Homeಕರ್ನಾಟಕಮೈಕ್ರೋ ಫೈನಾನ್ಸ್ ದೌರ್ಜನ್ಯ ತಡೆಗೆ ಕಾನೂನು ಜಾರಿ : ಮುಖ್ಯಾಂಶಗಳು ಇಲ್ಲಿದೆ

ಮೈಕ್ರೋ ಫೈನಾನ್ಸ್ ದೌರ್ಜನ್ಯ ತಡೆಗೆ ಕಾನೂನು ಜಾರಿ : ಮುಖ್ಯಾಂಶಗಳು ಇಲ್ಲಿದೆ

- Advertisement -
- Advertisement -

ಮೈಕ್ರೋ ಫೈನಾನ್ಸ್‌ ಕಂಪೆನಿಗಳು‌ ಅಥವಾ ಇತರೆ ಖಾಸಗಿ ಹಣಕಾಸು ಸಂಸ್ಥೆಗಳು / ವ್ಯಕ್ತಿಗಳು ಸಾಲ ವಸೂಲಿಯ ನೆಪದಲ್ಲಿ ಬಡ, ಮಧ್ಯಮ ವರ್ಗದ ಜನರಿಗೆ ನೀಡುತ್ತಿರುವ ಕಿರುಕುಳ, ಮಾನಸಿಕ ಹಿಂಸೆ ಮತ್ತು ದೌರ್ಜನ್ಯದಂತಹ ಅಮಾನವೀಯ, ಕಾನೂನು ಬಾಹಿರ ಕ್ರಮಗಳ ಮೇಲೆ ನಿಯಂತ್ರಣ ಹಾಗೂ ನಿರ್ಬಂಧ ಹೇರುವ ಉದ್ದೇಶದಿಂದ ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಮೂಲಕ ಹೊಸ ಕಾನೂನು ಜಾರಿ ಮಾಡಿದೆ.

ಕರ್ನಾಟಕ ಕಿರು (Micro)ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶ-2025ಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಬುಧವಾರ (ಫೆ.12) ಸಹಿ ಹಾಕಿದ್ದಾರೆ. ಈ ಬೆನ್ನಲ್ಲೇ ಸರ್ಕಾರ ರಾಜ್ಯಪತ್ರ (ಗೆಜೆಟ್ ನೋಟಿಫಿಕೇಶನ್) ಹೊರಡಿಸಿ ಕಾನೂನು ಜಾರಿಗೊಳಿಸಿದೆ.

ಮೈಕ್ರೋ ಫೈನಾನ್ಸ್‌ ಕಂಪನಿಗಳ ಕಿರುಕುಳ ತಡೆಯಲಾರದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜನರು ಮನೆಗಳನ್ನೇ ತೊರೆದಿದ್ದರು. ಹಲವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಹಾಗಾಗಿ, ಜನವರಿ 30ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಗ್ರಿವಾಜ್ಞೆ ಮೂಲಕ ಹೊಸ ಕಾನೂನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿತ್ತು.

ಬಳಿಕ ಸುಗ್ರಿವಾಜ್ಞೆಯನ್ನು ರಾಜ್ಯಪಾಲರ ಸಹಿಗಾಗಿ ಕಳುಹಿಸಿತ್ತು. ಆದರೆ, ಮೂರು ಕಾರಣಗಳನ್ನು ನೀಡಿ ರಾಜ್ಯಪಾಲರು ಸುಗ್ರಿವಾಜ್ಞೆ ತಿರಸ್ಕರಿಸಿದ್ದರು. ಈ ವಿಚಾರವನ್ನು ಫೆ.7ರಂದು ಸರ್ಕಾರ ತಿಳಿಸಿತ್ತು.

