Homeಮುಖಪುಟಭಾರತದಲ್ಲಿ ಅಲ್ಪಸಂಖ್ಯಾತ ವಿರೋಧಿ ದ್ವೇಷ ಭಾಷಣ 2024ರಲ್ಲಿ 74% ಹೆಚ್ಚಳ!

ಭಾರತದಲ್ಲಿ ಅಲ್ಪಸಂಖ್ಯಾತ ವಿರೋಧಿ ದ್ವೇಷ ಭಾಷಣ 2024ರಲ್ಲಿ 74% ಹೆಚ್ಚಳ!

ಮೋದಿ, ಅಮಿತ್ ಶಾ ಮತ್ತು ಆದಿತ್ಯನಾಥ್ ಪ್ರಮುಖರು!

- Advertisement -
- Advertisement -

ಭಾರತದಲ್ಲಿ ಅಲ್ಪಸಂಖ್ಯಾತ ವಿರೋಧಿ ದ್ವೇಷ ಭಾಷಣವು ಹಿಂದಿನ ವರ್ಷಕ್ಕೆ ಹೋಲಿಸಿದರೆ 2024 ರಲ್ಲಿ 74.4% ರಷ್ಟು ಹೆಚ್ಚಾಗಿದೆ ಎಂದು ವಾಷಿಂಗ್ಟನ್ ಡಿಸಿ ಮೂಲದ ಸಂಶೋಧನಾ ಸಂಸ್ಥೆಯಾದ ‘ಇಂಡಿಯಾ ಹೇಟ್ ಲ್ಯಾಬ್’ ಸೋಮವಾರ ಪ್ರಕಟಿಸಿದ ಅಧ್ಯಯನ ಹೇಳಿದೆ. ‘ಭಾರತದಲ್ಲಿ ಸಾಮಾಜಿಕ ಮಾಧ್ಯಮ ಮತ್ತು ದ್ವೇಷ ಭಾಷಣ’ ಎಂಬ ಅಧ್ಯಯನದಲ್ಲಿ ಕಳೆದ ವರ್ಷ ದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ಮುಖ್ಯವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡು 1,165 ದ್ವೇಷ ಭಾಷಣದ ಪ್ರಕರಣಗಳನ್ನು ಅದು ದಾಖಲಿಸಿದೆ.

“ದ್ವೇಷ ಭಾಷಣವು 2023 ಕ್ಕಿಂತ 74.4% ಹೆಚ್ಚಳವನ್ನು ಸೂಚಿಸುತ್ತದೆ. 2023ರಲ್ಲಿ 668 ಇಂತಹ ಘಟನೆಗಳು ದಾಖಲಾಗಿತ್ತು. 2024ರಲ್ಲಿ ವರದಿಯಾದ ಪ್ರಕಗಣಗಳಲ್ಲಿ 1,147 (98.5%) ಭಾಷಣಗಳು ಮುಸ್ಲಿಮರನ್ನು ಗುರಿಯಾಗಿಸಿಕೊಂಡವು.” ಎಂದು ಅಧ್ಯಯನ ಹೇಳಿದೆ. ಭಾರತದಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದ್ವೇಷ ಭಾಷಣವನ್ನು ಹೆಚ್ಚಾಗಿ ಹರಡುವ 10 ಜನರಲ್ಲಿ ಆರು ಜನರು ರಾಜಕಾರಣಿಗಳಾಗಿದ್ದಾರೆ ಎಂದು ವರದಿಯು ಹೇಳಿದೆ. ದ್ವೇಷ ಭಾಷಣ ಹರಡುವ ಪ್ರಮುಖದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದ್ದಾರೆ.

