2022 ರಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಸೇನೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಲಕ್ನೋ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ಪಿಟಿಐ ಮಂಗಳವಾರ ವರದಿ ಮಾಡಿದೆ. ಮಾರ್ಚ್ 24 ರಂದು ನಡೆಯುವ ಮುಂದಿನ ವಿಚಾರಣೆಯ ಸಮಯದಲ್ಲಿ ಅವರು ಹಾಜರಿರುವಂತೆ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅಲೋಕ್ ವರ್ಮಾ ನಿರ್ದೇಶನ ನೀಡಿದ್ದಾರೆ. ಸೇನೆಯ ಅವಹೇಳನ
ಡಿಸೆಂಬರ್ 9, 2022 ರಂದು ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ವಾಸ್ತವ ನಿಯಂತ್ರಣ ರೇಖೆಯ ಉದ್ದಕ್ಕೂ ಭಾರತ ಮತ್ತು ಚೀನಾದ ಸೇನೆಗಳ ನಡುವಿನ ಘರ್ಷಣೆಯ ಕುರಿತು ಡಿಸೆಂಬರ್ 16, 2022 ರಂದು ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದರು. ಆಡಳಿತಾರೂಢ ಬಿಜೆಪಿಯ ವಿಭಜಕ ನೀತಿಗಳ ವಿರುದ್ಧ ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೂ ನಡೆದ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಅವರು ಈ ಹೇಳಿಕೆ ನೀಡಿದ್ದಾಗಿ ಆರೋಪಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಗಡಿ ರಸ್ತೆಗಳ ಸಂಘಟನೆಯ ಮಾಜಿ ನಿರ್ದೇಶಕ ಉದಯ್ ಶಂಕರ್ ಶ್ರೀವಾಸ್ತವ ಅವರು ತಮ್ಮ ವಕೀಲ ವಿವೇಕ್ ತಿವಾರಿ ಮೂಲಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗಳು ಅವಹೇಳನಕಾರಿಯಾಗಿದ್ದು, ಭಾರತೀಯ ಸೇನೆಯ ಮಾನಹಾನಿ ಮಾಡುತ್ತದೆ ಎಂದು ಅವರು ಹೇಳಿಕೊಂಡಿದ್ದಾರೆ. ಸೇನೆಯ ಅವಹೇಳನ
ಪ್ರತ್ಯೇಕ ಪ್ರಕರಣವೊಂದರಲ್ಲಿ, ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮಾಡಿದ ಹೇಳಿಕೆಗಳ ಕುರಿತ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್‌ನ ನ್ಯಾಯಾಲಯವು ಮಾರ್ಚ್ 2023 ರಲ್ಲಿ ರಾಹುಲ್ ಗಾಂಧಿಯವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆ ವಿಧಿಸಿದ ಕಾರಣ, ಅವರ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು.
ಆದಾಗ್ಯೂ, ಆ ವರ್ಷದ ಆಗಸ್ಟ್‌ನಲ್ಲಿ, ಸುಪ್ರೀಂ ಕೋರ್ಟ್ ಈ ಶಿಕ್ಷೆಯನ್ನು ತಡೆಹಿಡಿದಿದ್ದರಿಂದ ರಾಹುಲ್ ಗಾಂಧಿಯವರನ್ನು ಸಂಸದರನ್ನಾಗಿ ಮರು ನೇಮಕ ಮಾಡಲಾಯಿತು.
ಇದನ್ನೂಓದಿ: ಬಾಂಬೆ ಹೈಕೋರ್ಟ್ | ಮ್ಯಾಗಿ ನೂಡಲ್ಸ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು
ಬಾಂಬೆ ಹೈಕೋರ್ಟ್ | ಮ್ಯಾಗಿ ನೂಡಲ್ಸ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು


