Homeಮುಖಪುಟಭಿನ್ನಮತದ ವದಂತಿ ನಡುವೆ ಪಂಜಾಬ್ ಸಿಎಂ, ಶಾಸಕರೊಂದಿಗೆ ಕೇಜ್ರಿವಾಲ್ ಮಹತ್ವದ ಸಭೆ

ಭಿನ್ನಮತದ ವದಂತಿ ನಡುವೆ ಪಂಜಾಬ್ ಸಿಎಂ, ಶಾಸಕರೊಂದಿಗೆ ಕೇಜ್ರಿವಾಲ್ ಮಹತ್ವದ ಸಭೆ

- Advertisement -
- Advertisement -

ಪಕ್ಷದ ಪಂಜಾಬ್ ಘಟಕದಲ್ಲಿ ಭಿನ್ನಮತದ ವದಂತಿಗಳ ನಡುವೆ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ (ಫೆ.11) ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಸಚಿವರು ಮತ್ತು ಶಾಸಕರೊಂದಿಗೆ ದೆಹಲಿಯ ಕಪುರ್ತಲಾ ಹೌಸ್‌ನಲ್ಲಿ ಸಭೆ ನಡೆಸಿದ್ದಾರೆ.

ಪಕ್ಷದ ನಾಯಕರ ಪ್ರಕಾರ, ಇತ್ತೀಚೆಗೆ ನಡೆದ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿಯ ಸೋತಿರುವ ಕುರಿತು ಪರಾಮರ್ಶೆ ನಡೆಸಲು ಮತ್ತು 2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಯೋಜನೆ ರೂಪಿಸುವ ಬಗ್ಗೆ ಚರ್ಚೆಸಲು ಸಭೆ ನಡೆಸಲಾಗಿದೆ. ಪಂಜಾಬ್‌ ಸಂಸದರಾದ ರಾಘವ್ ಚಡ್ಡಾ ಮತ್ತು ಸಂದೀಪ್ ಪಾಠಕ್ ಸೇರಿದಂತೆ ಹಿರಿಯ ನಾಯಕರು ಸಭೆಯಲ್ಲಿ ಭಾಗವಹಿಸಿದ್ದಾರೆ.

ಪಂಜಾಬ್‌ನ ಸಂಗ್ರೂರ್ ಶಾಸಕಿ ನರಿಂದರ್ ಕೌರ್ ಅವರು ಎಎಪಿಯೊಳಗಿನ ಆಂತರಿಕ ಭಿನ್ನಾಭಿಪ್ರಾಯದ ವರದಿಗಳನ್ನು ತಳ್ಳಿಹಾಕಿದ್ದಾರೆ. ಇಂದಿನದ್ದು ಪಕ್ಷದ ಸಾಮಾನ್ಯ ಸಭೆ ಎಂದಿದ್ದಾರೆ. “ನಾವು ದೆಹಲಿಯ ಜನಾದೇಶವನ್ನು ಸ್ವೀಕರಿಸುತ್ತೇವೆ ಮತ್ತು ಬಲವಾದ ವಿರೋಧ ಪಕ್ಷವಾಗಿ ನಮ್ಮ ಪಾತ್ರ ನಿರ್ವಹಿಸುತ್ತೇವೆ. ಪಂಜಾಬ್ ಮತ್ತು ದೆಹಲಿಯಲ್ಲಿ ಇಂತಹ ಸಭೆಗಳು ಈ ಹಿಂದೆಯೂ ನಡೆದಿವೆ” ಎಂದು ಹೇಳಿದ್ದಾರೆ.

ಎಎಪಿಯಲ್ಲಿ ಭಿನ್ನಾಭಿಪ್ರಾಯವಿದೆ ಎಂಬ ಕಾಂಗ್ರೆಸ್‌ನ ಹೇಳಿಕೆಯನ್ನು ಕೌರ್ ವಿರೋಧಿಸಿದ್ದಾರೆ. “ಇಷ್ಟು ವರ್ಷಗಳ ಕಾಲ ಆಡಳಿತ ನಡೆಸಿದ ತಮ್ಮ ಪಕ್ಷಕ್ಕೆ ದೆಹಲಿಯಲ್ಲಿ ಶೂನ್ಯ ಸ್ಥಾನಗಳು ಏಕೆ ಬಂದವು ಎಂಬುವುದನ್ನು ಕಾಂಗ್ರೆಸ್ ಪರಾಮರ್ಶಿಸಲಿ. ನಮ್ಮ ಪಕ್ಷವನ್ನು ನಾವು ನೋಡಿಕೊಳ್ಳುತ್ತೇವೆ” ಎಂದಿದ್ದಾರೆ.