ನಂತರ ರಾಜ್ಯಪಾಲರು ಕೋರಿದ ವಿವರಣೆಯೊಂದಿಗೆ ಸರ್ಕಾರ ಮೈಕ್ರೋ ಫೈನಾನ್ಸ್‌ಗೆ ಸಂಬಂಧಿಸಿದ ಸುಗ್ರಿವಾಜ್ಞೆಯನ್ನು ಮತ್ತೆ ರಾಜಭವನಕ್ಕೆ ಕಳುಹಿಸಿತ್ತು. ಅದಕ್ಕೆ ರಾಜ್ಯಪಾಲರು ಸಹಿ ಹಾಕಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಬುಧವಾರ (ಫೆ.12) ಮಾಹಿತಿ ನೀಡಿದೆ. ರಾಜ್ಯಪಾಲ ಸಹಿ ಬಿದ್ದ ತಕ್ಷಣ ಸರ್ಕಾರ ಕಾನೂನು ಜಾರಿ ಮಾಡಿದೆ.

ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶ 2025 ಅಥವಾ ಮೈಕ್ರೋ ಫೈನಾನ್ಸ್‌ ಕಾನೂನಿನ ಮುಖ್ಯಾಂಶಗಳು ಹೀಗಿವೆ :

  • ಮೈಕ್ರೋ ಫೈನಾನ್ಸ್‌ ಸುಗ್ರಿವಾಜ್ಞೆ 12 ಫೆಬ್ರವರಿ 2025ರಂದು ಕಾನೂನಾಗಿ ಜಾರಿಗೆ ಬಂದಿದೆ.
  • ಸುಗ್ರಿವಾಜ್ಞೆಯು ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಮತ್ತು ಇತರೆ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಲೇವಾದೇವಿಗಾರರು ನೀಡುವ ಹೆಚ್ಚಿನ ಬಡ್ಡಿ ದರಗಳಿಂದ ಸಾಲಗಾರರಿಗೆ ಆಗುವ ಹೊರೆ ಮತ್ತು ಬಲವಂತದ ವಸೂಲಾತಿ ಕ್ರಮಗಳಿಂದ ಆಗುವ ಕಿರುಕುಳಗಳನ್ನು ನಿಯಂತ್ರಿಸುವ ಉದ್ದೇಶ ಹೊಂದಿದೆ.
  • ಇದರಿಂದ ವಿಶೇಷವಾಗಿ ದುರ್ಬಲರು, ಮಹಿಳೆಯರು ಮತ್ತು ರೈತರು, ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಮರುಪಾವತಿ ವಿಷಯದಲ್ಲಿ ಕಿರುಕುಳಗಳನ್ನು ತಪ್ಪಿಸಲು ಸಹಾಯಕವಾಗಿರುತ್ತದೆ.
  • ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಸಾಲಗಾರರಿಂದ ಯಾವುದೇ ಭದ್ರತೆ ಪಡೆಯುವಂತಿಲ್ಲ ಎಂದು ಹೊಸ ಕಾನೂನಿನಲ್ಲಿ ಆದೇಶಿಸಲಾಗಿದೆ.
  • ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಗ್ರಾಹಕರಿಗೆ ವಿಧಿಸುವ ಬಡ್ಡಿದರದ ಬಗ್ಗೆ ಪಾರದರ್ಶಕವಾಗಿ ಸಾಲಗಾರರಿಗೆ ಲಿಖಿತ ರೂಪದಲ್ಲಿ ತಿಳಿಸುವಂತೆ ಆದೇಶಿಸಲಾಗಿದೆ.
  • ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಗೆ ಮಾತ್ರ ಈ ಸುಗ್ರಿವಾಜ್ಞೆ ಅನ್ವಯವಾಗುತ್ತದೆ.
  • ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಅಂದಾಜು ರೂ. 60,000 ಕೋಟಿ ಸಾಲವನ್ನು ಸುಮಾರು 1.09 ಕೋಟಿ ಸಾಲಗಾರರು ಪಡೆದಿದ್ದು, ನೋಂದಣಿಯಾಗದ ಸಂಸ್ಥೆಗಳಿಂದ ಸಾಲ ಪಡೆದವರ ಮಾಹಿತಿ ವಿವರವಾಗಿ ಇಲ್ಲವಾದರೂ ಅಂದಾಜು ರೂ. 40,000 ಕೋಟಿ ಸಾಲ ಪಡೆದಿರುವರು ಎಂದು ಅಂದಾಜಿಸಲಾಗಿದೆ.
  • ಆಯಾ ಜಿಲ್ಲೆಗಳಲ್ಲಿ ವ್ಯವಹರಿಸುತ್ತಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಜಿಲ್ಲಾಧಿಕಾರಿಗಳಲ್ಲಿ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಸದರಿ ಸಂಸ್ಥೆಗಳು ತಾವು ವಿಧಿಸುವ ಬಡ್ಡಿದರ, ಸಾಲಗಾರರ ಮಾಹಿತಿ, ಸುಸ್ಥಿ ಸಾಲಗಳ ವಿವರ ಮುಂತಾದವುಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಬೇಕಾಗಿರುತ್ತದೆ.
  • ಆಯಾ ಜಿಲ್ಲೆಗಳಲ್ಲಿ ವ್ಯವಹರಿಸುತ್ತಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಜಿಲ್ಲಾಧಿಕಾರಿಗಳಿಗೆ ತ್ರೈಮಾಸಿಕ ಮತ್ತು ವಾರ್ಷಿಕ ವ್ಯವಹಾರದ ವಿವರಗಳನ್ನು ಸಲ್ಲಿಸಬೇಕು. ಸದರಿ ಮಾಹಿತಿಯನ್ನು ಸಲ್ಲಿಸದಿದ್ದಲ್ಲಿ, 6 ತಿಂಗಳ ಜೈಲು ಶಿಕ್ಷೆ ಅಥವಾ ರೂ.10,000 ಗಳಿಗೆ ವಿಸ್ತರಿಸಬಹುದಾದ ದಂಡ ಅಥವಾ ಇವೆರಡನ್ನೂ ವಿಧಿಸಲಾಗುತ್ತದೆ
  • ವಿವಾದಗಳನ್ನು ಇತ್ಯರ್ಥ್ಯ ಪಡಿಸುವುದಕ್ಕಾಗಿ ಒಂಬುಡ್ಸ್ ಪರ್ಸನ್‌ಗಳನ್ನು ಸರ್ಕಾರವು ಅಧಿಸೂಚನೆಯ ಮೂಲಕ ನೇಮಕ ಮಾಡಬಹುದು.

