Homeಕರ್ನಾಟಕಪದ್ಮಶ್ರೀ‌ ಪುರಸ್ಕೃತ ಹೋರಾಟಗಾರ್ತಿ, ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ (88) ನಿಧನ

ಪದ್ಮಶ್ರೀ‌ ಪುರಸ್ಕೃತ ಹೋರಾಟಗಾರ್ತಿ, ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ (88) ನಿಧನ

- Advertisement -
- Advertisement -

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ಹಾಲಕ್ಕಿ ಸಮುದಾಯದ ಹಿರಿಯ ಜನಪದ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ ಗುರುವಾರ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಮೂರು ದಿನಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಪದ್ಮಶ್ರೀ‌ ಪುರಸ್ಕೃತ ಹೋರಾಟಗಾರ್ತಿ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದ ಅವರು ಚೇತರಿಸಿಕೊಂಡಿದ್ದರು. ರಾತ್ರಿವರೆಗೆ ಕುಟುಂಬ ಸದಸ್ಯರೊಂದಿಗೆ ಮಾತನಾಡಿದ್ದ ಅವರು, ಅಂಕೋಲಾ ತಾಲೂಕಿನ ಬಡಿಗೆರಿ ಗ್ರಾಮದ ತಮ್ಮ ಮನೆಯಲ್ಲಿ ನಸುಕಿನ ಜಾವ ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಉತ್ತರ ಕನ್ನಡ ಜಿಲ್ಲೆಯ ಸುಕ್ರಿ ಬೊಮ್ಮಗೌಡ ಅವರು ಸುಕ್ರಜ್ಜಿ ಎಂದೇ ಪ್ರಸಿದ್ಧರು. ಹಾಲಕ್ಕಿ ಜಾನಾಂಗ ಜಾನಪದ ಕೋಗಿಲೆ ಎಂದೂ ಜನಪ್ರಿಯರಾಗಿರುವ ಅವರು, ಹಾಲಕ್ಕಿ ಜಾನಪದ ಹಾಡುಗಳ ಜೊತೆ ಮದ್ಯ ನಿಷೇಧ ಹೋರಾಟ ಸೇರಿದಂತೆ ಹಲವು ಹೋರಾಟದಲ್ಲಿ ಭಾಗಿಯಾಗಿದ್ದರು. ಪದ್ಮಶ್ರೀ‌ ಪುರಸ್ಕೃತ ಹೋರಾಟಗಾರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತಮ್ಮ ಹೋರಾಟಗಳ ಮೂಲಕ ಅವರು ಅಂಕೋಲದ ಬಡಿಗೇರಿ ಗ್ರಾಮವನ್ನು ಮದ್ಯ ಮುಕ್ತ ಗ್ರಾಮವನ್ನಾಗಿ ಮಾಡಿದ್ದರು. ಜಾನಪದ‌ ಹಾಡುಗಳ ಮೂಲಕ ಸಮುದಾಯದ ಮಹಿಳೆಯ ಪರಿಚಯಿಸುವ ಕಾರ್ಯ ನಿರ್ವಹಿಸಿದ್ದ ಸುಕ್ರಜ್ಜಿಗೆ 1999ರಲ್ಲಿ ಜನಪದಶ್ರೀ ಪ್ರಶಸ್ತಿ, 2006ರಲ್ಲಿ ನಾಡೋಜ ಪ್ರಶಸ್ತಿ, 2017ರಲ್ಲಿ ಪದ್ಮಶ್ರೀ ಪ್ರಶಸ್ತಿ ಒಲಿದು ಬಂದಿವೆ.

ಸುಕ್ರಿ ಬೊಮ್ಮಗೌಡ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಕುಮಾರಸ್ವಾಮಿ, ಸಂಸದ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವಾರು ಜನರು ಕಂಬನಿ ಮಿಡಿದಿದ್ದಾರೆ.

