ಹಿಂದುತ್ವ ದುಷ್ಕರ್ಮಿ ಯತಿ ನರಸಿಂಹಾನಂದ ಅವರ ಬಗ್ಗೆ ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ಅವರ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ಸೋಮವಾರ ತಡೆಯಾಜ್ಞೆ ವಿಸ್ತರಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೈರ್
ನ್ಯಾಯಮೂರ್ತಿಗಳಾದ ಸಿದ್ಧಾರ್ಥ ವರ್ಮಾ ಮತ್ತು ಯೋಗೇಂದ್ರ ಕುಮಾರ್ ಶ್ರೀವಾಸ್ತವ ಅವರ ಪೀಠವು ಫೆಬ್ರವರಿ 17 ರವರೆಗೆ ಈ ವಿಷಯದಲ್ಲಿ ಬಂಧನದಿಂದ ಜುಬೇರ್‌ಗೆ ನೀಡಿದ್ದ ಮಧ್ಯಂತರ ರಕ್ಷಣೆಯನ್ನು ವಿಸ್ತರಿಸಿದೆ. ನರಸಿಂಗಾನಂದ ಅವರ ಬಗ್ಗೆ ಪೋಸ್ಟ್ ಹಾಕುವುದರೊಂದಿಗೆ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಆರೋಪದ ಮೇಲೆ ಜುಬೈರ್ ವಿರುದ್ಧ ಅಕ್ಟೋಬರ್ 7 ರಂದು ಪ್ರಕರಣ ದಾಖಲಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ದಸ್ನಾ ದೇವಿ ದೇವಸ್ಥಾನದ ಅರ್ಚಕರಾಗಿರುವ ನರಸಿಂಹಾನಂದ ಸೆಪ್ಟೆಂಬರ್ 29 ರಂದು ಉಪನ್ಯಾಸದ ಸಂದರ್ಭದಲ್ಲಿ ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು ವರದಿಯಾಗಿದೆ. ಇದರ ನಂತರ ಭಾರತದ ಹಲವಾರು ನಗರಗಳಲ್ಲಿ ಮುಸ್ಲಿಂ ಗುಂಪುಗಳು ಪ್ರತಿಭಟನೆ ನಡೆಸಿದ್ದವು. ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೈರ್
ಅಕ್ಟೋಬರ್ 3 ರಂದು, ಜುಬೈರ್ ಅವರು ಎಕ್ಸ್‌ನಲ್ಲಿ ಭಾಷಣದ ವೀಡಿಯೊವನ್ನು ಹಂಚಿಕೊಂಡಿದ್ದರು ಮತ್ತು ನರಸಿಂಹಾನಂದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು. ಇದರ ನಂತರ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಮುಸ್ಲಿಮರನ್ನು ಗುರಿಯಾಗಿಸಿಕೊಂಡು ದ್ವೇಷ ಭಾಷಣ ಮಾಡಿದ್ದಕ್ಕಾಗಿ ನರಸಿಂಗಾನಂದರ ವಿರುದ್ಧ ಈ ಹಿಂದೆ ಹಲವಾರು ಎಫ್‌ಐಆರ್ ದಾಖಲಿಸಲಾಗಿದೆ.
ತಮ್ಮ ವಿರುದ್ಧ ಎಫ್‌ಐಆರ್ ದಾಖಲಾದ ನಂತರ ಬಂಧನದಿಂದ ರಕ್ಷಣೆ ಕೋರಿ ಜುಬೈರ್ ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದರ ನಂತರ ಡಿಸೆಂಬರ್ 20 ರಂದು, ನ್ಯಾಯಾಲಯವು ಜನವರಿ 6 ರವರೆಗೆ ಬಂಧನದಿಂದ ಮಧ್ಯಂತರ ರಕ್ಷಣೆಯನ್ನು ನೀಡಿತ್ತು. ಈ ವೇಳೆ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ “ಭಯಾನಕ ಅಪರಾಧಿ” ಅಲ್ಲ ಎಂದು ಕೋರ್ಟ್ ಹೇಳಿದ್ದು, ಅವರು ದೇಶ ಬಿಟ್ಟು ಹೊರ ಹೋಗದಂತೆಯೂ ನಿರ್ದೇಶಿಸಲಾಗಿತ್ತು.
ಇದನ್ನೂಓದಿ: ಎಎಪಿ-ಕಾಂಗ್ರೆಸ್ ಪರಸ್ಪರ ಕಿತ್ತಾಟ ಮುಂದುವರಿಸುವುದಾದರೆ ಇಂಡಿಯಾ ಒಕ್ಕೂಟದ ಅಗತ್ಯವೇನಿದೆ? ಶಿವಸೇನೆ (ಯುಬಿಟಿ) ಕಿಡಿ
ಎಎಪಿ-ಕಾಂಗ್ರೆಸ್ ಪರಸ್ಪರ ಕಿತ್ತಾಟ ಮುಂದುವರಿಸುವುದಾದರೆ ಇಂಡಿಯಾ ಒಕ್ಕೂಟದ ಅಗತ್ಯವೇನಿದೆ? ಶಿವಸೇನೆ (ಯುಬಿಟಿ) ಕಿಡಿ


