Homeಕರ್ನಾಟಕಆನೇಕಲ್| ಕೆರೆಯಲ್ಲಿ ಮುಳುಗಿ ಯುವತಿ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ

ಆನೇಕಲ್| ಕೆರೆಯಲ್ಲಿ ಮುಳುಗಿ ಯುವತಿ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ

- Advertisement -
- Advertisement -

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹುಸ್ಕೂರು ಕೆರೆಯಲ್ಲಿ ಯುವತಿಯೋರ್ವಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದು, ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

ಯುವತಿ ಹಾಗೂ ಆಕೆಯ ತಂದೆ ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಬೈಕ್ ಕೆರೆಗೆ ಉರುಳಿದೆ. ತಂದೆ ರಾಮಮೂರ್ತಿ ಈಜಿ ದಡ ಸೇರಿದ್ದಾರೆ. ಆದರೆ ಮಗಳು ಸಹನಾ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾಳೆ ಎಂದು ಅವರು  ಹೆಬ್ಬಗೋಡಿ ಪೊಲೀಸ್‌ ಠಾಣೆಗೆ ಹಾಜರಾಗಿ ತಿಳಿಸಿದ್ದಾರೆ.

ತಂದೆ ರಾಮಮೂರ್ತಿ ಕೆರೆಯಲ್ಲಿ ಮುಳುಗುತ್ತಿದ್ದ ಮಗಳನ್ನು ರಕ್ಷಿಸದೆ, ದೂರು ನೀಡಲು ಠಾಣೆಗೆ ಆಗಮಿಸಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಆದರೆ, ಆಕೆಯ ಪ್ರಿಯಕರ ನಿತಿನ್ ಇದೊಂದು ಮರ್ಯಾದಾ ಹತ್ಯೆ ಎಂದು ಆರೋಪಿಸಿದ್ದಾರೆ. ಪ್ರಸ್ತುತ, ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಒಂದು ವರ್ಷದಿಂದ ನಿತಿನ್ ಮತ್ತು 21 ವರ್ಷದ ಸಹನಾ ಪರಸ್ಪರ ಪ್ರೀತಿಸುತ್ತಿದ್ದರು. ಎರಡು ದಿನದ ಹಿಂದೆ ಪೋಷಕರಿಗೆ ಮಗಳ ಪ್ರೀತಿಯ ವಿಚಾರ ಗೊತ್ತಾಗಿದೆ. ಅಂದು ರಾತ್ರಿ ಪ್ರಿಯಕರ ನಿತಿನ್​ಗೆ ಕರೆ ಮಾಡಿದ್ದ ಸಹನಾ ತಂದೆ, ಬೆಳಗ್ಗೆ ಮಾತುಕತೆಗೆ ಬರುವಂತೆ ತಿಳಿಸಿದ್ದಾರೆ. ಸಹನಾ ತಂದೆ ಸ್ನೇಹಿತನ ಮನೆಯಲ್ಲಿ ನ್ಯಾಯ ಪಂಚಾಯಿತಿ ನಡೆದಿದೆ. ಈ ವೇಳೆ ಪುತ್ರಿ ಮೇಲೆ ರಾಮಮೂರ್ತಿ ಹಲ್ಲೆ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಈ ಪ್ರೀತಿಗೆ ಒಪ್ಪುವುದಿಲ್ಲ ಎಂದು ಅವರು ಖಡಕ್‌ ಆಗಿ ತಿಳಿಸಿದ್ದಾರೆ.

