Homeಮುಖಪುಟಬಸ್‌ಗಳಲ್ಲಿ ಪರವಾನಗಿ ಪಡೆಯದ ಕಂಡಕ್ಟರ್‌ಗಳು - ಪಿಐಎಲ್ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್‌

ಬಸ್‌ಗಳಲ್ಲಿ ಪರವಾನಗಿ ಪಡೆಯದ ಕಂಡಕ್ಟರ್‌ಗಳು – ಪಿಐಎಲ್ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್‌

- Advertisement -
- Advertisement -

ಪರವಾನಗಿ ಪಡೆದ ಕಂಡಕ್ಟರ್‌ಗಳಿಲ್ಲದೆ ಕಾರ್ಯನಿರ್ವಹಿಸುವ ಸಾವಿರಾರು ನೋಂದಾಯಿತ ಪ್ರಯಾಣಿಕ ಬಸ್‌ಗಳು ಸಾರ್ವಜನಿಕ ಸುರಕ್ಷತೆಗೆ ಧಕ್ಕೆ ತರುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್)ಯನ್ನು, ಗಂಭೀರ ವಿಷಯವೆಂದು ಪರಿಗಣಿಸಿ ಛತ್ತೀಸ್‌ಗಢ ಹೈಕೋರ್ಟ್ ಅರ್ಜಿಯ ವಿಚಾರಣೆ ನಡೆಸುತ್ತಿದೆ. ಛತ್ತೀಸ್‌ಗಢದಲ್ಲಿ ಕಾರ್ಯನಿರ್ವಹಿಸುತ್ತಿರುವ 68,396 ನೋಂದಾಯಿತ ಪ್ರಯಾಣಿಕ ಬಸ್‌ಗಳಲ್ಲಿ ಕೆಲವೇ ಕೆಲವು ಪರವಾನಗಿ ಪಡೆದ ಕಂಡಕ್ಟರ್‌ಗಳನ್ನು ನೇಮಿಸಿಕೊಂಡಿವೆ ಎಂದು ಅರ್ಜಿದಾರರಾದ ವಿನೇಶ್ ಚೋಪ್ರಾ ಅವರು ಪಿಐಎಲ್ ಸಲ್ಲಿಸಿದ್ದಾರೆ. ಬಸ್‌ಗಳಲ್ಲಿ ಪರವಾನಗಿ ಪಡೆಯದ ಕಂಡಕ್ಟರ್‌ಗಳು

“ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕ ಬಸ್‌ಗಳು ಪರವಾನಗಿ ಪಡೆದ ಕಂಡಕ್ಟರ್‌ಗಳಿಲ್ಲದೆ ಚಲಿಸುತ್ತಿವೆ. ಇದು ಕಾನೂನಿನ ನಿಬಂಧನೆಗಳು ಮತ್ತು ಪ್ರಯಾಣಿಕರು, ಸಾರ್ವಜನಿಕರು ಮತ್ತು ಚಾಲಕರ ಸುರಕ್ಷತೆಗೆ ವಿರುದ್ಧವಾಗಿದೆ. ವಯಸ್ಸಾದ ನಾಗರಿಕರು, ಮಕ್ಕಳು, ಮಹಿಳೆಯರು, ಅನಾರೋಗ್ಯ ಪೀಡಿತರು ಮತ್ತು ಇತರ ಪ್ರಯಾಣಿಕರು ಇದರಲ್ಲಿ ಸಂಚರಿಸುತ್ತಾರೆ. ಅವರ ಸುರಕ್ಷತೆ ಮತ್ತು ಅನುಕೂಲಕರ ಪ್ರಯಾಣ ಅತ್ಯಗತ್ಯ ವಿಚಾರವಾಗಿದೆ” ಎಂದು ಅರ್ಜಿದಾರರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅರ್ಜಿದಾರರ ಕಳವಳವನ್ನು ಕೇಳಿದ ಮುಖ್ಯ ನ್ಯಾಯಮೂರ್ತಿ ರಮೇಶ್ ಸಿನ್ಹಾ ಮತ್ತು ನ್ಯಾಯಮೂರ್ತಿ ರವೀಂದ್ರ ಕುಮಾರ್ ಅಗರ್ವಾಲ್ ಅವರನ್ನೊಳಗೊಂಡ ವಿಭಾಗೀಯ ಪೀಠವು, ನಾಲ್ಕು ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ರಾಜ್ಯ ಸರ್ಕಾರವನ್ನು ಕೇಳಿದೆ. ಬಸ್‌ಗಳಲ್ಲಿ ಪರವಾನಗಿ ಪಡೆಯದ ಕಂಡಕ್ಟರ್‌ಗಳು

