Homeಮುಖಪುಟಮಣಿಪುರ | ಇಬ್ಬರು ಸಹೋದ್ಯೋಗಿಗಳನ್ನು ಕೊಂದು, ಗುಂಡು ಹಾರಿಸಿ ಆತ್ಮಹತ್ಯೆ ಮಾಡಿದ ಯೋಧ

ಮಣಿಪುರ | ಇಬ್ಬರು ಸಹೋದ್ಯೋಗಿಗಳನ್ನು ಕೊಂದು, ಗುಂಡು ಹಾರಿಸಿ ಆತ್ಮಹತ್ಯೆ ಮಾಡಿದ ಯೋಧ

- Advertisement -
- Advertisement -

ಮಣಿಪುರದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ ಸೈನಿಕನೊಬ್ಬ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ ಇಬ್ಬರು ಸಿಬ್ಬಂದಿಯನ್ನು ಕೊಂದು, ಎಂಟು ಜನರನ್ನು ಗಾಯಗೊಳಿಸಿದ್ದಲ್ಲದೆ, ನಂತರ ಸೇವಾ ಆಯುಧದಿಂದ ತನ್ನ ಮೇಲೆಯೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿದ್ದಾರೆ ಎಂದು ರಾಜ್ಯದ ಪೊಲೀಸರು ಗುರುವಾರ ತಿಳಿಸಿದ್ದಾರೆ. ಮಣಿಪುರ

ಘಟನೆ ರಾತ್ರಿ 8 ಗಂಟೆ ಸುಮಾರಿಗೆ ಸಂಭವಿಸಿದೆ ಎಂದು ಮಣಿಪುರ ಪೊಲೀಸರು ತಿಳಿಸಿದ್ದಾರೆ. ಮೃತ ಸೈನಿಕನನ್ನು ಅರೆಸೈನಿಕ ಪಡೆಯ 120 ನೇ ಬೆಟಾಲಿಯನ್‌ಗೆ ಸೇರಿದ ಹವಿಲ್ದಾರ್ ಸಂಜಯ್ ಕುಮಾರ್ ಎಂದು ಗುರುತಿಸಲಾಗಿದೆ. ಅವರು ಒಬ್ಬ ಕಾನ್‌ಸ್ಟೆಬಲ್ ಮತ್ತು ಸಬ್-ಇನ್ಸ್‌ಪೆಕ್ಟರ್‌ರನ್ನು ಗುಂಡು ಹಾರಿಸಿ ಕೊಂದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಗಾಯಗೊಂಡ ಎಂಟು ಸಿಬ್ಬಂದಿಯನ್ನು ಇಂಫಾಲ್‌ನ ಪ್ರಾದೇಶಿಕ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸ್ಥಳಾಂತರಿಸಲಾಗಿದೆ. ಗುಂಡಿನ ದಾಳಿಗೆ ಕಾರಣವೇನೆಂದು ತನಿಖೆ ನಡೆಸುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಕುರಿತು ಸಿಆರ್‌ಪಿಎಫ್ ಇನ್ನೂ ಯಾವುದೇ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ.

ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ನಾಲ್ಕು ದಿನಗಳ ನಂತರ, ಕೇಂದ್ರ ಸರ್ಕಾರ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಿದೆ. 2027 ರವರೆಗೆ ಅಧಿಕಾರಾವಧಿಯನ್ನು ಹೊಂದಿರುವ ವಿಧಾನಸಭೆಯನ್ನು ಅವರು ಅಮಾನತು ಮಾಡಿದ್ದಾರೆ. ಮಣಿಪುರ

ಮೇ 2023 ರಲ್ಲಿ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ 250 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಸಾವಿರಾರರು ಜನರು ಗಾಯಗೊಂಡಿದ್ದಾರೆ. ಹಿಂಸಾಚಾರದಿಂದ 60 ಸಾವಿರಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ಹಿಂಸಾಚಾರದ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಕಳೆದ ಎರಡು ವರ್ಷಗಳಿಂದ ವಿಪಕ್ಷಗಳು ಆಗ್ರಹಿಸುತ್ತಲೆ ಇದ್ದವು. ಅಲ್ಲದೆ, ಹಿಂಸಾಚಾರ ಪೀಡಿತ ರಾಜ್ಯಕ್ಕೆ ಪ್ರಧಾನಿ ಭೇಟಿ ನೀಡಿ ರಾಜ್ಯದ ಜನರೊಂದಿಗೆ ಮಾತನಾಡಬೇಕು ಎಂದು ಈಗಲೂ ಆಗ್ರಹಿಸುತ್ತಿವೆ.

ಈ ನಡುವೆ ಮುಖ್ಯಮಂತ್ರ ಬಿರೇನ್ ಸಿಂಗ್ ಇತ್ತಿಚೆಗೆ ರಾಜೀನಾಮೆ ನೀಡಿದ್ದು, ವಿಶೇಷವಾಗಿ ರಾಜ್ಯ ವಿಧಾನಸಭೆಯಲ್ಲಿ ಅವಿಶ್ವಾಸ ನಿರ್ಣಯಕ್ಕೆ ಕಾಂಗ್ರೆಸ್ ಮುಂದಾಗಿತ್ತು. ಈ ವೇಳೆ ಕೆಲವು ಬಿಜೆಪಿ ಶಾಸಕರು ಈ ನಿರ್ಣಯದ ಪರವಾಗಿ ಮತ ಚಲಾಯಿಸಬಹುದು ಎಂಬ ವರದಿಗಳಿದ್ದವು. ಹಾಗಾಗಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂಓದಿ:  ಎರಡನೇ ಸುತ್ತಿನ ಜಾತಿ ಸಮೀಕ್ಷೆಗೆ ಮುಂದಾದ ತೆಲಂಗಾಣದ ಕಾಂಗ್ರೆಸ್ ಸರ್ಕಾರ!

ಎರಡನೇ ಸುತ್ತಿನ ಜಾತಿ ಸಮೀಕ್ಷೆಗೆ ಮುಂದಾದ ತೆಲಂಗಾಣದ ಕಾಂಗ್ರೆಸ್ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...