Homeಕರ್ನಾಟಕಜಲ ಜೀವನ್ ಮಿಷನ್ ಬಗ್ಗೆ ಬಿಜೆಪಿ 'ಸುಳ್ಳು ಹರಡುತ್ತಿದೆ' - ಸಿದ್ದರಾಮಯ್ಯ ಕಿಡಿ

ಜಲ ಜೀವನ್ ಮಿಷನ್ ಬಗ್ಗೆ ಬಿಜೆಪಿ ‘ಸುಳ್ಳು ಹರಡುತ್ತಿದೆ’ – ಸಿದ್ದರಾಮಯ್ಯ ಕಿಡಿ

- Advertisement -
- Advertisement -

ಜಲ ಜೀವನ್ ಮಿಷನ್ (ಜೆಜೆಎಂ)ಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಕ್ಕೆ ಘೋಷಿಸಿದ್ದ ಹಣವನ್ನು ಬಿಡುಗಡೆ ಮಾಡದೆ “ಕರ್ನಾಟಕಕ್ಕೆ ದ್ರೋಹ ಮಾಡಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಗುರಿಯಾಗಿಸಿಕೊಂಡ ಅವರು, “ಸುಳ್ಳುಗಳನ್ನು ಹರಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಜಲ ಜೀವನ್ ಮಿಷನ್ ಅಡಿಯಲ್ಲಿ ಕರ್ನಾಟಕಕ್ಕೆ ನೀಡಬೇಕಿದ್ದ 28,623 ಕೋಟಿ ರೂ. ಹಂಚಿಕೆಯಲ್ಲಿ ರಾಜ್ಯವು 11,760 ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದು ಸೋಮಣ್ಣ ಲೋಕಸಭೆಗೆ ತಿಳಿಸಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, “ಕೇಂದ್ರ ಸರ್ಕಾರವು ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಅನ್ನು ಉದ್ದೇಶಪೂರ್ವಕವಾಗಿ ಹಾಳುಗೆಡವಿರುವುದನ್ನು ಮುಚ್ಚಿಹಾಕಲು ಕೇಂದ್ರ ಸಚಿವ ಸೋಮಣ್ಣ ಸುಳ್ಳುಗಳನ್ನು ಹರಡುತ್ತಿದ್ದಾರೆ!” ಎಂದು ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜೆಜೆಎಂ (ರಾಜ್ಯದಲ್ಲಿ) ಒಟ್ಟು ಹಂಚಿಕೆ 49,262 ಕೋಟಿ ರೂ.ಗಳಾಗಿದ್ದು, ಇದರಲ್ಲಿ ಕೇಂದ್ರದ ಪಾಲು 26,119 ಕೋಟಿ ರೂ.ಗಳಾಗಿದ್ದು, ರಾಜ್ಯದ ಪಾಲು 23,142 ಕೋಟಿ ರೂ.ಗಳಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಿಡುಗಡೆಯಾದ ಒಟ್ಟು ನಿಧಿ 32,202 ಕೋಟಿ ರೂ. ಆಗಿದ್ದು, ಇದರಲ್ಲಿ ಕೇಂದ್ರದ ಪಾಲು 11,760 ಕೋಟಿ ರೂ. (ಕೇಂದ್ರ ನೀಡಬೇಕಿದ್ದ ಅನುದಾನದ ಕೇವಲ 45%) ಮತ್ತು ರಾಜ್ಯದ ಪಾಲು 20,442 (ರಾಜ್ಯದ ಅನುದಾನ 88.3%) ಕೋಟಿ ರೂ. ಸೇರಿ ರಾಜ್ಯವು ಒಟ್ಟು ಮೊತ್ತ 29,413 ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

“ಕೇಂದ್ರ ಬಿಡುಗಡೆ ಮಾಡಿದ ಪ್ರತಿ ರೂಪಾಯಿಯನ್ನು ಕರ್ನಾಟಕ ಸಂಪೂರ್ಣವಾಗಿ ಬಳಸಿಕೊಂಡಿದೆ. ಆದರೆ ಮೋದಿ ಸರ್ಕಾರವು ಹಣವನ್ನು ನಿರ್ಬಂಧಿಸುತ್ತಲೇ ಇದೆ ಮತ್ತು ಕರ್ನಾಟಕಕ್ಕೆ ಅದರ ಸರಿಯಾದ ಪಾಲನ್ನು ನಿರಾಕರಿಸುತ್ತಿದೆ” ಎಂದು ಮುಖ್ಯಮಂತ್ರಿ ಆರೋಪಿಸಿದ್ದಾರೆ. 2024-25ರ ಹಣಕಾಸು ವರ್ಷದಲ್ಲಿ ಕೂಡಾ ಕೇಂದ್ರದ ನಿರ್ಲಕ್ಷ್ಯ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

