Homeಕರ್ನಾಟಕಬೆಂಗಳೂರು | ಮೆಟ್ರೋ ಪ್ರಯಾಣ ದರ ಗರಿಷ್ಠ 50% ಏರಿಕೆ

ಬೆಂಗಳೂರು | ಮೆಟ್ರೋ ಪ್ರಯಾಣ ದರ ಗರಿಷ್ಠ 50% ಏರಿಕೆ

- Advertisement -
- Advertisement -

ಬೆಂಗಳೂರು ‘ನಮ್ಮ ಮೆಟ್ರೋ’ ರೈಲು ಪ್ರಯಾಣಿಕರ ದರ ಗರಿಷ್ಠ 50%ದಷ್ಟು ಏರಿಕೆಯಾಗಿದ್ದು, ಭಾನುವಾರದಿಂದ ಪ್ರಯಾಣಿಕರು ಪರಿಷ್ಕೃತ ದರ ಪಾವತಿಸಬೇಕಾಗುತ್ತದೆ ಎಂದು ವರದಿಯಗಿದೆ. ಕನಿಷ್ಠ ದರ 10 ರೂ. ಹಾಗೆ ಉಳಿದಿದ್ದು, ಗರಿಷ್ಠ ದರವು ಶೇ. 50 ರಷ್ಟು ಏರಿಕೆಯಾಗಿದೆ.

ಸುಮಾರು ಎಂಟು ವರ್ಷಗಳ ನಂತರ ದರ ನಿಗದಿ ಸಮಿತಿಯ (ಎಫ್‌ಎಫ್‌ಸಿ) ಶಿಫಾರಸುಗಳ ಆಧಾರದ ಮೇಲೆ ನಮ್ಮ ಮೆಟ್ರೋವನ್ನು ನಿರ್ವಹಿಸುವ ಬಿಎಂಆರ್‌ಸಿಎಲ್ ದರಗಳನ್ನು ಪರಿಷ್ಕರಿಸಿದೆ. ದರ ಪರಿಷ್ಕರಣೆಯ ನಂತರ 60 ರೂ.ಗಳ ಹಿಂದಿನ ದರವೂ ಈಗ 90 ರೂ.ಗೆ ತಲುಪಿದೆ. ಬೆಂಗಳೂರು

0-2 ಕಿ.ಮೀ ವರೆಗಿನ ದೂರಕ್ಕೆ, ಪ್ರಯಾಣಿಕರು ಕನಿಷ್ಠ 10 ರೂ. ಪಾವತಿಸುವುದು ಮುಂದುವರಿಯಲಿದೆ. 2-4 ಕಿ.ಮೀ.ಗೆ, ದರವನ್ನು 20 ರೂ.ಗೆ ಮತ್ತು 4-6 ಕಿ.ಮೀ.ಗೆ 30 ರೂ.ಗೆ ಹೆಚ್ಚಿಸಲಾಗಿದೆ. 6-8 ಕಿ.ಮೀ.ಗೆ, ಪ್ರಯಾಣಿಕರು 40 ರೂ. ಪಾವತಿಸಬೇಕಾಗುತ್ತದೆ. 8-10 ಕಿ.ಮೀ. ಪ್ರಯಾಣಿಸುವವರು 50 ರೂ. ಪಾವತಿಸಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

10-15 ಕಿ.ಮೀ.ಗೆ ದರ 60 ರೂ., ಮತ್ತು 15-20 ಕಿ.ಮೀ.ಗೆ 70 ರೂ. 20-25 ಕಿ.ಮೀ.ಗೆ 80 ರೂ., ಮತ್ತು 25-30 ಕಿ.ಮೀ.ಗೆ 90 ರೂ. 30 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕೆ 90 ರೂ. ದರ ನಿಗದಿಪಡಿಸಲಾಗಿದೆ.

ಸ್ಮಾರ್ಟ್ ಕಾರ್ಡ್ ಬಳಕೆದಾರರಿಗೆ 5% ರಿಯಾಯಿತಿ ಮುಂದುವರಿಯುತ್ತದೆ. ಆಫ್-ಪೀಕ್ ಸಮಯದಲ್ಲಿ ಹೆಚ್ಚುವರಿ 5% ರಿಯಾಯಿತಿ ನೀಡಲಾಗುತ್ತದೆ. ಮಧ್ಯಾಹ್ನದಿಂದ ಸಂಜೆ 4 ಗಂಟೆಯವರೆಗೆ ಮತ್ತು ವಾರದ ದಿನಗಳಲ್ಲಿ ರಾತ್ರಿ 9 ಗಂಟೆಯ ನಂತರ ಪ್ರಯಾಣಿಸುವವರಿಗೆ ಒಟ್ಟು ರಿಯಾಯಿತಿ 10% ಕ್ಕೆ ಇಳಿಯುತ್ತದೆ.

