Homeಮುಖಪುಟಪ್ಯಾಲೆಸ್ತೀನ್ ಕುರಿತ ಭಾರತದ ದೀರ್ಘಕಾಲದ ನಿಲುವು ಬದಲಾಗಿಲ್ಲ : ವಿದೇಶಾಂಗ ಕಾರ್ಯದರ್ಶಿ

ಪ್ಯಾಲೆಸ್ತೀನ್ ಕುರಿತ ಭಾರತದ ದೀರ್ಘಕಾಲದ ನಿಲುವು ಬದಲಾಗಿಲ್ಲ : ವಿದೇಶಾಂಗ ಕಾರ್ಯದರ್ಶಿ

- Advertisement -
- Advertisement -

“ಗಾಝಾ ಪಟ್ಟಿಯನ್ನು ಅಮೆರಿಕ ವಶಕ್ಕೆ ಪಡೆದುಕೊಂಡು ಅಭಿವೃದ್ದಿಪಡಿಸಲಿದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ ಬಳಿಕವೂ “ಪ್ಯಾಲೆಸ್ತೀನ್ ಕುರಿತ ಭಾರತದ ದೀರ್ಘಕಾಲದ ನಿಲುವು ಬದಲಾಗಿಲ್ಲ” ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಶುಕ್ರವಾರ (ಫೆಬ್ರವರಿ 7) ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಿಶ್ರಿ, “ಗಾಝಾ ಪಟ್ಟಿ, ಪ್ಯಾಲೆಸ್ತೀನ್ ಬಗ್ಗೆ ಭಾರತದ ನಿಲುವು ಏನೆಂದು ನಿಮಗೆ ಗೊತ್ತಿದೆ. ಅದು ದೀರ್ಘಕಾಲದ ನಿಲುವು, ಬದಲಾಗಿಲ್ಲ” ಎಂದಿದ್ದಾರೆ.

ಗಾಝಾ ಪಟ್ಟಿಯಿಂದ ಪ್ಯಾಲೆಸ್ತೀನಿಯರನ್ನು ಹೊರದಬ್ಬಿ, ಆ ಪ್ರದೇಶವನ್ನು ಅಮೆರಿಕ ತನ್ನ ವಶಕ್ಕೆ ಪಡೆಯಲಿದೆ ಎಂಬ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ಬಗ್ಗೆ ಭಾರತದ ನಿಲುವು ಏನು ಎಂದು ಕೇಳಿದ ಪ್ರಶ್ನೆಗೆ ಮಿಶ್ರಿ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.

“ಎರಡೂ ಕಡೆಯವರು (ಇಸ್ರೇಲ್- ಪ್ಯಾಲೆಸ್ತೀನ್) ಪರಸ್ಪರ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಸುರಕ್ಷಿತ, ಮಾನ್ಯತೆ ಪಡೆದ ಗಡಿಗಳೊಂದಿಗೆ ಇಸ್ರೇಲ್‌ನೊಂದಿಗೆ ಶಾಂತಿಯುತವಾಗಿ ಸಹಬಾಳ್ವೆ ನಡೆಸುವ ಸಾರ್ವಭೌಮ, ಸ್ವತಂತ್ರ ಮತ್ತು ಕಾರ್ಯಸಾಧ್ಯವಾದ ಪ್ಯಾಲೆಸ್ತೀನ್ ರಾಷ್ಟ್ರ ರಚನೆಯಾಗಬೇಕು. ಇದು ಪ್ಯಾಲೆಸ್ತೀನ್‌ ಕುರಿತ ಭಾರತದ ದೀರ್ಘಕಾಲದ ನಿಲುವು” ಎಂದು ಮಿಶ್ರಿ ಹೇಳಿದ್ದಾರೆ.

ಆದರೆ, ಗಾಝಾ ಜನತೆಯನ್ನು ಅವರ ಜನ್ಮ ನಾಡಿನಿಂದ ಹೊರದಬ್ಬಿ, ಆ ಪ್ರದೇಶವನ್ನು ಅಮೆರಿಕದ ತೆಕ್ಕೆಗೆ ಪಡೆಯುವ ಟ್ರಂಪ್ ಹೇಳಿಕೆ ದ್ವಿರಾಷ್ಟ್ರ ರಚನೆ ಪ್ರಸ್ತಾವದ ಅಂತ್ಯವನ್ನು ಸೂಚಿಸುತ್ತದೆ.

ದ್ವಿರಾಷ್ಟ್ರ ರಚನೆಯನ್ನು ಈ ಹಿಂದೆ ಸಾರ್ವಜನಿಕವಾಗಿ ವಿರೋಧಿಸಿದ್ದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ನಡೆಸಿದ ಪತ್ರಿಕಾಗೋಷ್ಠಿಯಲ್ಲೇ ಟ್ರಂಪ್ ಹೇಳಿಕೆ ನೀಡಿರುವುದು ಕೂಡ ಗಮನಾರ್ಹ.

“ಗಾಝಾವನ್ನು ಯುದ್ಧದ ಬಳಿಕ ಇಸ್ರೇಲ್ ನಮಗೆ ಹಸ್ತಾಂತರಿಸಲಿದೆ. ಅದನ್ನು ವಶಪಡಿಸಿಕೊಳ್ಳಲು ಅಮೆರಿಕ ಸೇನೆಯ ಅಗತ್ಯವಿಲ್ಲ” ಎಂದು ಟ್ರಂಪ್ ಮತ್ತೊಂದು ಹೇಳಿಕೆ ನೀಡಿದ್ದಾರೆ. ಈ ಎಲ್ಲಾ ಹೇಳಿಕೆಗಳಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಹಮತ ಸೂಚಿಸಿರುವುದು ಆತಂಕವನ್ನು ಸೃಷ್ಟಿಸಿದೆ.