“ಪ್ರಖ್ಯಾತ ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಅವರ ನಿಧನ‌ದಿಂದ ಸಾಂಸ್ಕೃತಿಕ ಲೋಕಕ್ಕೆ ಆಗಿರುವ ನಷ್ಟ ತುಂಬಲು ಸಾಧ್ಯವಿಲ್ಲ. ಅವರೊಬ್ಬರು ಹುಟ್ಟು ಕಲಾವಿದೆ. ಹಾಲಕ್ಕಿ ಜಾನಪದ ಹಾಡುಗಳ ಮೂಲಕವೇ ಲೋಕಪ್ರಸಿದ್ಧರಾಗಿದ್ದ ‘ಸುಕ್ರಜ್ಜಿ’ ಅವರಿಗೆ ಸಂಗೀತವೇ ಬದುಕಾಗಿತ್ತು.” ಎಂದು ಸಿಎಂ ಹೇಳಿದ್ದಾರೆ.

“ಸಂಗೀತದ ಜೊತೆಯಲ್ಲಿ ಮಧ್ಯಪಾನ ವಿರೋಧಿ ಆಂದೋಲನದಲ್ಲಿಯೂ ಸಕ್ರಿಯರಾಗಿದ್ದ ಸುಕ್ರಿ ಬೊಮ್ಮಗೌಡ ಅವರ ಬದುಕು ಮತ್ತು ಸಾಧನೆ ಆದರ್ಶಪ್ರಾಯವಾದುದು. ಸಂಗೀತ ಕಲಾಸೇವೆಗಾಗಿ ಪದ್ಮಶ್ರೀ‌ ಪ್ರಶಸ್ತಿ ಗಳಿಸಿದ್ದ ಸುಕ್ರಜ್ಜಿ ಅವರು ಹಂಪಿ ವಿಶ್ವವಿದ್ಯಾಲಯ ನೀಡುವ ನಾಡೋಜ ಪ್ರಶಸ್ತಿಯೂ ಸೇರಿದಂತೆ ಹಲವಾರು ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದರು. ಸುಕ್ರಿ ಬೊಮ್ಮಗೌಡ ಅವರನ್ನು ಕಳೆದುಕೊಂಡಿರುವ ಬಂಧು ಮಿತ್ರರ ದುಃಖದಲ್ಲಿ ನಾನೂ‌ ಪಾಲ್ಗೊಂಡಿದ್ದೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿ, ಹಾಲಕ್ಕಿ ಹಾಡುಗಳ ಕೋಗಿಲೆ, ಪದ್ಮಶ್ರೀ ಪುರಸ್ಕೃತರು ಹಾಗೂ ಸುಕ್ರಜ್ಜಿ ಎಂದೇ ಜನಜನಿತರಾಗಿದ್ದ ಸುಕ್ರಿ ಬೊಮ್ಮಗೌಡ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು ಎಂದು ಹೇಳಿದ್ದಾರೆ.

“ಮದ್ಯಪಾನ ವಿರೋಧಿ ಹೋರಾಟ ಸೇರಿ ಅನೇಕ ಜನಪರ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಿದ್ದ ಅವರ ನಾಲಗೆಯ ಮೇಲೆ ಐದು ಸಾವಿರಕ್ಕೂ ಹೆಚ್ಚು ಹಾಲಕ್ಕಿ ಹಾಡುಗಳು ನಲಿದಾಡುತ್ತಿದ್ದವು ಎಂದು ಕೇಳಿದ್ದೇನೆ. ಅವರ ಅಗಲಿಕೆ ರಾಜ್ಯದ ಸಾಂಸ್ಕೃತಿಕ, ಜನಪದ ಲೋಕಕ್ಕೆ ಬಹುದೊಡ್ಡ ನಷ್ಟ. ಅವರಿಗೆ ಸದ್ಗತಿ ಸಿಗಲಿ ಹಾಗೂ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಸಂಸದ ಬಸವರಾಜ ಬೊಮ್ಮಾಯಿ ಅವರು, ಕರ್ನಾಟಕದ ಹೆಮ್ಮೆ, ಹಾಲಕ್ಕಿ ಹಾಡುಗಳ ಕೋಗಿಲೆ, ಪದ್ಮಶ್ರೀ ಪುರಸ್ಕೃತರಾದ ಸುಕ್ರಿ ಬೊಮ್ಮಗೌಡ ಅವರು ಇಂದು ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ‌ ಎಂದು ಹೇಳಿದ್ದಾರೆ.