“ರಾಜ್ಯದಲ್ಲಿ ಕಂಡಕ್ಟರ್/ಪರವಾನಗಿ ಕಂಡಕ್ಟರ್‌ಗಳಿಲ್ಲದೆ ಪ್ರಯಾಣಿಕರ ಬಸ್‌ಗಳು/ಸ್ಟೇಜ್ ಕ್ಯಾರೇಜ್‌ಗಳು ಕಾರ್ಯನಿರ್ವಹಿಸುತ್ತಿರುವ ಸಮಸ್ಯೆಯನ್ನು ಪಿಐಎಲ್‌ನಲ್ಲಿ ಅರ್ಜಿದಾರರು ಪ್ರಸ್ತಾಪಿಸಿದ್ದಾರೆ. ಪರವಾನಗಿ ಕಂಡಕ್ಟರ್ ಪಾತ್ರವನ್ನು 1988 ರ ಮೋಟಾರು ವಾಹನ ಕಾಯ್ದೆ ಮತ್ತು ಕೇಂದ್ರ ಮೋಟಾರು ವಾಹನ ನಿಯಮದಲ್ಲಿ ವಿವರಿಸಲಾಗಿದೆ. ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಪರವಾನಗಿ ಪಡೆದ ವ್ಯಕ್ತಿಯನ್ನು ಹೊರತುಪಡಿಸಿ ಬೇರೆ ಯಾರೂ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ” ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಹೇಳಿದ್ದು ಸರ್ಕಾರಕ್ಕೆ ನೋಟಿಸ್ ನೀಡಿದೆ.

ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 29, ಮಾನ್ಯ ಕಂಡಕ್ಟರ್ ಪರವಾನಗಿ ಹೊಂದಿರುವ ಜನರು ಮಾತ್ರ ಬಸ್ ಕಂಡಕ್ಟರ್ ಆಗಿ ಕೆಲಸ ಮಾಡಬಹುದು. ಈ ಪರವಾನಗಿ ಇಲ್ಲದ ಯಾರನ್ನಾದರೂ ಬಸ್ ಕಂಡಕ್ಟರ್ ಆಗಿ ಕೆಲಸ ಮಾಡಲು ಯಾರಾದರೂ ನೇಮಿಸಿಕೊಳ್ಳುವುದು ಕಾನೂನುಬಾಹಿರ ಎಂದು ಹೇಳುತ್ತದೆ.

ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆಯ ಫ್ಲೈಯಿಂಗ್ ಸ್ಕ್ವಾಡ್‌ಗೆ ಈ ಬಗ್ಗೆ ಪರಿಶೀಲನೆ ನಡೆಸಲು ನ್ಯಾಯಾಲಯ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಜೊತೆಗೆ ಪರವಾನಗಿ ಪಡೆದ ಕಂಡಕ್ಟರ್ ಇಲ್ಲದೆ ಯಾವುದೇ ಪ್ರಯಾಣಿಕ ಬಸ್ / ಸ್ಟೇಜ್ ಕ್ಯಾರೇಜ್ ರಸ್ತೆಯಲ್ಲಿ ಕಾರ್ಯನಿರ್ವಹಿಸದಂತೆ ನೋಡಿಕೊಳ್ಳಲು ಪಾಯಿಂಟ್‌ಗಳನ್ನು ಪರಿಶೀಲಿಸುವಂತೆ ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.

“ಮಾಹಿತಿ ಹಕ್ಕಿನ ಅಡಿಯಲ್ಲಿ, ರಾಜಧಾನಿ ರಾಯ್‌ಪುರದಲ್ಲಿ 16321 ಬಸ್‌ಗಳಲ್ಲಿ ಕೇವಲ 21 ಪರವಾನಗಿ ಪಡೆದ ಕಂಡಕ್ಟರ್‌ಗಳು ಮತ್ತು ರಾಯ್‌ಗಢದಲ್ಲಿ 5992 ಬಸ್‌ಗಳಿಗೆ 41 ಪರವಾನಗಿ ಪಡೆದ ಕಂಡಕ್ಟರ್‌ಗಳಿದ್ದಾರೆ ಎಂದು ನಮಗೆ ತಿಳಿದುಬಂದಿದೆ. ಈ ಎರಡು ಪ್ರಮುಖ ಜಿಲ್ಲೆಗಳೆ ಇಂತಹ ದಯನೀಯ ಪರಿಸ್ಥಿತಿಯನ್ನು ಹೊಂದಿರುವಾಗ, ಇಡೀ ರಾಜ್ಯದ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬಹುದು” ಎಂದು ಅರ್ಜಿದಾರರ ವಕೀಲ ರಿಷಬ್ ಬಿಸೆನ್ ಹೇಳಿದ್ದಾರೆ.

ಇದನ್ನೂಓದಿ:  ದೆಹಲಿ | ಎಎಪಿ ಅಭ್ಯರ್ಥಿಗಳಿಗೆ ಬಿಜೆಪಿ ಆಮಿಷ ಆರೋಪ : ತನಿಖೆಗೆ ಆದೇಶಿಸಿದ ಲೆ.ಗವರ್ನರ್

ದೆಹಲಿ | ಎಎಪಿ ಅಭ್ಯರ್ಥಿಗಳಿಗೆ ಬಿಜೆಪಿ ಆಮಿಷ ಆರೋಪ : ತನಿಖೆಗೆ ಆದೇಶಿಸಿದ ಲೆ.ಗವರ್ನರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...