ಒಟ್ಟು ದ್ವೇಷ ಭಾಷಣಗಳಲ್ಲಿ ಆದಿತ್ಯನಾಥ್ 86 (7.4%) ದ್ವೇಷ ಭಾಷಣ ಘಟನೆಗಳಿಗೆ ಕಾರಣರಾಗಿದ್ದಾರೆ. ಪ್ರಧಾನಿ ಮೋದಿ 67 ಭಾಷಣಗಳನ್ನು ನೀಡಿದ್ದು, ಇದು 2024 ರ ದ್ವೇಷ ಭಾಷಣಗಳ ಪೈಕಿ 5.7% ದಷ್ಟು ಪಾಲನ್ನು ಹೊಂದಿದೆ ಎಂದು ವರದಿ ಹೇಳಿದೆ.

2024 ರಲ್ಲಿ ಭಾರತದಲ್ಲಿ ಪರಿಶೀಲಿಸಿದ ವೈಯಕ್ತಿಕ ದ್ವೇಷ ಭಾಷಣ ಘಟನೆಗಳ ಪ್ರಸಾರ ಮತ್ತು ವರ್ಧಿಸುವಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆಗಳ ಪಾತ್ರವನ್ನು ಅಧ್ಯಯನವು ವಿಶ್ಲೇಷಿಸಿದೆ. ವರದಿಯು ರಾಜಕೀಯ ರ್ಯಾಲಿಗಳು, ಚುನಾವಣಾ ಪ್ರಚಾರ ಕಾರ್ಯಕ್ರಮಗಳು, ಧಾರ್ಮಿಕ ಮೆರವಣಿಗೆಗಳು ಮತ್ತು ಪ್ರತಿಭಟನಾ ಮೆರವಣಿಗೆಗಳಂತಹ ವಿವಿಧ ರೀತಿಯ ಸಾರ್ವಜನಿಕ ಸಭೆಗಳನ್ನು ಈ ವಿಶ್ಲೇಷಣೆ ಒಳಗೊಂಡಿದೆ.

ದ್ವೇಷ ಭಾಷಣ ದಾಖಲಾದ 931 ಅಥವಾ 79.9% ಘಟನೆಗಳು ಬಿಜೆಪಿ ಆಡಳಿತದ ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆದಿವೆ ಎಂದು ವರದಿ ಹೇಳಿದೆ. “ದತ್ತಾಂಶವು ರಾಜಕೀಯ ನಿಯಂತ್ರಣ ಮತ್ತು ದ್ವೇಷ ಭಾಷಣದ ಹರಡುವಿಕೆಯ ನಡುವಿನ ಬಲವಾದ ಸಂಬಂಧವನ್ನು ಸೂಚಿಸುತ್ತದೆ” ಎಂದು ಸಂಶೋಧನೆ ಹೇಳಿದೆ.

ವಿರೋಧ ಪಕ್ಷದ ಆಡಳಿತವಿರುವ ರಾಜ್ಯಗಳಲ್ಲಿ 2024 ರಲ್ಲಿ 234 ಅಥವಾ 20% ರಷ್ಟು ದ್ವೇಷ ಭಾಷಣ ಘಟನೆಗಳು ದಾಖಲಾಗಿವೆ ಎಂದು ಅದು ಹೇಳಿದೆ.

“ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ಅತಿ ಹೆಚ್ಚು ದ್ವೇಷ ಭಾಷಣ ಘಟನೆಗಳನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿವೆ. ಒಟ್ಟಾರೆಯಾಗಿ 2024 ರಲ್ಲಿ ದಾಖಲಾದ ಎಲ್ಲಾ ಘಟನೆಗಳಲ್ಲಿ 47% ರಷ್ಟಿದೆ” ಎಂದು ಅಧ್ಯಯನ ಹೇಳಿದೆ.

