Homeಮುಖಪುಟಸಂಘಟನೆಗೆ ಚಂದಾ ನೀಡದ ದೇವಾಲಯದ ಅರ್ಚಕರ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ದುಷ್ಕರ್ಮಿಗಳು

ಸಂಘಟನೆಗೆ ಚಂದಾ ನೀಡದ ದೇವಾಲಯದ ಅರ್ಚಕರ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ದುಷ್ಕರ್ಮಿಗಳು

- Advertisement -
- Advertisement -

ತಮ್ಮ ಸಂಘಟನೆಗೆ ಸ್ವಯಂಸೇವಕರನ್ನು ನೇಮಿಸಿಕೊಳ್ಳಲು ಮತ್ತು ಅವರ ಕಾರ್ಯಾಚರಣೆಗಳಿಗೆ ಆರ್ಥಿಕ ನೆರವು ನೀಡಲು ನಿರಾಕರಿಸಿದ ಕಾರಣಕ್ಕೆ ತೆಲಂಗಾಣದ ಚಿಲ್ಕೂರ್ ಬಾಲಾಜಿ ದೇವಾಲಯದ ಪ್ರಧಾನ ಅರ್ಚಕ ರಂಗನಾಥನ್ ಅವರ ಮೇಲೆ ತೀವ್ರ ಬಲಪಂಥೀಯ ಹಿಂದುತ್ವ ಗುಂಪು ಹಲ್ಲೆ ನಡೆಸಿದೆ ಎಂದು ಸೌತ್‌ ಫಸ್ಟ್‌ ವರದಿ ಮಾಡಿದೆ. ಸಂಘಟನೆಗೆ ಚಂದಾ ನೀಡದ

‘ರಾಮ ರಾಜ್ಯಂ’ ಎಂದು ಕರೆದುಕೊಳ್ಳುವ ಮತ್ತು ಪೌರಾಣಿಕ ಇಕ್ಷ್ವಾಕು ಕುಲದ ವಂಶಸ್ಥರು ಎಂದು ಹೇಳಿಕೊಳ್ಳುವ ದುಷ್ಕರ್ಮಿಗಳ ಗುಂಪು, ಹಿಂದೂ ಹೊಸ ವರ್ಷದ ವೇಳೆಗೆ ‘ರಾಮ ರಾಜ್ಯ’ದ ತಮ್ಮ ಕಾರ್ಯಕ್ರಮಕ್ಕೆ ಸಹಾಯ ಮಾಡಲು ಒತ್ತಾಯಿಸಿತ್ತು, ಅದಕ್ಕೆ ನಿರಾಕರಿಸಿದ್ದ ಅವರನ್ನು ಅವರ ನಿವಾಸದಲ್ಲೆ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಫೆಬ್ರವರಿ 7 ರಂದು ತೆಲಂಗಾಣದ ಮೊಯಿನಾಬಾದ್‌ನಲ್ಲಿ ಈ ದಾಳಿ ನಡೆದಿದೆ ಎಂದು ವರದಿ ಉಲ್ಲೇಖಿಸಿದೆ. ಸಂಘಟನೆಗೆ ಚಂದಾ ನೀಡದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಘಟನೆಯ ವೀಡಿಯೊ ರೆಕಾರ್ಡಿಂಗ್‌ನಲ್ಲಿ ದಾಳಿಕೋರರು ಅರ್ಚಕ ತಮ್ಮ “ಸೇನೆ”ಗೆ ಸ್ವಯಂಸೇವಕರನ್ನು ನೇಮಿಸಿಕೊಳ್ಳಲು ಮತ್ತು ಹಣಕಾಸಿನ ನೆರವು ನೀಡಲು ನಿರಾಕರಿಸಿದ ನಂತರ ಅವರನ್ನು ನಿಂದಿಸಿ ಹಲ್ಲೆ ನಡೆಸುತ್ತಿರುವುದನ್ನು ದಾಖಲಾಗಿದೆ. ಹಿಂದೂ ಸಂಪ್ರದಾಯ ಮತ್ತು ತಮ್ಮ ಗುಂಪಿನ ಗುರುತಿನ ಬಗ್ಗೆ ಅರ್ಚಕರಿಗೆ ಜ್ಞಾನವಿಲ್ಲ ಎಂದು ಆರೋಪಿಸಿ ಅವರು ಅವರನ್ನು ಕೆಣಕಿದ್ದಾರೆ.

“ಶ್ರೀ ಚಿಲ್ಕೂರು ಬಾಲಾಜಿ ದೇವತೆಯ ಅರ್ಚಕನೂ ಆಗಿರುವ ನನ್ನ ಮಗ ಶ್ರೀ ರಂಗರಾಜನ್ ಅವರನ್ನು ಅವರು ಗಂಭೀರವಾಗಿ ನಿಂದಿಸಿದರು. ನಮ್ಮ ಮನೆಯಲ್ಲೆ ಅವರಿಗೆ ಥಳಿಸಲಾಯಿತು ಎಂದು ರಂಗನಾಥನ್ ಅವರ ತಂದೆ ಸೌಂದರರಾಜನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೊಯಿನಾಬಾದ್ ಪೊಲೀಸರು ಸಂಘಟನೆಯ ನಾಯಕ ವೀರ ರಾಘವ ರೆಡ್ಡಿಯನ್ನು ಬಂಧಿಸಿದ್ದಾರೆ. “ಆರೋಪಿಯ ವಿರುದ್ಧ ಈ ಹಿಂದೆಯು ಪ್ರಕರಣ ದಾಖಲಾಗಿತ್ತು. ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಅದಕ್ಕೂ ಮೊದಲು ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಅವರ ಮೇಲೆ ಪ್ರಕರಣ ದಾಖಲಾಗಿತ್ತು” ಎಂದು ಪೊಲೀಸರು ಸೌತ್ ಫಸ್ಟ್‌ಗೆ ತಿಳಿಸಿದ್ದಾರೆ.

