ರಾಷ್ಟ್ರ ರಾಜಧಾನಿಯ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನಂತರ ಪಂಜಾಬ್ ಎಎಪಿ ಘಟಕವು ವಿಭಜನೆಯಾಗಲಿದೆ ಎಂಬ ತೀವ್ರ ಊಹಾಪೋಹಗಳ ನಡುವೆ, ಪಕ್ಷ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮಂಗಳವಾರ ದೆಹಲಿಯಲ್ಲಿ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಸಂಪುಟದ ಸಚಿವರು ಮತ್ತು ಶಾಸಕರೊಂದಿಗೆ ಸಭೆ ಕರೆದಿದ್ದಾರೆ. ದೆಹಲಿ ಹಿನಾಯ ಸೋಲು
ಈ ನಡುವೆ, ಕನಿಷ್ಠ 30 ಎಎಪಿ ಸದಸ್ಯರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ಪಂಜಾಬ್ ಕಾಂಗ್ರೆಸ್ ಹೇಳಿಕೊಂಡಿದೆ. ಜೊತೆಗೆ ಕೇಜ್ರಿವಾಲ್ ಅವರು ಪಂಜಾಬ್ ಸಿಎಂ ಮಾನ್ ಅವರನ್ನು ಬದಲಿಸಲು ಪ್ರಯತ್ನಗಳನ್ನು ನಡೆಸುತ್ತಿದ್ದಾರೆ ಮತ್ತು ಪಂಜಾಬ್‌ನಿಂದ ರಾಜ್ಯಸಭೆಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ, ಪಕ್ಷದ ಕಾರ್ಯತಂತ್ರವನ್ನು ಚರ್ಚಿಸಲು ಈ ಸಭೆಯನ್ನು ಕರೆಯಲಾಗಿದೆ ಎಎಪಿ ಸ್ಪಷ್ಟಪಡಿಸಿದೆ.
ಈ ಎಲ್ಲಾ ಊಹಾಪೋಹಗಳ ನಡುವೆ, ಪಂಜಾಬ್‌ನ ಏಳು ಸಂಸದರಲ್ಲಿ ಒಬ್ಬರು ರಾಜೀನಾಮೆ ನೀಡಿ ಕೇಜ್ರಿವಾಲ್ ರಾಜ್ಯಸಭೆ ಪ್ರವೇಶ ಮಾಡಲಿದ್ದಾರೆ ಎಂಬ ವದಂತಿಗಳು ಹರಡಿವೆ. ದೆಹಲಿ ಹಿನಾಯ ಸೋಲು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಮಂಗಳವಾರ ತಮ್ಮ ಎಲ್ಲಾ ನಿಗದಿತ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಪಂಜಾಬ್ ಮುಖ್ಯಮಂತ್ರಿಯ ಅಧಿಕೃತ ನಿವಾಸವಾದ ಕಪುರ್ತಲಾ ಹೌಸ್‌ನಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸುವಂತೆ ಪಂಜಾಬ್ ಶಾಸಕರಿಗೆ ಸೂಚಿಸಲಾಗಿದೆ. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬೀಡುಬಿಟ್ಟಿದ್ದ ಮಾನ್ ಭಾನುವಾರ ಮಧ್ಯಾಹ್ನ ಚಂಡೀಗಢಕ್ಕೆ ಬಂದಿದ್ದಾರೆ. ಸೋಮವಾರ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ಫೆಬ್ರವರಿ 13 ಕ್ಕೆ ಮುಂದೂಡಲಾಗಿದೆ.
ಈ ಸಭೆಯ ಕಾರ್ಯಸೂಚಿ ತಿಳಿದಿಲ್ಲ, ಆದರೆ ಕೇಜ್ರಿವಾಲ್ ಶಾಸಕರಿಗೆ “ಆಮ್ ಆದ್ಮಿ” ಜೊತೆ ಮತ್ತೆ ಸಂಪರ್ಕ ಸಾಧಿಸಲು “ಆತ್ಮ ಸಮಾಲೋಚನಾ ಸಭೆ” ಮಾಡುವ ಸಾಧ್ಯತೆ ಇದೆ. ಪಂಜಾಬ್‌ನ ಕೆಲವು ಶಾಸಕರು ನಾಯಕತ್ವದ ಬಗ್ಗೆ ಅತೃಪ್ತರಾಗಿದ್ದು, ಪಕ್ಷ ಬದಲಾಯಿಸುವುದನ್ನು ಪರಿಗಣಿಸಲಿದ್ದಾರೆ ಎಂಬ ವರದಿಗಳ ನಡುವೆ ದೆಹಲಿಯಲ್ಲಿ ನಡೆಯಲಿರುವ ಸಭೆಯೂ ಮಹತ್ವ ಬಂದಿದೆ.
ಈ ನಡುವೆ, ಪಂಜಾಬ್ ರಾಜಕೀಯದಲ್ಲಿ ಕೇಜ್ರಿವಾಲ್ ನೇರವಾಗಿ ಪಾತ್ರ ವಹಿಸಲಿದ್ದಾರೆ ಎಂಬ ಊಹಾಪೋಹಗಳು ಹರಡಿವೆ. ಲುಧಿಯಾನ (ಪಶ್ಚಿಮ) ವಿಧಾನಸಭಾ ಸ್ಥಾನ ಖಾಲಿಯಾಗಿರುವುದರಿಂದ, ಕೇಜ್ರಿವಾಲ್ ಅಲ್ಲಿಂದ ಸ್ಪರ್ಧಿಸಿ ಪಂಜಾಬ್ ಸರ್ಕಾರದ ಭಾಗವಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಈ ನಡುವೆ, ಪಂಜಾಬ್‌ನಲ್ಲಿ ಎಎಪಿ ಮೇಲೆ ಬಿಜೆಪಿ ತನ್ನ ದಾಳಿಯನ್ನು ತೀವ್ರಗೊಳಿಸಿದ್ದು, “ಮಾನ್ ಅವರ ಸರ್ಕಾರಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ” ಎಂದು ಪಕ್ಷದ ನಾಯಕರೊಬ್ಬರು ಹೇಳಿಕೊಂಡಿದ್ದಾರೆ. ರಾಜೌರಿ ಗಾರ್ಡನ್‌ನ ಬಿಜೆಪಿ ಶಾಸಕ ಮಂಜಿಂದರ್ ಸಿಂಗ್ ಸಿರ್ಸಾ ಇದೇ ರೀತಿಯ ಹೇಳಿಕೆ ನಿಡಿದ್ದು, ಕೇಜ್ರಿವಾಲ್ ಅವರು ಪಂಜಾಬ್ ಸಿಎಂ ಮಾನ್ ಅವರನ್ನು ಬದಿಗಿಡಲಿದ್ದಾರೆ ಎಂದು ಸೂಚಿಸಿದರು.
“ಚುನಾವಣೆಯಲ್ಲಿ ಸೋತ ನಂತರ, ಕೇಜ್ರಿವಾಲ್ ಅವರು ದೆಹಲಿಯಲ್ಲಿ ಪಂಜಾಬ್ ಶಾಸಕರ ಸಭೆಯನ್ನು ಕರೆದಿದ್ದಾರೆ. ಸಿಎಂ ಮಾನ್ ಅವರನ್ನು ಅಸಮರ್ಥ ಎಂದು ಹಣೆಪಟ್ಟಿ ಕಟ್ಟುವ ಮೂಲಕ ಅವರು ಮಾನ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಗಳು ಸೂಚಿಸುತ್ತವೆ” ಎಂದು ಅವರು ಹೇಳಿದ್ದಾರೆ.


