Homeಕರ್ನಾಟಕಸಿದ್ದರಾಮಯ್ಯ ನಮ್ಮ ಪ್ರಶ್ನಾತೀತ ನಾಯಕ - ಡಿ.ಕೆ. ಶಿವಕುಮಾರ್ ಯೂಟರ್ನ್?

ಸಿದ್ದರಾಮಯ್ಯ ನಮ್ಮ ಪ್ರಶ್ನಾತೀತ ನಾಯಕ – ಡಿ.ಕೆ. ಶಿವಕುಮಾರ್ ಯೂಟರ್ನ್?

- Advertisement -
- Advertisement -

ರಾಜ್ಯ ಆಡಳಿತಾರೂಢ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರ ನಡುವಿನ ಆಂತರಿಕ ತಿಕ್ಕಾಟ ಭಾನುವಾರ ಕುತೂಹಲಕಾರಿ ತಿರುವು ಪಡೆದುಕೊಂಡಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು “ನಮ್ಮ ಪ್ರಶ್ನಾತೀತ ನಾಯಕ” ಎಂದು ಹಾಡಿ ಹೊಗಳಿದ್ದಾರೆ. ಅದಾಗ್ಯೂ, ಮುಖ್ಯಮಂತ್ರಿಯ ಹೆಸರನ್ನು ದುರುಪಯೋಗ ಮಾಡಿಕೊಂಡಿದ್ದಕ್ಕಾಗಿ ಅವರ ಆಪ್ತರನ್ನು ಶಿವಕುಮಾರ್ ಟೀಕಿಸಿದ್ದಾರೆ. ಸಿದ್ದರಾಮಯ್ಯ ನಮ್ಮ

ತಮ್ಮ ಸರ್ಕಾರದಲ್ಲಿ “ಕಾರ್ಯನಿರ್ವಹಿಸದ” ಸಚಿವರನ್ನು ಕೈಬಿಟ್ಟು ರಾಜ್ಯ ಸಂಪುಟದ ಪುನರ್ರಚನೆಗೆ ಕಾಂಗ್ರೆಸ್ ಹೈಕಮಾಂಡ್‌ ಮುಂದೆ ಪ್ರಸ್ತಾಪಿಸಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ,  ಡಿ.ಕೆ. ಶಿವಕುಮಾರ್‌ ಅವರು ತನ್ನ ರಾಜಕೀಯ ಚದುರಂಗದಾಟದ ನಡೆಯನ್ನು ಬದಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಸಿದ್ದರಾಮಯ್ಯ ನಮ್ಮ ಪ್ರಶ್ನಾತೀತ ನಾಯಕ, ನಿಸ್ಸಂದೇಹವಾಗಿ. ಪಂಚಾಯತ್, ತಾಲ್ಲೂಕು ಮಟ್ಟದ ಚುನಾವಣೆಗಳು, ಶಾಸಕ ಮತ್ತು ಎಂಎಲ್‌ಸಿ ಚುನಾವಣೆಗಳು ಸೇರಿದಂತೆ ಎಲ್ಲಾ ಚುನಾವಣೆಗಳಿಗೂ ನಮಗೆ ಅವರ ಅಗತ್ಯವಿದೆ. ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾರೆ ಮತ್ತು ಉತ್ತಮ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ನಮ್ಮ

“ಪ್ರತಿದಿನ ಅವರ ಹೆಸರನ್ನು ತೆಗೆದುಕೊಂಡು ಅದನ್ನು ದುರುಪಯೋಗಪಡಿಸಿಕೊಳ್ಳುವ ಅಗತ್ಯವಿಲ್ಲ, ಅದು ಅನಗತ್ಯ. ಇವು ಮಾಧ್ಯಮಗಳಿಗೆ ಆಹಾರವಾಗಬಾರದು” ಎಂದು ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಉಳಿಸಿಕೊಳ್ಳಲು ಬಯಸುವುದಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷಕ್ಕೆ “ಅನಿವಾರ್ಯ” ಎಂದು ಅವರಿಗೆ ನಿಷ್ಠರಾಗಿರುವ ಸಚಿವರು ಮತ್ತು ನಾಯಕರ ಹೇಳುತ್ತಿರುವ ಬೆನ್ನಲ್ಲೆ ಡಿ.ಕೆ. ಶಿವಕುಮಾರ್ ಅವರು ಈ ಹೇಳಿಕೆ ನೀಡಿದ್ದಾರೆ.

