Homeಕರ್ನಾಟಕ'ಕಾಲಮಿತಿಯಲ್ಲಿ ನಾಗಮೋಹನ್ ದಾಸ್ ಸಮಿತಿ ವರದಿ ನೀಡಬೇಕು..'; ಒಳ ಮೀಸಲಾತಿ ಹೋರಾಟಗಾರರ ಆಗ್ರಹ

‘ಕಾಲಮಿತಿಯಲ್ಲಿ ನಾಗಮೋಹನ್ ದಾಸ್ ಸಮಿತಿ ವರದಿ ನೀಡಬೇಕು..’; ಒಳ ಮೀಸಲಾತಿ ಹೋರಾಟಗಾರರ ಆಗ್ರಹ

- Advertisement -
- Advertisement -

ಸುಪ್ರೀಂ ಕೋರ್ಟ್ ತೀರ್ಪಿನಂತೆ ಕರ್ನಾಟಕ ಸರ್ಕಾರ ಒಳ ಮೀಸಲಾತಿ ಜಾರಿ ಮಾಡಬೇಕು. ಆದ್ದರಿಂದ, ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿಯು ತನ್ನ ವರದಿಯನ್ನು ತುರ್ತಾಗಿ ನೀಡಬೇಕು ಎಂದು ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ-ರಾಜ್ಯ ಸಮಿತಿ’ ಒತ್ತಾಯಿಸಿದೆ.

ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, “ಸುಮಾರು ನಾಲ್ಕು ದಶಕಗಳ ಒಳಮೀಸಲಾತಿ ಹೋರಾಟವು ಕಳೆದ ಆಗಸ್ಟ್ 1, 2024 ರ ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಒಂದು ತಾರ್ಕಿಕ ಅಂತ್ಯ ಕಂಡಿದೆ. ಒಳಮೀಸಲಾತಿಯ ಪರ ವಿರೋಧದ ಚರ್ಚೆಗಳು ತಕ್ಕಮಟ್ಟಿಗೆ ಶಮನಗೊಂಡು ಒಳಮೀಸಲಾತಿ ಯಾರಿಗೆ ಎಷ್ಟೆಷ್ಟು ಸಿಗಬೇಕೆಂಬ ಚರ್ಚೆಗಳು ಹೆಚ್ಚಾದವು. ಈ ದಿಸೆಯಲ್ಲಿ ತುಸು ತಡವಾದರೂ ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಪ್ರಮಾಣವನ್ನು ನಿಗದಿಪಡಿಸಲು ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿಯನ್ನು ರಚಿಸಿರುವುದು ಅಭಿನಂದನೀಯ” ಎಂದು ಹೇಳಿದ್ದಾರೆ.

“ಒಳ ಮೀಸಲಾತಿಗಾಗಿ ಇಷ್ಟು ವರ್ಷ ಕಾದಿರುವ ನಮಗೆ ಇನ್ನೆರಡು ತಿಂಗಳು ಕಾಯುವುದು ತ್ರಾಸದಾಯಕವಲ್ಲ. ಒಳಮೀಸಲಾತಿ ಜಾರಿಯಾಗುವವರೆಗೆ ಎಲ್ಲ ಸರ್ಕಾರಿ ನೇಮಕಾತಿಗಳನ್ನು ತಡೆ ಹಿಡಿದಿರುವುದು ಸ್ವಾಗತಾರ್ಹವೇ. ಆದರೂ, ಹೆಚ್ಚು ಕಾಲ ಹೀಗೆ ನೇಮಕಾತಿ ತಡೆಹಿಡಿಯುವುದರ ಮೂಲಕ ಇತರರಿಗೂ ತೊಂದರೆ ಕೊಡುವುದು ಅನ್ಯಾಯವಾಗುತ್ತದೆ. ಜೊತೆಗೆ, ಅತ್ಯಂತ ತಳಸಮುದಾಯದ ಬೇಡಿಕೆಗಳನ್ನು ಸತತವಾಗಿ ಮುಂದೂಡುವುದು ಸಹ ಅನ್ಯಾಯವೇ ಆಗುತ್ತದೆ. ಆದ್ದರಿಂದ, ತುರ್ತಾಗಿ ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿಯು ತನ್ನ ವರದಿಯನ್ನು ನೀಡಬೇಕೆಂದು ಈ ಮೂಲಕ ಒತ್ತಾಯಿಸುತ್ತಿದ್ದೇವೆ” ಎಂದು ಮನವಿ ಮಾಡಿದ್ದಾರೆ.

ಒಳ ಮೀಸಲಾತಿ ಹೋರಾಟಗಾರರ ಆಗ್ರಹಗಳೇನು?

