Homeಮುಖಪುಟಲೆ.ಗವರ್ನರ್ ತನಿಖೆಗೆ ಆದೇಶಿಸಿದ ಬೆನ್ನಲ್ಲೇ ಕೇಜ್ರಿವಾಲ್ ಮನೆಗೆ ಬಂದ ಎಸಿಬಿ ಅಧಿಕಾರಿಗಳು!

ಲೆ.ಗವರ್ನರ್ ತನಿಖೆಗೆ ಆದೇಶಿಸಿದ ಬೆನ್ನಲ್ಲೇ ಕೇಜ್ರಿವಾಲ್ ಮನೆಗೆ ಬಂದ ಎಸಿಬಿ ಅಧಿಕಾರಿಗಳು!

ಫಲಿತಾಂಶದ ಮುನ್ನಾದಿನ ದೆಹಲಿಯಲ್ಲಿ ಅಭ್ಯರ್ಥಿಗಳ ಖರೀದಿ ಗದ್ದಲ

- Advertisement -
- Advertisement -

ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮಾಡಿರುವ ಆರೋಪದ ಕುರಿತು ತನಿಖೆಗೆ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಆದೇಶಿಸಿದ ಬೆನ್ನಲ್ಲೇ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಕೇಜ್ರಿವಾಲ್ ಅವರ ಮನೆಗೆ ತಲುಪಿದ್ದಾರೆ ಎಂದು ವರದಿಯಾಗಿದೆ.

ಕೇಜ್ರಿವಾಲ್ ಅವರ ಆಮಿಷ ಆರೋಪದ ಕುರಿತು ಎಸಿಬಿ ತನಿಖೆ ನಡೆಸುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ರಾಜ್ಯ ಸರ್ಕಾದ ಪ್ರಧಾನ ಕಾರ್ಯದರ್ಶಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಅದರ ಅನ್ವಯ ತನಿಖೆಗೆ ಆದೇಶಿಸಲಾಗಿತ್ತು. ಈ ಬೆನ್ನಲ್ಲೇ ಎಸಿಬಿ ತಂಡ ಕ್ರೇಜಿವಾಲ್ ಮನೆಗೆ ಬಂದಿದೆ. ಆದರೆ, ಅವರಿಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಫೆಬ್ರವರಿ 8ರಂದು ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬೀಳುವ ಮುನ್ನ ಎಎಪಿಯ 16 ಅಭ್ಯರ್ಥಿಗಳನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕೇಜ್ರಿವಾಲ್ ಗುರುವಾರ (ಫೆ.6) ಆರೋಪಿಸಿದ್ದರು.

ಎಎಪಿ ಅಭ್ಯರ್ಥಿಗಳಿಗೆ ಬಿಜೆಪಿಯಿಂದ ಸಚಿವ ಸ್ಥಾನ ಮತ್ತು ಪಕ್ಷ ಬದಲಾಯಿಸಿದರೆ ತಲಾ 15 ಕೋಟಿ ರೂಪಾಯಿಗಳ ಭರವಸೆ ಸಿಕ್ಕಿದೆ ಎಂದು ಕೇಜ್ರಿವಾಲ್ ಹೇಳಿದ್ದರು.

ಎಎಪಿಯ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಮತ್ತು ಇತರ ನಾಯಕರು ಕೂಡ ಇದೇ ರೀತಿಯ ಆರೋಪಗಳನ್ನು ಮಾಡಿದ್ದರು.

ಅರವಿಂದ್ ಕೇಜ್ರಿವಾಲ್ ಅವರ ಮನೆಗೆ ಎಸಿಬಿ ತಂಡದ ಆಗಮಿಸಿದ್ದನ್ನು ಎಎಪಿ ಕಾನೂನು ಘಟಕದ ಅಧ್ಯಕ್ಷ ಸಂಜೀವ್ ನಾಸಿಯರ್ ಪ್ರಶ್ನಿಸಿದ್ದಾರೆ. “ಇದು ತುಂಬಾ ಆಶ್ಚರ್ಯಕರ ಬೆಳವಣಿಗೆ ಎಂದಿದ್ದಾರೆ.

