Homeಕರ್ನಾಟಕಸಿದ್ರಾಮುಲ್ಲಾ ಖಾನ್‌ ಪ್ರಕರಣ | ಬಿಜೆಪಿ ನಾಯಕರ ವಿರುದ್ಧ ಮೇಲ್ಮನವಿ ಸಲ್ಲಿಸದಿರಲು ಕಾಂಗ್ರೆಸ್‌ ಸರ್ಕಾರ ನಿರ್ಧಾರ!

ಸಿದ್ರಾಮುಲ್ಲಾ ಖಾನ್‌ ಪ್ರಕರಣ | ಬಿಜೆಪಿ ನಾಯಕರ ವಿರುದ್ಧ ಮೇಲ್ಮನವಿ ಸಲ್ಲಿಸದಿರಲು ಕಾಂಗ್ರೆಸ್‌ ಸರ್ಕಾರ ನಿರ್ಧಾರ!

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ‘ಸಿದ್ರಾಮುಲ್ಲಾ ಖಾನ್’ ಎಂದು ಹೇಳಿದ್ದ ಪ್ರಕರಣದಲ್ಲಿ ವಿಪಕ್ಷ ನಾಯಕ ಆರ್‌. ಅಶೋಕ್‌ ಸೇರಿದಂತೆ 43 ಜನರ ವಿರುದ್ಧ ಮೇಲ್ಮನವಿ ಸಲ್ಲಿಸದೆ ಇರಲು ರಾಜ್ಯದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ ಎಂದು ದಿ ಫೈಲ್ ಶನಿವಾರ ವರದಿ ಮಾಡಿದೆ. ಸಿದ್ರಾಮುಲ್ಲಾ ಖಾನ್‌ ಪ್ರಕರಣ

1992ರ ಅಯೋಧ್ಯೆ ರಾಮಮಂದಿರ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ ಪೂಜಾರಿ ಬಂಧನ ಖಂಡಿಸಿ 2024ರ ಜನವರಿ 3ರಂದು ಹುಬ್ಬಳ್ಳಿ ಶಹರ ಪೊಲೀಸ್ ಠಾಣೆ ಎದುರು ಪ್ರತಿಪಕ್ಷ ನಾಯಕ ಆರ್. ಅಶೋಕ್‌ ಸೇರಿದಂತೆ ಹಲವರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು, ಸಿದ್ರಾಮುಲ್ಲಾಖಾನ, ಲುಚ್ಚಾ, ಹೇಡಿ ಎಂದು ಹೇಳಿ ಅವಹೇಳನ ಮಾಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇದರ ವಿರುದ್ಧ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರು ಅವರು ಹುಬ್ಬಳ್ಳಿ ಟೌನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿ, ‘‘2024ರ ಜನವರಿ 3ರಂದು ಮಧ್ಯಾಹ್ನ 12 ಗಂಟೆಗೆ ಹುಬ್ಬಳ್ಳಿ ಶಹರ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿ, ಪ್ರಚೋದನಾಕಾರಿ ಭಾಷಣವನ್ನು ಮಾಡಿ ಸಾರ್ವಜನಿಕರಿಗೆ ಹಾಗೂ ವ್ಯಾಪಾರಸ್ಥರಿಗೆ ಅಡ್ಡಿಪಡಿಸಿದ್ದಾರೆ” ಎಂದು ದೂರಿದ್ದರು.

