಪರಿಗಣಿಸಬಾರದು ಎಂದೇನಿಲ್ಲ : ಹೈಕೋರ್ಟ್‌

ಮಾಹಿತಿ ಆಯುಕ್ತರ ನೇಮಕ ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿದೆ

- Advertisement -
- Advertisement -

ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಮತ್ತು ಮಾಹಿತಿ ಆಯುಕ್ತರು ಪ್ರಮಾಣ ವಚನ ಸ್ವೀಕರಿಸಿದ ಮಾತ್ರಕ್ಕೆ ಅರ್ಜಿದಾರರು ಮಧ್ಯಂತರ ಆದೇಶ ಕೋರಿರುವುದನ್ನು ಪರಿಗಣಿಸಬಾರದು ಎಂದೇನಿಲ್ಲ ಎಂದು ಹೈಕೋರ್ಟ್ ಇಂದು (ಫೆ.4) ಹೇಳಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

ಶೋಧನಾ ಸಮಿತಿ ರಚಿಸದೇ ರಾಜ್ಯ ಮುಖ್ಯ ಮಾಹಿತಿ ಆಯುಕ್ತರ ಹುದ್ದೆಗೆ ನಿವೃತ್ತ ಐಎಎಸ್‌ ಅಧಿಕಾರಿ ಆತಿಶ್‌ ಮೋಹನ್‌ ಪ್ರಸಾದ್‌ ಮತ್ತು ಮಾಹಿತಿ ಆಯುಕ್ತರನ್ನಾಗಿ ಕೆ‌. ರಾಮನ್, ಡಾ. ಹರೀಶ್ ಕುಮಾರ್, ರುದ್ರಣ್ಣ ಹರ್ತಿಕೋಟೆ, ನಾರಾಯಣ ಜಿ‌.ಚನ್ನಾಳ, ಎಸ್.ರಾಜಶೇಖರ, ಕೆ. ಬದ್ರುದ್ದೀನ್ ಮತ್ತು ಬಿ.ಆರ್ ಮಮತಾ ಅವರನ್ನು ನೇಮಕ ಮಾಡಿರುವುದಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕೋರಿ ಬೆಂಗಳೂರಿನ ಮಲ್ಲಿಕಾರ್ಜುನ ರಾಜು ಎಂಬವರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಆರ್‌ ದೇವದಾಸ್‌ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿದೆ.

ಅರ್ಜಿದಾರರ ಪರ ಹಾಜರಿದ್ದ ವಕೀಲ ಅಶೋಕ್‌ ಪಾಟೀಲ್‌ ವಾದ ಮಂಡಿಸಿ, “ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್‌ 15 (3)ರ ಅನ್ವಯ ಮುಖ್ಯಮಂತ್ರಿ, ವಿಪಕ್ಷ ನಾಯಕ ಹಾಗೂ ಒಬ್ಬ ಸಂಪುಟ ದರ್ಜೆಯ ಸಚಿವರ ನೇತೃತ್ವದ ಸಮಿತಿಯು ನಾಮನಿರ್ದೇಶನ ಮಾಡಿದವರನ್ನು ರಾಜ್ಯಪಾಲರು ನೇಮಕ ಮಾಡುತ್ತಾರೆ. ಹುದ್ದೆಗೆ ನೂರಾರು ಅರ್ಜಿಗಳು ಬರುವುದರಿಂದ ಸಿಎಂ ನೇತೃತ್ವದ ಸಮಿತಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗದು. ಅದಕ್ಕಾಗಿ ಶೋಧನಾ ಸಮಿತಿಯನ್ನು ರಚಿಸಬೇಕು. ಪ್ರತಿಯೊಬ್ಬ ಅರ್ಜಿದಾರರ ಅರ್ಹತೆ ಆಧರಿಸಿ ಶೋಧನಾ ಸಮಿತಿಯು ಹೆಸರುಗಳನ್ನು ಅಂತಿಮಗೊಳಿಸುತ್ತದೆ. ರಾಜ್ಯದಲ್ಲಿ ಈ ಪ್ರಕ್ರಿಯೆ ನಡೆದಿಲ್ಲ” ಎಂದು ಆರೋಪಿಸಿದ್ದಾರೆ.

“ಭಾರದ್ವಾಜ್‌ ವರ್ಸಸ್‌ ಭಾರತ ಸರ್ಕಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶಗಳ ಪ್ರಕಾರ, ಪ್ರತಿಯೊಂದು ರಾಜ್ಯವೂ ಶೋಧನಾ ಸಮಿತಿ ರಚಿಸಬೇಕು. ಸಲ್ಲಿಕೆಯಾಗುವ ಅರ್ಜಿಗಳನ್ನು ಶೋಧನಾ ಸಮಿತಿಯು ಪರಿಶೀಲಿಸಿ, ಶಿಫಾರಸ್ಸು ಮಾಡಬೇಕು. ಈ ನಿಯಮ ಪಾಲನೆಯಾಗಿಲ್ಲ” ಎಂದು ದೂರಿದ್ದಾರೆ.