ಒಂದು ದಶಕದ ಕಾಲ ದೆಹಲಿಯನ್ನು ಆಳಿದ್ದ ಎಎಪಿ, ಫೆಬ್ರವರಿ 8ರಂದು ಪ್ರಕಟಗೊಂಡ ಚುನಾವಣಾ ಫಲಿತಾಂಶದಲ್ಲಿ 70 ವಿಧಾನಸಭಾ ಸ್ಥಾನಗಳಲ್ಲಿ ಕೇವಲ 22 ಮಾತ್ರ ಗೆಲ್ಲುವ ಮೂಲಕ ಭಾರೀ ಹಿನ್ನಡೆ ಅನುಭವಿಸಿದೆ. ಬಿಜೆಪಿಯ ಗೆಲುವು ರಾಜಧಾನಿಯಲ್ಲಿ ಎಎಪಿಯ ದಶಕದ ಆಡಳಿತವನ್ನು ಕೊನೆಗೊಳಿಸಿದೆ. ಪಕ್ಷದ ಭವಿಷ್ಯದ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ.

ದೆಹಲಿಯಲ್ಲಿ ಎಎಪಿಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರೇ ಸೋಲನುಭವಿಸಿದ್ದಾರೆ. ಹಾಗಾಗಿ, ಅವರು ಪಂಜಾಬ್ ಮೂಲಕ ಮುಂದಿನ ರಾಜಕೀಯ ಅಧಿಕಾರ ಹಿಡಿಯುವ ಸಾಧ್ಯತೆ ಇದೆ. ಖಾಲಿ ಇರುವ ಲುಧಿಯಾನ ವಿಧಾನಸಭಾ ಕ್ಷೇತ್ರದಿಂದ ಅವರು ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಆದರೆ, ಎಎಪಿ ಸಂಸದ ಮಲ್ವಿಂದರ್ ಸಿಂಗ್ ಕಾಂಗ್ ಅವರು ಈ ವರದಿಗಳನ್ನು ತಳ್ಳಿ ಹಾಕಿದ್ದಾರೆ. ಇಂದಿನ ಸಭೆಯನ್ನು ಪಕ್ಷದ ನಿಯಮಿತ ಕಾರ್ಯತಂತ್ರದ ಭಾಗ ಎಂದಿದ್ದಾರೆ.

ದೆಹಲಿಯಲ್ಲಿ ಸೋತ ಬಳಿಕ ಪಂಜಾಬ್‌ನಲ್ಲಿ ಮಾತ್ರ ಎಎಪಿ ಆಡಳಿತವಿದ್ದು, ಇಂದಿನ ಸಭೆಯ ಫಲಿತಾಂಶವು ಪಕ್ಷದ ಭವಿಷ್ಯದ ದೃಷ್ಟಿಯಲ್ಲಿ ಮಹತ್ವದ್ದು ಎನ್ನಲಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ “ದೆಹಲಿ ಮಾದರಿ” ತಿರಸ್ಕರಿಸಲ್ಪಟ್ಟ ನಂತರ, ಎಎಪಿ ಈಗ ಅಧಿಕಾರದಲ್ಲಿರುವ ಏಕೈಕ ರಾಜ್ಯದಲ್ಲಿ ತನ್ನ ಕಾರ್ಯಕ್ಷಮತೆಯನ್ನು ಸುಧಾರಿಸಲು “ಪಂಜಾಬ್-ನಿರ್ದಿಷ್ಟ ಅಭಿವೃದ್ಧಿ ಮಾದರಿ”ಯನ್ನು ರೂಪಿಸಬೇಕಾಗುತ್ತದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಪಂಜಾಬ್‌ನ ಒಟ್ಟು 117 ವಿಧಾನಸಭಾ ಸ್ಥಾನಗಳ ಪೈಕಿ 92 ಸ್ಥಾನಗಳನ್ನು ಗೆಲ್ಲುವ ಮೂಲಕ 2022ರಲ್ಲಿ ಎಎಪಿ ಅಧಿಕಾರ ಹಿಡಿದಿತ್ತು. “ದೆಹಲಿ ಅಭಿವೃದ್ಧಿ ಮಾದರಿ”ಯನ್ನು ಮುಂದಿಟ್ಟುಕೊಂಡು ಪಕ್ಷವು ಪಂಜಾಬ್ ಚುನಾವಣೆ ಗೆದ್ದಿತ್ತು.

ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಪಂಜಾಬ್ ಸಿಎಂ ಭಗವಂತ್ ಮಾನ್, ಅವರ ಸಂಪುಟದ ಸಚಿವರು, ಸಂಸದರು ಮತ್ತು ಶಾಸಕರು ಸೇರಿದಂತೆ ಎಎಪಿಯ ಸಂಪೂರ್ಣ ಪಂಜಾಬ್ ಘಟಕವು ದೆಹಲಿಯಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರಗಳಲ್ಲಿ ಸಕ್ರಿಯವಾಗಿ ಭಾಗವಹಿಸಿತ್ತು. ಪಂಜಾಬ್‌ನಲ್ಲಿ ತಾವು ಮಾಡಿದ ಕೆಲಸಗಳ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದ ಮಾನ್ ಅವರು, ದೆಹಲಿಯಲ್ಲಿ ರೋಡ್‌ಶೋಗಳನ್ನು ನಡೆಸಿ ಮತ ಕೇಳಲು ತಮ್ಮ ಸರ್ಕಾರದ ಕೆಲಸಗಳನ್ನು ಹೇಳಿಕೊಂಡಿದ್ದರು.

ದೆಹಲಿಯಲ್ಲಿ ಎಎಪಿ ಸೋಲಿನ ನಂತರ, ಪಂಜಾಬ್‌ನ ವಿರೋಧ ಪಕ್ಷಗಳು ಆಡಳಿತ ಪಕ್ಷವನ್ನು ಟೀಕಿಸತೊಡಗಿವೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿಯ ಸುಳ್ಳು ಮತ್ತು ವಂಚನೆಯನ್ನು ಜನರು ಬಹಿರಂಗಪಡಿಸಿದ್ದಾರೆ ಎಂದು ಹೇಳುತ್ತಿವೆ. ಪಂಜಾಬ್‌ನಲ್ಲಿ ಭಗವಂತ್ ಮಾನ್ ಸರ್ಕಾರ ಕೂಡ ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ವಂಚಿಸಿದೆ ಎಂದು ಆರೋಪಿಸುತ್ತಿವೆ.

ಪಂಜಾಬ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿದೆ, ಹೆಚ್ಚುತ್ತಿರುವ ಸಾಲ ಮತ್ತು ಮಾದಕವಸ್ತು ಪಿಡುಗು ಸೇರಿದಂತೆ ಹಲವಾರು ವಿಷಯಗಳ ಕುರಿತು ವಿರೋಧ ಪಕ್ಷಗಳು ಎಎಪಿ ಸರ್ಕಾರವನ್ನು ಗುರಿಯಾಗಿಸಿಕೊಂಡಿವೆ.

ದೆಹಲಿಯಲ್ಲಿ ಸೋಲಿನ ನಂತರ, ಪಂಜಾಬ್‌ನಲ್ಲಿ ಪಕ್ಷವನ್ನು ಬಲಪಡಿಸುವುದು ಮತ್ತು ರಾಜ್ಯದಲ್ಲಿ ಅದರ ಕಾರ್ಯಕ್ಷಮತೆಯನ್ನು ಸುಧಾರಿಸುವುದು ಈಗ ಎಎಪಿ ಮುಂದಿರುವ ಸವಾಲು ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮತಗಳನ್ನು ಹಾಳು ಮಾಡಲು ಕಾಂಗ್ರೆಸ್‌ಗೆ ಅಸಾಧ್ಯ – ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...