Homeಮುಖಪುಟ"ಕುದುರೆ ಓಡಿಹೋದ ನಂತರ..." - ಬಿರೇನ್ ಸಿಂಗ್ ರಾಜೀನಾಮೆಗೆ ಕಾಂಗ್ರೆಸ್ ಪ್ರತಿಕ್ರಿಯೆ

“ಕುದುರೆ ಓಡಿಹೋದ ನಂತರ…” – ಬಿರೇನ್ ಸಿಂಗ್ ರಾಜೀನಾಮೆಗೆ ಕಾಂಗ್ರೆಸ್ ಪ್ರತಿಕ್ರಿಯೆ

- Advertisement -
- Advertisement -

ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ರಾಜೀನಾಮೆಯು “ಕುದುರೆ ಓಡಿಹೋದ ನಂತರ ಲಾಯದ ಬಾಗಿಲು ಮುಚ್ಚಿದಂತೆ” ಎಂದು ಕಾಂಗ್ರೆಸ್ ಭಾನುವಾರ ಹೇಳಿದ್ದು, ಜನಾಂಗೀಯ ಹಿಂಸಾಚಾರ ನಡೆದು 2 ವರ್ಷಗಳ ನಂತರ ತಡವಾಗಿ ರಾಜೀನಾಮೆ ನೀಡಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದೆ. “ಬಿಜೆಪಿಯು 21 ತಿಂಗಳ ಕಾಲ ಮಣಿಪುರದಲ್ಲಿ ಬೆಂಕಿ ಹಚ್ಚಿ, ಜನರ ಕೈಬಿಟ್ಟಿತು ಎಂಬ ವಿಚಾರ ಬಹಳ ನೋವಿನ ಸಂಗತಿ ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಈ ತಿರಸ್ಕಾರ ಮತ್ತು ನಿರಾಸಕ್ತಿಯ ನಿಜವಾದ ಅಪರಾಧಿ ಎಂದು ಖರ್ಗೆ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ. “ಮಣಿಪುರ ಭಾರತದ ಒಂದು ಭಾಗ ಎಂಬುದನ್ನು ಅವರು ಮರೆತಿದ್ದಾರೆ. ಅವರು ತಮ್ಮ ನೆನಪನ್ನು ಮರುಸ್ಥಾಪಿಸಿಕೊಂಡು ಭಾರತದ ನಕ್ಷೆಯಲ್ಲಿ ಮಣಿಪುರ ರಾಜ್ಯವನ್ನು ಗುರುತಿಸುವ ಸಮಯ ಬಂದಿದೆ!” ಎಂದು ಹೇಳಿದ್ದಾರೆ. ಕುದುರೆ ಓಡಿಹೋದ ನಂತರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರ ವಿಚಾರದಲ್ಲಿ ಮುಖ್ಯಮಂತ್ರಿಯು ಪಕ್ಷಪಾತದಿಂದ ಪ್ರತಿಕ್ರಿಯೆ ನೀಡುತ್ತಿದ್ದಾರೆ ಮತ್ತು ಅವರು ಬಹುಮತೀಯತೆಯನ್ನು ಪ್ರಚೋದಿಸಿದ್ದಾರೆ ಎಂದು ಕುಕಿ-ಜೋಮಿ-ಹ್ಮರ್ ಗುಂಪುಗಳು ನಿರಂತರ ಆರೋಪಿಸುತ್ತಲೆ ಬರುತ್ತಿದ್ದು, ಈ ನಡುವೆ ಭಾನುವಾರ ಸಂಜೆ ಮುಖ್ಯಮಂತ್ರಿ ಬಿರೇನ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮೇ 2023 ರಿಂದ ಮೈತೇಯಿ ಮತ್ತು ಕುಕಿ-ಜೋಮಿ-ಹ್ಮರ್ ಸಮುದಾಯಗಳ ನಡುವಿನ ಹಿಂಸಾಚಾರದಲ್ಲಿ ಕನಿಷ್ಠ 258 ಜನರು ಸಾವನ್ನಪ್ಪಿದ್ದು, 60 ಸಾವಿರಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ.

ರಾಜ್ಯದಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಿರೇನ್ ಸಿಂಗ್ ಅವರನ್ನು ದೂಷಿಸಿದ್ದು, “ಹೆಚ್ಚುತ್ತಿರುವ ಸಾರ್ವಜನಿಕ ಒತ್ತಡ, ಸುಪ್ರೀಂ ಕೋರ್ಟ್ ತನಿಖೆ ಮತ್ತು ಕಾಂಗ್ರೆಸ್‌ನ ಅವಿಶ್ವಾಸ ನಿರ್ಣಯದ ಪರಿಣಾಮವಾಗಿ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕಾಯಿತು” ಎಂದು ಪ್ರತಿಪಾದಿಸಿದ್ದಾರೆ.

ಮಣಿಪುರದಲ್ಲಿ ಶಾಂತಿಯನ್ನು ಪುನಃಸ್ಥಾಪಿಸುವುದು ಆದ್ಯತೆಯಾಗಿರಬೇಕು ಎಂದು ಒತ್ತಿಹೇಳಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ರಾಹುಲ್ ಗಾಂಧಿ, ಸಹಜಸ್ಥಿತಿ ಮರಳಿ ತರುವ ಯೋಜನೆಯನ್ನು ವಿವರಿಸುವಂತೆ ಪ್ರಧಾನಿಯನ್ನು ಕೇಳಿದ್ದಾರೆ.