“ಎಸಿಬಿ ಅಧಿಕಾರಿಗಳ ಬಳಿ ಯಾವುದೇ ದಾಖಲೆಗಳು ಅಥವಾ ಸೂಚನೆಗಳಿಲ್ಲ. ಅವರು ಯಾರಿಗೋ ನಿರಂತರವಾಗಿ ಕರೆಗಳನ್ನು ಮಾಡುತ್ತಿದ್ದಾರೆ. ನೋಟಿಸ್ ಅಥವಾ ಆದೇಶವನ್ನು ಕೇಳಿದಾಗ, ಅವರು ಯಾವುದೂ ಇಲ್ಲ ಎಂದು ಒಪ್ಪಿಕೊಂಡಿದ್ದಾರೆ. ಸಂಜಯ್ ಸಿಂಗ್ ಈಗಾಗಲೇ ದೂರು ದಾಖಲಿಸಲು ಎಸಿಬಿ ಕಚೇರಿಯಲ್ಲಿದ್ದಾರೆ. ಅಧಿಕಾರಿಗಳು ಯಾರ ಆದೇಶದ ಮೇರೆಗೆ ಆಗಮಿಸಿದ್ದಾರೆ. ಇದು ರಾಜಕೀಯ ನಾಟಕ ಸೃಷ್ಟಿಸಲು ಬಿಜೆಪಿ ಮಾಡಿದ ಪಿತೂರಿ. ಶೀಘ್ರದಲ್ಲೇ ಎಲ್ಲಾ ಬಹಿರಂಗಗೊಳ್ಳಲಿದೆ. ಕಾನೂನು ಸೂಚನೆ ಇಲ್ಲದೆ ಯಾರನ್ನೂ ಒಳಗೆ ಬಿಡಲಾಗುವುದಿಲ್ಲ” ಎಂದು ಸಂಜೀವ್ ನಾಸಿಯರ್ ಹೇಳಿದ್ದಾರೆ.

ದೆಹಲಿ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ವಿಷ್ಣು ಮಿತ್ತಲ್ ಅವರು ಲೆಫ್ಟಿನೆಂಟ್ ಗವರ್ನರ್‌ಗೆ ದೂರು ಸಲ್ಲಿಸಿದ ನಂತರ ಗವರ್ನರ್ ಸಕ್ಸೇನಾ ಅವರು ತನಿಖೆಗೆ ಆದೇಶಿಸಿದ್ದಾರೆ. ಕೇಜ್ರಿವಾಲ್ ಆರೋಪಗಳು ಸುಳ್ಳು ಮತ್ತು ಆಧಾರರಹಿತ. ಮತದಾನದ ನಂತರ ದೆಹಲಿಯಲ್ಲಿ ಭಯ ಮತ್ತು ಅಶಾಂತಿಯನ್ನು ಸೃಷ್ಟಿಸುವ ಮೂಲಕ ಬಿಜೆಪಿಯ ವರ್ಚಸ್ಸಿಗೆ ಕಳಂಕ ತರುವ ಉದ್ದೇಶವನ್ನು ಹೊಂದಿವೆ ಎಂದು ವಿಷ್ಣು ಮಿತ್ತಲ್ ಆರೋಪಿಸಿದ್ದಾರೆ.

ಎಎಪಿ ನಾಯಕರು ಸಾಕ್ಷ್ಯಾಧಾರಗಳಿಲ್ಲದೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ ಎಂದು ಮಿತ್ತಲ್ ಹೇಳಿದ್ದು, ಎಎಪಿ ಪಕ್ಷವು ಅಶಾಂತಿಯನ್ನು ಪ್ರಚೋದಿಸಲು ಸುಳ್ಳು ಮತ್ತು ದಾರಿತಪ್ಪಿಸುವ ಮಾಹಿತಿಯನ್ನು ಹರಡುತ್ತಿದೆ ಎಂದು ಆರೋಪಿಸಿದ್ದಾರೆ.

ದೆಹಲಿ | ಎಎಪಿ ಅಭ್ಯರ್ಥಿಗಳಿಗೆ ಬಿಜೆಪಿ ಆಮಿಷ ಆರೋಪ : ತನಿಖೆಗೆ ಆದೇಶಿಸಿದ ಲೆ.ಗವರ್ನರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...