“ಬಿಜೆಪಿ ಸ್ವತಃ ಅತಿ ಹೆಚ್ಚು ಆಯೋಜಕನಾಗಿದ್ದು, 340 ದ್ವೇಷ ಭಾಷಣ ಘಟನೆಗಳಿಗೆ ಅದು ಕಾರಣವಾಗಿದೆ. ಈ ಘಟನೆಗಳು ಹೆಚ್ಚಾಗಿ ಮಾರ್ಚ್ ಮತ್ತು ಜೂನ್ ನಡುವಿನ ಸಾರ್ವತ್ರಿಕ ಚುನಾವಣೆಗಳು ಹಾಗೂ ಜಾರ್ಖಂಡ್ ಮತ್ತು ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಗಳ ಸಮಯದಲ್ಲಿ ನಡೆದಿದೆ. ಇದು 2023 ಕ್ಕಿಂತ 580% ರಷ್ಟು ಹೆಚ್ಚಳವಾಗಿದೆ.” ಎಂದು ವರದಿ ಹೇಳಿದೆ.

ಅಲ್ಪಸಂಖ್ಯಾತ ವಿರೋಧಿ ದ್ವೇಷ ಭಾಷಣವು ಆಕಸ್ಮಿಕವಾಗಿ ನಡೆದಿಲ್ಲ, ಬದಲಾಗಿ ಇವುಗಳು ಉದ್ದೇಶಪೂರ್ವಕ ಮಾದರಿಯನ್ನು ಅನುಸರಿಸಿದೆ ಎಂದು ವರದಿ ತೋರಿಸಿದೆ ಎಂದು ಇಂಡಿಯಾ ಹೇಟ್ ಲ್ಯಾಬ್ ಅನ್ನು ನಡೆಸುತ್ತಿರುವ ಥಿಂಕ್ ಟ್ಯಾಂಕ್ ಸೆಂಟರ್ ಫಾರ್ ದಿ ಸ್ಟಡಿ ಆಫ್ ಆರ್ಗನೈಸ್ಡ್ ಹೇಟ್‌ನ ಕಾರ್ಯನಿರ್ವಾಹಕ ಹೇಳಿದ್ದಾರೆ.

2024 ರ ಲೋಕಸಭಾ ಚುನಾವಣೆಗಳ ಪ್ರಚಾರದ ಸಮಯದಲ್ಲಿ ಪ್ರಧಾನಿ ಮೋದಿ 110 ಭಾಷಣಗಳಲ್ಲಿ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಹ್ಯೂಮನ್ ರೈಟ್ಸ್ ವಾಚ್‌ನ ಆಗಸ್ಟ್ ವರದಿಯಲ್ಲಿ ಹೇಳಲಾಗಿತ್ತು. “ಕನಿಷ್ಠ 110 ಭಾಷಣಗಳಲ್ಲಿ, ಪ್ರಧಾನಿ ಮೋದಿ ರಾಜಕೀಯ ವಿರೋಧವನ್ನು ದುರ್ಬಲಗೊಳಿಸುವ ಉದ್ದೇಶದಿಂದ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ್ದಾರೆ. ಅವರ ಈ ಹೇಳಿಕೆಯು ತಪ್ಪು ಮಾಹಿತಿಯ ಮೂಲಕ ಬಹುಸಂಖ್ಯಾತ ಹಿಂದೂ ಸಮುದಾಯದಲ್ಲಿ ಭಯವನ್ನು ಬೆಳೆಸುತ್ತದೆ ಎಂದು ಅವರು ಹೇಳಿದರು” ಎಂದು ಈ ವರದಿ ಹೇಳಿತ್ತು.

ಇದನ್ನೂಓದಿ:  ಅಲಿಗಢ ವಿಶ್ವವಿದ್ಯಾಲಯ ಬಿರಿಯಾನಿ ವಿವಾದ; ಹಲವರ ವಿರುದ್ಧ ಎಫ್‌ಐಆರ್ ದಾಖಲು

ಅಲಿಗಢ ವಿಶ್ವವಿದ್ಯಾಲಯ ಬಿರಿಯಾನಿ ವಿವಾದ; ಹಲವರ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...