ಬಲವಂತದ ವಸೂಲಿ ಕೈಗೊಂಡಲ್ಲಿ ಜೈಲು, ದಂಡ

  • ಬಲವಂತದ ವಸೂಲಿ ಕ್ರಮಗಳನ್ನು ಕೈಗೊಂಡಲ್ಲಿ, ಯಾವುದೇ ವ್ಯಕ್ತಿಯೂ ವಿಚಾರಣೆಗೆ ಒಳಪಡುತ್ತಾರೆ ಮತ್ತು 10 ವರ್ಷಗಳವರೆಗೆ ವಿಸ್ತರಿಸಬಹುದಾದ ಅವಧಿಯ ಜೈಲು ಶಿಕ್ಷೆ ಹಾಗೂ ರೂ. 5 ಲಕ್ಷಗಳವರೆಗೆ ವಿಸ್ತರಿಸಬಹುದಾದ ದಂಡಕ್ಕೆ ಗುರಿಯಾಗುತ್ತಾರೆ.
  • ಈ ಅಪರಾಧಗಳು ಸಂಜ್ಞೇಯ ಅಪರಾಧ/ ಜಾಮೀನು ರಹಿತ (Cognizable / Non Bailable) ಆಗಿರುತ್ತವೆ. ಯಾವುದೇ ಪೋಲೀಸ್‌ ಅಧಿಕಾರಿ ಇಂತಹ ಪ್ರಕರಣಗಳನ್ನು ನೋಂದಣಿ ಮಾಡಿಕೊಳ್ಳುವುದು ನಿರಾಕರಿಸಲಾಗುವುದಿಲ್ಲ.
  • ಪೋಲೀಸ್‌ ಉಪ ಅಧೀಕ್ಷಕರ (DySP) ದರ್ಜೆಗೆ ಕಡಿಮೆಯಿಲ್ಲದ ಅಧಿಕಾರಿಯು ಸ್ವತ: (Suomoto) ಪ್ರಕರಣವನ್ನು ದಾಖಲಿಸಬಹುದು.
  • ಸರ್ಕಾರವು ಕಾಲಕಾಲಕ್ಕೆ ಈ ಸುಗ್ರಿವಾಜ್ಞೆ ಅನುಷ್ಠಾನಕ್ಕಾಗಿ ನಿರ್ದೇಶನಗಳನ್ನು ನೀಡುವ ಅಧಿಕಾರ ಹೊಂದಿರುತ್ತದೆ.

