ಸಾರ್ವಜನಿಕ ಉದ್ದಿಮೆಗಳ ಮಾರಾಟ ಮಾಡುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಹೇಳಿಕೆಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು ಯಾವುದೇ ಕಾರಣಕ್ಕೂ ಇಂತಹ ಸಂಸ್ಥೆಗಳನ್ನು ಮಾರಾಟ ಮಾಡಬಾರದು ಎಂದು ಒತ್ತಾಯಿಸಿದ್ದಾರೆ.
2020ರ ಮಾರ್ಚ್ ವೇಳೆಗೆ ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಸಂಸ್ಥೆಗಳನ್ನು ಮಾರಾಟ ಮಾಡಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೊನ್ನೆಯಷ್ಟೇ ಹೇಳಿದ್ದರು. ಈ ಹೇಳಿಕೆಯನ್ನು ಪ್ರಿಯಾಂಕ ಗಾಂಧಿ ವಾದ್ರಾ ಖಂಡಿಸಿದ್ದಾರೆ.
ಇದನ್ನೂ ಓದಿ: 28 ಸರ್ಕಾರಿ ಸಂಸ್ಥೆಗಳನ್ನು ಮಾರಲು ಮುಂದಾದ ಕೇಂದ್ರ ಸರ್ಕಾರ!: ಕೇಂದ್ರ ಸಚಿವರೇ ಒಪ್ಪಿಕೊಂಡ್ರು…
ಕೇಂದ್ರ ಸರ್ಕಾರ ಭಾರತದ ಉತ್ತಮ ಸಂಸ್ಥೆಗಳನ್ನು ಖಾಲಿ ಮಾಡಲು ಮತ್ತು ಮಾರಾಟ ಮಾಡಲು ಹೊರಟಿದೆ ನಮ್ಮ ಸಂಸ್ಥೆಗಳು ನಮ್ಮ ಹೆಮ್ಮೆ. ನಮ್ಮ ಸಾರ್ವಜನಿಕ ಉದ್ದಿಮೆಗಳು ಬಂಗಾರದ ಪಕ್ಷಿಗಳಿದ್ದಂತೆ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಭಾರತ ನಿರ್ಮಾಣದ ಪ್ರಮಾಣ ಮಾಡಿ ಅಧಿಕಾರಕ್ಕೆ ಬಂದಿದೆ. ಆದರೆ ಮೇಕ್ ಇನ್ ಇಂಡಿಯಾ ಹೆಸರಿನಲ್ಲಿ ಉತ್ತಮ ಸಂಸ್ಥೇಗಳನ್ನು ಖಾಲಿ ಮಾಡಲು ಮತ್ತು ಮಾರಾಟ ಮಾಡಲು ಹೊರಟಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.


