ರಾಜ್ಯ ಕಾಂಗ್ರೆಸ್‌ನಲ್ಲಿನ ಒಳ ಜಗಳ ಹೊಸ ತಿರುವು ಪಡೆದುಕೊಂಡಿದ್ದು, ತನ್ನನ್ನು ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಲು ಪ್ರಯತ್ನಿಸುತ್ತಿರುವ ವಿರೋಧಿಗಳ ವಿರುದ್ಧ ಮತ್ತೊಂದು ಸುತ್ತಿನ ಸಂಘರ್ಷಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಂದಾಗಿದ್ದಾರೆ. ಸಿದ್ದರಾಮಯ್ಯ ಅವರ ಆಪ್ತರು ಆರಂಭಿಸಿದ ಸಂಘಟಿತ ಅಭಿಯಾನವನ್ನು ಸರಿದೂಗಿಸುವುದು ಈ ಪ್ರತಿದಾಳಿಯ ಉದ್ದೇಶವಾಗಿದೆ ಎಂದು ವರದಿ ಹೇಳಿದೆ. ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರ ವಿರುದ್ಧ ಹೊಸದಾಗಿ ದಾಳಿ ನಡೆಸಿರುವ ಶಿವಕುಮಾರ್ ಅವರು ರಾಜ್ಯ ಸಚಿವ ಸಂಪುಟ ಪುನರ್ರಚನೆ ಮಾಡುವಂತೆ ಪಕ್ಷದ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಬೀಡುಬಿಟ್ಟಿದ್ದಾಗ ಶಿವಕುಮಾರ್ ಅವರು ಕಾಂಗ್ರೆಸ್‌ನ ಉನ್ನತ ನಾಯಕತ್ವವನ್ನು ಭೇಟಿಯಾದಾಗ ಈ ವಿಷಯ ಚರ್ಚೆಗೆ ಬಂದಿತು ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಮೌಲ್ಯಮಾಪನದ ನಂತರ, “ಕಾರ್ಯನಿರ್ವಹಿಸದ” ಸಚಿವರನ್ನು ಕೈಬಿಟ್ಟು ಹೊಸ ಮುಖಗಳನ್ನು ತರುವ ಬಗ್ಗೆ ಶಿವಕುಮಾರ್ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ ಎಂದು ಡಿಎಚ್ ವರದಿ ಹೇಳಿದೆ. ಅವರ ಪಟ್ಟಿಯಲ್ಲಿ ಸಿಎಂ ಅವರ ಆಪ್ತರು ಇದ್ದಾರೆ ಎಂದು ಎಂದು ವರದಿ ಉಲ್ಲೇಖಿಸಿದೆ. ಸಿಎಂ ಸಿದ್ದರಾಮಯ್ಯ
ಅವರು ಸೂಚಿಸಿರು ಪ್ರಮುಖರಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ವಸತಿ ಮತ್ತು ವಕ್ಫ್ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್, ಗಣಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಸೇರಿದ್ದಾರೆ ಎಂದು ವರದಿ ಹೇಳಿದೆ.
ವಿರೋಧಿಗಳ ಪಾಳೆಯದ ಇತ್ತೀಚಿನ ನಡೆಗಳ ಬಗ್ಗೆ ತಿಳಿದ ನಂತರ, ಸಿದ್ದರಾಮಯ್ಯ ಅವರ ಬೆಂಬಲಿಗರು ಕಳೆದ ಕೆಲವು ದಿನಗಳಲ್ಲಿ ದೆಹಲಿಗೆ ಧಾವಿಸಿ, ತಮ್ಮ ಪ್ರಯತ್ನವನ್ನು ಚುರುಕುಗೊಳಿಸಿದ್ದಾರೆ. ಶಿವಕುಮಾರ್ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆದುಹಾಕುವುದರ ಜೊತೆಗೆ, ಅವರು ಹೊಂದಿರುವ ನೀರಾವರಿ ಮತ್ತು ಬೆಂಗಳೂರು ನಗರಾಭಿವೃದ್ಧಿ ಸೇರಿದಂತೆ ಕೆಲವು ಪ್ರಮುಖ ಖಾತೆಗಳನ್ನು ಇತರ ಸಚಿವರಿಗೆ ಹಂಚಬೇಕೆಂದು ಅವರು ಹೈಕಮಾಂಡ್ ಅನ್ನು ಒತ್ತಾಯಿಸಿದ್ದಾರೆ.
ಶಿವಕುಮಾರ್ ಪ್ರಸ್ತುತ ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿಯಾಗಿ ಅವಳಿ ಜವಾಬ್ದಾರಿಗಳನ್ನು ಹೊಂದಿದ್ದಾರೆ, ಜೊತೆಗೆ ಎರಡು ಖಾತೆಗಳನ್ನು ಕೂಡಾ ಅವರು ನಿರ್ವಹಿಸುತ್ತಿದ್ದಾರೆ.
ಸಂಪುಟ ಪುನರ್ರಚನೆಯಾದರೆ, ಶಿವಕುಮಾರ್ ಅವರ ಆಪ್ತ ಸಚಿವರಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಅವರ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡಬೇಕು ಎಂದು ಸಿಎಂ ಪಾಳಯವು ಕೇಂದ್ರ ನಾಯಕತ್ವದ ಮೇಲೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದೆ.
ಸಿದ್ದರಾಮಯ್ಯ ಅವರ ಇಬ್ಬರು ಆಪ್ತರಾದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ತಮ್ಮ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.
ಗೃಹ ಸಚಿವ ಜಿ. ಪರಮೇಶ್ವರ, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಇತರ ನಾಯಕರು ತಮ್ಮ ಮನವಿಯನ್ನು ನೀಡಲು ಒಂದೆರಡು ದಿನಗಳಲ್ಲಿ ರಾಷ್ಟ್ರ ರಾಜಧಾನಿಗೆ ತೆರಳುವ ನಿರೀಕ್ಷೆಯಿದೆ.
ಕಾಂಗ್ರೆಸ್ ನಾಯಕತ್ವವು ಸಚಿವರ ಮಧ್ಯಂತರ ಮೌಲ್ಯಮಾಪನ ಮಾಡಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದ್ದು, ಆದರೆ ಮುಂದಿನ ತಿಂಗಳು ನಡೆಯಲಿರುವ ರಾಜ್ಯ ಬಜೆಟ್ ಅಧಿವೇಶನದ ನಂತರವೇ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಅದು ಸೂಚಿಸಿದೆ.
ಇದನ್ನೂಓದಿ: ಅಕ್ರಮ ವಲಸೆ | 6 ಟ್ರಾವೆಲ್ ಏಜೆನ್ಸಿ ವಿರುದ್ಧ ಎಫ್‌ಐಆರ್ ದಾಖಲಿಸಿದ ಪಂಜಾಬ್ ಪೊಲೀಸರು
ಅಕ್ರಮ ವಲಸೆ | 6 ಟ್ರಾವೆಲ್ ಏಜೆನ್ಸಿ ವಿರುದ್ಧ ಎಫ್‌ಐಆರ್ ದಾಖಲಿಸಿದ ಪಂಜಾಬ್ ಪೊಲೀಸರು