ಈ ಸುಗ್ರಿವಾಜ್ಞೆಯಿಂದ ಭಾರತೀಯ ರಿಸರ್ವ್‌ ಬ್ಯಾಂಕ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಲ್ಲಿ ಆರ್ಥಿಕ ಶಿಸ್ತು ಹೆಚ್ಚುತ್ತದೆ ಮತ್ತು ಸಾಲಗಾರರಿಗೆ ಕಿರುಕುಳ, ಬಲವಂತದ ವಸೂಲಿ ಕ್ರಮಗಳಿಂದ ಮುಕ್ತಿ ದೊರೆಯುತ್ತದೆ ಎಂದು ಸರ್ಕಾರ ಹೇಳಿದೆ.

ಮೈಕ್ರೋ ಫೈನಾನ್ಸ್‌ ಕಿರುಕುಳ ವಿರೋಧಿ ಕಾನೂನು ಜಾರಿಗೆ – ಸಿದ್ದರಾಮಯ್ಯ ಘೊಷಣೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘6 ತಿಂಗಳಲ್ಲಿ ನನ್ನ ಪ್ರಾಣ ತೆಗೆಯಲು ಇದು 7ನೇ ಯತ್ನ!’: ಕೋರ್ಟ್-ಪೋಲಿಸ್ ಇಲಾಖೆ ಹಾಗೂ ಬಿಜೆಪಿ ವಿರುದ್ಧ ಸಿಡಿದೆದ್ದ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ!

ಕೋಲ್ಕತಾ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಕೋಲ್ಕತಾದ ಕಾಳಿಘಾಟ್ ನಿವಾಸದ ಹೊರಭಾಗದಲ್ಲಿ ಶುಕ್ರವಾರ ನಡುರಾತ್ರಿ ಭಾರಿ ಹೈಡ್ರಾಮಾವೊಂದು ಸಂಭವಿಸಿದೆ. 2...

́ನಿಮ್ಮ ದೀಪಾವಳಿ ವೀಕೆಂಡ್ ಹಾಳುಮಾಡಲ್ಲ, ಸೋಮವಾರ ಉತ್ತರ ಕೊಡ್ತೀವಿ!’: ಎಥನಾಲ್ ಮಿಶ್ರಣ ಸ್ಪಷ್ಟೀಕರಣ ನೀಡಿದ ತೈಲ ಸಂಸ್ಥೆಗಳಿಗೆ ಸಚಿವ ರಿಜ್ವಾನ್ ಅರ್ಷಾದ್ ಟಾಂಗ್!

ಕರ್ನಾಟಕದಲ್ಲಿ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಮಾರಾಟ ಮಾಡುತ್ತಿರುವ ಪೆಟ್ರೋಲ್‌ನಲ್ಲಿ ನಿಗದಿಪಡಿಸಿದ ಶೇಕಡ 20 ಕ್ಕಿಂತ ಹೆಚ್ಚು ಪ್ರಮಾಣದ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಆರೋಪಿಸಿದ್ದು, ಪ್ರಯೋಗಾಲಯದ ಪರೀಕ್ಷೆಗಳಲ್ಲಿ ಇದರ...