ಇದಲ್ಲದೆ, ಸ್ಮಾರ್ಟ್ ಕಾರ್ಡ್ ಬಳಕೆದಾರರು ಭಾನುವಾರ ಮತ್ತು ರಾಷ್ಟ್ರೀಯ ರಜಾದಿನಗಳಾದ ಜನವರಿ 26, ಆಗಸ್ಟ್ 15 ಮತ್ತು ಅಕ್ಟೋಬರ್ 2 ರಂದು ದಿನವಿಡೀ 10% ರಿಯಾಯಿತಿಯನ್ನು ಪಡೆಯುತ್ತಾರೆ. ಆದಾಗ್ಯೂ, ಸ್ಮಾರ್ಟ್ ಕಾರ್ಡ್ ಬಳಕೆದಾರರು ಕನಿಷ್ಠ 90 ರೂ. (ಈ ಹಿಂದೆ ರೂ. 50 ಇರಬೇಕಾಗಿತ್ತು) ಬ್ಯಾಲೆನ್ಸ್ ಕಾಯ್ದುಕೊಳ್ಳಬೇಕಾಗಿದೆ. QR ಕೋಡ್‌ಗಳನ್ನು ಬಳಸುವವರಿಗೆ ರಿಯಾಯಿತಿ ಅನ್ವಯಿಸುವುದಿಲ್ಲ.

ಪ್ರವಾಸಿ ಮತ್ತು ಗುಂಪು ಟಿಕೆಟ್ ದರಗಳನ್ನು ಸಹ ಪರಿಷ್ಕರಿಸಲಾಗಿದ್ದು, ಒಂದು ದಿನದ ಪ್ರವಾಸಿ ಕಾರ್ಡ್ ಈಗ ರೂ. 300 ಆಗಿದ್ದರೆ, ಮೂರು ದಿನಗಳ ಕಾರ್ಡ್ ರೂ. 600 ಆಗಲಿದೆ. ಐದು ದಿನಗಳ ಪ್ರವಾಸಿ ಕಾರ್ಡ್ ರೂ. 800 ಆಗಲಿದೆ. ಗುಂಪು ಬುಕಿಂಗ್‌ಗಾಗಿ, ಪ್ರಯಾಣಿಕರು ಗುಂಪಿನ ಗಾತ್ರವನ್ನು ಆಧರಿಸಿ ರಿಯಾಯಿತಿಗಳನ್ನು ಪಡೆಯಲಿದ್ದಾರೆ. 25-99 ಗುಂಪುಗಳಿಗೆ 15% ರಿಯಾಯಿತಿ ಮತ್ತು 100-1,000 ಕ್ಕಿಂತ ಹೆಚ್ಚಿನ ಗುಂಪುಗಳಿಗೆ 20% ರಿಯಾಯಿತಿ ದೊರೆಯುತ್ತದೆ. 1,000 ಕ್ಕಿಂತ ಹೆಚ್ಚಿನ ಗುಂಪುಗಳಿಗೆ 25% ರಿಯಾಯಿತಿ ದೊರೆಯಲಿದೆ.

ಪ್ರಯಾಣ ದರ ಏರಿಕೆಗೆ ಪ್ರಯಾಣಿಕರ ಅಕ್ರೋಶ

“ಗುಂಪುಗಳಲ್ಲಿ ಪ್ರಯಾಣಿಸುವ ಜನರು (ಎರಡಕ್ಕಿಂತ ಹೆಚ್ಚು) ಈಗ ತಮ್ಮ ಕಾರು ಅಥವಾ ಕ್ಯಾಬ್‌ಗಳಲ್ಲಿ ಪ್ರಯಾಣ ಮಾಡುವುದು ಒಳ್ಳೆಯದು. ಯಾಕೆಂದರೆ ಮೆಟ್ರೋದಲ್ಲಿ ಅವರ ಒಟ್ಟು ಪ್ರಯಾಣ ದರವು ಒಂದೇ ಆಗಿರುತ್ತದೆ ಅಥವಾ ಅದಕ್ಕಿಂತ ಕಡಿಮೆ ಇರುತ್ತದೆ” ಎಂದು ಮೊಬಿಲಿಟಿ ತಜ್ಞ ಸಂಜೀವ್ ದ್ಯಾಮನ್ನವರ್ ಹೇಳಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯವನ್ನು ಒದಗಿಸುತ್ತಿರುವುದರ ಜೊತೆಗೆ ಮೆಟ್ರೋ ಪ್ರಯಾಣ ದರಗಳನ್ನು ಹೆಚ್ಚಿಸುತ್ತಿರುವುದರ ಬಗ್ಗೆ ಅವರು ಸರ್ಕಾರವನ್ನು ಟೀಕಿಸಿದ್ದಾರೆ.

ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿರುವ ಹಲವಾರು ಪ್ರಯಾಣಿಕರು ”ನಮ್ಮ ಮೆಟ್ರೋ”ವನ್ನು ಭಾರತದ ಅತ್ಯಂತ ದುಬಾರಿ ಮೆಟ್ರೋ ಸೇವೆ ಎಂದು ಕರೆದಿದ್ದಾರೆ.

ಯಶವಂತಪುರದಿಂದ ಬೈಯಪ್ಪನಹಳ್ಳಿಗೆ ಪ್ರತಿದಿನ ಪ್ರಯಾಣಿಸುವ ಐಟಿ ಉದ್ಯೋಗಿ ಮೇಘಾ ಪ್ರತಿಕ್ರಿಯಿಸಿ, “ಸಾರ್ವಜನಿಕ ಸಾರಿಗೆಯನ್ನು ಪ್ರೋತ್ಸಾಹಿಸುವ ಬದಲು, ‘ನಮ್ಮ ಮೆಟ್ರೋ’ವನ್ನು ಭವಿಷ್ಯದಲ್ಲಿ ಕಡಿಮೆ ಬಳಕೆ ಮಾಡುವಂತೆ ಮಾಡುತ್ತಿದೆ. ಅದಕ್ಕಾಗಿ ಶುಲ್ಕ ಪರಿಷ್ಕರಣಾ ಸಮಿತಿ ಶ್ರಮಿಸಿದೆ ಎಂದು ತೋರುತ್ತದೆ. ದರ ಏರಿಕೆಯನ್ನು ನಿರೀಕ್ಷಿಸಲಾಗಿತ್ತು, ಆದರೆ ಈ ಮಟ್ಟಿನ ಹೆಚ್ಚಳವನ್ನಲ್ಲ. ಈ ಹೆಚ್ಚಳವು ಅತಿಯಾಗಿದ್ದು, ಸಾಮಾನ್ಯ ಜನರಿಗೆ ಅದನ್ನು ಭರಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

“ಈ ಮಟ್ಟಿನ ದರ ಏರಿಕೆಯಾದರೆ ಜನಸಾಮಾನ್ಯರು ಏನು ಮಾಡಬೇಕು? ನಾವು ಮೆಟ್ರೋ ಬಳಸುವುದನ್ನು ನಿಲ್ಲಿಸುತ್ತೇವೆ. ಹೆಚ್ಚಿನ ಸಾಲ ಮರುಪಾವತಿಯ ಹೊರೆಯನ್ನು ರಾಜ್ಯ ಸರ್ಕಾರ ಹೊರಲಿ” ಎಂದು ಕಾರ್ಪೊರೇಟ್ ಸಂಸ್ಥೆಯ ಆಶಿಶ್ ಹೇಳಿದ್ದಾರೆ. ಈಗ ನಮಗೆ ಇರುವ ಏಕೈಕ ಮಾರ್ಗವೆಂದರೆ ಬಿಎಂಟಿಸಿ ಬಸ್‌ಗಳನ್ನು ಬಳಸುವುದು ಎಂದು ಅವರು ಹೇಳಿದ್ದಾರೆ.

ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್, ಪ್ರಯಾಣ ದರ ಏರಿಕೆಗೆ ಬಿಎಂಆರ್‌ಸಿಎಲ್ ಅನ್ನು ಟೀಕಿಸಿದ್ದು, ಇದು ಪ್ರಯಾಣಿಕರ ಮೇಲೆ ಹೊರೆಯಾಗಲಿದೆ ಎಂದು ಹೇಳಿದ್ದಾರೆ. ಈ ಮಟ್ಟಿನ ದರ ಏರಿಕೆಯು ಜನರು ಖಾಸಗಿ ವಾಹನಗಳತ್ತ ಹೊರಳುವಂತೆ ಮಾಡುತ್ತದೆ ಹಾಗೂ ಇದರಿಂದಾಗಿ ದಟ್ಟಣೆ ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ. “ಸಾರ್ವಜನಿಕ ಸಾರಿಗೆ ಕೈಗೆಟುಕುವ ದರದಲ್ಲಿರಬೇಕು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂಓದಿ:  ಸಮುದ್ರ ಗಡಿ ಉಲ್ಲಂಘನೆ | ಶ್ರೀಲಂಕಾ ನೌಕಾಪಡೆಯಿಂದ 14 ಭಾರತೀಯ ಮೀನುಗಾರರ ಬಂಧನ; ಸರಣಿ ಮುಂದುವರಿಕೆ

ಸಮುದ್ರ ಗಡಿ ಉಲ್ಲಂಘನೆ | ಶ್ರೀಲಂಕಾ ನೌಕಾಪಡೆಯಿಂದ 14 ಭಾರತೀಯ ಮೀನುಗಾರರ ಬಂಧನ; ಸರಣಿ ಮುಂದುವರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...