Homeಮುಖಪುಟಸಂಭಾಲ್ ಹಿಂಸಾಚಾರ | 74 ಶಂಕಿತರ ಫೋಟೋವನ್ನು ಸಾರ್ವಜನಿಕವಾಗಿ ಅಂಟಿಸಿದ ಯುಪಿ ಸರ್ಕಾರ

ಸಂಭಾಲ್ ಹಿಂಸಾಚಾರ | 74 ಶಂಕಿತರ ಫೋಟೋವನ್ನು ಸಾರ್ವಜನಿಕವಾಗಿ ಅಂಟಿಸಿದ ಯುಪಿ ಸರ್ಕಾರ

- Advertisement -
- Advertisement -

ಕಳೆದ ವರ್ಷ ನವೆಂಬರ್‌ನಲ್ಲಿ ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಭಾಗಿಯಾಗಿರುವ ಶಂಕಿತ 74 ಜನರ ಫೋಟೋಗಳನ್ನು ಹೊಂದಿರುವ ಪೋಸ್ಟರ್‌ಗಳನ್ನು ಶುಕ್ರವಾರ ಹಾಕಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ವಿಶ್ವಾಸಾರ್ಹ ಪುರಾವೆಗಳನ್ನು ನೀಡುವ ವ್ಯಕ್ತಿಗಳಿಗೆ ನಗದು ಬಹುಮಾನ ನೀಡಲಾಗುವುದು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಶ್ ಚಂದ್ರ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಸಂಭಾಲ್ ಹಿಂಸಾಚಾರ

ಈ ಪ್ರಕರಣದಲ್ಲಿ ಆರೋಪಿಗಳನ್ನು ಗುರುತಿಸಲು ಮತ್ತು ಅಧಿಕಾರಿಗಳಿಗೆ ಅವರನ್ನು ಹುಡುಕಲು ಸಹಾಯ ಮಾಡಲು ನಾಗರಿಕರಿಗಾಗಿ ಈ ಫೋಟೋಗಳನ್ನು ಪ್ರದೇಶದ ಹಲವಾರು ಸ್ಥಳಗಳಲ್ಲಿ ಪ್ರದರ್ಶಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪೋಸ್ಟರ್‌ಗಳಲ್ಲಿ ಶಂಕಿತರು ತಮ್ಮ ಕೈಯಲ್ಲಿ ಕಲ್ಲುಗಳನ್ನು ಹಿಡಿದುಕೊಂಡಿರುವ ಛಾಯಾಚಿತ್ರಗಳಿವೆ. ಡ್ರೋನ್ ಕ್ಯಾಮೆರಾಗಳ ಸಿಸಿಟಿವಿ ಮೂಲಕ, ಕ್ಲೋಸ್ಡ್-ಸರ್ಕ್ಯೂಟ್ ಟೆಲಿವಿಷನ್ ಮತ್ತು ಮೊಬೈಲ್ ಫೋನ್‌ಗಳಲ್ಲಿ ಮಾಡಿದ ವೀಡಿಯೊಗಳ ಮೂಲಕ ಶಂಕಿತರು ಹಿಂಸಾಚಾರದಲ್ಲಿ ನೇರವಾಗಿ ಭಾಗಿಯಾಗಿರು ದೃಶ್ಯಾವಳಿಗಳಿವೆ.” ಎಂದು ಅವರು ಹೇಳಿದ್ದಾರೆ.

ನವೆಂಬರ್ 24 ರಂದು, ಚಂದೌಸಿ ಪಟ್ಟಣದ ಶಾಹಿ ಜಾಮಾ ಮಸೀದಿಯ ನ್ಯಾಯಾಲಯದ ಆದೇಶದ ಮೇರೆಗೆ ನಡೆಸಲಾಗಿದ್ದ ಸಮೀಕ್ಷೆಗೆ ಮುಸ್ಲಿಮರ ಗುಂಪೊಂದು ಆಕ್ಷೇಪ ವ್ಯಕ್ತಪಡಿಸಿದ್ದು. ಇದರ ನಂತರ ಸಂಭಾಲ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿತು.

ಶತಮಾನಗಳಷ್ಟು ಹಳೆಯದಾದ ಶ್ರೀ ಹರಿಹರ ದೇವಸ್ಥಾನದ ಸ್ಥಳದಲ್ಲಿ ಮೊಘಲ್ ದೊರೆ ಬಾಬರ್ 1526 ರಲ್ಲಿ ಮಸೀದಿಯನ್ನು ನಿರ್ಮಿಸಿದ್ದಾನೆ ಎಂದು ಬಿಜೆಪಿ ಬೆಂಬಲಿಗರು ಮೊಕದ್ದಮೆ ದಾಖಲು ಮಾಡಿದ್ದು, ಈ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು ಸಮೀಕ್ಷೆಗೆ ಆದೇಶಿಸಿತ್ತು. ಸಮೀಕ್ಷೆಯ ಸಮಯದಲ್ಲಿ ನಡೆದ ಹಿಂಸಾಚಾರದಲ್ಲಿ ಐದು ಜನರು ಸಾವನ್ನಪ್ಪಿದ್ದರು.

ಡಿಸೆಂಬರ್‌ನಲ್ಲಿ ವೇಳೆ ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆಂದು ಹೇಳಲಾದವರ ಪೋಸ್ಟರ್‌ಗಳನ್ನು ಸಾರ್ವಜನಿಕ ಗೋಡೆಗಳ ಮೇಲೆ ಹಾಕಲಾಗುವುದು ಎಂದು ಜಿಲ್ಲಾಡಳಿತ ಹೇಳಿತ್ತು.

