Homeಅಂತರಾಷ್ಟ್ರೀಯಜೂಲಿಯನ್ ಅಸ್ಸಾಂಜೆ ಮೇಲಿನ ಆರೋಪಕ್ಕೆ ಸಾಕ್ಷಿಗಳಿಲ್ಲ, ತನಿಖೆ ರದ್ದು: ಸ್ವೀಡಿಷ್ ಪ್ರಾಸಿಕ್ಯೂಟರ್..

ಜೂಲಿಯನ್ ಅಸ್ಸಾಂಜೆ ಮೇಲಿನ ಆರೋಪಕ್ಕೆ ಸಾಕ್ಷಿಗಳಿಲ್ಲ, ತನಿಖೆ ರದ್ದು: ಸ್ವೀಡಿಷ್ ಪ್ರಾಸಿಕ್ಯೂಟರ್..

- Advertisement -
- Advertisement -

2012ರಲ್ಲಿ ಅತ್ಯಾಚಾರವೆಸಗಿದ್ದಾರೆಂಬ ಆರೋಪದಲ್ಲಿ ಬ್ರಿಟನ್‌ನ ಜೈಲಿನಲ್ಲಿದ್ದ ವಿಕಿಲೀಕ್ಸ್ ಸಂಸ್ಥಾಪಕ ಜೂಲಿಯನ್ ಅಸ್ಸಾಂಜೆ ಅವರ ಮೇಲಿನ ತನಿಖೆಯನ್ನು ಕೈಬಿಡಲಾಗಿದೆ  ಎಂದು ಸ್ವೀಡಿಷ್ ಪ್ರಾಸಿಕ್ಯೂಟರ್ ಮಂಗಳವಾರ ತಿಳಿಸಿದ್ದಾರೆ.

2012ರಲ್ಲಿ ಅಸ್ಸಾಂಜೆಯವರನ್ನು ಅತ್ಯಾಚಾರ ಆರೋಪದಡಿ ಬಂಧಿಸಲಾಗಿತ್ತು. ಅಸ್ಸಾಂಜೆಯವರು ಲಂಡನ್ ನ್ಯಾಯಾಲಯದಲ್ಲಿ ಜಾಮೀನು ಪಡೆದು ಹೊರಬಂದಿದ್ದರು. ಜೈಲಿನಿಂದ ಹೊರಬಂದ ಅಸ್ಸಾಂಜೆಯವರು ನ್ಯಾಯಾಂಗ ವಿಚಾರಣೆಗೆ ಬಾರದೆ ತಲೆಮರೆಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಆದರೆ, ಅಸ್ಸಾಂಜೆಯವರು ಕಳೆದ ಏಳು ವರ್ಷಗಳಿಂದ ಲಂಡನ್‌ನಲ್ಲಿರುವ ಈಕ್ವೆಡಾರ್ ರಾಯಬಾರಿ ಕಚೇರಿಯಲ್ಲಿ ಆಶ್ರಯ ಪಡೆದುಕೊಂಡಿದ್ದರು.

ಯಾವಾಗ ಈಕ್ವೇಡಾರ್‌ ಐಎಂಎಫ್‌ ಜೊತೆಗೆ ಒಪ್ಪಂದ ಮಾಡಿಕೊಂಡಿತೋ ಆ ಷರತ್ತಿನ ಭಾಗವಾಗಿ ಎರಡು ತಿಂಗಳ ಹಿಂದೆಯಷ್ಟೇ ಅವರನ್ನು ರಾಯಭಾರಿ ಕಛೇರಿಯಿಂದ ಹೊರಗೆ ಕಳಿಸಲಾಗಿತ್ತು. ಹೊರಬಂದ ತಕ್ಷಣವೇ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪದಡಿ ಬಂಧಿಸಲಾಗಿದ್ದು ಸಧ್ಯಕ್ಕೆ ಆ ಕಾರಣಕ್ಕಾಗಿ ಅವರು 50 ವಾರಗಳ ಬಂಧನ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ.

ಅತ್ಯಾಚಾರ ತನಿಖೆಯ ವಿಚಾರವಾಗಿ ಸುದ್ದಿ ಗೋಷ್ಠಿ ಆಯೋಜಿಸಿ ಮಾತನಾಡಿದ ಪಬ್ಲಿಕ್ ಪ್ರಸಿಕ್ಯೂಷನ್ನ ಉಪನಿರ್ದೇಶಕ ಇವಾ-ಮೇರಿ ಪರ್ಸನ್ ಅಸ್ಸಾಂಜೆಯವರ ಮೇಲಿನ ತನಿಖೆಯನ್ನು ಕೈಬಿಡಲು ನಿರ್ಧರಿಸಲಾಗಿದೆ. ಈ ಪ್ರಕರಣ ದಾಖಲಾಗಿ ಹಲವು ವರ್ಷಗಳು ಕಳೆದಿವೆ. ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳು ಗಣನೀಯವಾಗಿ ದುರ್ಬಲಗೊಂಡಿವೆ. ಆ ಕಾರಣಕ್ಕಾಗಿ ತನಿಖೆಯನ್ನು ಕೈಬಿಡಲಾಗಿದೆ ಎಂದು  ತಿಳಿಸಿದರು.

ಅಸ್ಸಾಂಜೆಯವರು ವಿಶ್ವದ ಬಲಾಢ್ಯ ರಾಷ್ಟ್ರಗಳ ಅವ್ಯವಹಾರಗಳನ್ನು ತಮ್ಮ ವಿಕಿಲೀಕ್ಸ್‌ ಮೂಲಕ ಬೆತ್ತಲು ಮಾಡಿದುದ್ದರ ಪರಿಣಾಮವಾಗಿ ಅವರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿ ಹಿಂಸೆ ನೀಡಲಾಗುತ್ತಿದೆ ಎನ್ನುವುದು ಅವರ ಬೆಂಬಲಿಗರ ಅಭಿಪ್ರಾಯವಾಗಿದೆ. ಈಗ ನ್ಯಾಯಾಲಯದ ತೀರ್ಪು ಕೂಡ ಅದಕ್ಕೆ ಪುಷ್ಠಿ ಕೊಡುವಂತಿದೆ. ಮುಂದೆ ಈ ಪ್ರಕರಣ ಏನಾಗುತ್ತದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೋರಾಟಗಾರನೊಬ್ಬನಿಗೆ ಜಯ ಸಿಕ್ಕಿರುವುದು ಸ್ವಾಗತಾರ್ಹ. ನಮ್ಮ ದೊ.ನರಸಿಂಹಮೂರ್ತಿ ಯವರಿಗೂ ಸಹ ಆದಷ್ಟು ಬೇಗ ಜಾಮೀನು ಸಿಗಲಿ ಎಂದು ಆಶಿಸೋಣ.

LEAVE A REPLY

Please enter your comment!
Please enter your name here

- Advertisment -

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....