Homeಮುಖಪುಟದೆಹಲಿಯಲ್ಲಿ ನಿಮ್ಮ ಶಾಸಕರನ್ನು ಎಣಿಸಿ - ಕಾಂಗ್ರೆಸ್‌ಗೆ ಪಂಜಾಬ್ ಸಿಎಂ

ದೆಹಲಿಯಲ್ಲಿ ನಿಮ್ಮ ಶಾಸಕರನ್ನು ಎಣಿಸಿ – ಕಾಂಗ್ರೆಸ್‌ಗೆ ಪಂಜಾಬ್ ಸಿಎಂ

- Advertisement -
- Advertisement -

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮಂಗಳವಾರ ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿದ್ದು, ರಾಜ್ಯದಲ್ಲಿ ಸುಮಾರು 30 ಆಮ್ ಆದ್ಮಿ ಪಕ್ಷದ ನಾಯಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಪಕ್ಷದ ನಾಯಕ ಪ್ರತಾಪ್ ಸಿಂಗ್ ಬಾಜ್ವಾ ಅವರ ಹೇಳಿಕೆಯನ್ನು ತಳ್ಳಿಹಾಕಿದ್ದಾರೆ. “ಕಳೆದ ಮೂರು ವರ್ಷಗಳಿಂದ ಬಾಜ್ವಾ ಅದೇ ಹೇಳಿಕೆಯನ್ನು ನೀಡುತ್ತಿದ್ದಾರೆ ಮತ್ತು ಅವರು ಅದನ್ನು ಹೇಳಿಕೊಳ್ಳುತ್ತಲೇ ಇರಬಹುದು” ಎಂದು ಅವರು ಹೇಳಿದ್ದಾರೆ. ದೆಹಲಿಯಲ್ಲಿ

“30-40 ಶಾಸಕರು ಕಾಂಗ್ರೆಸ್‌ ಪಕ್ಷಕ್ಕೆ ಹಾರಲಿದ್ದಾರೆ ಎಂದು ಅವರು ಹೇಳುತ್ತಲೇ ಇದ್ದಾರೆ… ದೆಹಲಿಯಲ್ಲಿ ಅವರಿಗೆ ಎಷ್ಟು ಶಾಸಕರಿದ್ದಾರೆ ಎಂದು ಎಣಿಸಲು ನಾನು ಪ್ರತಾಪ್ ಸಿಂಗ್ ಬಾಜ್ವಾ ಅವರನ್ನು ಕೇಳುತ್ತೇನೆ” ಎಂದು ಅವರು ವ್ಯಂಗ್ಯವಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಫೆಬ್ರವರಿ 5 ರಂದು ನಡೆದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಹೀನಾಯ ಸೋಲಿನ ಕೆಲವೇ ದಿನಗಳ ನಂತರ, ಕಾಂಗ್ರೆಸ್ ಪಕ್ಷವೂ ಎಎಪಿಯ 30 ಶಾಸಕರೊಂದಿಗೆ ಸಂಪರ್ಕದಲ್ಲಿ ಇದೆ ಎಂದು ಹೇಳಿತ್ತು. ಇದರ ನಂತರ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಸಿಎಂ ಮಾನ್ ಅವರು ಸಭೆ ನಡೆಸಿದ್ದಾರೆ. ಈ ಸಭೆಯ ನಂತರ ಮುಖ್ಯಮಂತ್ರಿ ಹೇಳಿಕೆ ನೀಡಿದ್ದಾರೆ.

ಕಪುರ್ತಲಾ ಹೌಸ್‌ನಲ್ಲಿ ನಡೆದ ಸಭೆಯಲ್ಲಿ ಎಲ್ಲಾ 91 ಪಂಜಾಬ್ ಎಎಪಿ ಶಾಸಕರು ಮತ್ತು ದೆಹಲಿಯ ಮಾಜಿ ಸಚಿವ ಮನೀಶ್ ಸಿಸೋಡಿಯಾ ಸೇರಿದಂತೆ ಪಕ್ಷದ ಉನ್ನತ ನಾಯಕರು ಭಾಗವಹಿಸಿದ್ದರು. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾನ್, ಕೇಜ್ರಿವಾಲ್ ಮತ್ತು ಸಿಸೋಡಿಯಾ ದೆಹಲಿ ಚುನಾವಣೆಗೆ ನೀಡಿದ ಕೊಡುಗೆಗಳಿಗಾಗಿ ಪಂಜಾಬ್‌ನ ಎಎಪಿ ಘಟಕಕ್ಕೆ ಕೃತಜ್ಞತೆ ಸಲ್ಲಿಸಿದ್ದು, ಧನ್ಯವಾದಗಳನ್ನು ಅರ್ಪಿಸಿದ್ದಾರೆ ಎಂದು ಹೇಳಿದ್ದಾರೆ.