“ಕೇಂದ್ರ ಸರ್ಕಾರವು 3,804 ಕೋಟಿ ರೂ.ಗಳನ್ನು ಮಂಜೂರು ಮಾಡಿತು. ಆದರೆ ಬಿಡುಗಡೆ ಮಾಡಿದ್ದು ಕೇವಲ 570 ಕೋಟಿ ರೂ.ಗಳನ್ನಾಗಿದೆ. ಹಲವು ಪತ್ರಗಳನ್ನು ಬರೆದರೂ ಯಾವುದೇ ಹಣವನ್ನು ಬಿಡುಗಡೆ ಮಾಡಿಲ್ಲ. ಮತ್ತೊಂದೆಡೆ ಕರ್ನಾಟಕವು ತನ್ನದೇ ಆದ ಬಜೆಟ್‌ನಿಂದ ಹಂಚಿಕೆ ಮಾಡಿದ 7,652 ಕೋಟಿ ರೂ.ಗಳಲ್ಲಿ 4,977 ಕೋಟಿ ರೂ.ಗಳನ್ನು ಈ ಯೋಜನೆಗೆ ಬಿಡುಗಡೆ ಮಾಡಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಇದು ಕೇವಲ ಕರ್ನಾಟಕ ಮಾತ್ರವಲ್ಲ — ಬಿಜೆಪಿಯ ವೈಫಲ್ಯ ರಾಷ್ಟ್ರೀಯ!” ಎಂದು ಅವರು ಹೇಳಿದ್ದಾರೆ.

2024-25ರ ಅವಧಿಯಲ್ಲಿ ಜೆಜೆಎಂನ ಬಜೆಟ್ ಅಂದಾಜುಗಳು 70,163 ಕೋಟಿ ರೂ.ಗಳಾಗಿದ್ದವು. ಪರಿಷ್ಕೃತ ಅಂದಾಜುಗಳನ್ನು ಕೇವಲ 22,694 ಕೋಟಿ ರೂ.ಗಳಿಗೆ ಇಳಿಸಲಾಗಿದೆ ಎಂದು ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. “ನರೇಂದ್ರ ಮೋದಿ ಸರ್ಕಾರ ಜೆಜೆಎಂ ಅನ್ನು ವ್ಯವಸ್ಥಿತವಾಗಿ ಕೊಲ್ಲುತ್ತಿದೆ ಮತ್ತು ಸೋಮಣ್ಣ ಅವರಂತಹ ಬಿಜೆಪಿ ನಾಯಕರು ನಾಚಿಕೆಯಿಲ್ಲದೆ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಜನರನ್ನು ದಾರಿ ತಪ್ಪಿಸುವ ಬದಲು, ಕರ್ನಾಟಕಕ್ಕೆ ಬರಬೇಕಾದ ನಿಧಿಯಿಂದ ಏಕೆ ನೀಡದೆ ವಂಚಿಸಲಾಗುತ್ತಿದೆ ಎಂದು ಸೋಮಣ್ಣ ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. “ಬಿಜೆಪಿಯ ವಿಧ್ವಂಸಕ ಕೃತ್ಯದ ಹೊರತಾಗಿಯೂ ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರ ಫಲಿತಾಂಶಗಳನ್ನು ನೀಡುತ್ತಿದೆ. ಬಿಜೆಪಿ ನೇತೃತ್ವದ ಕೇಂದ್ರವು ನಮ್ಮ ರಾಜ್ಯದ ಬಗ್ಗೆ ಮಲತಾಯಿ ಧೋರಣೆಯನ್ನು ಮುಂದುವರಿಸುತ್ತಿರುವಾಗ ಪ್ರತಿಯೊಂದು ಮನೆಗೆ ಸುರಕ್ಷಿತ ಕುಡಿಯುವ ನೀರನ್ನು ಖಚಿತಪಡಿಸಿಕೊಳ್ಳಲು ನಾವು ಬದ್ಧರಾಗಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  2018 ರಿಂದ 108 ಮಹಿಳೆಯರು,161 ಎಸ್‌ಸಿ, ಎಸ್‌ಟಿ, ಒಬಿಸಿಗಳು ನ್ಯಾಯಾಧೀಶರಾಗಿ ನೇಮಕ : ಕಾನೂನು ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...