Homeಕರ್ನಾಟಕಕಾಂತರಾಜು ಆಯೋಗದ ವರದಿ ಜಾರಿಯಾಗಲೇಬೇಕು : ಶೋಷಿತ ಸಮುದಾಯಗಳ ಒಕ್ಕೂಟ

ಕಾಂತರಾಜು ಆಯೋಗದ ವರದಿ ಜಾರಿಯಾಗಲೇಬೇಕು : ಶೋಷಿತ ಸಮುದಾಯಗಳ ಒಕ್ಕೂಟ

- Advertisement -
- Advertisement -

ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಕಾಂಗ್ರೆಸ್ ಸರ್ಕಾರ ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸುತ್ತದೆ ಎಂದು ಭಾವಿಸಿದ್ದೆವು. ಆದರೆ, ಸರ್ಕಾರ ಬಲಿಷ್ಠ ಜಾತಿಗಳ ಒತ್ತಡಕ್ಕೆ ಒಳಗಾಗಿದ್ದು, ಶೋಷಿತರನ್ನು ಕಡೆಗಣಿಸುತ್ತಿದೆ” ಎಂದು ದಲಿತ ಹೋರಾಟಗಾರ ಮಾವಳ್ಳಿ ಶಂಕರ್ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಒಳಮೀಸಲಾತಿ ನಿಗದಿ ಮಾಡಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ. ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಿರುವ ಕಾಂತರಾಜು ಆಯೋಗದ ವರದಿಯನ್ನೂ ಸರ್ಕಾರ ಜಾರಿಗೆ ತಂದಿಲ್ಲ. ಕಾಂತರಾಜು ವರದಿಯನ್ನು ಬಿಡುಗಡೆ ಮಾಡಿ, ಜನಾಭಿಪ್ರಾಯ ಪಡೆಯಬೇಕು. ಆದರೆ, ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ವರದಿಗಳು ಮತ್ತು ಅವುಗಳ ಜಾರಿಯ ಬಗ್ಗೆ ಸಂಪುಟ ಸಭೆಯಲ್ಲೂ ಚರ್ಚೆಯಾಗದಂತೆ ಬಲಿಷ್ಠ ಜಾತಿಗಳು ತಡೆಯುತ್ತಿವೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಜಾತಿ ಜನಗಣತಿ ಜಾರಿಯ ಭರವಸೆ ನೀಡಿದೆ. ಈಗ ಅದರಂತೆ ನಡೆದುಕೊಳ್ಳಬೇಕು. ಸಮ ಸಮಾಜ ನಿರ್ಮಿಸಲು, ವಂಚಿತರ ಸ್ಥಿತಿ ತಿಳಿಯಲು, ತಳ ಸಮುದಾಯಗಳ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸುವ ಕಾಂತರಾಜು ವರದಿಯನ್ನು ಜನರ ಮುಂದಿಡಿ ಎಂದು ಒತ್ತಾಯಿಸಿದರು.

ಜಾತ್ಯತೀತ ಸರ್ಕಾರ ಬರಬೇಕು, ಕೋಮುವಾದಿ ಸರ್ಕಾರ ತೊಲಗಬೇಕು ಎಂದು ಶೋಷಿತ ಸಮುದಾಯಗಳು ಕಾಂಗ್ರೆಸ್‌ಗೆ ಮತ ಹಾಕಿ ಗೆಲ್ಲಿಸಿವೆ. ಶೋಷಿತ ಸಮುದಾಯಗಳ ಪಾಲುದಾರಿಕೆಯಲ್ಲಿ ಬಂದಿರುವ ಕಾಂಗ್ರೆಸ್ ಸರ್ಕಾರ, ಈಗ ವರದಿಯನ್ನು ಜನರ ಮುಂದೆ ಇಡುತ್ತಿಲ್ಲ. ಈ ಹಿಂದೆ, ವರದಿಯನ್ನು ಜಾರಿ ಮಾಡುವುದಾಗಿ ಹೇಳಿದ್ದ ಸರ್ಕಾರ ಈಗ ಯಾಕೆ ಕೈಕಟ್ಟಿ ಕುಳಿತಿದೆ? ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿಯೂ ಕಾಂತರಾಜು ಆಯೋಗದ ವರದಿ ಜಾರಿ ಬಗ್ಗೆ ಭರವಸೆ ನೀಡಿದ್ದರು. ಸರ್ಕಾರ ರಚನೆಯಾಗಿ 2 ವರ್ಷಗಳಾಗುತ್ತಿವೆ. ಆದರೂ, ವರದಿಯನ್ನು ಬಿಡುಗಡೆ ಮಾಡದೆ, ಬರೀ ಸಬೂಬು ಹೇಳುತ್ತಿದ್ದಾರೆ. ಶೋಷಿತ ಸಮುದಾಯಗಳನ್ನು ಮತ ಬ್ಯಾಂಕ್ ಮಾಡಿಕೊಂಡಿದ್ದಾರೆ. ಹಲವು ಬಾರಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರೂ, ಉಪಯೋಗವಾಗಿಲ್ಲ. ಮುಖ್ಯಮಂತ್ರಿಗಳ ಕೈಕಟ್ಟಿ ಹಾಕಿರುವುದು ಯಾರು? ಒಳಮೀಸಲಾತಿ ಮತ್ತು ಕಾಂತರಾಜು ವರದಿಯ ಅನುಷ್ಠಾನಕ್ಕಾಗಿ ಬೃಹತ್ ಹೋರಾಟಕ್ಕೆ ಸಜ್ಜಾಗುತ್ತಿದ್ದೇವೆ ಎಂದು ತಿಳಿಸಿದರು.