ಪಾಶ್ಚಿಮಾತ್ಯ ರಾಷ್ಟ್ರಗಳು ಟ್ರಂಪ್ ಹೇಳಿಕೆಯನ್ನು ಖಂಡಿಸಿವೆ. ಪ್ಯಾಲೆಸ್ತೀನ್ ಸ್ವತಂತ್ರ ರಾಷ್ಟ್ರ ರಚನೆಯನ್ನು ಬೆಂಬಲಿಸಿವೆ.

ಅಮೆರಿಕದ ನೆರವನ್ನು ಸ್ವೀಕರಿಸುತ್ತಿರುವ, ಅದರ ಜೊತೆ ಉತ್ತಮ ದ್ವಿಪಕ್ಷೀಯ ಸಂಬಂಧ ಹೊಂದಿರುವ ಈಜಿಫ್ಟ್‌ ಟ್ರಂಪ್ ಹೇಳಿಕೆಯನ್ನು ಖಂಡಿಸಿದೆ. ಪ್ಯಾಲೆಸ್ತೀನಿಯರು ತಮ್ಮ ನಾಡನ್ನು ತೊರೆಯುವಂತೆ ಒತ್ತಾಯಿಸುವುದನ್ನು ಒಪ್ಪುವುದಿಲ್ಲ ಎಂದು ಈಜಿಫ್ಟ್ ಹೇಳಿದೆ. ಗಾಝಾದ ಜನತೆಗೂ ನೆರವು ನೀಡುತ್ತಿರುವ ಪ್ರಮುಖ ರಾಷ್ಟ್ರಗಳಲ್ಲಿ ಈಜಿಫ್ಟ್ ಕೂಡ ಒಂದು.

ಮುಂದಿನ ವಾರ ಜೋರ್ಡಾನ್ ರಾಜ ಅಬ್ದುಲ್ಲಾ ಅವರು ಡೊನಾಲ್ಟ್ ಟ್ರಂಪ್ ಅವರನ್ನ ಭೇಟಿಯಾಗಲಿದ್ದಾರೆ. ಅದಕ್ಕೂ ಮುನ್ನ ಗಾಝಾ ವಶಪಡಿಸಿಕೊಳ್ಳುವ ಟ್ರಂಪ್ ಹೇಳಿಕೆಯನ್ನು ವಿರೋಧಿಸಿದ್ದಾರೆ. ಜೋರ್ಡಾನ್ ಕೂಡ ಅಮೆರಿಕದ ಜೊತೆ ಉತ್ತಮ ಸಂಬಂಧ ಹೊಂದಿದೆ. ಗಾಝಾ ಜನತೆಗೆ ನೆರವು ನೀಡುತ್ತಿರುವ ಮತ್ತು ಕದನ ವಿರಾಮ ಜಾರಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ರಾಷ್ಟ್ರವಾಗಿದೆ.

ಅಕ್ಟೋಬರ್ 7, 2023ರಿಂದ ಗಾಝಾದಲ್ಲಿ ಇಸ್ರೇಲ್ ನಡೆಸಿದ ನರಮೇಧದಲ್ಲಿ ಸುಮಾರು 60 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ. ಅಂತಾರಾಷ್ಟ್ರೀಯ ಮಾಧ್ಯಮಗಳು 45,500 ಜನರಷ್ಟೇ ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡುತ್ತಿವೆ. ಆದರೆ, ಗಾಝಾದ ಕುರಿತು ನಿರಂತರ ಸುದ್ದಿ ಬಿತ್ತರಿಸುವ ಅಲ್‌-ಜಝೀರಾ ಸುದ್ದಿ ಸಂಸ್ಥೆ ಹಮಾಸ್ ಆರೋಗ್ಯ ಇಲಾಖೆಯನ್ನು ಉಲ್ಲೇಖಿಸಿ 60 ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವುದಾಗಿ ಹೇಳಿದೆ.

ಕದನ ವಿರಾಮದ ಬಳಿಕ ದಕ್ಷಿಣ ಗಾಝಾದಿಂದ ಸುಮಾರು 3 ಲಕ್ಷಕ್ಕಿಂತಲೂ ಅಧಿಕ ಜನರು ಉತ್ತರ ಗಾಝಾದ ಮೂಲ ಸ್ಥಳಗಳಿಗೆ ಬಂದಿದ್ದಾರೆ. ಉತ್ತರ ಗಾಝಾವನ್ನು ಇಸ್ರೇಲ್ ಸಂಪೂರ್ಣ ನಾಶ ಮಾಡಿದೆ. ಅಲ್ಲಿ ಕಟ್ಟಡಗಳ ಅವಶೇಷಗಳಡಿ ಸಾವಿರಾರು ಮೃತದೇಹಗಳು ಸಿಗುತ್ತಿವೆ. ಇದರಿಂದ ಸಾವನ್ನಪ್ಪಿದವರ ಸಂಖ್ಯೆ ಹಠಾತ್ ಏರಿಕೆಯಾಗಿದೆ ಎಂದು ಅಲ್‌-ಜಝೀರಾ ವರದಿ ತಿಳಿಸಿದೆ.

ರಾಷ್ಟ್ರ ವಿರೋಧಿ ಹೇಳಿಕೆ ಆರೋಪ | ರಾಹುಲ್ ಗಾಂಧಿ ವಿರುದ್ಧ ಒಡಿಶಾದಲ್ಲಿ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...