ನಿತಿನ್‌ ತಾಯಿ ಮನವಿ ಮಾಡಿದರೂ ಯುವತಿಯ ತಂದೆ ಮದುವೆಗೆ ಒಪ್ಪಿಲ್ಲ. ಅಂತಿಮವಾಗಿ ಎರಡು ದಿನ ಸಮಯ ಕೇಳಿದ್ದಾರೆ. ಇಂದು ಮಗಳನ್ನು ರಾಮಮೂರ್ತಿ ಬೈಕ್‌ ನಲ್ಲಿ ಕರೆದೊಯ್ದಿದ್ದು, ಮಾರ್ಗಮಧ್ಯೆ ಪುತ್ರಿ ಸಹನಾರನ್ನು ರಾಮಮೂರ್ತಿ ಕೆರೆಗೆ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ದೂರಿನ ನಂತರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಸದ್ಯ ಯುವತಿ ಸಾವಿನ ಸುತ್ತ ಅನುಮಾನ ಕಾಡುತ್ತಿದೆ. ಆಕಸ್ಮಿಕವಾಗಿ ಕೆರೆಗೆ ಬಿದ್ದರೇ ಅಥವಾ ಅಪ್ಪನೇ ಕೆರೆಗೆ ತಳ್ಳಿದರೇ ಎಂಬ ಅನುಮಾನ ಕಾಡುತ್ತಿದೆ. ನಿತಿನ್​ನನ್ನೇ ಮದುವೆಯಾಗುವುದಾಗಿ ಯುವತಿ ಹಠ ಹಿಡಿದಿದ್ದಳು. ಆದರೆ, ಪೋಷಕರು ಅಕ್ಕನ ಮಗನ ಜೊತೆ ವಿವಾಹಕ್ಕೆ ಮುಂದಾಗಿದ್ದರು. ಇದೇ ವಿಚಾರಕ್ಕೆ ಅಪ್ಪ ಮಗಳ ನಡುವೆ ಜೋರು ಗಲಾಟೆ ನಡೆದಿತ್ತು ಎಂದು ತಿಳಿದು ಬಂದಿದೆ.

ಇದನ್ನೂ ಒದಿ; ಮಹಾರಾಷ್ಟ್ರ | 17 ಆದಿವಾಸಿಗಳನ್ನು ಕೂಡಿ ಹಾಕಿ ಜೀತದಾಳುಗಳಂತೆ ಕಬ್ಬಿನ ಗದ್ದೆಯಲ್ಲಿ ದುಡಿಯುವಂತೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...

ಬಿಜೆಪಿ ಆಡಳಿತದಲ್ಲಿ 151 ಅಂಬೇಡ್ಕರ್ ಪ್ರತಿಮೆಗಳ ಧ್ವಂಸ: ಅಖಿಲೇಶ್ ಯಾದವ್ ಆರೋಪ

ಉತ್ತರ ಪ್ರದೇಶದಲ್ಲಿ ಬಿಜೆಪಿ ಆಡಳಿತದ ಅವಧಿಯಲ್ಲಿ 72 ಜಿಲ್ಲೆಗಳಲ್ಲಿ ಬಾಬಾಸಾಹೇಬ್ ಬಿ.ಆರ್. ಅಂಬೇಡ್ಕರ್ ಅವರ 151 ಪ್ರತಿಮೆಗಳನ್ನು ಧ್ವಂಸಗೊಳಿಸಲಾಗಿದೆ. ಆದರೆ ಈವರೆಗೆ ಕೇವಲ 14 ಮಂದಿಯನ್ನು ಮಾತ್ರ ಬಂಧಿಸಲಾಗಿದೆ ಎಂದು ಸಮಾಜವಾದಿ ಪಕ್ಷದ...

ಜಾತಿ ತಾರತಮ್ಯ ಹಿಂದೂ ಸಮಾಜಕ್ಕಂಟಿದ ‘ಕಳಂಕ’: ಆರ್‌ಎಸ್‌ಎಸ್ ಮುಖಂಡ ದತ್ತಾತ್ರೇಯ ಹೊಸಬಾಳೆ

"ಜಾತಿ ಆಧಾರಿತ ತಾರತಮ್ಯವು ಹಿಂದೂ ಸಮಾಜಕ್ಕಂಟಿದ ಕಳಂಕ, ಕೇವಲ ಕಾನೂನುಗಳಿಂದ ಜಾತೀಯತೆ ಮತ್ತು ಅಸ್ಪೃಶ್ಯತೆಯನ್ನು ಕೊನೆಗೊಳಿಸಲು ಸಾಧ್ಯವಿಲ್ಲ, ಇದಕ್ಕೆ ಪ್ರತಿಯೊಬ್ಬ ವ್ಯಕ್ತಿಯ ನಡವಳಿಕೆಯಲ್ಲಿ ಬದಲಾವಣೆಯಾಗುವ ಅಗತ್ಯವಿದೆ" ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌)...

