Homeಕರ್ನಾಟಕಶಾಸಕರು, ಪರಿಷತ್ ಸದಸ್ಯರಿಗೆ ಸಂಪುಟ ದರ್ಜೆ ಸ್ಥಾನಮಾನ ಪ್ರಶ್ನಿಸಿ ಪಿಐಎಲ್ : ಫೆ.21ಕ್ಕೆ ವಿಚಾರಣೆ

ಶಾಸಕರು, ಪರಿಷತ್ ಸದಸ್ಯರಿಗೆ ಸಂಪುಟ ದರ್ಜೆ ಸ್ಥಾನಮಾನ ಪ್ರಶ್ನಿಸಿ ಪಿಐಎಲ್ : ಫೆ.21ಕ್ಕೆ ವಿಚಾರಣೆ

- Advertisement -
- Advertisement -

ಶಾಸಕರು ಮತ್ತು ವಿಧಾನಪರಿಷತ್‌ ಸದಸ್ಯರಿಗೆ ಸಚಿವ ಸಂಪುಟ ದರ್ಜೆ ಸ್ಥಾನಮಾನ ನೀಡಿ ವಿವಿಧ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಸಲ್ಲಿಕೆಯಾಗಿದೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ (ಕೆಸ್‌ಪಿಸಿಬಿ) ಕೆಲಸ ಮಾಡುತ್ತಿರುವ ಬೆಂಗಳೂರು ನಗರದ ನಿವಾಸಿ ಸೂರಿ ಪಾಯಲ ಅವರು ಪಿಐಎಲ್‌ ಸಲ್ಲಿಸಿದ್ದಾರೆ.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ.ಅರುಣ್ ಅವರನ್ನೊಳಗೊಂಡ ವಿಭಾಗೀಯ ಪೀಠ ಗುರುವಾರ (ಫೆ13) ಪಿಐಎಲ್‌ ವಿಚಾರಣೆಯನ್ನು ಫೆಬ್ರವರಿ 21ಕ್ಕೆ ಮುಂದೂಡಿದೆ.

ಅರ್ಜಿದಾರರ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ಸಾಯಿ ದೀಪಕ್ ಅವರು, “ಶಾಸಕರು, ವಿಧಾನಪರಿಷತ್ ಸದಸ್ಯರನ್ನು ನಿಗಮ-ಮಂಡಳಿಗಳಿಗೆ ನೇಮಕ ಮಾಡಿರುವುದು ಸಮಸ್ಯೆಯಲ್ಲದಿದ್ದರೂ, ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡುತ್ತಿರುವುದು ಸಾಂವಿಧಾನಿಕ ನಿಬಂಧನೆಗಳ ಉಲ್ಲಂಘನೆಯಾಗಿದೆ” ಎಂದು ವಾದಿಸಿದ್ದಾರೆ.

“ಅರ್ಜಿದಾರರಿಗೆ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರನ್ನು ನಿಗಮ-ಮಂಡಳಿ ಹುದ್ದೆಗಳಿಗೆ ನೇಮಕ ಮಾಡುವುದರಿಂದ ಯಾವುದೇ ಸಮಸ್ಯೆ ಇಲ್ಲ” ಎಂದಿದ್ದಾರೆ.

“ಸಂವಿಧಾನದ ವಿಧಿ 164 (1ಎ) ಅಡಿಯಲ್ಲಿ ಶಾಸಕಾಂಗ ಸಭೆಯ ಒಟ್ಟು ಸದಸ್ಯರಲ್ಲಿ ಕೇವಲ 15 ಪ್ರತಿಶತದಷ್ಟು ಮಂದಿಗೆ ಮಾತ್ರ ಸಂಪುಟ ದರ್ಜೆಯ ಸ್ಥಾನಮಾನ ನೀಡಬೇಕು. ಕರ್ನಾಟಕಕ್ಕೆ ಸಂಬಂಧಿಸಿದಂತೆ 34 ಜನರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಬಹುದು. ಸಚಿವ ಸಂಪುಟದಲ್ಲಿ ಈಗಾಗಲೇ 33 ಸದಸ್ಯರಿದ್ದಾರೆ” ಎಂದು ವಕೀಲ ಸಾಯಿ ದೀಪಕ್ ಹೇಳಿದ್ದಾರೆ.