ಮುಂದುವರಿದು, “ಮುಖ್ಯ ಮಾಹಿತಿ ಆಯುಕ್ತರಾಗಿ ನೇಮಕವಾಗಿರುವ ಆಶಿತ್‌ ಮೋಹನ್‌ ಪ್ರಸಾದ್‌ ಅವರು, ಆ ಹುದ್ದೆಗೆ ಅರ್ಜಿಯನ್ನೇ ಹಾಕಿರಲಿಲ್ಲ. ರಾಜ್ಯ ಮಾಹಿತಿ ಆಯುಕ್ತರ ಹುದ್ದೆಗೆ ಅರ್ಜಿ ಹಾಕಿದ್ದರು. ಇದನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ” ಎಂದಿದ್ದಾರೆ.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ ಅವರು “ಶೋಧನಾ ಸಮಿತಿ/ ಆಯ್ಕೆ ಸಮಿತಿ ದಾಖಲೆಗಳನ್ನು ಪರಿಶೀಲಿಸಿ ನೀಡಿದ ಹೆಸರುಗಳನ್ನು ಮುಖ್ಯಮಂತ್ರಿ ನೇತೃತ್ವದ ಸಮಿತಿಯು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿದೆ. ಆ ಬಳಿಕ ನೇಮಕಾತಿ ಪ್ರಕ್ರಿಯೆ ನಡೆದಿದೆ” ಎಂದು ತಿಳಿಸಿದ್ದಾರೆ.

“ಇಂದು (ಫೆ.4) ಸಂಜೆ 5 ಗಂಟೆಗೆ ರಾಜಭವನದಲ್ಲಿ ಪ್ರಮಾಣವಚನ ಕಾರ್ಯಕ್ರಮ ಆಯೋಜಿಸಲಾಗಿದೆ. 2025ರ ಜನವರಿ 7ರಂದು ಸುಪ್ರೀಂ ಕೋರ್ಟ್‌ ತನ್ನ ನಿರ್ದೇಶನಗಳನ್ನು ರಾಜ್ಯ ಸರ್ಕಾರಗಳು ಪಾಲಿಸದಿರುವ ಕುರಿತಾದ ಅಹವಾಲುಗಳನ್ನು ಮುಂದಿನ ವಿಚಾರಣೆಯಲ್ಲಿ ಆಲಿಸುವುದಾಗಿ ತಿಳಿಸಿದೆ. ಈ ನೆಲೆಯಲ್ಲಿ ಅರ್ಜಿದಾರರನ್ನು ಸುಪ್ರೀಂ ಕೋರ್ಟ್‌ಗೆ ಸಂಪರ್ಕಿಸಲು ಆದೇಶಿಸಬೇಕು” ಎಂದು ಕೋರಿದ್ದಾರೆ.

ಮುಖ್ಯ ಮಾಹಿತಿ ಆಯುಕ್ತರಾಗಿ ನೇಮಕಗೊಂಡಿರುವ ಆತಿಶ್‌ ಮೋಹನ್‌ ಪ್ರಸಾದ್‌ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ಕೆ. ನಾವದಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ರಾಜ್ಯ ಸರ್ಕಾರವು ದಾಖಲೆಗಳನ್ನು ಸಲ್ಲಿಸಿದ ಬಳಿಕ ನ್ಯಾಯಾಲಯವು ಸೂಕ್ತ ಆದೇಶ ಮಾಡಲಿದೆ. ನೇಮಕಾತಿಯು ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಹೈಕೋರ್ಟ್ ಹೇಳಿದೆ.

ವಾದ-ಪ್ರತಿವಾದಗಳನ್ನು ಅಲಿಸಿರುವ ನ್ಯಾಯಾಲಯ ರಾಜ್ಯ ಸರ್ಕಾರ ಮತ್ತು ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿ, ವಿಚಾರಣೆಯನ್ನು ಫೆಬ್ರವರಿ 10ಕ್ಕೆ ಮುಂದೂಡಿದೆ.

ಸೌಜನ್ಯ : ಬಾರ್ & ಬೆಂಚ್

ಬೆಂಗಳೂರು | ಯುಜಿಸಿ ನೂತನ ನಿಯಮ ವಿರೋಧಿಸಿ ಏಳು ರಾಜ್ಯಗಳ ಶಿಕ್ಷಣ ಸಚಿವರ ಸಮಾವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...