Homeಮುಖಪುಟಶಬೇ ಬರಾಅತ್ ದಿನವೇ ಪ್ರಸಿದ್ದ ಮಸೀದಿಗೆ ಬೀಗ : ಸತತ ಆರನೇ ವರ್ಷವೂ ವಿಶೇಷ ಪ್ರಾರ್ಥನೆಗೆ...

ಶಬೇ ಬರಾಅತ್ ದಿನವೇ ಪ್ರಸಿದ್ದ ಮಸೀದಿಗೆ ಬೀಗ : ಸತತ ಆರನೇ ವರ್ಷವೂ ವಿಶೇಷ ಪ್ರಾರ್ಥನೆಗೆ ನಿರ್ಬಂಧ

- Advertisement -
- Advertisement -

ಮುಸ್ಲಿಮರ ಪವಿತ್ರ ‘ಶಬೇ ಬರಾಅತ್’ ದಿನವಾದ ಗುರುವಾರ (ಫೆ.13) ಶ್ರೀನಗರದ ಪ್ರಸಿದ್ದ ಜಾಮಿಯಾ ಮಸೀದಿಯಲ್ಲಿ ರಾತ್ರಿಯ ವಿಶೇಷ ಪ್ರಾರ್ಥನೆಗೆ ಅವಕಾಶ ನಿರಾಕರಿಸಿದ ಆಡಳಿತ, ಮಸೀದಿಗೆ ಬೀಗ ಜಡಿದಿದೆ. ಅಲ್ಲದೆ, ಪ್ರಾರ್ಥನೆಗೆ ನೇತೃತ್ವ ವಹಿಸಬೇಕಿದ್ದ ಕಾಶ್ಮೀರದ ಮುಖ್ಯ ಧರ್ಮಗುರು ಮಿರ್ವೈಝ್ ಉಮರ್ ಫಾರೂಕ್ ಅವರನ್ನು ಗೃಹ ಬಂಧನದಲ್ಲಿಟ್ಟಿದೆ ಎಂದು ವರದಿಯಾಗಿದೆ.

“ಗುರುವಾರ ಅಧಿಕಾರಿಗಳು ಹಠಾತ್ ಮಸೀದಿಯ ದ್ವಾರಗಳನ್ನು ಮುಚ್ಚಿದರು ಮತ್ತು ಪೊಲೀಸ್ ಸಿಬ್ಬಂದಿ ಜನರನ್ನು ಮಸೀದಿಯಿಂದ ಹೊರ ಹೋಗುವಂತೆ ಸೂಚಿಸಿದರು” ಎಂದು ಮಸೀದಿಯ ಉಸ್ತುವಾರಿ ವಹಿಸಿರುವ ಅಂಜುಮನ್ ಔಕಾಫ್ ಹೇಳಿದೆ.

“ಜಾಮಿಯಾ ಮಸೀದಿಯಲ್ಲಿ ಶಬೇ ಬರಾತ್ ಆಚರಣೆಗೆ ಅನುಮತಿ ನೀಡುವುದಿಲ್ಲ” ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುರುವಾರ ಬೆಳಿಗ್ಗೆಯಿಂದ ಧರ್ಮಗುರು ಮಿರ್ವೈಝ್ ಉಮರ್ ಫಾರೂಕ್ ಅವರನ್ನು ಗೃಹ ಬಂಧನದಲ್ಲಿಡಲಾಗಿದೆ. ಅವರು ತನ್ನ ಧಾರ್ಮಿಕ ಕರ್ತವ್ಯಗಳನ್ನು ನಿರ್ವಹಿಸದಂತೆ ತಡೆಯಲಾಗಿದೆ” ಎಂದು ಔಕಾಫ್ ಆರೋಪಿಸಿದೆ.

ವಿಶೇಷ ಧಾರ್ಮಿಕ ದಿನಗಳಂದು ಹೆಚ್ಚಿನ ಜನರು ಮಸೀದಿಗಳಿಗೆ ಭೇಟಿ ನೀಡುತ್ತಾರೆ. ಆದರೆ, ಎಲ್ಲಾ ವಿಶೇಷ ದಿನಗಳಂದು ಜಾಮಿಯಾ ಮಸೀದಿಯನ್ನು ಮುಚ್ಚಲಾಗ್ತಿದೆ. ಅಲ್ಲದೆ, ಪ್ರಾರ್ಥನೆಗೆ ನೇತೃತ್ವ ವಹಿಸಬೇಕಿದ್ದ ಧಾರ್ಮಿಕ ಗುರು ಮಿರ್ವೈಝ್ ಉಮರ್ ಫಾರೂಕ್ ಅವರನ್ನು ಗೃಹ ಬಂಧನದಲ್ಲಿಡಲಾಗುತ್ತಿದೆ. ಇದು ಬಹಳ ದುರದೃಷ್ಟಕರ. ಇಂತಹ ಪುನರಾವರ್ತಿತ ನಿರ್ಬಂಧಗಳು ಜನರ ಭಾವನೆಗಳಿಗೆ ನೋವುಂಟು ಮಾಡುವುದಲ್ಲದೆ, ಅವರ ಮೂಲಭೂತ ಧಾರ್ಮಿಕ ಹಕ್ಕುನ್ನು ತಡೆದಂತೆಯಾಗುತ್ತದೆ ಎಂದು ಅಂಜುಮನ್ ಔಕಾಫ್ ಹೇಳಿದೆ.