ಅರ್ಜಿದಾರರು ತನ್ನ ಅರ್ಜಿಯಲ್ಲಿ ಆರ್‌ವಿ ದೇಶಪಾಂಡೆ, ಎ.ಎಸ್ ಪೊನ್ನಣ್ಣ, ವಿನಯ್ ಕುಲಕರ್ಣಿ, ಎನ್‌.ಎ ಹ್ಯಾರಿಸ್ ಮತ್ತು ಇತರರು ಸೇರಿದಂತೆ 42 ಜನರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ನೇಮಕ ಮಾಡಿರುವುದನ್ನು ಉಲ್ಲೇಖಿಸಿದ್ದಾರೆ. ಅವರ ನೇಮಕಾತಿಗಳನ್ನು ರದ್ದುಗೊಳಿಸಲು ನಿರ್ದೇಶನ ನೀಡುವಂತೆ ಕೋರಿದ್ದಾರೆ. ಈ ಶಾಸಕರು ಮತ್ತು ಪರಿಷತ್ ಸದಸ್ಯರು ನಿಗಮ-ಮಂಡಳಿಗಳ ಅಧ್ಯಕ್ಷರಾಗಿ, ಮುಖ್ಯಮಂತ್ರಿಯ ಕಾನೂನು ಸಲಹೆಗಾರರಾಗಿ, ಮುಖ್ಯಮಂತ್ರಿಯ ಸಲಹೆಗಾರರಾಗಿ, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಗಳಾಗಿ ಮತ್ತು ನವದೆಹಲಿ ವಿಶೇಷ ಪ್ರತಿನಿಧಿಯಾಗಿ ಹುದ್ದೆಗಳನ್ನು ಹೊಂದಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಈ ಎಲ್ಲಾ ಹುದ್ದೆಗಳಿಗೆ ಸಂಪುಟ ದರ್ಜೆಯ ಸ್ಥಾನಮಾನ ಮತ್ತು ಸಂಬಂಧಿತ ಸವಲತ್ತುಗಳು ನೀಡುವ ಮೂಲಕ ಸಂವಿಧಾನದ ವಿಧಿ 102 (ಲಾಭದಾಯಕ ಹುದ್ದೆ ಹೊಂದಿರುವ ಸದಸ್ಯರನ್ನು ಅನರ್ಹಗೊಳಿಸುವುದು) ಮತ್ತು ವಿಧಿ 191 (ಲಾಭದಾಯಕ ಹುದ್ದೆ)ರಲ್ಲಿ ಪ್ರತಿಪಾದಿಸಲಾದ ನಿಬಂಧನೆಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಲಾಗಿದೆ.

ಈ ಹುದ್ದೆಗಳಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡುವುದು ಮಂತ್ರಿ ಮಂಡಳಿಯ ಗಾತ್ರವನ್ನು ನಿರ್ಬಂಧಿಸುವ ವಿಧಿ 164 (1ಎ) ಮತ್ತು ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 10ರ ಉಲ್ಲಂಘನೆಯಾಗಿದೆ. ಇದು ಸರ್ಕಾರದ ಅಡಿಯಲ್ಲಿ ಲಾಭದಾಯಕ ಹುದ್ದೆ ಹೊಂದಿರುವ ಸದಸ್ಯರನ್ನು ಅನರ್ಹಗೊಳಿಸುತ್ತದೆ ಎಂದು ಹೇಳಲಾಗಿದೆ.

“ಅಧ್ಯಕ್ಷರಾಗಿ ನೇಮಕಗೊಂಡ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು ಹೆಚ್ಚಾಗಿ ಬೆಂಗಳೂರಿನ ಹೊರಗೆ ವಾಸಿಸುವುದರಿಂದ ಅವರ ಕ್ಷೇತ್ರದ ಕರ್ತವ್ಯಗಳನ್ನು ನಿರ್ವಹಿಸುವುದು ಅಪ್ರಾಯೋಗಿಕವಾಗುತ್ತದೆ. ಹೆಚ್ಚಿನ ಪ್ರಯಾಣ ಸಮಸ್ಯೆಗಳು ಎರಡೂ ಹುದ್ದೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸಾಧ್ಯವಾಗದಂತೆ ಮಾಡುತ್ತದೆ. ನೇಮಕಾತಿಗಳು ಮತ್ತು ಈ ಸದಸ್ಯರಿಗೆ ನೀಡಲಾಗುವ ಹೆಚ್ಚುವರಿ ಸವಲತ್ತುಗಳು ನೀಡುವುದು ಶಾಸಕಾಂಗ ಪ್ರಕ್ರಿಯೆ ಮೇಲಿನ ಸಾರ್ವಜನಿಕರ ನಂಬಿಕೆ ಕ್ಷೀಣಿಸುವಂತೆ ಮಾಡುತ್ತದೆ” ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಮೈಕ್ರೋ ಫೈನಾನ್ಸ್ ದೌರ್ಜನ್ಯ ತಡೆಗೆ ಕಾನೂನು ಜಾರಿ : ಮುಖ್ಯಾಂಶಗಳು ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...