Homeಚಳವಳಿಕಳೆದ 6 ದಿನಗಳಿಂದ ರೈತ ನಾಯಕ ದಲ್ಲೆವಾಲ್‌ಗೆ ವೈದ್ಯಕೀಯ ನೆರವು ಸಾಧ್ಯವಾಗುತ್ತಿಲ್ಲ: ರೈತ ಸಂಘಟನೆಗಳು

ಕಳೆದ 6 ದಿನಗಳಿಂದ ರೈತ ನಾಯಕ ದಲ್ಲೆವಾಲ್‌ಗೆ ವೈದ್ಯಕೀಯ ನೆರವು ಸಾಧ್ಯವಾಗುತ್ತಿಲ್ಲ: ರೈತ ಸಂಘಟನೆಗಳು

- Advertisement -
- Advertisement -

ಇಂಟ್ರಾವೆನಸ್ ಡ್ರಿಪ್‌ಗಾಗಿ ರಕ್ತನಾಳಗಳನ್ನು ಪತ್ತೆ ಮಾಡಲು ವೈದ್ಯರಿಗೆ ಸಾಧ್ಯವಾಗದ ಕಾರಣ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರಿಗೆ ಕಳೆದ ಆರು ದಿನಗಳಿಂದ ವೈದ್ಯಕೀಯ ನೆರವು ನೀಡಲಾಗಿಲ್ಲ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಭಾನುವಾರ ತಿಳಿಸಿದೆ. ಕಳೆದ 6 ದಿನಗಳಿಂದ

ಪಂಜಾಬ್-ಹರಿಯಾಣ ಗಡಿಯಲ್ಲಿರುವ ಖಾನೌರಿಯಲ್ಲಿ ನವೆಂಬರ್ 26 ರಿಂದ ದಲ್ಲೆವಾಲ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ರೈತರ ಹಲವು ಬೇಡಿಕೆಯನ್ನು ಮುಂದಿಟ್ಟು ಕೇಂದ್ರ ಸರ್ಕಾರದ ವಿರುದ್ಧ ನಡೆಯುತ್ತಿರುವ ವ್ಯಾಪಕ ಅಭಿಯಾನದ ಭಾಗವಾಗಿ ಈ ಮುಷ್ಕರ ನಡೆಯುತ್ತಿದೆ. ಕನಿಷ್ಠ ಬೆಂಬಲ ಬೆಲೆ ಎಂದರೆ ಸರ್ಕಾರವು ರೈತರಿಂದ ಬೆಳೆಗಳನ್ನು ಖರೀದಿಸುವ ದರವಾಗಿದೆ. ಕಳೆದ 6 ದಿನಗಳಿಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಫೆಬ್ರವರಿ 14 ರಂದು ಪ್ರತಿಭಟನಾ ನಿರತ ರೈತರೊಂದಿಗೆ ಮಾತುಕತೆ ನಡೆಸುವುದಾಗಿ ಜನವರಿ 18 ರಂದು ಕೇಂದ್ರ ಸರ್ಕಾರ ಹೇಳಿತ್ತು. ಹಾಗಾಗಿ 70 ವರ್ಷದ ದಲ್ಲೆವಾಲ್ ಅವರು ವೈದ್ಯಕೀಯ ನೆರವು ಪಡೆಯಲು ಒಪ್ಪಿಕೊಂಡಿದ್ದರು. ಆದಾಗ್ಯೂ, ಕನಿಷ್ಠ ಬೆಂಬಲ ಬೆಲೆಯ ಕುರಿತು ಕಾನೂನುಬದ್ಧ ಖಾತರಿ ನೀಡುವವರೆಗೆ ತಮ್ಮ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ಪಂಜಾಬ್ ಸರ್ಕಾರವು ದಲ್ಲೆವಾಲ್ ಅವರ ಆರೋಗ್ಯದ ಹೊಣೆಯನ್ನು ಹೊರಬೇಕೆಂದು ಒತ್ತಾಯಿಸಿದ ನಂತರ ಇದು ನಡೆದಿತ್ತು.

ಕನಿಷ್ಠ ಬೆಂಬಲ ಬೆಲೆಗಳಿಗೆ ಕಾನೂನು ಖಾತರಿ ನೀಡುವುದರ ಜೊತೆಗೆ, ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ, ರೈತರು ಮತ್ತು ಕೃಷಿ ಕಾರ್ಮಿಕರಿಗೆ ಪಿಂಚಣಿ, ಕೃಷಿ ಸಾಲ ಮನ್ನಾ, 2013 ರ ಭೂಸ್ವಾಧೀನ ಕಾಯ್ದೆಯನ್ನು ಮರುಸ್ಥಾಪಿಸುವುದು ಮತ್ತು 2021ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕೆಂದು ರೈತರು ಒತ್ತಾಯಿಸುತ್ತಿದ್ದಾರೆ.

ಫೆಬ್ರವರಿ 2024 ರಿಂದ ಕೇಂದ್ರವು ಯಾವುದೇ ಮಾತುಕತೆ ನಡೆಸಿಲ್ಲ ಎಂದು ಹೇಳಿರುವ ರೈತ ಸಂಘಟನೆಗಳು, ಕೇಂದ್ರ ಸರ್ಕಾರವು ತಮ್ಮ ಬೇಡಿಕೆಗಳನ್ನು ಪರಿಹರಿಸಲು ಯಾವುದೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಆರೋಪಿಸಿದೆ. ಅಂದಿನಿಂದ, ಅವರು ದೆಹಲಿ ಬಳಿಯ ಶಂಭು ಮತ್ತು ಖಾನೌರಿ ಗಡಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾದ ನೇತೃತ್ವದ ಅಡಿಯಲ್ಲಿ ಬೀಡುಬಿಟ್ಟಿದ್ದಾರೆ.

ಪ್ರತಿಭಟನೆಗೆ ಒಂದು ವರ್ಷ ತುಂಬಿದ ನೆನಪಿಗಾಗಿ, ರೈತ ಗುಂಪುಗಳು ಫೆಬ್ರವರಿ 11 ರಂದು ರಾಜಸ್ಥಾನದ ರತನ್‌ಪುರ, ಫೆಬ್ರವರಿ 12 ರಂದು ಖಾನೌರಿ ರಾಜ್ಯ ಗಡಿಯಲ್ಲಿ ಮತ್ತು ಫೆಬ್ರವರಿ 13 ರಂದು ಶಂಭು ಗಡಿಯಲ್ಲಿ ಏಕತಾ ಸಭೆಗಳನ್ನು ಆಯೋಜಿಸುವುದಾಗಿ ಪ್ರಸ್ತಾಪಿಸಿವೆ.

ಇದನ್ನೂಓದಿ:  ಬಿಜೆಪಿಗೆ ಮಣಿಪುರ ಉರಿಯುತ್ತಿರಬೇಕು ಎಂದಿದೆ – ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಬಿಜೆಪಿಗೆ ಮಣಿಪುರ ಉರಿಯುತ್ತಿರಬೇಕು ಎಂದಿದೆ – ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...