ಕಾಂತರಾಜು ಆಯೋಗದ ವರದಿ ಸಾರ್ವಜನಿಕರ ಹಣದಿಂದ ಮಾಡಿದ ಈ ಸಮೀಕ್ಷಾ ವರದಿ. ಹಾಗಾಗಿ, ಅದು ಸಾರ್ವಜನಿಕರಿಗೆ ಸೇರಬೇಕು. ಆದರೆ, ಅದು ಜನರ ಕೈ ಸೇರುತ್ತಿಲ್ಲ. ಕರ್ನಾಟಕವನ್ನು ನೋಡಿಕೊಂಡು ಬಿಹಾರ ಜಾತಿ ಸಮೀಕ್ಷೆ ನಡೆಸಿದೆ. ಮೋದಿಗೆ ಬೆಂಬಲ ನೀಡಿರುವ ಬಿಹಾರ ಸರ್ಕಾರವೇ ವರದಿಯನ್ನು ಜಾರಿಗೊಳಿಸಿದೆ. ಆದರೆ, ಕರ್ನಾಟಕದಲ್ಲಿ ವರದಿ ಜಾರಿಯಾಗಿಲ್ಲ. ರಾಜ್ಯದಲ್ಲಿ ಯಾವ, ಯಾವ ಜಾತಿಗಳಿವೆ ಎಂದು ಅಧ್ಯಯನ ಮಾಡಿ ಅವುಗಳ ಆರ್ಥಿಕ, ಶಿಕ್ಷಣ ಸ್ಥಿತಿ ಏನು ಎಂಬುವುದರ ಆಧಾರದ ಮೇಲೆ ಸಾಮಾಜಿಕ ಸ್ಥಾನಮಾನ ನೀಡಬೇಕು. ಜನರ ಬೇಡಿಕೆಯೇನು ಎಂಬುವುದನ್ನು ಅರ್ಥ ಮಾಡಿಕೊಂಡು ಬಜೆಟ್‌ನಲ್ಲಿ ಅನುದಾನ ಹಂಚಿಕೆ ಮಾಡಬೇಕು. ಸರ್ಕಾರ ತ್ವರಿತವಾಗಿ ವರದಿಯನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಹಿರಿಯ ಹೋರಾಟಗಾರ ಎನ್. ವೆಂಕಟೇಶ್ ಮಾತನಾಡಿ, ಸ್ವಾತಂತ್ರ್ಯ ಪೂರ್ವದಲ್ಲಿ ಮತ್ತು ಸ್ವಾತಂತ್ರ್ಯದ ನಂತರ ಶೋಷಿತ ವರ್ಗಗಳ ಸಮಸ್ಯೆಗಳು ಏನೆಲ್ಲ ಇವೆ ಎಂಬುವುದು ಎಲ್ಲರಿಗೂ ಗೊತ್ತಿದೆ. ಕೇಂದ್ರ ಸರ್ಕಾರ ಮನುಧರ್ಮ ತರಬೇಕು ಎಂದು ಹವಣಿಸುತ್ತಿದೆ. ಆದರೆ, ಸಂವಿಧಾನ ಆಶಯಗಳಿಗೆ ಅನುಗುಣವಾಗಿರುವ ನ್ಯಾಯಯುತ ಬೇಡಿಕೆಗೆ ಸರ್ಕಾರದಿಂದ ಸ್ಪಂದನೆ ಇಲ್ಲ. ಈ ಬಗ್ಗೆ ಪ್ರಶ್ನಿಸಬೇಕಾದ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಕಾಂತರಾಜು ವರದಿಯನ್ನು ಸರ್ಕಾರ ಜಾರಿಗೆ ತರಲೇಬೇಕು ಎಂದು ಒತ್ತಾಯಿಸಿದರು.

