Homeದಲಿತ್ ಫೈಲ್ಸ್ಬುಲೆಟ್ ಓಡಿಸಿದ್ದಕ್ಕೆ ದಲಿತ ಯುವಕನ ಕೈ ಕಡಿದ ಪ್ರಬಲ ಜಾತಿಯವರು!

ಬುಲೆಟ್ ಓಡಿಸಿದ್ದಕ್ಕೆ ದಲಿತ ಯುವಕನ ಕೈ ಕಡಿದ ಪ್ರಬಲ ಜಾತಿಯವರು!

- Advertisement -
- Advertisement -

ಬುಲೆಟ್ ಬೈಕ್ ಓಡಿಸಿದ್ದಕ್ಕೆ ಪ್ರಬಲ ಜಾತಿಯವರು ದಲಿತ ಯುವಕನ ಕೈ ಕಡಿದಿರುವ ಘಟನೆ ಬುಧವಾರ (ಫೆ.12) ಸಂಜೆ ತಮಿಳುನಾಡಿನ ಶಿವಗಂಗ ಜಿಲ್ಲೆಯ ಮೇಳಪಿದವೂರು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ದಾಳಿಯಿಂದ ದಲಿತ ಯುವಕ ಆರ್. ಅಯ್ಯಸಾಮಿ ಅವರ ಎರಡೂ ಕೈಗಳಿಗೆ ಗಾಯಗಳಾಗಿವೆ. ಅವರು ಪ್ರಸ್ತುತ ಮಧುರೈನ ಸರ್ಕಾರಿ ರಾಜಾಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

ಪೊಲೀಸರ ಪ್ರಕಾರ, ಬುಧವಾರ ಸಂಜೆ ಅಯ್ಯಸಾಮಿ ತನ್ನ ಬುಲೆಟ್ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದಾಗ, ಅದೇ ಗ್ರಾಮದ ಮೂವರು ಪ್ರಬಲ ಜಾತಿ ಹಿಂದೂಗಳಾದ ಆರ್. ವಿನೋದ್‌ಕುಮಾರ್ (21), ಎ. ಅಥೀಶ್ವರನ್ (22) ಮತ್ತು ಎಂ. ವಲ್ಲರಸು (21) ಅಡ್ಡಗಟ್ಟಿ ಹರಿತವಾದ ಆಯುಧಗಳಿಂದ ಹಲ್ಲೆ ಮಾಡಿದ್ದಾರೆ ಎಂದು ವರದಿ ಹೇಳಿದೆ.

“ಪ್ರಬಲ ಸಮುದಾಯದ ಯುವಕರು ಮಾತ್ರ ದುಬಾರಿ ಬೈಕ್‌ಗಳನ್ನು ಓಡಿಸಬಹುದು. ದಲಿತರು ಅಂತಹ ಬೈಕ್‌ಗಳನ್ನು ಓಡಿಸಬಾರದು” ಎಂದು ಹೇಳುತ್ತಾ ಆರೋಪಿಗಳು ಅಯ್ಯಸಾಮಿಯ ಕೈಗಳನ್ನು ಕಡಿದಿದ್ದಾರೆ” ಎಂದು ಸಂತ್ರಸ್ತ ಯುವಕನ ಸಂಬಂಧಿ ಮುನಿಯಸಾಮಿ ಹೇಳಿದ್ದಾರೆ ಎಂದು ವರದಿ ವಿವರಿಸಿದೆ.

ದಾಳಿ ನಡೆದಾಗ ಅಯ್ಯಸಾಮಿ ತಪ್ಪಿಸಿಕೊಂಡು ಸ್ಥಳದಿಂದ ಓಡಿ ಹೋಗಿ ಮನೆ ತಲುಪಿದ್ದಾರೆ. ಇಲ್ಲದಿದ್ದರೆ ಆರೋಪಿಗಳು ಆತನನ್ನು ಕೊಲೆ ಮಾಡುತ್ತಿದ್ದರು ಎಂದು ಮುನಿಯಸಾಮಿ ತಿಳಿಸಿದ್ದಾರೆ.