“ಸುಕ್ರಿ ಬೊಮ್ಮ ಗೌಡ ನಿಧನ ನಾಡಿಗೆ ತುಂಬಲಾರದ ನಷ್ಟವಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಿ,ಅವರ ಕುಟುಂಬ ವರ್ಗಕ್ಕೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಅವರು ಸಂತಾಪ ತಿಳಿಸಿದ್ದಾರೆ.

“ಜಾನಪದ ಗಾನಕೋಗಿಲೆ ‘ಪದ್ಮಶ್ರೀ ಪುರಸ್ಕೃತೆ’ ಸುಕ್ರಿ ಬೊಮ್ಮು ಗೌಡ ಅವರು ನಮ್ಮನ್ನೆಲ್ಲ ಅಗಲಿರುವ ಸುದ್ದಿ ತಿಳಿದು ಮನಸ್ಸಿಗೆ ದುಃಖ ಉಂಟಾಯಿತು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಜನಿಸಿದ ಇವರು ತಮ್ಮ ಜಾನಪದ ಗಾಯನದ ಮೂಲಕ ಜಾನಪದ ಕ್ಷೇತ್ರದಲ್ಲಿ ಮೈಲುಗಲ್ಲು ಸೃಷ್ಟಿಸಿದ ಸುಕ್ರಿ ಗೌಡರನ್ನು ಕಳೆದುಕೊಂಡಿರುವುದು ಜಾನಪದ ಕ್ಷೇತ್ರಕ್ಕೆ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಕೋರಿ ಕುಟುಂಬ ವರ್ಗಕ್ಕೆ ಹಾಗೂ ಅಭಿಮಾನಿಗಳಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಚಿವ ಮಂಕಾಳ ವೈದ್ಯ ಸಂತಾಪ ಸೂಚಿಸಿದ್ದಾರೆ.

“ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನವರಾದ, ಪದ್ಮಶ್ರೀ ಪುರಸ್ಕೃತ ಸುಕ್ರಿ ಗೌಡ ( ಸುಕ್ರಜ್ಜಿ) ನಿಧನದ ಸುದ್ದಿ ಬೆಳ್ಳಂಬೆಳಿಗ್ಗೆ ಬರಸಿಡಿಲು ಬಡಿದಂತಾಯಿತು. 5000ಕ್ಕೂ ಹೆಚ್ಚು ಹಾಲಕ್ಕಿ, ಜನಪದ ಹಾಡುಗಳನ್ನ ಕಂಠಪಾಠ ಮಾಡಿಕೊಂಡಿದ್ದ ಅಜ್ಜಿ, ‘ಜಾನಪದ ಕೋಗಿಲೆ’ ಎಂದೇ ಪ್ರಸಿದ್ದಳಾಗಿದ್ದರು. ಲೋಕಸಭಾ ಚುನಾವಣೆಯ ಸಂದರ್ಭ ಮಗಳಂತೆ ನನ್ನನ್ನ ಆತ್ಮೀಯವಾಗಿ ಮಾತನಾಡಿಸಿ, ಗಲ್ಲವನ್ನ ಹಿಡಿದು ಸವರಿದ ಆ ಕ್ಷಣ ಇನ್ನೂ ಹಸಿರಾಗೇ ಇದೆ. ಓಂ ಶಾಂತಿ” ಎಂದು ಕಾಂಗ್ರೆಸ್‌ ನಾಯಕಿ ಡಾ. ಅಂಜಲಿ ನಿಂಬಾಳ್ಕರ್‌ ಸಂತಾಪ ಸೂಚಿಸಿದ್ದಾರೆ.

ಇದನ್ನೂಓದಿ:  ಮೆಟ್ರೋ ದರ ಅಸಹಜ ಏರಿಕೆ; ಸರಿಪಡಿಸುವಂತೆ ಸಿಎಂ ಸೂಚನೆ

ಮೆಟ್ರೋ ದರ ಅಸಹಜ ಏರಿಕೆ; ಸರಿಪಡಿಸುವಂತೆ ಸಿಎಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...