“ಕಾರ್ಯನಿರ್ವಹಿಸದ” ಸಚಿವರನ್ನು ಕೈಬಿಡಲು ಶಿವಕುಮಾರ್ ಸಂಪುಟ ಪುನರ್ರಚನೆಗೆ ಪ್ರಯತ್ನಿಸಿದ್ದಾರೆ ಎಂಬ ವರದಿಗಳ ನಂತರ ಸಚಿವ ಸತೀಶ್ ಜಾರಕಿಹೊಳಿ ಮತ್ತು ಕೆ.ಎನ್. ರಾಜಣ್ಣ ಅವರಂತಹ ಸಚಿವರು ಈ ಹೇಳಿಕೆ ನೀಡಿದ್ದರು.

ಸಂಪುಟ ಪುರ್ರಚನೆ ಆದರೆ ಕೈಬಿಡಲ್ಪಡುವ ಸಚಿವರ ಪಟ್ಟಿಯಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ, ವಸತಿ ಮತ್ತು ವಕ್ಫ್ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಮತ್ತು ನಗರಾಭಿವೃದ್ಧಿ ಸಚಿವ ಬಿ.ಎಸ್. ಸುರೇಶ (ಬೈರತಿ) ಮುಂತಾದ ಸಿದ್ದರಾಮಯ್ಯ ಅವರ ಕೆಲವು ಆಪ್ತರು ಸೇರಿದ್ದಾರೆ ಎಂದು ಫೆಬ್ರವರಿ 14 ರಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಈ ನಾಯಕರಲ್ಲಿ ಕೆಲವರು ಶಿವಕುಮಾರ್ ಅವರು ಹೊಂದಿರುವ ‘ದ್ವಿ ಹುದ್ದೆಗಳನ್ನು’ ವಿಷಯವನ್ನು ಉಲ್ಲೇಖಿಸಿ, ಅವರ ಬದಲಿಗೆ ಹೊಸ ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡುವಂತೆ ಒತ್ತಾಯಿಸುತ್ತಿದ್ದಾರೆ.

ಈ ರೀತಿಯ “ಗೊಂದಲಮಯ” ಹೇಳಿಕೆಗಳನ್ನು ಏಕೆ ನೀಡಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್ ಅವರು, “ಯಾವುದೇ ಗೊಂದಲವಿಲ್ಲ. ಕಾಂಗ್ರೆಸ್ ಪ್ರತಿದಿನ ಎಲ್ಲವನ್ನೂ ಗಮನಿಸುತ್ತದೆ.” ಎಂದು ಹೇಳಿದ್ದರು.

ಇದನ್ನೂಓದಿ:  ಗಾಜಾ ಸ್ವಾಧೀನಪಡಿಸಿಕೊಳ್ಳುವ ಟ್ರಂಪ್ ಯೋಜನೆ ಕೈಬಿಡಲು 70 ಅಮೆರಿಕದ ನಾಗರಿಕ ಹಕ್ಕುಗಳ ಒತ್ತಾಯ

ಗಾಜಾ ಸ್ವಾಧೀನಪಡಿಸಿಕೊಳ್ಳುವ ಟ್ರಂಪ್ ಯೋಜನೆ ಕೈಬಿಡಲು 70 ಅಮೆರಿಕದ ನಾಗರಿಕ ಹಕ್ಕು ಸಂಘಟನೆಗಳ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...