ಯೂಟರ್ನ್ ಹೊಡೆದ ಚುನಾವಣಾ ಆಯೋಗ : SIR ವಿರುದ್ಧದ ಹೋರಾಟದಲ್ಲಿ ಜನ ಸಂಘಟನೆಗಳಿಗೆ ಮತ್ತೊಂದು ಮಹತ್ವದ ಗೆಲುವು

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಹೋರಾಟದಲ್ಲಿ ಜನ ಸಂಘಟನೆಗಳಿಗೆ ಮತ್ತೊಂದು ಮಹತ್ವದ ಗೆಲುವಾಗಿದೆ. ಎಸ್‌ಐಆರ್ ವೇಳೆ ಡಿಲೀಟ್ ಪಟ್ಟಿಗೆ (ಎಎಸ್‌ಡಿಡಿ) ಬಿದ್ದ ಅರ್ಹ ಮತದಾರರು ತಮ್ಮ ಹಕ್ಕು ಮರಳಿ...

‘ಪ್ರಧಾನಿ ಮೋದಿಯನ್ನು ಗೊಂದಲಕ್ಕೀಡುಮಾಡಬೇಡಿ, ನನ್ನೊಂದಿಗೆ ಬಹಿರಂಗ ಚರ್ಚೆಗೆ ಒಪ್ಪಿಸಿ!’: ಅಮಿತ್ ಷಾಗೆ ರಾಹುಲ್ ಗಾಂಧಿ ಆಗ್ರಹ!

ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗೊಂದಲಕ್ಕೀಡುಮಾಡುವ ಬದಲು, ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಇವಿಎಂ ಕುರಿತು ತಮ್ಮೊಂದಿಗೆ ಬಹಿರಂಗ ಚರ್ಚೆಗೆ...

‘ಅಮೆರಿಕ ಅಧ್ಯಕ್ಷರ ಹತ್ಯೆ ಮಾಡುವಂತೆ ಧ್ವನಿ ಕೇಳಿಸುತ್ತಿತ್ತು’: ವೈಟ್ ಹೌಸ್ ಬಳಿ ಮಾರಕಾಸ್ತ್ರಗಳಿದ್ದ ಕಾರಿನೊಂದಿಗೆ ವೆನಿಜುವೆಲ್ಲಾ ಪ್ರಜೆ ಬಂಧನ!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಆರೋಪದ ಮೇಲೆ 26 ವರ್ಷದ ರೋನಿ ಯೋರ್ಡ್ರಿಕ್ಸ್ ಗುವಾನಿಪಾ ಚ್ರಿನೋಸ್ ಎಂಬ ವೆನಿಜುಎಲ್ಲಾ ಮೂಲದ ವಲಸಿಗನನ್ನು ಯುಎಸ್ ಸೀಕ್ರೆಟ್ ಸರ್ವಿಸ್...

‘E20 turned into 420’ : ಕರ್ನಾಟಕ ಸರ್ಕಾರದ ಪರಿಶೀಲನೆಯಲ್ಲಿ ಬಯಲಾದ ‘ಪೆಟ್ರೋಲ್ ಚೋರಿ’; ಕೇಂದ್ರದ ವಿರುದ್ಧ ಜನಾಕ್ರೋಶ

E20 ಹೆಸರಿನಲ್ಲಿ ಮಾರಾಟವಾಗುತ್ತಿರುವ ಪೆಟ್ರೋಲ್‌ನಲ್ಲಿ ಶೇಕಡ 30ಕ್ಕಿಂತ (31.2) ಅಧಿಕ ಎಥೆನಾಲ್ ಇರುವುದು ಕರ್ನಾಟಕ ಸರ್ಕಾರದ ನಡೆಸಿದ ಪರಿಶೀಲನೆಯಲ್ಲಿ ಬಟಾಬಯಲಾಗಿದ್ದು, ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಮತ್ತು ಕೇಂದ್ರ ಸರ್ಕಾರದ ವಿರುದ್ಧ ದೇಶದಾದ್ಯಂತ...