ಹಿರಿಯ ಹೋರಾಟಗಾರ ಅಬ್ದುಲ್ ಮನ್‌ ಸೇಠ್ ಮಾತನಾಡಿ, ಕಾಂತರಾಜು ವರದಿ ಏಕೆ ಜಾರಿಯಾಗುತ್ತಿಲ್ಲ ಎಂಬುವುದು ತಿಳಿಯುತ್ತಿಲ್ಲ. ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಕಾಂತರಾಜು ವರದಿ ಜಾರಿ ಮಾಡಿರಲಿಲ್ಲ. ಈ ವರದಿಯನ್ನು ಮುಚ್ಚಿ ಹಾಕಿದ್ದಾರೆ ಎಂದು ಕೊಂಡಿದ್ದೆವು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ವರದಿ ಜಾರಿ ಮಾಡುತ್ತದೆ ಎಂಬ ಭರವಸೆ ಇತ್ತು. ಆದರೆ, ಸರ್ಕಾರ ಈ ಬಗ್ಗೆ ಗಮನ ಕೊಡುತ್ತಿಲ್ಲ. ಕೇಂದ್ರ ಸರ್ಕಾರಕ್ಕೆ ಕಿವಿಯಿಲ್ಲ ಎಂದು ಹೇಳುತ್ತೇವೆ. ಕಾಂಗ್ರೆಸ್ ಸರ್ಕಾರಕ್ಕೂ ಕೂಡ ಕಿವಿಯಲ್ಲ. ಉಪ-ಚುನಾವಣೆ ಮುಗಿದ ತಕ್ಷಣ ಈ ಬಗ್ಗೆ ಗಮನ ಹರಿಸಲಾಗುವುದು ಎಂದಿದ್ದರು. ಆದರೆ, ಯಾವುದೇ ರೀತಿಯ ಕೆಲಸ ಮಾಡಿಲ್ಲ. ನಾವು ಗಾಂಧೀಜಿಯ ಅಸ್ತ್ರ ಹಿಡಿಯಬೇಕಾಗಿದೆ ಎಂದರು.

ಡಾ. ಮನೋಹರ್ ಚಂದ್ರ ಪ್ರಸಾದ್ ಮಾತನಾಡಿ, ಕಾಂತರಾಜು ವರದಿ ಜಾರಿಗೆ ಬರಲೇಬೇಕು. ಕಳೆದ ಉಪ ಚುನಾವಣೆವರೆಗೂ ಕಾಂಗ್ರೆಸ್ ಮೇಲೆ ಭರವಸೆ ಇಟ್ಟು ಕೆಲಸ ಮಾಡಿದ್ದೇವೆ. ಈಗ ಎಲ್ಲ ಚುನಾವಣೆಗಳು ಮುಗಿದಿವೆ, ನಾವಿನ್ನೂ ನಿರೀಕ್ಷೆಯಲ್ಲಿದೆ. ಆದಷ್ಟು ಬೇಗ ಸರ್ಕಾರ ವರದಿಯನ್ನು ಜಾರಿಗೆ ತರಬೇಕು. ಇಲ್ಲವಾದರೆ ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಕಾಣುವುದು ಕಷ್ಟವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಾಂತರಾಜು ವರದಿಯನ್ನು ಜಾರಿಗೆ ತನ್ನಿ ಎಂದು ಹೇಳುತ್ತಿಲ್ಲ. ಮೊದಲು ಅದನ್ನು ಬಿಡುಗಡೆ ಮಾಡಿ. ಜನರ ಮುಂದೆ ಇಡಿ ಎನ್ನುತ್ತಿದ್ದೇವೆ. ಯಾವ ಆಧಾರದ ಮೇಲೆ ನೀವು ಮೀಸಲಾತಿ ಹಂಚುತ್ತಿದ್ದೀರಿ? ಹಲವು ವರ್ಷಗಳ ಹಿಂದೆ ಇರುವ ವರದಿಯ ಆಧಾರದ ಮೇಲೆ ಮೀಸಲಾತಿ ಹಂಚಲಾಗುತ್ತಿದೆ. ಆದರೆ, ಈ ವರದಿ 11 ವರ್ಷ ಹಳೆಯದು ಎನ್ನುತ್ತೀರಿ. ಅದಕ್ಕೂ ಹಿಂದಿನ ವರದಿಗಳ ಆಧಾರದ ಮೇಲೆ ಮೀಸಲಾತಿ ನೀಡುತ್ತಿರುವಾಗ, 11 ವರ್ಷಗಳ ಹಿಂದಿನ ವರದಿಯನ್ನು ಜಾರಿಗೆ ತರುವುದರಲ್ಲಿ ಸಮಸ್ಯೆಯಿಲ್ಲ ಎಂದು ಕೆ.ಎಂ ರಾಮಚಂದ್ರಪ್ಪ ಹೇಳಿದರು.

ಸೌಜನ್ಯ : ಈದಿನ.ಕಾಂ 

ಬೆಂಗಳೂರು | ಯುಜಿಸಿ ನೂತನ ನಿಯಮ ವಿರೋಧಿಸಿ ಏಳು ರಾಜ್ಯಗಳ ಶಿಕ್ಷಣ ಸಚಿವರ ಸಮಾವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...