Homeಮುಖಪುಟಅಮೆರಿಕ ತೆಕ್ಕೆಗೆ ಗಾಝಾ : ಪ್ಯಾಲೆಸ್ತೀನಿಯರಲ್ಲಿ ಆತಂಕ ಸೃಷ್ಟಿಸಿದ ಟ್ರಂಪ್ ಹೇಳಿಕೆ

ಅಮೆರಿಕ ತೆಕ್ಕೆಗೆ ಗಾಝಾ : ಪ್ಯಾಲೆಸ್ತೀನಿಯರಲ್ಲಿ ಆತಂಕ ಸೃಷ್ಟಿಸಿದ ಟ್ರಂಪ್ ಹೇಳಿಕೆ

ಪ್ಯಾಲೆಸ್ತೀನಿಯರನ್ನು ಗಾಝಾದಿಂದ ಹೊರದಬ್ಬುವ ಮುನ್ಸೂಚನೆ ನೀಡಿದ ಟ್ರಂಪ್!

- Advertisement -
- Advertisement -

ಪ್ಯಾಲೆಸ್ತೀನಿಯರು ನೆರೆಯ ದೇಶಗಳಿಗೆ ಸ್ಥಳಾಂತರಗೊಂಡ ನಂತರ, ಯುದ್ಧದಿಂದ ಜರ್ಜರಿತವಾಗಿರುವ ಗಾಝಾ ಪಟ್ಟಿಯನ್ನು ಅಮೆರಿಕ ಸ್ವಾಧೀನಪಡಿಸಿಕೊಳ್ಳಬೇಕು ಮತ್ತು ‘ವಿಶ್ವದ ಜನರು’ ಅಲ್ಲಿ ವಾಸಿಸುವಂತೆ ಪ್ರದೇಶವನ್ನು ಅಭಿವೃದ್ಧಿಪಡಿಸಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ದ್ವಿಪಕ್ಷೀಯ ಸಭೆಗಾಗಿ ಮಂಗಳವಾರ (ಫೆ.4) ಶ್ವೇತಭವನಕ್ಕೆ ಭೇಟಿ ನೀಡಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಟ್ರಂಪ್, ತಮ್ಮ ಆಘಾತಕಾರಿ ಯೋಜನೆಯನ್ನು ಬಹಿರಂಗಪಡಿಸಿದ್ದಾರೆ.

ಪ್ಯಾಲೆಸ್ತೀನಿಯರು ‘ಗಾಝಾ ತೊರೆಯಲು ಮುಂದಾಗಿದ್ದಾರೆ’ ಎಂದು ಹೇಳುವ ಮೂಲಕ ಟ್ರಂಪ್ ಹೊಸ ಆತಂಕವನ್ನು ಹುಟ್ಟು ಹಾಕಿದ್ದಾರೆ. ಟ್ರಂಪ್ ಹೇಳಿಕೆ ಗಾಝಾ ಜನರಲ್ಲಿ ಜನಾಂಗೀಯ ನಿರ್ಮೂಲನೆಯ ಭಯವನ್ನು ಹುಟ್ಟು ಹಾಕಿದೆ.

ಟ್ರಂಪ್‌ಗೆ ಪ್ರತಿಕ್ರಿಯೆಯಾಗಿ ಹಮಾಸ್ ಹೇಳಿಕೆ ಬಿಡುಗಡೆ ಮಾಡಿದೆ. “ಟ್ರಂಪ್ ಯೋಜನೆಗಳು ಗಾಝಾದಲ್ಲಿ ಅವ್ಯವಸ್ಥೆ ಮತ್ತು ಉದ್ವಿಗ್ನತೆಯನ್ನು ಸೃಷ್ಟಿಸುವ ಒಂದು ಪಿತೂರಿಯಾಗಿದೆ. ಗಾಝಾ ಪಟ್ಟಿಯಲ್ಲಿರುವ ನಮ್ಮ ಜನರು ಈ ಯೋಜನೆಗಳನ್ನು ಜಾರಿಗೆ ತರಲು ಬಿಡುವುದಿಲ್ಲ” ಎಂದು ಹೇಳಿದೆ.