ಜೆಡಿಎಸ್ ಸಮರ್ಥನೆ ಬಿಜೆಪಿಯ ರಾಜಕೀಯ ದಿವಾಳಿತನ ತೋರಿಸುತ್ತದೆ : ಆರ್. ಅಶೋಕ್ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ತಿರುಗೇಟು!

ಕರ್ನಾಟಕ ರಾಜಕೀಯದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಪ್ರತಿಪಕ್ಷ ನಾಯಕ ಆರ್. ಅಶೋಕ್ ನಡುವೆ ಸೋಶಿಯಲ್ ಮೀಡಿಯಾದಲ್ಲಿ ವಾಕ್ಸಮರ ತೀವ್ರಗೊಂಡಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಿಕೊಂಡು ಆರ್. ಅಶೋಕ್ ಮಾಡಿದ ಕಟು...

ಪೆಟ್ರೋಲ್‌ನಲ್ಲಿ ಶೇ.31.2ರಷ್ಟು ಎಥೆನಾಲ್ ಪತ್ತೆ : ಕೇಂದ್ರದಿಂದ ಸ್ಪಷ್ಟನೆ ಕೋರಿದ ಕರ್ನಾಟಕ ಸರ್ಕಾರ

ಕರ್ನಾಟಕದಲ್ಲಿ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಮಾರಾಟ ಮಾಡುತ್ತಿರುವ ಪೆಟ್ರೋಲ್‌ನಲ್ಲಿ ನಿಗದಿಪಡಿಸಿದ ಶೇಕಡ 20ಕ್ಕಿಂತ ಹೆಚ್ಚು ಪ್ರಮಾಣದ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಆರೋಪಿಸಿದ್ದು, ಪ್ರಯೋಗಾಲಯದ ಪರೀಕ್ಷೆಗಳಲ್ಲಿ ಇದರ ಮಟ್ಟವು...

ಸಿಜೆಐ ಸೂರ್ಯ ಕಾಂತ್ ವಿರುದ್ಧದ ಪೋಸ್ಟ್ ಪ್ರಕರಣ: ಕೇರಳ ಕಾಂಗ್ರೆಸ್ ನಾಯಕರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದ ಆಕ್ಷೇಪಾರ್ಹ ಪೋಸ್ಟ್‌ಗೆ ಸಂಬಂಧಿಸಿದಂತೆ, ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್...

ಗೃಹಲಕ್ಷ್ಮಿ ಯೋಜನೆಯಡಿ ₹2 ಸಾವಿರ ಪಡೆಯುವುದು ಫಲಾನುಭವಿಗಳ ಹಕ್ಕಲ್ಲ : ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಸ್ಪಷ್ಟನೆ

'ಗೃಹಲಕ್ಷ್ಮಿ' ಒಂದು ಕಲ್ಯಾಣ (ಪರೋಪಕಾರಿ) ಯೋಜನೆಯಾಗಿದ್ದು, ಇದರ ಅನುಷ್ಠಾನವು ಹೆಚ್ಚಾಗಿ ಆಡಳಿತಾತ್ಮಕ ಅಗತ್ಯತೆಗಳನ್ನು ಅವಲಂಬಿಸಿರುತ್ತದೆ. ಹಾಗಾಗಿ, ಈ ಯೋಜನೆಯ ಫಲಾನುಭವಿಗಳು ಇದನ್ನು ತಮ್ಮ ಹಕ್ಕು ಎಂದು ಪ್ರತಿಪಾದಿಸಲು ಸಾಧ್ಯವಿಲ್ಲ ಮತ್ತು ನ್ಯಾಯಾಂಗದ ಹಸ್ತಕ್ಷೇಪದ...