“ಪಂಜಾಬ್‌ನಲ್ಲಿ ಎಎಪಿ ಸರ್ಕಾರವು ಮೂಲಸೌಕರ್ಯಗಳನ್ನು ನಿರ್ಮಿಸಲು ಮತ್ತು ರಾಜ್ಯದಲ್ಲಿ ಟೋಲ್‌ಗಳ ಹೊರೆಯನ್ನು ಕಡಿಮೆ ಮಾಡಲು ಕೆಲಸ ಮಾಡುತ್ತಿದೆ. ನಾವು ನಮ್ಮ ಕೆಲಸವನ್ನು ಚುರುಕುಗೊಳಿಸಬೇಕಾಗಿದೆ. ದೆಹಲಿಯಲ್ಲಿ ಎಎಪಿ ಕೈಗೊಂಡ ಕೆಲಸವು ಕಳೆದ 75 ವರ್ಷಗಳಲ್ಲಿ ಎಂದಿಗೂ ಮಾಡಲಾಗಿಲ್ಲ. ಗೆಲುವು ಮತ್ತು ಸೋಲು ಆಟದ ಭಾಗವಾಗಿದೆ” ಎಂದು ಅವರು ಹೇಳಿದ್ದಾರೆ.

“ಪಂಜಾಬ್‌ನಲ್ಲಿ ದೆಹಲಿಯ ಅನುಭವವನ್ನು ನಾವು ಬಳಸುತ್ತೇವೆ. ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ. ನಮ್ಮ ಪಕ್ಷವು ತನ್ನ ಕೆಲಸಕ್ಕೆ ಹೆಸರುವಾಸಿಯಾಗಿದೆ. ಇಂದಿನ ಸಭೆಯಲ್ಲಿ, ಮುಂಬರುವ ಎರಡು ವರ್ಷಗಳಲ್ಲಿ, ಪಂಜಾಬ್ ಅನ್ನು ಇಡೀ ರಾಷ್ಟ್ರವು ನೋಡುವ ಮಾದರಿಯನ್ನಾಗಿ ಮಾಡುತ್ತೇವೆ ಎಂದು ನಿರ್ಧರಿಸಲಾಯಿತು. ಪಂಜಾಬ್ ಯಾವಾಗಲೂ ಎಲ್ಲಾ ಹೋರಾಟಗಳಲ್ಲಿ ಮುಂಚೂಣಿಯಲ್ಲಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಪ್ರಸ್ತುತ, ಆಮ್ ಆದ್ಮಿ ಪಕ್ಷ (ಎಎಪಿ) ಅಧಿಕಾರದಲ್ಲಿರುವ ಏಕೈಕ ರಾಜ್ಯ ಪಂಜಾಬ್ ಆಗಿದೆ. ಪಂಜಾಬ್‌ನಲ್ಲಿ 2022 ರ ವಿಧಾನಸಭಾ ಚುನಾವಣೆಯಲ್ಲಿ, ಎಎಪಿ 117 ಸ್ಥಾನಗಳಲ್ಲಿ 92 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್‌ನಿಂದ ಅಧಿಕಾರವನ್ನು ಕಸಿದುಕೊಂಡಿತು. ಕಾಂಗ್ರೆಸ್ 18 ಸ್ಥಾನಗಳನ್ನು ಗೆದ್ದರೆ, ಶಿರೋಮಣಿ ಅಕಾಲಿ ದಳವು ಮೂವರು ಶಾಸಕರನ್ನು ಹೊಂದಿದೆ.

ಇದನ್ನೂಓದಿ:  ಮಣಿಪುರ ಹಿಂಸಾಚಾರಕ್ಕೆ ಬಿರೇನ್ ಸಿಂಗ್ ಮಾತ್ರವಲ್ಲ, ಮೋದಿ, ಅಮಿತ್ ಶಾ ಕೂಡಾ ಕಾರಣ – ಡಿಎಂಕೆ ಸಂಸದೆ ಕನಿಮೊಳಿ

ಮಣಿಪುರ ಹಿಂಸಾಚಾರಕ್ಕೆ ಬಿರೇನ್ ಸಿಂಗ್ ಮಾತ್ರವಲ್ಲ, ಮೋದಿ, ಅಮಿತ್ ಶಾ ಕೂಡಾ ಕಾರಣ – ಡಿಎಂಕೆ ಸಂಸದೆ ಕನಿಮೊಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...