ಸೋಮವಾರ ಮಣಿಪುರ ವಿಧಾನಸಭೆಯಲ್ಲಿ ತಮ್ಮ ಪಕ್ಷವು ಬಿರೇನ್ ಸಿಂಗ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಸಜ್ಜಾಗಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. ಪ್ರಧಾನಿ ಸಂಘರ್ಷ ಪೀಡಿತ ರಾಜ್ಯಕ್ಕೆ ಭೇಟಿ ನೀಡಬೇಕು ಎಂಬ ವಿರೋಧ ಪಕ್ಷದ ಬೇಡಿಕೆಯನ್ನು ಅವರು ಪುನರುಚ್ಚರಿಸಿದ್ದಾರೆ.

“ಮುಖ್ಯಮಂತ್ರಿಯ ರಾಜೀನಾಮೆ ತಡವಾಗಿ ಆಗಿದೆ” ಎಂದು ಹೇಳಿರುವ ಜೈರಾಮ್ ರಮೇಶ್, “ಮಣಿಪುರದ ಜನರು ಈಗ ಫ್ರಾನ್ಸ್ ಮತ್ತು ಅಮೆರಿಕಾಗೆ ತೆರಳಿರುವ ಹಾರುವ ಪ್ರಧಾನಿಯ ಭೇಟಿಗಾಗಿ ಕಾಯುತ್ತಿದ್ದಾರೆ. ಕಳೆದ ಇಪ್ಪತ್ತು ತಿಂಗಳುಗಳಿಂದ ಮಣಿಪುರಕ್ಕೆ ಹೋಗಲು ಅವರಿಗೆ ಸಮಯ ಅಥವಾ ಒಲವು ಸಿಗುತ್ತಿಲ್ಲ.” ಎಂದು ಹೇಳಿದ್ದಾರೆ.

21 ತಿಂಗಳ ಹಿಂದೆ ಹಿಂಸಾಚಾರ ಪ್ರಾರಂಭವಾದಾಗಿನಿಂದ, ಕುಕಿ-ಜೋಮಿ-ಹ್ಮರ್ ಗುಂಪುಗಳು ಸಂಘರ್ಷಕ್ಕೆ ಬಿರೇನ್ ಸಿಂಗ್ ಅವರ ಪಕ್ಷಪಾತದ ವರ್ತನೆ ಮತ್ತು ಬಹುಸಂಖ್ಯಾತ ನೀತಿಗಳೆ ಕಾರಣ ಎಂದು ಹೇಳಿದ್ದು, ಸಮುದಾಯವು ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸುತ್ತಿವೆ.

ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ನಡೆಸಲು ಬಿರೇನ್ ಸಿಂಗ್ ಅವರನ್ನು ಸಂಪರ್ಕಿಸಲಾಗಿತ್ತು ಎಂದು ಹೇಳಲಾದ ಆಡಿಯೋ ತುಣುಕುಗಳ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ಫೆಬ್ರವರಿ 3 ರಂದು ಸುಪ್ರೀಂ ಕೋರ್ಟ್ ಕೇಂದ್ರ ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯಕ್ಕೆ ಆದೇಶಿಸಿದೆ. ಕುಕಿ ಆರ್ಗನೈಸೇಶನ್ ಫಾರ್ ಹ್ಯೂಮನ್ ರೈಟ್ಸ್ ಟ್ರಸ್ಟ್‌ನ ಅರ್ಜಿಯ ಮೇರೆಗೆ ಈ ಆದೇಶವನ್ನು ಕೋರ್ಟ್‌ ನೀಡಿತ್ತು.

“ಸಂಘರ್ಷ ಹೇಗೆ ಮತ್ತು ಏಕೆ ಪ್ರಾರಂಭವಾಯಿತು” ಎಂಬುದಕ್ಕೆ ಮುಖ್ಯಮಂತ್ರಿಯೇ ಕಾರಣ ಎಂದು ಹೇಳುವ ಆಡಿಯೋ ರೆಕಾರ್ಡಿಂಗ್‌ಗಳ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಸಂಘಟನೆ ಕೋರಿತ್ತು.

ಅರ್ಜಿದಾರರನ್ನು ಪ್ರತಿನಿಧಿಸುವ ವಕೀಲ ಪ್ರಶಾಂತ್ ಭೂಷಣ್, ಸ್ವತಂತ್ರ ವಿಧಿವಿಜ್ಞಾನ ಪ್ರಯೋಗಾಲಯ ಟೇಪ್‌ಗಳನ್ನು ಪರಿಶೀಲಿಸಿವೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಧ್ವನಿಮುದ್ರಣಗಳಲ್ಲಿ ಕೇಳಿಬಂದ ಧ್ವನಿ ಮುಖ್ಯಮಂತ್ರಿಯವರದು ಎಂದು ಪ್ರಯೋಗಾಲಯವು 93% ಖಚಿತತೆಯೊಂದಿಗೆ ದೃಢಪಡಿಸಿದೆ ಎಂದು ಭೂಷಣ್ ಹೇಳಿದ್ದಾರೆ.

ಇದನ್ನೂಓದಿ:  ಪಂಜಾಬ್‌ ಎಎಪಿ ವಿಭಜನೆಯಾಗಲಿದೆ, 30 ಶಾಸಕರು ಸಂಪರ್ಕದಲ್ಲಿದ್ದಾರೆ : ಕಾಂಗ್ರೆಸ್

ಪಂಜಾಬ್‌ ಎಎಪಿ ವಿಭಜನೆಯಾಗಲಿದೆ, 30 ಶಾಸಕರು ಸಂಪರ್ಕದಲ್ಲಿದ್ದಾರೆ : ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...