Homeಮುಖಪುಟರಾಜಸ್ಥಾನ | ತನ್ನ ಸಚಿವನ ಫೋನನ್ನೇ ಕದ್ದಾಲಿಕೆ ಮಾಡಿದ ಬಿಜೆಪಿ ಸರ್ಕಾರ!

ರಾಜಸ್ಥಾನ | ತನ್ನ ಸಚಿವನ ಫೋನನ್ನೇ ಕದ್ದಾಲಿಕೆ ಮಾಡಿದ ಬಿಜೆಪಿ ಸರ್ಕಾರ!

- Advertisement -
- Advertisement -

ರಾಜಸ್ಥಾನದಲ್ಲಿ ತನ್ನದೇ ಪಕ್ಷದ ಸರ್ಕಾರ ತನ್ನ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ಹೇಳುವ ಮೂಲಕ ಸಂಪುಟ ಸಚಿವ ಡಾ. ಕಿರೋರಿ ಲಾಲ್ ಮೀನಾ ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದಾರೆ. ಭಾರಿ ವಿವಾದ ಸೃಷ್ಟಿಸಿದ್ದ ಎಸ್‌ಐ (ಸಬ್-ಇನ್‌ಸ್ಪೆಕ್ಟರ್) ಪರೀಕ್ಷೆಯ ಭ್ರಷ್ಟಾಚಾರದ ಬಗ್ಗೆ ಆತಂಕ ವ್ಯಕ್ತಪಡಿಸಿದಾಗಿನಿಂದ ಸರ್ಕಾರ ತನ್ನ ಮೇಲೆ ನಿಗಾ ಇಟ್ಟಿದೆ ಎಂದು ಅವರು ಆರೋಪಿಸಿದ್ದಾರೆ. ರಾಜಸ್ಥಾನ | ಸಚಿವನ

ಜೈಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಡಾ. ಮೀನಾ, “ನಾನು ಎಸ್‌ಐ ಪರೀಕ್ಷೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದಾಗ, ಸರ್ಕಾರ ನನ್ನನ್ನು ನಿರ್ಲಕ್ಷಿಸಿದೆ. ಬದಲಾಗಿ, ಈ ಹಿಂದಿನ ಸರ್ಕಾರದಂತೆಯೆ ನನ್ನನ್ನು ನಡೆಸಿಕೊಳ್ಳಲಾಗುತ್ತಿದೆ. ಸಿಐಡಿ ಪ್ರತಿ ಹಂತದಲ್ಲೂ ನನ್ನನ್ನು ಹಿಂಬಾಲಿಸುತ್ತಿದ್ದು, ನನ್ನ ಫೋನ್ ಸಂಭಾಷಣೆಗಳನ್ನು ರೆಕಾರ್ಡ್ ಮಾಡಲಾಗುತ್ತಿದೆ. ಆದರೆ ಇದು ನನ್ನ ಮೇಲೆ ಯಾವುದೆ ಪರಿಣಾಮ ಬೀರುವುದಿಲ್ಲ.” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೆಲವು ದಿನಗಳ ಹಿಂದೆ ರಾಜಸ್ಥಾನ ವಿಧಾನಸಭೆಯಲ್ಲಿ ಮಾತನಾಡಿದ್ದ ಡಾ. ಮೀನಾ, “ಇದು ವಂಚನೆಯ ಯುಗ. ಅವ್ಯವಸ್ಥೆಯನ್ನು ನಾವು ಒಪ್ಪಿದರೆ ಸಂಬಂಧಗಳು ಹಾಗೆಯೇ ಇರುತ್ತವೆ. ಆದರೆ ‘ಹೌದಪ್ಪ’ದ ಜಗತ್ತಿನಲ್ಲಿ ಯಾರಾದರೂ ‘ಇಲ್ಲ’ ಎಂದು ಹೇಳುವ ಧೈರ್ಯ ತೋರಿದರೆ, ಅವರು ನಾಶವಾಗುತ್ತಾರೆ. ಆದರೆ, ನಾನು ಕುರುಡಾಗಿ ಒಪ್ಪುವುದನ್ನು ನಂಬುವುದಿಲ್ಲ; ನಾನು ಸತ್ಯವನ್ನು ಮಾತನಾಡುತ್ತೇನೆ, ಅದು ನನಗೆ ನೋವುಂಟುಮಾಡಿದರೂ ಸಹ ನಾನು ಸತ್ಯ ಮಾತನಾಡುತ್ತೇನೆ.” ಎಂದು ಅವರು ಹೇಳಿದ್ದಾರೆ.