ಕುಟುಂಬಸ್ಥರು ಅಯ್ಯಸಾಮಿಯನ್ನು ಆಸ್ಪತ್ರೆಗೆ ಕರೆದೊಯ್ದ ನಂತರ, ಪ್ರಬಲ ಜಾತಿಯವರು ದಲಿತ ಕುಟುಂಬದ ಮನೆಯನ್ನು ದೋಚಿದ್ದಾರೆ. ಗ್ರಾಮದಲ್ಲಿ ಜಾತಿ ತಾರತಮ್ಯ ಚಾಲ್ತಿಯಲ್ಲಿದೆ. ತಮ್ಮ ಕುಟುಂಬಕ್ಕೆ ಪೊಲೀಸ್ ರಕ್ಷಣೆ ನೀಡುವಂತೆ ಮುನಿಯಸಾಮಿ ಒತ್ತಾಯಿಸಿದ್ದಾರೆ.

“ಅಯ್ಯಸಾಮಿ ಬುಲೆಟ್ ಬೈಕ್ ಚಲಾಯಿಸುವುದು ಪ್ರಬಲ ಜಾತಿಯವರಿಗೆ ಇಷ್ಟವಿರಲಿಲ್ಲ. ಈ ಹಿಂದೆಯೂ ಅವರು ಬೈಕಿಗೆ ಹಾನಿ ಮಾಡಿದ್ದರು” ಎಂದು ಅವರ ತಂದೆ ಭೂಮಿನಾಥನ್ ಹೇಳಿದ್ದಾರೆ.

ಬುಲೆಟ್ ಓಡಿಸಿದ್ದಕ್ಕೆ ದಾಳಿ ಮಾಡಲಾಗಿದೆ ಎಂಬುವುದನ್ನು ಪೊಲೀಸ್ ಮೂಲಗಳು ನಿರಾಕರಿಸಿವೆ. ಅಯ್ಯಸಾಮಿ ಆರೋಪಿಗಳಲ್ಲಿ ಒಬ್ಬನಾದ ಅಥೀಶ್ವರನ್‌ಗೆ ಗೇಲಿ ಮಾಡಿದ್ದರು. ಈ ವಿಚಾರಕ್ಕೆ ಅವರ ನಡುವೆ ಮೊದಲೇ ಜಗಳವಿತ್ತು. ತನಿಖೆ ಇನ್ನೂ ಮುಂದುವರೆದಿದೆ ಎಂದಿವೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಘಟನೆ ಸಂಬಂಧ ಸಿಪ್ಕಾಟ್ ಪೊಲೀಸರು ವಿನೋದ್‌ಕುಮಾರ್, ಅಥೀಶ್ವರನ್ ಮತ್ತು ವಲ್ಲರಸು ವಿರುದ್ಧ ಬಿಎನ್‌ಎಸ್‌ ಸೆಕ್ಷನ್‌ 296 (1), 126 (2), 118 (1), 351 (3) ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್‌ 3(1)(ಆರ್)(ಎಸ್‌) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಹಲ್ಲೆಗೊಳಗಾದ ಅಯ್ಯಸಾಮಿ ಶಿವಗಂಗೆಯ ಕಾಲೇಜಿನಲ್ಲಿ ಮೂರನೇ ವರ್ಷದ ಯುಜಿ ಗಣಿತ ವಿದ್ಯಾರ್ಥಿ ಎಂದು ವರದಿ ತಿಳಿಸಿದೆ.

ಮುಸ್ಲಿಮರಿಂದ ವಕ್ಫ್ ಆಸ್ತಿ ಕಸಿದುಕೊಂಡು ನಾಶಕ್ಕೆ ಯತ್ನ: ಅಸಾದುದ್ದೀನ್ ಓವೈಸಿ ಆರೋಪ

‘Bullet

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...