ನೆತನ್ಯಾಹು ಅಮೆರಿಕದ ಭೇಟಿಯನ್ನು ಖಂಡಿಸಿ ವಾಷಿಂಗ್ಟನ್ ಡಿಸಿಯಲ್ಲಿ ಜಮಾಯಿಸಿದ ಜನರು ಪ್ರತಿಭಟನೆ ನಡೆಸಿದ್ದಾರೆ. ಟ್ರಂಪ್ ಒಬ್ಬ ‘ಯುದ್ಧ ಅಪರಾಧಿ’ಯನ್ನು ಶ್ವೇತಭವನಕ್ಕೆ ಆಹ್ವಾನಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೆತನ್ಯಾಹು ಅಮೆರಿಕ ಭೇಟಿಗೂ ಮುನ್ನವೇ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದ ಟ್ರಂಪ್ “ಗಾಝಾ ಕದನ ವಿರಾಮ ಮುಂದುವರಿಯುವ ಗ್ಯಾರಂಟಿ ನನಗಿಲ್ಲ” ಎಂದಿದ್ದರು. ಇದಕ್ಕೂ ಮುನ್ನ ಕೆಲ ದಿನಗಳ ಹಿಂದೆ ” ಗಾಝಾ ಜನತೆಯನ್ನು ಸುತ್ತಮುತ್ತಲಿನ ಈಜಿಪ್ಟ್, ಜೋರ್ಡಾನ್, ತುರ್ಕಿ ದೇಶಗಳು ಕರೆಸಿಕೊಳ್ಳಿ” ಎಂದಿದ್ದರು.

ಕುವೈತ್‌ನ ಶತ ಪ್ರಯತ್ನದ ಫಲವಾಗಿ 15 ತಿಂಗಳ ಬಳಿಕ ಜನವರಿ 16, 2025ರಿಂದ ಗಾಝಾದಲ್ಲಿ ಇಸ್ರೇಲ್ ಆಕ್ರಮಣ ತಾತ್ಕಾಲಿಕ ಕೊನೆಗೊಂಡಿದೆ. ಜನರು ತಮ್ಮ ಮೂಲ ಸ್ಥಳಗಳಿಗೆ ಮರಳಿ ಛಿದ್ರವಾದ ಬದುಕನ್ನು ಮರು ರೂಪಿಸುವ ಪ್ರಯತ್ನದಲ್ಲಿದ್ದಾರೆ.

ಈ ನಡುವೆ ಗಾಝಾದಲ್ಲಿ ನಿರಂತರ ನರಮೇಧ ನಡೆಸಿದ ಇಸ್ರೇಲ್‌ನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕಕ್ಕೆ ತೆರಳಿ ಟ್ರಂಪ್ ಅವರನ್ನು ಭೇಟಿಯಾಗಿದ್ದಾರೆ. ಟ್ರಂಪ್ ಕೂಡ ಪದೇ ಪದೇ ವಿಚಿತ್ರ ಹೇಳಿಕೆಗಳನ್ನು ನೀಡುತ್ತಿದ್ದಾರೆ, ಇವೆಲ್ಲವೂ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಗಾಝಾ ಜನತೆಯನ್ನು ಅವರ ನಾಡಿನಿಂದ ಹೊರದಬ್ಬಿ ಗಾಝಾವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುವ ಹುನ್ನಾರ ನಡೆಸುತ್ತಿರುವಂತೆ ಕಾಣುತ್ತಿದೆ.

ಗಾಝಾ ಕದನ ವಿರಾಮ ಮುಂದುವರಿಯುವ ಗ್ಯಾರಂಟಿಯಿಲ್ಲ : ನೆತನ್ಯಾಹು ಭೇಟಿಗೂ ಮುನ್ನ ಟ್ರಂಪ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...