ಹಿಂದೂ ಮಹಾಕಾವ್ಯ ರಾಮಾಯಣದ ನಾಯಕನ ರಾಜ್ಯವಾದ ರಾಮರಾಜ್ಯವನ್ನು “ಪುನಃ ಸ್ಥಾಪಿಸುವ” ಉಗ್ರಗಾಮಿ ದೃಷ್ಟಿಕೋನವನ್ನು ಈ ಸಂಘಟನೆ ಪ್ರತಿಪಾದಿಸುತ್ತದೆ. “ದೇಶದ ಪ್ರಸ್ತುತ ಕ್ರಿಮಿನಲ್ ನ್ಯಾಯ ವ್ಯವಸ್ಥೆಗಳು ದುಷ್ಟವಾಗಿದ್ದು, ಅಶಿಸ್ತುಬದ್ಧವಾಗಿವೆ. ಅಲ್ಲದೆ, ಶ್ರೀಮಂತ ಅಪರಾಧಿಗಳನ್ನು ಮಾತ್ರ ರಕ್ಷಿಸುತ್ತಿವೆ ಮತ್ತು ಈ ಪ್ರಕ್ರಿಯೆಯಲ್ಲಿ ಯಾವುದೇ ಧರ್ಮವು ಕಂಡುಬರುವುದಿಲ್ಲ” ಎಂದು ಸಂಘಟನೆಯ ಕಿರುಪುಸ್ತಕ ಹೇಳುತ್ತದೆ ಎಂದು ವರದಿಯಾಗಿದೆ.

ಈ ಗುಂಪು ಪ್ರತ್ಯೇಕ ನಾಗರಿಕ ವ್ಯವಸ್ಥೆ, ಸೈನ್ಯ ಮತ್ತು ಕಾನೂನು ತಂಡವನ್ನು ರೂಪಿಸುತ್ತದೆ. ಅವರ ವೆಬ್‌ಸೈಟ್ ಜಾತಿ ಪ್ರಾಬಲ್ಯವನ್ನು ಉತ್ತೇಜಿಸುವ ವೀಡಿಯೊಗಳನ್ನು ಒಳಗೊಂಡಿದ್ದು, ರಾಮಾಯಣ ಮತ್ತು ಭಗವದ್ಗೀತೆಯ ವ್ಯಾಖ್ಯಾನಗಳ ಮೂಲಕ ಇಕ್ಷ್ವಾಕುಗಳನ್ನು ವಿಶ್ವ ಮಾಲೀಕರೆಂದು ಘೋಷಿಸುತ್ತದೆ. ತಮ್ಮ ಮಾರ್ಗಗಳನ್ನು ಬದಲಾಯಿಸದ ನ್ಯಾಯಾಧೀಶರ, ನಾಗರಿಕರ ಬಂಧನ ಮಾಡುವುದಾಗಿ ಅವರು ಬೆದರಿಕೆ ಹಾಕುತ್ತಾರೆ.

ದುಷ್ಟರನ್ನು ಶಿಕ್ಷಿಸುವುದು, ಗೋವುಗಳನ್ನು ರಕ್ಷಿಸುವುದು, ಇಕ್ಷ್ವಾಕು ಮತ್ತು ಭರತ ಕುಲಗಳಿಗೆ ಸೇರಿದ ಭೂಮಿಯನ್ನು ಮರಳಿ ಪಡೆಯುವುದು, ದೇವಾಲಯದ ಆಸ್ತಿಗಳನ್ನು ಮರಳಿ ಪಡೆಯುವುದು ಮತ್ತು ಆರು ಹಿಂದೂ ಪಂಗಡಗಳಿಗೆ ಸೇರಿದ ಭೂಮಿಯನ್ನು ಮರಳಿ ಪಡೆಯುವುದು ಅವರ ಉದ್ದೇಶಗಳಲ್ಲಿ ಸೇರಿವೆ. ಗುಂಪಿನ ಚಟುವಟಿಕೆಗಳ ಸಂಪೂರ್ಣ ವ್ಯಾಪ್ತಿಯನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಸೌತ್ ಫಸ್ಟ್‌ ವರದಿ ಮಾಡಿದೆ.

ಇದನ್ನೂಓದಿ:  ಪಂಜಾಬ್‌ ಎಎಪಿ ವಿಭಜನೆಯಾಗಲಿದೆ, 30 ಶಾಸಕರು ಸಂಪರ್ಕದಲ್ಲಿದ್ದಾರೆ : ಕಾಂಗ್ರೆಸ್

ಪಂಜಾಬ್‌ ಎಎಪಿ ವಿಭಜನೆಯಾಗಲಿದೆ, 30 ಶಾಸಕರು ಸಂಪರ್ಕದಲ್ಲಿದ್ದಾರೆ : ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...