“ಯಾವುದೇ ಕಾರಣಕ್ಕೂ, ಯಾವುದೇ ಸಮುದಾಯಕ್ಕೂ ಅನ್ಯಾಯವಾಗದ ಹಾಗೆ ಒಳಮೀಸಲಾತಿ ವರ್ಗೀಕರಣ ಮಾಡುವ ಜೊತೆಗೆ, ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ʼಪ್ರಾಯೋಗಿಕ ದತ್ತಾಂಶʼವನ್ನು ಮಾನದಂಡವನ್ನಾಗಿ ವಿಧಿಸಿರುವುದರಿಂದ ಮುಂದಿನ ಜನಗಣತಿಯವರೆಗೆ ಅವಶ್ಯಕವಿರುವ ಅಂಶಗಳಿಗೆಲ್ಲ ʼಸ್ಯಾಂಪಲ್ ಸಮೀಕ್ಷೆʼ ಕೈಗೊಳ್ಳಬೇಕು. ಇದಕ್ಕೆ ರಾಜ್ಯ ಸರ್ಕಾರ ಶೀಘ್ರ ಅನುದಾನ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

“ಉದ್ಯೋಗಗಳಲ್ಲಿ ಅತಿ ಕಡಿಮೆ ಆಯ್ಕೆ/ಅವಕಾಶಗಳಿದ್ದಾಗ, ಪ.ಜಾತಿಯ ಯಾವ ಗುಂಪಿಗೆ ಮೊದಲ ಆದ್ಯತೆ ನೀಡಬೇಕೆಂಬ ಶ್ರೇಣೀಕರಣವನ್ನು ನಿಗದಿಗೊಳಿಸಬೇಕು. ಬಡ್ತಿ ಮೀಸಲಾತಿಯಲ್ಲಿಯೂ ಒಳಮೀಸಲಾತಿಯನ್ನು ಪರಿಗಣಿಸಿ, ರಾಜಕೀಯ ಮತಕ್ಷೇತ್ರ ಮೀಸಲಾತಿಯಲ್ಲಿಯೂ ಒಳಮೀಸಲಾತಿಯನ್ನು ಕಡ್ಡಾಯಗೊಳಿಸಲು ಶಿಫಾರಸು ಮಾಡಬೇಕು” ಎಂದು ಹೇಳಿದ್ದಾರೆ.

“ಗುತ್ತಿಗೆ ನೌಕರಿಗಳಲ್ಲಿಯೂ ಒಳಮೀಸಲಾತಿ ಪರಿಗಣಿಸಲು ಸರ್ಕಾರ ಶಿಫಾರಸು ಮಾಡಬೇಕು. ಒಳಮೀಸಲಾತಿ ಅನುಷ್ಠಾನದಲ್ಲಿನ ಕುಂದುಕೊರತೆಗಳು ಹಾಗೂ ಪ್ರಗತಿಯ ಮೇಲ್ವಿಚಾರಣೆ ಮಾಡಲು ರಾಜ್ಯ ಪರಿಶಿಷ್ಟ ಆಯೋಗದಡಿಯಲ್ಲಿ ಒಂದು ಸ್ವತಂತ್ರ ಸಮಿತಿ ರಚಿಸಿ, ಇಂದಿರಾ ಸಹಾನಿ ತೀರ್ಪಿನನ್ವಯ ಮೀಸಲಾತಿಗೆ ವಿಧಿಸಿರುವ ಶೇ.50 ಮೀಸಲಾತಿ ಮಿತಿಯನ್ನು ರದ್ದುಪಡಿಸಲು ರಾಜ್ಯ ಸರ್ಕಾರವು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಬೇಕು” ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ.

“ಉದ್ಯೋಗಾಕಾಂಕ್ಷಿಗಳಿಗೆ ಸಮಸ್ಯೆಯಾಗದಂತೆ ನಿಗದಿತ ಗಡುವಿನೊಳಗೆ ಆಯೋಗವು ವರದಿ ನೀಡಬೇಕು.
ಈ ಮೇಲಿನ ಮನವಿಗಳನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟವು ಆಗ್ರಹಿಸುತ್ತದೆ. ಸಾಮಾಜಿಕ ನ್ಯಾಯವನ್ನು ಒಳಮೀಸಲಾತಿಯಲ್ಲಿಯೂ ಎತ್ತಿಹಿಡಿಯಬೇಕೆಂದು ಒತ್ತಾಯಿಸುತ್ತದೆ” ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಪರವಾಗಿ ಬಸವರಾಜ್ ಕೌತಾಳ್, ಡಿ.ಟಿ ವೆಂಕಟೇಶ್, ಶಿವಣ್ಣ ಕನಕಪುರ, ವಿನಯ್ ಶ್ರೀನಿವಾಸ್, ಚಂದ್ರು ತರಹುಣಿಸೆ ಇದ್ದರು.

ಇದನ್ನೂ ಓದಿ; ಪೋಕ್ಸೋ ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪಗೆ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...