“ಅಲ್ಲದೆ, 6 ಕೋಟಿ ಜನರ ಪ್ರತಿನಿಧಿಯಾದ ಮುಖ್ಯಮಂತ್ರಿಗೆ ಸಿದ್ರಾಮುಲ್ಲಾಖಾನ ಮತ್ತು ಸಿದ್ದರಾಮಯ್ಯ ಲುಚ್ಚಾ, ಹೇಡಿ ಮುಖ್ಯಮಂತ್ರಿ ಎಂದು ಘೋಷಣೆ ಕೂಗಿ ಅವರಿಗೆ ಮತ್ತು ಕಾಂಗ್ರೆಸ್‌ ಪಕ್ಷಕ್ಕೆ ಅವಮಾನ ಮಾಡಿ ಅವಾಚ್ಯ ಶಬ್ದಗಳಿಂದ ಬೈದು, ನಾಗರಿಕ ವಿರೋಧಿ ಚಟುವಟಿಕೆ ನಡೆಸಿದ್ದಾರೆ. ಆರ್ ಅಶೋಕ್‌ ಸೇರಿ ಆರೋಪಿತರ ಮೆಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು” ಎಂದು ಹುಸೇನ್ ಅವರು ದೂರು ನೀಡಿದ್ದರು.

ಹಾಗಾಗಿ ಆರ್. ಅಶೋಕ್‌ ಸೇರಿ ಒಟ್ಟು 43 ಮಂದಿ ವಿರುದ್ಧ ಪ್ರಕರಣವೂ ದಾಖಲಾಗಿತ್ತು. ಶಾಸಕರ ಅರವಿಂದ ಬೆಲ್ಲದ್, ಮಹೇಶ್‌ ಟೆಂಗಿನ ಕಾಯಿ ಅವರು ಸಹ ಎ 2, ಎ 3 ಆರೋಪಿಯನ್ನಾಗಿಸಲಾಗಿತ್ತು ಎಂದು ದಿ ಫೈಲ್ ವರದಿ ಹೇಳಿದೆ. ಸಿದ್ರಾಮುಲ್ಲಾ ಖಾನ್‌ ಪ್ರಕರಣ

ಪ್ರಸ್ತುತ ಕ್ರಿಮಿನಲ್ ಅರ್ಜಿಯನ್ನು CR.P. ನ U/SE. 482 ರಲ್ಲಿ ಸಲ್ಲಿಸಲಾಗಿತ್ತು. ಹಾಗಾಗಿ ಪ್ರಕರಣದ ಮೊದಲ ಆರೋಪಿ ಆರ್‌. ಅಶೋಕ್‌ ಸೇರಿದಂತೆ 43 ಆರೋಪಿಗಳು ತಮ್ಮ ವಿರುದ್ಧದ ಕ್ರಿಮಿನಲ್‌ ಅರ್ಜಿಯನ್ನು ರದ್ದುಗೊಳಿಸಲು ಕೋರಿದ್ದರು. ಅದಾಗ್ಯೂ, ಅರ್ಜಿದಾರರ ಪರವಾಗಿ ನ್ಯಾಯಾಯದಲ್ಲಿ ಯಾರೊಬ್ಬರೂ ಹಾಜರಾಗದ ಕಾರಣ ಅರ್ಜಿಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠವು ವಜಾಗೊಳಿಸಿತ್ತು.

ಪ್ರಸ್ತತ ಪ್ರಕರಣವು ಮೇಲ್ಮನವಿ ಮತ್ತು ಪುನರ್‌ ಪರಿಶೀಲನಾ ಅರ್ಜಿ ಸಲ್ಲಿಸಲು ಅರ್ಹವಾಗಿಲ್ಲ ಎಂದು ಒಳಾಡಳಿತ ಇಲಾಖೆಯು ಅಭಿಪ್ರಾಯಪಟ್ಟಿದೆ ಎಂದು ದಿಫೈಲ್‌ ವರದಿ ಹೇಳಿದೆ.

ಇದನ್ನೂಓದಿ:  ಪಶ್ಚಿಮ ಬಂಗಾಳ| ಆರ್‌ಎಸ್‌ಎಸ್‌ ರ‍್ಯಾಲಿಗೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್

ಪಶ್ಚಿಮ ಬಂಗಾಳ| ಆರ್‌ಎಸ್‌ಎಸ್‌ ರ‍್ಯಾಲಿಗೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...