ರಾಜಸ್ಥಾನದ ಭಜನ್ ಲಾಲ್ ಸರ್ಕಾರ ರಚನೆಯಾದಾಗಿನಿಂದ ಡಾ. ಕಿರೋರಿ ಲಾಲ್ ಮೀನಾ ಅವರ ಅತೃಪ್ತಿ ವ್ಯಕ್ತಪಡಿಸುತ್ತಲೆ ಇದ್ದಾರೆ. ರಾಜ್ಯದ ಹಲವು ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆಯುತ್ತಿದೆ ಎಂದು ಅವರು ಪದೇ ಪದೇ ಆರೋಪಿಸುತ್ತಲೆ ಇದ್ದಾರೆ. ರಾಜಸ್ಥಾನ | ಸಚಿವನ

ಒಂದು ಹಂತದಲ್ಲಿ, ತಾನು ಸಂಪುಟಕ್ಕೆ ರಾಜೀನಾಮೆ ನೀಡುವ ಸುಳಿವು ಕೂಡಾ ನೀಡಿದ್ದರು. ಅದಾಗ್ಯೂ, ವೈದ್ಯಕೀಯ ಇಲಾಖೆಯಂತಹ ನಿರ್ಣಾಯಕ ಖಾತೆಯನ್ನು ನೀಡದ ಕಾರಣ ಅವರು ನಿರಾಶರಾಗಿದ್ದು, ಇದೇ ಕಾರಣಕ್ಕೆ ಅವರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ಮೂಲಗಳು ಸೂಚಿಸಿವೆ.

ಅದಾಗ್ಯೂ, ಬಿಜೆಪಿಯು ಅವರ ಸಹೋದರನನ್ನು ಲೋಕಸಭಾ ಚುನಾವಣೆಗೆ ಟಿಕೆಟ್ ನೀಡಿ ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸಿತ್ತು. ಆದರೆ ಮೀನಾ ಅವರ ಭದ್ರಕೋಟೆಯಲ್ಲೆ ಅವರು ಗೆಲುವು ಸಾಧಿಸುವಲ್ಲಿ ವಿಫಲರಾಗಿದ್ದು, ಇದು ಪಕ್ಷ ಮತ್ತು ಅವರ ನಡುವಿನ ಬಿರುಕನ್ನು ಇನ್ನಷ್ಟು ಹೆಚ್ಚಿಸಿತು.

ಸಚಿವ ಡಾ. ಮೀನಾ ಅವರ ಆರೋಪಗಳ ನಂತರ, ರಾಜಸ್ಥಾನ ವಿಧಾನಸಭೆಯಲ್ಲಿ ಭಾರಿ ರಾಜಕೀಯ ಹಣಾಹಣಿ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ. ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷವು ಫೋನ್ ಟ್ಯಾಪಿಂಗ್ ವಿಷಯವನ್ನು ಆಕ್ರಮಣಕಾರಿಯಾಗಿ ದಾಳಿಗೆ ಸಿದ್ಧತೆ ನಡೆಸುತ್ತಿದೆ ಎಂದು ವರದಿಯಾಗಿದೆ. ಶೂನ್ಯ ವೇಳೆಯಿಂದ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯವರೆಗೆ, ವಿರೋಧ ಪಕ್ಷದ ಶಾಸಕರು ಸದನದಲ್ಲಿ ಸರ್ಕಾರದ ಮೇಲೆ ದಾಳಿ ಮಾಡಲು ಯೋಜಿಸಿದ್ದಾರೆ ಎಂದು ಅದು ಹೇಳಿದೆ.

ಈ ಮಧ್ಯೆ, ಹಿಂದಿನ ಸರ್ಕಾರದ ವಿರುದ್ಧ ಫೋನ್ ಟ್ಯಾಪಿಂಗ್‌ನ ಇದೇ ರೀತಿಯ ಆರೋಪಗಳನ್ನು ಎತ್ತಿ ತೋರಿಸುವ ಮೂಲಕ ಬಿಜೆಪಿ ಕಾಂಗ್ರೆಸ್ ಅನ್ನು ಎದುರಿಸುವ ಸಾಧ್ಯತೆಯಿದೆ. ಆದಾಗ್ಯೂ, ಈ ಪ್ರಕರಣದ ವಿಶೇಷವೇನೆಂದರೆ, ಹಾಲಿ ಸಚಿವರೊಬ್ಬರು ತಮ್ಮದೇ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ. ಹಾಗಾಗಿ ಆಡಳಿತರೂಢ ಪಕ್ಷವನ್ನು ಇದು ಇಕ್ಕಟ್ಟಿನಲ್ಲಿ ಸಿಲುಕಿಸಲಿದೆ.

ಇದನ್ನೂಓದಿ:  ಸರ್ಕಾರದ ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು

ಸರ್ಕಾರದ ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...