ದುರದೃಷ್ಟಕರ : ಸಿಎಂ ಉಮರ್ ಅಬ್ದುಲ್ಲಾ

“ಶಬೇ ಬರಾಅತ್ ದಿನವೇ ಶ್ರೀನಗರದ ಜಾಮಿಯಾ ಮಸೀದಿಯನ್ನು ಮುಚ್ಚಿರುವುದು ದುರದೃಷ್ಟಕರ. ಈ ಕ್ರಮ ಜನರಿಗೆ ಕಾನೂನು ಸುವ್ಯವಸ್ಥೆಯ ಮೇಲೆ ನಂಬಿಕೆ ಕಡಿಮೆಯಾಗುವಂತೆ ಮಾಡುತ್ತದೆ. ಕಾಶ್ಮೀರದ ಜನರು ಈ ಪರಿಸ್ಥಿತಿ ಎದುರಿಸಬೇಕಾದವರಲ್ಲ. ಅವರು ಇದಕ್ಕಿಂತ ಉತ್ತಮ ಪರಿಸ್ಥಿತಿ ಅನುಭವಿಸಬೇಕಾದವರು” ಎಂದು ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಸಾಮಾಜಿಕ ಜಾಲತಾಣ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ನಾಯಕಿ ಇಲ್ತಿಜಾ ಮುಫ್ತಿ ಕೂಡ ಆಡಳಿತದ ಕ್ರಮವನ್ನು ಖಂಡಿಸಿದ್ದಾರೆ. “ಶಬೇ ಬರಾಅತ್ ಹಬ್ಬದ ಪವಿತ್ರ ದಿನದಂದು ಮಿರ್ವೈಝ್ ಸಾಹಬ್ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಮತ್ತು ಜಾಮಿಯಾ ಮಸೀದಿಯ ದ್ವಾರಗಳನ್ನು ಹಠಾತ್ತನೆ ಮುಚ್ಚಲಾಗಿದೆ. ಕಾಶ್ಮೀರದಲ್ಲಿ ನಮ್ಮ ಮೂಲಭೂತ ವಾಕ್ ಮತ್ತು ಅಭಿವ್ಯಕ್ತಿ ಹಕ್ಕುಗಳನ್ನು ಮಾತ್ರವಲ್ಲದೆ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಕೂಡ ತಡೆಯಲಾಗುತ್ತಿದೆ. ಇದು ಅಪರಾಧ ಮತ್ತು ದುಃಖಕರ. ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಸರ್ಕಾರ ಚರ್ಚ್ ಇಲಿಯಂತೆ ಮೌನವಾಗಿರುವುದು ಆಘಾತಕಾರಿ. ನೀವು ಯಾವ ಸಂವಿಧಾನವನ್ನು ಅನುಸರಿಸುತ್ತಿದ್ದೀರಿ?” ಎಂದು ಇಲ್ತಿಜಾ ಮುಫ್ತಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ ಪೋಸ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಆರನೇ ವರ್ಷವೂ ಮಸೀದಿ ಬಂದ್

ಶಬೇ ಬರಾಅತ್ ದಿನ ಸತತ ಆರನೇ ವರ್ಷವೂ ಜಾಮಿಯಾ ಮಸೀದಿಗೆ ಬೀಗ ಜಡಿಯಲಾಗಿದೆ ಎಂದು ವರದಿಗಳು ಹೇಳಿವೆ. ಆದರೆ, ಯಾವ ಕಾರಣಕ್ಕೆ ಶಬೇ ಬರಾಅತ್ ದಿನ ಮಸೀದಿಯನ್ನು ಬಂದ್ ಮಾಡಲಾಗಿದೆ ಎಂಬುವುದು ಸ್ಪಷ್ಟವಾಗಿಲ್ಲ.

ಮಣಿಪುರ | ಇಬ್ಬರು ಸಹೋದ್ಯೋಗಿಗಳನ್ನು ಕೊಂದು, ಗುಂಡು ಹಾರಿಸಿ ಆತ್ಮಹತ್ಯೆ ಮಾಡಿದ ಯೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...