ಮಸೀದಿಯ ಮುಖ್ಯ ದ್ವಾರದ ಎದುರು ಹೊಸದಾಗಿ ಸ್ಥಾಪಿಸಲಾದ ಔಟ್‌ಪೋಸ್ಟ್‌ನಲ್ಲಿ ಹೊಸ ಪೋಸ್ಟರ್‌ಗಳನ್ನು ತೆಗೆದುಹಾಕದಂತೆ ಅಥವಾ ಹರಿದು ಹಾಕದಂತೆ ನೋಡಿಕೊಳ್ಳಲು ಪೊಲೀಸರು ತಮ್ಮ ಸಿಬ್ಬಂದಿಗೆ ಸೂಚಿಸಿದ್ದಾರೆ. ಸಂಭಾಲ್ ಹಿಂಸಾಚಾರ

ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಲಾಗಿರುವ 150 ವ್ಯಕ್ತಿಗಳು ಮತ್ತು 2,500 ಇತರ ಗುರುತಿಸಲಾಗದ ವ್ಯಕ್ತಿಗಳ ವಿರುದ್ಧ ಪೊಲೀಸರು 8 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಹಿಂಸಾಚಾರದ ಸಮಯದಲ್ಲಿ ಪೊಲೀಸರ ಮೇಲೆ ಕಲ್ಲು ಎಸೆದ ಆರೋಪದ ಮೇಲೆ ಈವರೆಗೆ ಎಪ್ಪತ್ತಾರು ಜನರನ್ನು ಬಂಧಿಸಲಾಗಿದೆ. ಬಂಧಿತರಿಗೆ ಜಾಮೀನು ಸಿಕ್ಕಿಲ್ಲ.

ಜಾಮಿಯಾ ಪ್ರತಿಭಟನಾಕಾರರ ಪೋಸ್ಟರ್‌ಗಳು

ಪ್ರತ್ಯೇಕ ಘಟನೆಯಲ್ಲಿ, ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಶುಕ್ರವಾರ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾದ 17 ವಿದ್ಯಾರ್ಥಿಗಳ ವೈಯಕ್ತಿಕ ವಿವರಗಳೊಂದಿಗೆ ಪೋಸ್ಟರ್‌ಗಳನ್ನು ಹಾಕಿದೆ ಎಂದು ನ್ಯೂಸ್‌ಲಾಂಡ್ರಿ ವರದಿ ಮಾಡಿದೆ.

ವಿದ್ಯಾರ್ಥಿಗಳಿಗೆ ಆಡಳಿತವು ಶೋ-ಕಾಸ್ ನೋಟಿಸ್‌ಗಳನ್ನು ನೀಡಿರುವುದನ್ನು ವಿರೋಧಿಸಿ ದೆಹಲಿ ಪೊಲೀಸರು ಗುರುವಾರ ವಿಶ್ವವಿದ್ಯಾಲಯದ ಹಲವಾರು ವಿದ್ಯಾರ್ಥಿಗಳನ್ನು ಬಂಧಿಸಿದ್ದರು. ಸುಮಾರು 12 ಗಂಟೆಗಳ ಬಂಧನದ ನಂತರ ಅವರನ್ನು ಬಿಡುಗಡೆ ಮಾಡಲಾಯಿತು.

ಪೌರತ್ವ ವಿರೋಧಿ ತಿದ್ದುಪಡಿ ಕಾಯ್ದೆ ಚಳವಳಿಯ ಸಂದರ್ಭದಲ್ಲಿ ಕ್ಯಾಂಪಸ್‌ನಲ್ಲಿ ನಡೆದ ಹಿಂಸಾಚಾರದ ಐದನೇ ವರ್ಷದ ನೆನಪಿಗಾಗಿ ಡಿಸೆಂಬರ್ 15 ರಂದು ಪ್ರತಿಭಟನೆ ನಡೆಸಿದ್ದಕ್ಕಾಗಿ ಇಬ್ಬರು ಪಿಎಚ್‌ಡಿ ಸಂಶೋದಕರಿಗೆ ಕಳೆದ ವರ್ಷ ಡಿಸೆಂಬರ್‌ನಲ್ಲಿ ನೋಟಿಸ್ ನೀಡಲಾಗಿತ್ತು. ಈ ಪ್ರತಿಭಟನೆಯನ್ನು “ಜಾಮಿಯಾ ಪ್ರತಿರೋಧ ದಿನ” ಎಂಬ ವೇದಿಕೆ ಅಡಿಯಲ್ಲಿ ನಡೆಸಲಾಗಿತ್ತು.

ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಆಸ್ತಿಯನ್ನು ಧ್ವಂಸ ಮಾಡಿದ್ದಾರೆ ಎಂದು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಆರೋಪಿಸಿದ್ದು, ವಿದ್ಯಾರ್ಥಿಗಳು ಈ ಆರೋಪಗಳನ್ನು ನಿರಾಕರಿಸಿದ್ದಾರೆ. ಸುಮಾರು 20 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂಓದಿ:  ಡಿ.ಕೆ. ಶಿವಕುಮಾರ್ ಅವಧಿ ಮುಗಿದಿದ್ದು ಹೈಕಮಾಂಡ್‌ಗೆ ಗೊತ್ತು – ಸಚಿವ ರಾಜಣ್ಣ

ಡಿ.ಕೆ. ಶಿವಕುಮಾರ್ ಅವಧಿ ಮುಗಿದಿದ್ದು ಹೈಕಮಾಂಡ್‌ಗೆ ಗೊತ್ತು – ಸಚಿವ ರಾಜಣ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...