Homeಮುಖಪುಟ2018 ರಿಂದ 108 ಮಹಿಳೆಯರು,161 ಎಸ್‌ಸಿ, ಎಸ್‌ಟಿ, ಒಬಿಸಿಗಳು ನ್ಯಾಯಾಧೀಶರಾಗಿ ನೇಮಕ : ಕಾನೂನು ಸಚಿವಾಲಯ

2018 ರಿಂದ 108 ಮಹಿಳೆಯರು,161 ಎಸ್‌ಸಿ, ಎಸ್‌ಟಿ, ಒಬಿಸಿಗಳು ನ್ಯಾಯಾಧೀಶರಾಗಿ ನೇಮಕ : ಕಾನೂನು ಸಚಿವಾಲಯ

- Advertisement -
- Advertisement -

ಹೈಕೋರ್ಟ್ ನ್ಯಾಯಾಧೀಶರಾಗಿ 2018 ರಿಂದ ನೇಮಕಗೊಂಡ 698 ಮಂದಿಯಲ್ಲಿ 108 ಮಹಿಳೆಯರಿದ್ದಾರೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಸಂಸತ್ತಿಗೆ ಮಾಹಿತಿ ನೀಡಿದ್ದಾರೆ.

ಈ ಅವಧಿಯಲ್ಲಿ (2018ರಿಂದ) 22 ಮಂದಿ ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯಕ್ಕೆ ಸೇರಿದವರು, 15 ಮಂದಿ ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯಕ್ಕೆ ಸೇರಿದವರು, 87 ಮಂದಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಸೇರಿದವರು ಮತ್ತು 37 ಮಂದಿ ಅಲ್ಪಸಂಖ್ಯಾತ ಸಮುದಾಯವರು ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ದೇಶದಾದ್ಯಂತ ನ್ಯಾಯಾಲಯಗಳಲ್ಲಿ ನೇಮಕಗೊಂಡ ಒಟ್ಟು ನ್ಯಾಯಾಧೀಶರಲ್ಲಿ ಎಸ್‌ಸಿ/ಎಸ್‌ಟಿ ನ್ಯಾಯಾಧೀಶರ ಶೇಕಡಾವಾರು ಪ್ರಮಾಣ ಮತ್ತು ಹೈಕೋರ್ಟ್‌ಗಳಲ್ಲಿ ಹೆಚ್ಚಿನ ಮಹಿಳಾ ಮತ್ತು ಎಸ್‌ಸಿ/ಎಸ್‌ಟಿ ನ್ಯಾಯಾಧೀಶರನ್ನು ನೇಮಿಸಲು ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳ ಕುರಿತು ಸಂಸದ ನೀರಜ್ ಡಾಂಗಿ ಅವರು ಕೇಳಿದ ಪ್ರಶ್ನೆಗೆ ಸಚಿವಾಲಯ ಉತ್ತರಿಸಿದೆ.

ಜಿಲ್ಲಾ ನ್ಯಾಯಾಂಗದ ನ್ಯಾಯಾಧೀಶರ ನೇಮಕದ ಕುರಿತಾದ ಡೇಟಾವನ್ನು ಕೇಂದ್ರೀಯವಾಗಿ ನಿರ್ವಹಿಸಲಾಗುವುದಿಲ್ಲ ಎಂದು ಸಚಿವಾಲಯ ಹೇಳಿದೆ.

ಇನ್ನು 2018 ರಿಂದ, ಹೈಕೋರ್ಟ್ ನ್ಯಾಯಾಧೀಶರ ಹುದ್ದೆಗೆ ಶಿಫಾರಸು ಮಾಡಲ್ಪಟ್ಟವರು ತಮ್ಮ ಸಾಮಾಜಿಕ ಹಿನ್ನೆಲೆಯ ಬಗ್ಗೆ ವಿವರಗಳನ್ನು ನಿಗದಿತ ನಮೂನೆಯಲ್ಲಿ (ಸುಪ್ರೀಂ ಕೋರ್ಟ್‌ನೊಂದಿಗೆ ಸಮಾಲೋಚಿಸಿ ತಯಾರಿಸಲಾಗುತ್ತದೆ) ಒದಗಿಸಬೇಕಾಗುತ್ತದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

ಕಾನೂನು ಸಚಿವಾಲಯ ಒದಗಿಸಿದ ಮಾಹಿತಿಯ ಪ್ರಕಾರ, ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿರುವ ಒಟ್ಟು 20,466 ನ್ಯಾಯಾಧೀಶರಲ್ಲಿ, 3,871 ನ್ಯಾಯಾಧೀಶರು ಎಸ್‌ಸಿ/ಎಸ್‌ಟಿ ವರ್ಗಕ್ಕೆ ಸೇರಿದವರಾಗಿದ್ದು, ಒಟ್ಟು ಬಲದ ಶೇ. 19 ರಷ್ಟಿದ್ದಾರೆ.

ದೇಶದಲ್ಲಿ ಜನಸಂಖ್ಯೆ ಅನುಪಾತದ ಪ್ರಕಾರ ಪ್ರತಿ ಲಕ್ಷ ಜನರಿಗೆ ನೇಮಕಗೊಂಡ ನ್ಯಾಯಾಧೀಶರ ಸಂಖ್ಯೆಯ ಕುರಿತ ಪ್ರಶ್ನೆಗೆ ಸಚಿವಾಲಯವು,

“2011ರ ಜನಗಣತಿಯ ಪ್ರಕಾರ 1210.19 ಮಿಲಿಯನ್ ಜನಸಂಖ್ಯೆ ಮತ್ತು 31 ಡಿಸೆಂಬರ್ 2024 ರಂತೆ ಸುಪ್ರೀಂ ಕೋರ್ಟ್, ಹೈಕೋರ್ಟ್‌ಗಳು ಮತ್ತು ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ ಅನುಮೋದಿತ ನ್ಯಾಯಾಧೀಶರ ಬಲದ ಬಗ್ಗೆ ಲಭ್ಯವಿರುವ ಮಾಹಿತಿಯ ಪ್ರಕಾರ, ದೇಶದಲ್ಲಿ ನ್ಯಾಯಾಧೀಶರು – ಜನಸಂಖ್ಯಾ ಅನುಪಾತವು ಪ್ರತಿ ಮಿಲಿಯನ್ ಜನಸಂಖ್ಯೆಗೆ ಸರಿಸುಮಾರು 21 ನ್ಯಾಯಾಧೀಶರು ಎಂದು ಲೆಕ್ಕಹಾಕಲಾಗಿದೆ.” ಎಂದಿದೆ.

ಜಾತಿ ಆಧಾರಿತ ದೌರ್ಜನ್ಯಗಳು ನಡೆಯುತ್ತಿವೆ ಎಂದು ಕನಿಷ್ಠ ಪಕ್ಷ ಒಪ್ಪಿಕೊಳ್ಳುತ್ತೀರಾ?: ಸಿಎಂಗೆ ಪಾ. ರಂಜಿತ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...