ಎಸ್‌ಐಆರ್‌ನ ಮೂರು ಹಂತಗಳಲ್ಲಿ 13.98 ಕೋಟಿ ಮತದಾರರು ಹೊರಕ್ಕೆ; 5.43 ಕೋಟಿ ಮತದಾರರಿಗೆ ಅಳಿಸುವಿಕೆಯ ಭೀತಿ: ಕಾಂಗ್ರೆಸ್ 

ನವದೆಹಲಿ: ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ದೇಶದ ಕೋಟ್ಯಂತರ ಮತದಾರರ ಹಕ್ಕಿನ ಮೇಲೆ ಪರಿಣಾಮ ಬೀರುತ್ತಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. SIRನ...

ಧರ್ಮಸ್ಥಳ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಸೋಮವಾರ (ಸೆ.21) ಆದೇಶಿಸಿದೆ. ಈ ಪ್ರಕರಣದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮೂರು ತಿಂಗಳೊಳಗೆ ಅನುಪಾಲನಾ ವರದಿಯನ್ನು (compliance report)...

1,400 ಮುಸ್ಲಿಂ ಕುಟುಂಬಗಳ ಬದುಕು ಕಸಿದುಕೊಂಡ ಭೂಮಿಯಲ್ಲಿ ಅದಾನಿ ವಿದ್ಯುತ್ ಯೋಜನೆಗೆ ಹಿಮಂತ್ ಬಿಸ್ವಾ ಶರ್ಮಾ ನೇತೃತ್ವದಲ್ಲಿ ಅಡಿಪಾಯ

ಗುವಾಹಟಿ: ಅಸ್ಸಾಂನ ಧುಬ್ರಿ ಜಿಲ್ಲೆಯಲ್ಲಿ ಸುಮಾರು 1,400 ಬಂಗಾಳಿ ಮೂಲದ ಮುಸ್ಲಿಂ ಕುಟುಂಬಗಳನ್ನು ತೆರವುಗೊಳಿಸಿ, ಅವರ ಮನೆಗಳನ್ನು ನೆಲಸಮಗೊಳಿಸಿದ ಪ್ರದೇಶದಲ್ಲೇ ಅದಾನಿ ಪವರ್ ಲಿಮಿಟೆಡ್‌ನ 3,200 ಮೆಗಾವ್ಯಾಟ್ ಸಾಮರ್ಥ್ಯದ ಉಷ್ಣ ವಿದ್ಯುತ್ ಯೋಜನೆಗೆ...

ಮಧುಗಿರಿ: ಗಣೇಶೋತ್ಸವದಲ್ಲಿ ಕುಣಿದಿದ್ದಕ್ಕೆ 17 ವರ್ಷದ ದಲಿತ ಬಾಲಕನ ಕೊಲೆ

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದಕ್ಕೆ ಆಕ್ಷೇಪಿಸಿ ದಲಿತ ಸಮುದಾಯದ17 ವರ್ಷದ ಬಾಲಕ ಸಿಂಹಾದ್ರಿಯನ್ನು ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ. ಘಟನೆಯ...

DELHI SIR : ಕರಡು ಪಟ್ಟಿಯಲ್ಲಿ 2024ರಲ್ಲಿ ನಿಧನರಾದ ಅರ್ಥಶಾಸ್ತ್ರಜ್ಞ ಬಿಬೇಕ್ ದೆಬ್ರಾಯ್ ಹೆಸರು!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಬೆಳಕಿಗೆ ಬರುತ್ತಿವೆ. ಇತ್ತೀಚಿನ ವರದಿಗಳ ಪ್ರಕಾರ, 2024ರಲ್ಲಿ ನಿಧನರಾದ ಪದ್ಮ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಬಿಬೆಕ್ ದೆಬ್ರಾಯ್ ಅವರ...

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...